Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:14 - ಕನ್ನಡ ಸತ್ಯವೇದವು C.L. Bible (BSI)

14 ಇವರ ವಿಷಯವಾಗಿ ಆದಾಮನ ಏಳನೆಯ ತಲೆಮಾರಿನ ಹನೋಕನು, “ಇಗೋ, ಸರ್ವೇಶ್ವರ ತಮ್ಮ ಅಸಂಖ್ಯಾತ ಪರಿಶುದ್ಧ ದೂತರ ಸಮೇತ ಆಗಮಿಸುವರು. ಎಲ್ಲರಿಗೂ ನ್ಯಾಯತೀರ್ಪು ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಂಥವರ ವಿಷಯದಲ್ಲೇ ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ, “ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಂಥವರ ವಿಷಯದಲ್ಲೇ ಆದಾಮನಿಗೆ ಏಳನೆಯ ತಲೆಯವನಾದ ಹನೋಕನು - ಇಗೋ ಕರ್ತನು ಲಕ್ಷಾಂತರ ಪರಿಶುದ್ಧದೂತರನ್ನು ಕೂಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದಾಮನ ಏಳನೆಯ ತಲೆಮಾರಿನವನಾದ ಹನೋಕನು ಈ ಜನರನ್ನು ಕುರಿತು ಹೀಗೆ ಹೇಳಿದ್ದಾನೆ: “ಇಗೋ, ಪ್ರಭುವು ತನ್ನ ಲಕ್ಷಾಂತರ ಪರಿಶುದ್ಧ ದೂತರೊಂದಿಗೆ ಬರುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ, “ಇಗೋ, ಕರ್ತದೇವರು ತಮ್ಮ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಆದಾಮಾಚ್ಯಾ ಸಾತ್ವ್ಯಾ ಪಿಳ್ಗಿಚೊ ಹಾನೊಕ್ ಹ್ಯಾ ಲೊಕಾಂಚ್ಯಾ ವಿಶಯಾತ್ ಅಸೆ ಮನ್ತಾ,“ಹೆ ಬಗ್ ಧನಿ ಧಾ ಹಜಾರಾನ್ ಹಜಾರ್ ಪವಿತ್ರ್ ದೆವಾಚ್ಯಾ ದುತಾಂಚ್ಯಾ ವಾಂಗ್ಡಾ ಯೆತಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:14
18 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸೀನಾಯ್ ಬೆಟ್ಟದಿಂದ ಬಂದರು, ಸೇಯೀರ್ ಎಂಬ ಸೀಮೆಯೊಳಗಿಂದ ಉದಯಿಸಿದರು, ಪಾರಾನ್ ಎಂಬ ಪರ್ವತದಿಂದ ಪ್ರಜ್ವಲಿಸಿದರು, ಲಕ್ಷಾಂತರ ಸಂತರ ಮಧ್ಯೆಯಿಂದ ದಯಮಾಡಿದರು. ಅಗ್ನಿಸದೃಶವಾದ ಧರ್ಮಶಾಸ್ತ್ರ ಅವರ ಬಲಪಾರ್ಶ್ವದಲ್ಲಿತ್ತು.


ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ; ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವೂ ಸಹ ಪರಿಶುದ್ಧರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


“ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.


ನೀವು ಆ ಗುಡ್ಡಗಳ ನಡುವೆ ಉಂಟಾಗುವ ಕಣಿವೆಯ ಮೂಲಕ ಪಲಾಯನಗೈಯುವಿರಿ. ಆ ಕಣಿವೆ ಆಚೆಲಿನವರೆಗೆ ಹಬ್ಬಿರುವುದು. ಜುದೇಯದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪವಾದಾಗ ನೀವು ಮಾಡಿದಂತೆ ಪಲಾಯನ ಗೈಯುವಿರಿ. ಆಗ ನನ್ನ ದೇವರಾದ ಸರ್ವೇಶ್ವರ ತಮ್ಮ ದೂತರ ಸಮೇತ ಬರುವರು.


ಯೆರೆದನು 162 ವರ್ಷದವನಾದಾಗ ಹನೋಕನನ್ನು ಪಡೆದನು.


ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ಇಗೋ, ಸರ್ವೇಶ್ವರ ಜಗದ ಜನಕ್ಕೆ ಅವರವರ ಪಾಪದ ಫಲವನ್ನು ಉಣಿಸಲು ತಮ್ಮ ನಿವಾಸದಿಂದ ಹೊರಟಿರುವರು. ಭೂಮಿ ತನ್ನಲ್ಲಿ ಇಂಗಿದ ರಕ್ತವನ್ನು ಬೆಳಕಿಗೆ ತರುವುದು; ಭೂನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಚದು.


ಆದರೆ ನೀವು ಬಂದಿರುವುದು ಸಿಯೋನ್ ಬೆಟ್ಟಕ್ಕೆ, ಜೀವಂತ ದೇವರ ನಗರಕ್ಕೆ; ಸ್ವರ್ಗೀಯ ಜೆರುಸಲೇಮಿಗೆ, ಅಸಂಖ್ಯ ದೇವದೂತರು ಕೂಡಿರುವ ಉತ್ಸವ ಕೂಟಕ್ಕೆ;


ಅನಂತರ ಅವರ ಸಿಂಹಾಸನದ, ನಾಲ್ಕು ಜೀವಿಗಳ ಹಾಗೂ ಸಭಾಪ್ರಮುಖರ ಸುತ್ತಲೂ ನಿಂತಿದ್ದ ಬಹುಮಂದಿ ದೇವದೂತರ ಸ್ವರವನ್ನು ಕೇಳಿಸಿಕೊಂಡೆ. ಅವರ ಸಂಖ್ಯೆ ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು