Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:20 - ಕನ್ನಡ ಸತ್ಯವೇದವು C.L. Bible (BSI)

20 ಪ್ರಿಯರೇ, ನೀವಾದರೋ ಅತಿ ಪರಿಶುದ್ಧ ವಿಶ್ವಾಸದ ಆಧಾರದ ಮೇಲೆ ನಿರ್ಮಿಸಲಾದ ಮಂದಿರದಂತೆ ಪ್ರವರ್ಧಿಸಿರಿ; ಪವಿತ್ರಾತ್ಮ ಅವರಿಂದ ಪ್ರೇರಿತರಾಗಿ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಪ್ರಿಯರೇ, ನೀವಾದರೋ ನಿಮಗಿರುವ ಅತಿ ಪರಿಶುದ್ಧವಾದ ಕ್ರಿಸ್ತ ನಂಬಿಕೆಯನ್ನು ಆಧಾರವಾಗಿಟ್ಟುಕೊಂಡು ಅಭಿವೃದ್ಧಿಹೊಂದುತ್ತಾ, ಪವಿತ್ರಾತ್ಮಪ್ರೇರಿತರಾಗಿ ಪ್ರಾರ್ಥನೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಪ್ರಿಯರೇ, ನೀವಾದರೋ ನಿಮಗಿರುವ ಅತಿಪರಿಶುದ್ಧವಾದ ಕ್ರಿಸ್ತ ನಂಬಿಕೆಯನ್ನು ಆಧಾರಮಾಡಿಕೊಂಡು ಭಕ್ತಿಯಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾ ಪವಿತ್ರಾತ್ಮ ಪ್ರೇರಿತರಾಗಿ ಪ್ರಾರ್ಥನೆಮಾಡುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಪ್ರಿಯ ಸ್ನೇಹಿತರೇ, ನೀವು ನಿಮ್ಮ ಅತಿಪರಿಶುದ್ಧ ನಂಬಿಕೆಯ ಮೂಲಕ ದೃಢವಾಗಿರಿ. ಪವಿತ್ರಾತ್ಮಭರಿತರಾಗಿ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಪ್ರಿಯರೇ, ನೀವಾದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯಲ್ಲಿ ನಿಮ್ಮನ್ನು ನಿರ್ಮಿಸಿಕೊಂಡವರಾಗಿ ಪರಿಶುದ್ಧಾತ್ಮ ದೇವರಲ್ಲಿ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಖರೆ ಪ್ರಿತಿಚ್ಯಾನು, ತುಮಿ ತುಮ್ಚ್ಯಾ ಲೈ ಪವಿತ್ರ್ ವಿಶ್ವಾಸಾತ್ ವೈರ್ ವಾಡುನ್ಗೆತ್ ಜಾವಾ. ಪವಿತ್ರ್ ಆತ್ಮ್ಯಾಚ್ಯಾ ಬಳಾನ್ ಮಾಗ್ನಿ ಕರಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:20
28 ತಿಳಿವುಗಳ ಹೋಲಿಕೆ  

ಪವಿತ್ರಾತ್ಮರಿಂದ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲೂ ಪ್ರಾರ್ಥಿಸಿರಿ. ನಿಮ್ಮ ಕೋರಿಕೆ, ಬೇಡಿಕೆಗಳನ್ನು ದೇವರಿಗೆ ಅರ್ಪಿಸಿರಿ. ಎಚ್ಚರವಾಗಿದ್ದು ಎಲ್ಲಾ ದೇವಜನರಿಗಾಗಿ ಎಡೆಬಿಡದೆ ಪ್ರಾರ್ಥಿಸಿರಿ.


ಹಾಗಾದರೆ ಈಗ ನಾನೇನು ಮಾಡಬೇಕು? ಆತ್ಮದಿಂದಲೂ ಪ್ರಾರ್ಥಿಸಬೇಕು, ಮನಸ್ಸಿನಿಂದಲೂ ಪ್ರಾರ್ಥಿಸಬೇಕು, ಆತ್ಮದಿಂದಲೂ


ಅವರಲ್ಲಿ ಸ್ಥಿರವಾಗಿರಿ. ಅವರನ್ನೇ ಅವಲಂಬಿಸಿ ನಿಮ್ಮ ಬಾಳೆಂಬ ಸೌಧವನ್ನು ನಿರ್ಮಿಸಿರಿ. ನೀವು ಕಲಿತುಕೊಂಡಿರುವಂತೆ ನಿಮ್ಮ ವಿಶ್ವಾಸ ಅವರಲ್ಲಿ ದೃಢವಾಗಿರಲಿ. ಕೃತಜ್ಞತೆಯು ನಿಮ್ಮಲ್ಲಿ ಉಕ್ಕೇರಲಿ.


ಆದುದರಿಂದ ನೀವು ಈಗ ನಡೆದುಕೊಳ್ಳುತ್ತಿರುವಂತೆ, ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ, ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿರಿ.


ಹಾಗಾದರೆ ಪ್ರಿಯ ಸಹೋದರರೇ, ನಾವು ನಡೆದುಕೊಳ್ಳಬೇಕಾದ ಬಗೆ ಹೇಗೆ? ನೀವು ಸಭೆ ಸೇರಿದಾಗ ನಿಮ್ಮಲ್ಲಿ ಒಬ್ಬನು ಹಾಡುತ್ತಾನೆ; ಇನ್ನೊಬ್ಬನು ಉಪದೇಶ ಮಾಡುತ್ತಾನೆ; ಮತ್ತೊಬ್ಬನು ದೇವರು ತನಗೆ ಶ್ರುತಪಡಿಸಿದ್ದನ್ನು ತಿಳಿಸುತ್ತಾನೆ; ಇನ್ನೂ ಒಬ್ಬನು ಪರವಶಾಭಾಷೆಯನ್ನಾಡುತ್ತಾನೆ; ಮಗದೊಬ್ಬನು ಅದಕ್ಕೆ ಅರ್ಥ ಹೇಳುತ್ತಾನೆ ಎಂದಿಟ್ಟುಕೊಳ್ಳೋಣ. ನೀವು ಏನು ಮಾಡಿದರೂ ಧರ್ಮಸಭೆಯ ಅಭಿವೃದ್ಧಿಗಾಗಿಯೇ ಮಾಡಬೇಕು.


ದೇವರು ನಿಮಗೆ ದಯಪಾಲಿಸಿರುವ ಆತ್ಮ ನಿಮ್ಮನ್ನು ಮತ್ತೊಮ್ಮೆ ಗುಲಾಮರನ್ನಾಗಿಯೂ ಭಯಭೀತರನ್ನಾಗಿಯೂ ಮಾಡುವುದಿಲ್ಲ. ಬದಲಿಗೆ, ನಿಮ್ಮನ್ನು ದೇವರ ಮಕ್ಕಳನ್ನಾಗಿಸುತ್ತದೆ. ಆ ಆತ್ಮದ ಮೂಲಕವೇ ನಾವು ದೇವರನ್ನು, “ಅಪ್ಪಾ, ತಂದೆಯೇ” ಎಂದು ಕರೆಯುತ್ತೇವೆ.


ನೀವು ದೇವರ ಮಕ್ಕಳಾಗಿರುವುದರಿಂದಲೇ, “ಅಪ್ಪಾ, ತಂದೆಯೇ,” ಎಂದು ಕರೆಯುವ ತಮ್ಮ ಪುತ್ರನ ಆತ್ಮವನ್ನು ದೇವರು ನಮ್ಮ ಹೃದಯಗಳಿಗೆ ಕಳುಹಿಸಿದ್ದಾರೆ.


ನಿಮ್ಮ ಬಾಯಿಂದ ಕೆಟ್ಟಮಾತುಗಳು ಬಾರದಿರಲಿ. ಪ್ರತಿಯಾಗಿ ನಿಮ್ಮ ಮಾತುಗಳು ಆದರ್ಶಕರವಾಗಿರಲಿ; ಸಮಯೋಚಿತವಾಗಿರಲಿ, ಕೇಳುವವರ ಕಿವಿಗದು ಹಿತಕರವಾಗಿರಲಿ.


ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.


ಇಡೀ ದೇಹವು ಕ್ರಿಸ್ತಯೇಸುವನ್ನೇ ಆಧರಿಸಿದೆ. ಅವರಲ್ಲಿಯೇ ಎಲ್ಲ ನರನಾಡಿಗಳು, ಕೀಲುಗಂಟು಼ಗಳು ಒಂದಾಗಿ ಕೆಲಸಮಾಡುತ್ತವೆ. ಪ್ರತಿಯೊಂದು ಅಂಗವೂ ತನ್ನ ಕೆಲಸವನ್ನು ಸೂಕ್ತರೀತಿಯಲ್ಲಿ ನಿರ್ವಹಿಸುವುದರಿಂದ ಇಡೀ ದೇಹ ಬೆಳೆಯುತ್ತಾ, ಪ್ರೀತಿಯಲ್ಲಿ ಪ್ರವರ್ಧಿಸುತ್ತಾ ಕ್ಷೇಮಾಭಿವೃದ್ಧಿಯನ್ನು ಪಡೆಯುತ್ತದೆ.


ದೇವಜನರನ್ನು ಪರಿಣಿತರನ್ನಾಗಿಸಿ ದೇವರ ಸೇವೆಗೆ ಸಿದ್ಧಗೊಳಿಸಲೆಂದು ಮತ್ತು ಯೇಸುಕ್ರಿಸ್ತರ ದೇಹವಾದ ಧರ್ಮಸಭೆ ಅಭಿವೃದ್ಧಿಹೊಂದಲೆಂದು ಈ ವರಗಳನ್ನು ಅವರಿಗೆ ನೀಡಿದರು.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ದೇವರಿಂದ ಜನಿಸಿದ ಪ್ರತಿ ಒಬ್ಬನೂ ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದು ನಮ್ಮ ವಿಶ್ವಾಸವೇ.


ಆತನ ಸತ್ಕ್ರಿಯೆಗಳಿಂದಲೇ ವಿಶ್ವಾಸವು ಸಿದ್ಧಿಗೆ ಬಂದಿತು ಎಂಬುದನ್ನು ನಾವು ನೋಡುತ್ತೇವೆ.


ಕ್ರಿಸ್ತವಿಶ್ವಾಸದಲ್ಲಿ ಪುತ್ರನಾಗಿರುವ ತೀತನಿಗೆ - ದೇವರ ದಾಸನೂ ಯೇಸುಕ್ರಿಸ್ತರ ಪ್ರೇಷಿತನೂ ಆದ ಪೌಲನು ಬರೆಯುವ ಪತ್ರ.ತಂದೆಯಾದ ದೇವರೂ ನಮ್ಮ ಉದ್ಧಾರಕರಾದ ಯೇಸುಕ್ರಿಸ್ತರೂ ನಿನಗೆ ಕೃಪಾಶೀರ್ವಾದವನ್ನೂ‍ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ! ದೇವರು, ತಾವು ಆರಿಸಿಕೊಂಡಿರುವ ಜನರ ವಿಶ್ವಾಸವನ್ನು ದೃಢಪಡಿಸಲು ಮತ್ತು ಭಕ್ತಿಯನ್ನು ವೃದ್ಧಿಗೊಳಿಸಿ ಅಮರಜೀವದತ್ತ ಕರೆದೊಯ್ಯುವ ಸತ್ಯಗಳನ್ನು ಅವರಿಗೆ ಬೋಧಿಸಲು ನನ್ನನ್ನು ನೇಮಿಸಿದ್ದಾರೆ. ಈ ಅಮರ ಜೀವವನ್ನು ಕೊಡುವುದಾಗಿ ಸತ್ಯಪರರಾದ ದೇವರು ಆದಿಯಿಂದಲೂ ನಮಗೆ ವಾಗ್ದಾನಮಾಡಿದ್ದರು. ಸೂಕ್ತಕಾಲವು ಬಂದಾಗ ಈ ವಾಗ್ದಾನವನ್ನು ಈಡೇರಿಸಿ ತಮ್ಮ ಸಂದೇಶವನ್ನು ಪ್ರಕಟಿಸಿದರು. ನನಗೊಪ್ಪಿಸಿರುವ ಈ ಸಂದೇಶವನ್ನು ಜಗದ್ರಕ್ಷಕರಾದ ದೇವರ ಆಜ್ಞಾನುಸಾರ ನಾನು ಸಾರುತ್ತಿದ್ದೇನೆ.


“ಏನನ್ನು ಮಾಡಲೂ ಸ್ವಾತಂತ್ರ್ಯವಿದೆ,” ಎಂದು ಹೇಳುವುದುಂಟು. ಆದರೆ ಎಲ್ಲವೂ ಪ್ರಯೋಜನಕರವಲ್ಲ. ಏನನ್ನು ಮಾಡಲೂ ಸ್ವಾತಂತ್ರ್ಯವಿದೆ. ಆದರೆ ಎಲ್ಲವೂ ಅಭಿವೃದ್ಧಿಕರವಲ್ಲ.


ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೇ ಬಯಸಿ, ವಿಶ್ವಾಸದಲ್ಲಿ ಅವನು ಮತ್ತಷ್ಟು ಪ್ರವರ್ಧಿಸುವಂತೆ ನೆರವಾಗಬೇಕು.


ಅವರಿಗೂ ನಮಗೂ ಯಾವ ಭೇದಭಾವವನ್ನು ತೋರಿಸದೆ ವಿಶ್ವಾಸದ ನಿಮಿತ್ತ ದೇವರು ಅವರ ಪಾಪಗಳನ್ನು ಕ್ಷಮಿಸಿದರು.


ನಿನ್ನ ದೃಢವಿಶ್ವಾಸವು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿ ಲೋವಿಯಳಲ್ಲೂ ತಾಯಿ ಯೂನಿಸಳಲ್ಲೂ ನೆಲೆಗೊಂಡಿದ್ದ ವಿಶ್ವಾಸ ಈಗ ನಿನ್ನಲ್ಲೂ ಪೂರ್ಣವಾಗಿ ನೆಲೆಗೊಂಡಿದೆಯೆಂದು ನಾನು ನಂಬಿದ್ದೇನೆ.


ಕಟ್ಟುಕತೆಗಳಲ್ಲೂ ಕೊನೆಮೊದಲಿಲ್ಲದ ವಂಶಾವಳಿಗಳ ನಿರೂಪಣೆಗಳಲ್ಲೂ ಕಾಲಹರಣ ಮಾಡಬಾರದೆಂದು ಅವರಿಗೆ ಆಜ್ಞಾಪಿಸಬೇಕು. ಅಂಥ ಕತೆಗಳು, ವಂಶಾವಳಿಗಳು ಅನಗತ್ಯವಾದ ವಾದವಿವಾದಗಳಿಗೆ ಎಡೆಮಾಡುತ್ತವೆಯೇ ಹೊರತು ದೇವರ ಯೋಜನೆ ಕೈಗೂಡಲು ಅವು ಅನುಕೂಲವಾಗಿಲ್ಲ; ವಿಶ್ವಾಸದಿಂದ ಮಾತ್ರ ಅದು ಸಾಧ್ಯ.


ನಮ್ಮ ಪ್ರಭು ಯೇಸುಕ್ರಿಸ್ತರ ದಿನದಂದು ನೀವು ನಿರ್ದೋಷಿಗಳಾಗಿರುವಂತೆ ಆ ದೇವರೇ, ನಿಮ್ಮನ್ನು ಕಡೆಯವರೆಗೂ ಸ್ಥಿರವಾಗಿ ಕಾಪಾಡುವರು.


ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು; ಖಡ್ಗದಿಂದ ಹತಿಸುವವನು ಖಡ್ಗದಿಂದಲೇ ಹತನಾಗಬೇಕು. ಆದ್ದರಿಂದ ದೇವಜನರು ಸಹನೆಯಿಂದಲೂ ವಿಶ್ವಾಸದಿಂದಲೂ ನಡೆದುಕೊಳ್ಳಬೇಕು.


ಪ್ರಿಯ ಸಹೋದರರೇ, ನಮ್ಮೆಲ್ಲರಿಗೂ ಲಭಿಸಿರುವ ಜೀವೋದ್ಧಾರವನ್ನು ಕುರಿತು ಬರೆಯಲು ಅತ್ಯಾಸಕ್ತನಾಗಿದ್ದೆನು. ಆದರೆ, ದೇವಜನರಿಗೆ ಒಮ್ಮೆಗೇ ಶಾಶ್ವತವಾಗಿ ಕೊಡಲಾಗಿರುವ ವಿಶ್ವಾಸವನ್ನು ಕಾಪಾಡಿಕೊಳ್ಳುವುದಕ್ಕಾಗಿ ಹೋರಾಡಬೇಕೆಂದು ನಿಮ್ಮನ್ನು ಪ್ರೋತ್ಸಾಹಿಸಿ ಬರೆಯುವುದು ಅವಶ್ಯವೆಂದು ತೋರಿತು.


ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ:


ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು