Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:15 - ಕನ್ನಡ ಸತ್ಯವೇದವು C.L. Bible (BSI)

15 ಭಕ್ತಿಹೀನರು ತಮಗೆ ವಿರುದ್ಧ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಬರುವರು,” ಎಂದು ಪ್ರವಾದಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಎಲ್ಲರಿಗೂ ನ್ಯಾಯತೀರಿಸುವುದಕ್ಕೂ, ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಹೇಳಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವುದಕ್ಕೆ ಬಂದಿರುವನು” ಎಂಬುದಾಗಿ ಪ್ರವಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಎಲ್ಲರಿಗೆ ನ್ಯಾಯತೀರಿಸುವದಕ್ಕೂ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನ್ನ ಮೇಲೆ ಹೇಳಿದ ಎಲ್ಲಾ ಕಠಿನವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವದಕ್ಕೂ ಬಂದನು ಎಂಬದಾಗಿ ಪ್ರವಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಪ್ರಭುವು ಪ್ರತಿಯೊಬ್ಬರಿಗೂ ನ್ಯಾಯತೀರಿಸುತ್ತಾನೆ. ಭಕ್ತಿಹೀನರು ತನಗೆ ವಿರುದ್ಧವಾಗಿ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತನಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಆತನು ಬರುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಎಲ್ಲರಿಗೆ ನ್ಯಾಯತೀರಿಸುವುದಕ್ಕೆ ಬರುವರು. ಮಾತ್ರವಲ್ಲದೆ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರೋಧವಾಗಿ ಆಡಿದ ಎಲ್ಲಾ ದೂಷಣೆಗಳ ವಿಷಯವಾಗಿ ಅವರನ್ನು ಖಂಡಿಸಲು ಬರುವರು,” ಎಂಬುದಾಗಿ ಪ್ರವಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ದೆವಸ್ಪಾನ್ ನಸಲ್ಲ್ಯಾ ವಾಟೆನ್ ಜಾವ್ನ್ ದೆವಸ್ಪಾನಾನ್ ನಸಲ್ಲಿ ಕಾಮಾ ಕರಲ್ಲ್ಯಾ ಹರ್ ಎಕ್ಲ್ಯಾಕ್, ಅನಿ ಅಪ್ನಾಚ್ಯಾ ವಿರೊದ್ ಬೊಲುನ್ ಕರಲ್ಲ್ಯಾ ಖಟೊರ್ ಕಾಮಾಚ್ಯಾ ಸಾಟ್ನಿ ತೊ ತೆಂಕಾ ಚುಕಿದಾರ್ ಮನುನ್ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:15
35 ತಿಳಿವುಗಳ ಹೋಲಿಕೆ  

ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ನಾನು ಬೋಧಿಸುವ ಶುಭಸಂದೇಶದ ಪ್ರಕಾರ, ದೇವರು ಯೇಸುಕ್ರಿಸ್ತರ ಮುಖಾಂತರ ಮಾನವನ ಗುಟ್ಟುಗಳನ್ನು ರಟ್ಟುಮಾಡಿ, ತೀರ್ಪುಕೊಡುವ ದಿನ ಬಂದೇ ಬರುತ್ತದೆ. ಆ ದಿನ ಇದೆಲ್ಲಾ ಸಂಭವಿಸುತ್ತದೆ.


ಧರ್ಮಶಾಸ್ತ್ರದ ನಿರ್ಬಂಧನೆಗಳು ಸಜ್ಜನರಿಗಲ್ಲ; ಬದಲಿಗೆ ಅಕ್ರಮಿಗಳಿಗೆ, ಅವಿಧೇಯರಿಗೆ, ಅಧರ್ಮಿಗಳಿಗೆ, ಭಕ್ತಿಹೀನರಿಗೆ, ಪಾಪಿಗಳಿಗೆ, ಅಶುದ್ಧರಿಗೆ, ಪ್ರಾಪಂಚಿಕರಿಗೆ, ಹೆತ್ತವರನ್ನು ಹತ್ಯೆಮಾಡುವವರಿಗೆ ಮತ್ತು ಕೊಲೆಗಾರರಿಗೆ.


ಹೀಗಿರುವಲ್ಲಿ ಸಸ್ಯಾಹಾರಿಯೇ, ನೀನು ನಿನ್ನ ಸಹೋದರನನ್ನು ದೋಷಿಯೆಂದು ತೀರ್ಪಿಡುವುದೇಕೆ? ಮಾಂಸಹಾರಿಯೇ, ನಿನ್ನ ಸಹೋದರನನ್ನು ಹೀನೈಸುವುದೇಕೆ? ನಾವೆಲ್ಲರೂ ದೇವರ ನ್ಯಾಯಸ್ಥಾನದ ಮುಂದೆ ನಿಲ್ಲಬೇಕಲ್ಲವೆ?


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಅದೂ ಅಲ್ಲದೆ, ಆತನು ನರಪುತ್ರನಾಗಿರುವ ಕಾರಣ ತೀರ್ಪನ್ನು ಕೊಡುವ ಹಕ್ಕನ್ನು ಆತನಿಗೇ ದಯಪಾಲಿಸಿದ್ದಾರೆ.


ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II


ಇನ್ನು ನಿಲ್ಲಲಿ ಗರ್ವದ ಮಾತು ಬಾಯಿಂದ ಬರದಿರಲಿ ಸೊಕ್ಕಿನ ಸೊಲ್ಲು; ಸರ್ವೇಶ್ವರನಾದ ದೇವನೇ ಸರ್ವಜ್ಞನು. ಮಾನವಕ್ರಿಯೆಗಳ ತೂಕ ನೋಡುವಾತನವನು.


ಮೋಶೆ, “ಸಂಜೆ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನು ಕೊಡುವವರು ಸರ್ವೇಶ್ವರ. ನಾವು ಎಷ್ಟು ಮಾತ್ರದವರು? ಗೊಣಗುಟ್ಟುವ ನಿಮ್ಮ ಮಾತುಗಳು ಸರ್ವೇಶ್ವರನಿಗೆ ಕೇಳಿಸಿವೆ. ಆ ಗೊಣಗುಟ್ಟುವಿಕೆ ಸರ್ವೇಶ್ವರನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ,” ಎಂದನು.


ಇದಕ್ಕೆಲ್ಲಾ ಸಾಕ್ಷಿಯಾಗಿರುವಾತನು, “ಹೌದು, ನಾನು ಬೇಗನೆ ಬರುತ್ತೇನೆ,” ಎಂದು ಹೇಳುತ್ತಾನೆ. ಆಮೆನ್, ಪ್ರಭು ಯೇಸುವೇ, ಬನ್ನಿ.


ಬಳಿಕ ನಾನು ಮತ್ತೊಂದು ಮೃಗವನ್ನು ಕಂಡೆ. ಅದು ಭೂಮಿಯಿಂದ ಮೇಲೇರಿ ಬಂದಿತು. ಅದಕ್ಕೆ ಟಗರಿಗಿರುವಂಥ ಎರಡು ಕೊಂಬುಗಳು ಇದ್ದವು. ಆದರೆ ಅದು ಘಟಸರ್ಪದಂತೆಯೇ ಮಾತನಾಡುತ್ತಿತ್ತು.


ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.


“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.


ಅದರ ತಲೆಯ ಮೇಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ,


ದೇವರು ಎಲ್ಲ ಕಾರ್ಯಗಳನ್ನು, ರಹಸ್ಯವಾದುವುಗಳನ್ನು ಕೂಡ, ಅವು ಒಳ್ಳೆಯದಾಗಿರಲಿ, ಕೆಟ್ಟದಾಗಿರಲಿ, ನ್ಯಾಯವಿಚಾರಣೆಗೆ ಗುರಿಮಾಡುವರು.


ವಿಧಿಸಲಿ ಅವರಿಗೆ ಲಿಖಿತಾಜ್ಞೆಯ ಶಿಕ್ಷೆಯನು I ಇದು ತರಲಿ ಭಕ್ತರೆಲ್ಲರಿಗೆ ಗೌರವವನು I ಅಲ್ಲೆಲೂಯ! II


ಉಬ್ಬಿಹೋಗಿಹರು ಕೆಡುಕರೆಲ್ಲರು I ಜಂಬ ಕೊಚ್ಚಿಕೊಳ್ಳುತ್ತಿಹರು ಅವರು II


ನಾಕವನೆ ತಾಕುತಿದೆ ಅವರ ಗರ್ವದ ನುಡಿ I ಜಗದಲಿ ಹರಡುತಿದೆ ಅವರ ದರ್ಪದ ನುಡಿ II


ಬೆಳಗಿಸುವನು ನಿನ್ನ ಸತ್ಯಸಂಧತೆಯನು ಸೂರ್ಯೋದಯದಂತೆ I ಪ್ರಕಟಿಸುವನು ನಿನ್ನಾ ನ್ಯಾಯನಿಷ್ಠೆಯನು ನಡುಹಗಲಿನಂತೆ II


ಸೇದಿಹೋಗಲಿ ಸಜ್ಜನರ ವಿರುದ್ಧ ಸುಳ್ಳಾಡುವ ನಾಲಿಗೆ I ಬಿದ್ದುಹೋಗಲಿ, ಸೊಕ್ಕಿನಿಂದವರನು ಧಿಕ್ಕರಿಸುವ ನಾಲಿಗೆ II


ಅವರಾಡುವ ಮಾತುಗಳು ನಿನಗೆ ವಿರೋಧ I ಹಗೆಗಳನು ಎತ್ತಿಕ್ಕುವರು ನಿನಗೆ ವಿರುದ್ಧ II


ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಅತಿಯಾದ ಹರಟೆಗಳನ್ನು ಕೇಳಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು