Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:16 - ಕನ್ನಡ ಸತ್ಯವೇದವು C.L. Bible (BSI)

16 ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇವರು ಗುಣುಗುಟ್ಟುವವರೂ ತಮ್ಮ ಗತಿಯನ್ನು ನಿಂದಿಸುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಬರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಈ ದುರ್ಬೋಧಕರಾದರೋ ಗುಣುಗುಟ್ಟುವವರೂ ತಪ್ಪು ಹುಡುಕುವವರೂ ದುರಾಶೆಗಳಿಗೆ ಬಲಿಯಾದವರೂ ಬಡಾಯಿಕೊಚ್ಚುವವರೂ ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇವರು ಗೊಣಗುಟ್ಟುವವರೂ ದೂರುವವರೂ ತಮ್ಮ ದುರಾಶೆಗಳನ್ನು ಅನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಉದುರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಹಿ ಚುಕ್ ಶಿಕಾಪಾ ಶಿಕ್ವುತಲಿ ಲೊಕಾ ದುಸ್ರ್ಯಾಕ್ನಿ ದೊಶ್ ದಿತ್ಯಾತ್, ತೆನಿ ಅಪ್ನಾಚ್ಯಾ ಬುರ್ಶ್ಯಾ ಆಶಾಂಚ್ಯಾ ಸಾರ್ಕೆ ಚಲ್ತಾತ್ ಅನಿ ಅಪ್ನಾಚ್ಯಾ ಫಾಯ್ದ್ಯಾ ಸಾಟ್ನಿ ದುಶ್ರ್ಯಾಂಚಿ ಬಡಾಯ್ ಬೊಲುನ್ ದಾಕ್ವುತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:16
38 ತಿಳಿವುಗಳ ಹೋಲಿಕೆ  

ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.


ಮುಖ್ಯವಾಗಿ, ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಬಲಿಯಾಗಿರುವವರನ್ನು ಮತ್ತು ದೇವರ ಅಧಿಕಾರವನ್ನು ತೃಣೀಕರಿಸುವವರನ್ನು ಅವರು ಶಿಕ್ಷಿಸದೆ ಬಿಡುವುದಿಲ್ಲ.


ನೀವು ಮಾಡುವ ಎಲ್ಲಾ ಕಾರ್ಯಗಳನ್ನು ಗೊಣಗುಟ್ಟದೆ, ವಿವಾದವಿಲ್ಲದೆ, ಏಕಮನಸ್ಸಿನಿಂದ ಮಾಡಿ.


ಉಳಿದಿರುವ ತನ್ನ ಜೀವಮಾನ ಕಾಲವನ್ನು ಲೌಕಿಕ ವ್ಯಾಮೋಹಗಳಲ್ಲಿ ಕಳೆಯದೆ ದೇವರ ಚಿತ್ತಕ್ಕನುಸಾರ ಕಳೆಯುತ್ತಾನೆ.


ಮತಿಗೆಟ್ಟ ಅಂಥವರಲ್ಲಿ ಸತ್ಯವೆಂಬುದು ಇರದು. ಧಾರ್ಮಿಕ ಸೇವೆಯು ಧನಗಳಿಕೆಯ ಸಾಧನವೆಂದೇ ಇವರ ನಂಬಿಕೆ.


ಮತ್ತೆ ಕೆಲವರು ಗೊಣಗುಟ್ಟಿದರು; ಸಂಹಾರಕ ದೂತನಿಂದ ಸಂಹರಿಸಲ್ಪಟ್ಟರು. ನೀವೂ ಅವರಂತೆ ಗೊಣಗುಟ್ಟುವವರಾಗಬೇಡಿ.


“ತಮ್ಮ ದುರಿಚ್ಛೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರು,” ಎಂದು ಅವರು ಎಚ್ಚರಿಸಿದ್ದಾರೆ.


ಮೊತ್ತಮೊದಲನೆಯದಾಗಿ ನೀವು ಇದನ್ನು ನೆನಪಿನಲ್ಲಿಡಬೇಕು; ಅಂತ್ಯಕಾಲದಲ್ಲಿ ಕುಚೋದ್ಯಗಾರರು ಕಾಣಿಸಿಕೊಳ್ಳುವರು.


ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ಭ್ರಷ್ಟರನು ಧಿಕ್ಕರಿಸುವನು, ಭಕ್ತರನು ಗೌರವಿಸುವನು I ನಷ್ಟವಾದರೂ ಕೊಟ್ಟ ಮಾತನು ತಪ್ಪನವನು II


“ವ್ಯಾಜ್ಯತೀರಿಸುವಾಗ ಅನ್ಯಾಯವಾದ ತೀರ್ಪನ್ನು ಕೊಡಬೇಡ. ಬಡವನ ಬಡತನವನ್ನಾಗಲಿ, ದೊಡ್ಡವನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದ ತೀರ್ಪನ್ನು ಕೊಡು.


ಭಕ್ತಿಹೀನರು ತಮಗೆ ವಿರುದ್ಧ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಬರುವರು,” ಎಂದು ಪ್ರವಾದಿಸಿದ್ದಾನೆ.


ವಿಧೇಯರಾದ ಮಕ್ಕಳಂತೆ ನಡೆದುಕೊಳ್ಳಿ. ನೀವು ಅಜ್ಞಾನಿಗಳಾಗಿದ್ದಾಗ ದುರಿಚ್ಛೆಗಳಿಗೆ ಈಡಾಗಿದ್ದಿರಿ; ಈಗ ಅವುಗಳಿಗೆ ಎಡೆಕೊಡಬೇಡಿ.


ನಾನು ಹೇಳುವುದೇನೆಂದರೆ: ನೀವು ಪವಿತ್ರಾತ್ಮರ ಪ್ರೇರಣೆಗನುಸಾರವಾಗಿ ನಡೆದುಕೊಳ್ಳಬೇಕು. ಆಗ, ದೈಹಿಕ ವ್ಯಾಮೋಹಕ್ಕೆ ನೀವು ಈಡಾಗಲಾರಿರಿ.


ಈ ವಿಷಯವಾಗಿ ತಮ್ಮ ಶಿಷ್ಯರು ಗೊಣಗುಟ್ಟುತ್ತಿರುವುದನ್ನು ಯೇಸು ತಾವಾಗಿಯೇ ಅರಿತು, “ಇಷ್ಟುಮಾತ್ರಕ್ಕೆ ನೀವು ಕಂಗೆಡಬೇಕೆ?


ಚಂಚಲಚಿತ್ತರು ಬುದ್ಧಿವಂತರಾಗುವರು. ಗೊಣಗುಟ್ಟುವವರು ಧ್ಯಾನಮಗ್ನರಾಗುವರು.


ಕರುಣೆಗೆಡೆಯಿಲ್ಲ ಕೊಬ್ಬಿದಾ ಹೃದಯಗಳಲಿ I ಗರ್ವ ತುಳುಕುತಿದೆ ಆ ಜನರ ಬಾಯಿಗಳಲಿ II


ಆರೋನನಂಥವನಿಗೇ ವಿರೋಧವಾಗಿ ಗೊಣಗುವವರಾದ್ದರಿಂದ ನೀನು ಮತ್ತು ನಿನ್ನ ಪಂಗಡದವರೆಲ್ಲರು ಸರ್ವೇಶ್ವರನಿಗೆ ವಿರುದ್ಧ ಕೂಡಿಕೊಂಡವರಾದಿರಿ!” ಎಂದನು.


ಜನರು ಸದ್ಬೋಧನೆಯನ್ನು ಸಹಿಸದೆ, ಸ್ವೇಚ್ಛಾಚಾರಿಗಳಾಗುವ ಕಾಲವು ಬರುತ್ತದೆ. ತಮ್ಮ ದುರಿಚ್ಛೆಗಳಿಗೆ ಅನುಗುಣವಾಗಿ ಬೋಧಿಸುವವರಿಗೆ ಕಾತರದಿಂದ ಕಿವಿಗೊಡಲು ಕೂಡಿಕೊಳ್ಳುತ್ತಾರೆ.


ದೇವರ ಅರಿವೇ ಇಲ್ಲದ ಅನ್ಯಜನರಂತೆ ಕಾಮಾತಿರೇಕದಿಂದ ವರ್ತಿಸಬಾರದು.


ಕ್ರಿಸ್ತಯೇಸುವಿಗೆ ಸೇರಿದ ಎಲ್ಲರೂ ತಮ್ಮ ದೈಹಿಕ ವ್ಯಾಮೋಹವನ್ನು ಅದರ ಆಶಾಪಾಶಗಳ ಹಾಗೂ ದುರಿಚ್ಛೆಗಳ ಸಮೇತ ಶಿಲುಬೆಗೆ ಜಡಿದುಬಿಟ್ಟಿದ್ದಾರೆ.


“ಸ್ವರ್ಗದಿಂದ ಇಳಿದುಬಂದ ರೊಟ್ಟಿ ನಾನೇ” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಗೊಣಗತೊಡಗಿದರು.


ಇದನ್ನು ನೋಡಿದವರೆಲ್ಲರು, “ಯೇಸು ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ?” ಎಂದು ಗೊಣಗುಟ್ಟಿದರು.


ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,” ಎಂದು ಗೊಣಗಿದರು.


ಇದನ್ನು ಕಂಡ ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಧರ್ಮಶಾಸ್ತ್ರಜ್ಞರು ಗೊಣಗಾಡುತ್ತಾ, ಯೇಸುವಿನ ಶಿಷ್ಯರ ಬಳಿಗೆ ಬಂದು, “ನೀವು ಸುಂಕದವರ ಮತ್ತು ಪಾಪಿಷ್ಠರ ಜೊತೆಯಲ್ಲಿ ಏಕೆ ತಿನ್ನುತ್ತೀರಿ, ಕುಡಿಯುತ್ತೀರಿ?” ಎಂದು ಪ್ರಶ್ನಿಸಿದರು.


ಪಕ್ಷಪಾತ ತಕ್ಕುದಲ್ಲ; ತುತ್ತನ್ನಕ್ಕಾಗಿ ತಪ್ಪುಮಾಡುವವರುಂಟು.


ಗೊಣಗುಟ್ಟಿದರು ತಮ್ಮ ಗುಡಾರಗಳಲಿ I ನಂಬಿಕೆಯಿಡಲಿಲ್ಲ ಆತನ ಮಾತಿನಲಿ II


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸುವನು ಬಡವ-ಬಲ್ಲಿದನೆಂಬ ಭೇದವನ್ನು ಮಾಡನು. ಏಕೆಂದರೆ ಅವರೆಲ್ಲರು ಆ ದೇವನಿಂದಲೇ ಸೃಷ್ಟಿಯಾದವರು.


ನಾನಾರಿಗೂ ಮುಖದಾಕ್ಷಿಣ್ಯ ತೋರುವುದಿಲ್ಲ ಯಾವ ಮಾನವನಿಗೂ ಮುಖಸ್ತುತಿ ಸಲ್ಲಿಸುವುದಿಲ್ಲ.


ನಿಮ್ಮ ನಿಮ್ಮ ಡೇರೆಗಳಲ್ಲಿ ಗೊಣಗುಟ್ಟಿದಿರಿ; ‘ಸರ್ವೇಶ್ವರ ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿದ್ದು ಹಗೆತನದಿಂದಲೇ; ಅಮೋರಿಯರ ಕೈಗೆ ಒಪ್ಪಿಸಿ ಸಂಹರಿಸಬೇಕೆಂದೇ.


ಆ ನಾಡನ್ನು ಸಂಚರಿಸಿ ನೋಡಿಬರುವುದಕ್ಕೆ ಮೋಶೆಯಿಂದ ಕಳಿಸಲಾಗಿದ್ದವರು ಹಿಂದಿರುಗಿ ಬಂದು ಆ ನಾಡಿನ ಬಗ್ಗೆ ಅಶುಭಸಮಾಚಾರವನ್ನು ಹೇಳಿ ಸರ್ವಸಮೂಹದವರನ್ನು ಮೋಶೆಗೆ ವಿರುದ್ಧ ಗೊಣಗುವಂತೆ ಮಾಡಿದ್ದರು.


ಆದರೂ ಇಸ್ರಯೇಲ್ ಸಮುದಾಯದವರು ಮೋಶೆ ಮತ್ತು ಆರೋನರ ಮೇಲೆ ಗೊಣಗುಟ್ಟ ತೊಡಗಿದರು. ‘ಸರ್ವೇಶ್ವರನ ಜನರನ್ನು ಸಾಯಸಿದವರು ನೀವೇ’ ಎಂದು ಹೇಳುವವರಾದರು.


ಕೇಡು ಮಾತು, ಕೆಣಕು ಮಾತು ಅವರದು I ಜೊತೆಗೆ ಬಲಾತ್ಕಾರದ ಸೊಕ್ಕು ಮಾತು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು