Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:18 - ಕನ್ನಡ ಸತ್ಯವೇದವು C.L. Bible (BSI)

18 “ತಮ್ಮ ದುರಿಚ್ಛೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರು,” ಎಂದು ಅವರು ಎಚ್ಚರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಭಕ್ತಿಗೆ ವಿರುದ್ಧವಾದ ತಮ್ಮ ಆಸೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರೆಂದು” ಅವರು ನಿಮಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಪೊಸ್ತಲರು ನಿಮಗೆ, “ಅಂತ್ಯಕಾಲದಲ್ಲಿ ದೇವರನ್ನು ಕುರಿತು ನಗುವ ಜನರಿರುತ್ತಾರೆ” ಎಂದು ಹೇಳಿದರು. ಈ ಜನರು ತಮ್ಮ ಇಚ್ಛೆಗನುಸಾರವಾದ ಮತ್ತು ದೇವರಿಗೆ ವಿರುದ್ಧವಾದವುಗಳನ್ನು ಮಾತ್ರ ಮಾಡುವವರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರು,” ಎಂದು ಅಪೊಸ್ತಲರು ನಿಮಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಆಕ್ರಿಚ್ಯಾ ವೆಳಾರ್ ತುಮ್ಕಾ ಎಡ್ಸಡ್ತಲಿ,ಅನಿ ದೆವಾಕ್ ವಿರೊದ್ ಕರ್ತಲಿ ಲೊಕಾ ರ್‍ಹಾತ್ಯಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:18
11 ತಿಳಿವುಗಳ ಹೋಲಿಕೆ  

ಮೊತ್ತಮೊದಲನೆಯದಾಗಿ ನೀವು ಇದನ್ನು ನೆನಪಿನಲ್ಲಿಡಬೇಕು; ಅಂತ್ಯಕಾಲದಲ್ಲಿ ಕುಚೋದ್ಯಗಾರರು ಕಾಣಿಸಿಕೊಳ್ಳುವರು.


ಜನರು ಸದ್ಬೋಧನೆಯನ್ನು ಸಹಿಸದೆ, ಸ್ವೇಚ್ಛಾಚಾರಿಗಳಾಗುವ ಕಾಲವು ಬರುತ್ತದೆ. ತಮ್ಮ ದುರಿಚ್ಛೆಗಳಿಗೆ ಅನುಗುಣವಾಗಿ ಬೋಧಿಸುವವರಿಗೆ ಕಾತರದಿಂದ ಕಿವಿಗೊಡಲು ಕೂಡಿಕೊಳ್ಳುತ್ತಾರೆ.


ದುಷ್ಕರ್ಮಿಗಳು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನೇದಿನೇ ಅಧೋಗತಿಗಿಳಿಯುತ್ತಾರೆ.


ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು.


ನಾನು ಹೋದ ಬಳಿಕ ಕ್ರೂರವಾದ ತೋಳಗಳು ನಿಮ್ಮ ಮಧ್ಯೆ ನುಗ್ಗುವುವು ಎಂದು ನಾನು ಬಲ್ಲೆ. ಅವು ಮಂದೆಗೆ ಹಾನಿಮಾಡದೆ ಬಿಡವು.


ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.


ಮುಖ್ಯವಾಗಿ, ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಬಲಿಯಾಗಿರುವವರನ್ನು ಮತ್ತು ದೇವರ ಅಧಿಕಾರವನ್ನು ತೃಣೀಕರಿಸುವವರನ್ನು ಅವರು ಶಿಕ್ಷಿಸದೆ ಬಿಡುವುದಿಲ್ಲ.


ಏಕೆಂದರೆ, ಕೆಲವರು ಕಳ್ಳತನದಿಂದ ನಿಮ್ಮ ಸಭೆಯೊಳಗೆ ಸೇರಿಕೊಂಡಿದ್ದಾರೆ. ಇವರು ಭಕ್ತಿಹೀನರು; ನಮ್ಮ ದೇವರ ಅನುಗ್ರಹದ ನೆವದಲ್ಲಿ ತಮ್ಮ ಕಾಮಾಭಿಲಾಷೆಗಳನ್ನು ಸಮರ್ಥಿಸಿಕೊಳ್ಳುತ್ತಿರುವವರು; ನಮ್ಮ ಏಕೈಕ ಒಡೆಯರೂ ಪ್ರಭುವೂ ಆದ ಯೇಸುಕ್ರಿಸ್ತರನ್ನು ನಿರಾಕರಿಸುವವರು. ಇಂಥವರಿಗೆ ದಂಡನೆಯಾಗಬೇಕೆಂದು ಬಹಳ ಹಿಂದೆಯೇ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು