Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:21 - ಕನ್ನಡ ಸತ್ಯವೇದವು C.L. Bible (BSI)

21 ನಿತ್ಯಜೀವವನ್ನು ದಯಪಾಲಿಸುವ ಕರುಣಾಮಯ ಪ್ರಭು ಯೇಸುಕ್ರಿಸ್ತರನ್ನು ಎದುರುನೋಡುತ್ತಾ ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ, ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ. ನಿತ್ಯಜೀವವನ್ನು ಹೊಂದಿಕೊಳ್ಳುವುದಕ್ಕಾಗಿ ಪ್ರಭುವಾದ ಯೇಸು ಕ್ರಿಸ್ತನ ಕರುಣೆಯನ್ನೇ ಎದುರುನೋಡುತ್ತಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿತ್ಯಜೀವಕ್ಕಾಗಿ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕರುಣೆಗೋಸ್ಕರ ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಧನಿ ಜೆಜು ಕ್ರಿಸ್ತ್ ಅಪ್ನಾಚ್ಯಾ ದಯೆಚ್ಯಾ ವೈನಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ದಿತಲ್ಯಾಕ್ ರಾಕುನ್ ಅಸಲ್ಲ್ಯಾ ಬಾಸೆನ್ ತುಮ್ಕಾಚ್ ತುಮಿ ದೆವಾಚ್ಯಾ ಪ್ರೆಮಾತ್ ಥವ್ನ್ ಘೆವಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:21
31 ತಿಳಿವುಗಳ ಹೋಲಿಕೆ  

ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿ ನಮಗೆ ಗೊತ್ತಿದೆ. ಅದರಲ್ಲಿ ನಮಗೆ ವಿಶ್ವಾಸವಿದೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ.


ದೇವರ ಆ ದಿನವನ್ನು ಎದುರುನೋಡುತ್ತಾ ಅದು ಬೇಗನೆ ಬರಲೆಂದು ಹಾರೈಸಬೇಕು. ಆ ದಿನ, ಆಕಾಶಮಂಡಲವು ಅಗ್ನಿಯಿಂದ ಉರಿದುಹೋಗುವುದು; ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಶಾಖದಿಂದ ಕರಗಿಹೋಗುವುವು.


ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.


ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.


ದೇವರ ಪ್ರೀತಿಯನ್ನೂ ಕ್ರಿಸ್ತಯೇಸುವಿನ ಸಹನೆಯನ್ನೂ ನೀವು ಕಲಿತುಕೊಳ್ಳುವಂತೆ, ಪ್ರಭುವೇ ನಿಮ್ಮ ಅಂತರಂಗವನ್ನು ಬೆಳಗಿಸಲಿ.


ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.


ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.”


ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.


ಅಂತೆಯೇ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಸೃಷ್ಟಿಸಮಸ್ತಗಳಲ್ಲಿ ಯಾವುದೇ ಆಗಲಿ, ಆ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇದು ನಿಶ್ಚಯ.


ಹೀಗೆ ಪಾಪವು ಮರಣದ ಮೂಲಕ ಆಳ್ವಿಕೆ ನಡೆಸಿದಂತೆ, ದೈವಾನುಗ್ರಹವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿರಿಸಿ, ಅಮರಜೀವದತ್ತ ಒಯ್ದು, ಆಳ್ವಿಕೆ ನಡೆಸುತ್ತದೆ.


ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು.


ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ಪ್ರಿಯ ಮಕ್ಕಳೇ, ಮಿಥ್ಯ ದೇವರುಗಳಿಂದ ನೀವು ದೂರವಿರಿ.


ಅಂತಿಮ ದಿನದಂದು ಪ್ರಭು ಯೇಸು ಆತನಿಗೆ ಕರುಣೆತೋರಲಿ. ನಾನು ಏಷ್ಯಾದಲ್ಲಿದ್ದಾಗ ಆತನು ನನಗೆ ಎಷ್ಟೊಂದು ನೆರವು ನೀಡಿದನೆಂದು ನಿನಗೆ ಚೆನ್ನಾಗಿ ತಿಳಿದಿದೆ.


ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


ಸತ್ತಮೇಲೆ ಮನುಜ ಮರಳಿ ಬದುಕುತ್ತಾನೆಯೇ? ಬದುಕುವುದಾದರೆ ಮುಕ್ತಿಹೊಂದುವವರೆಗೆ ನನ್ನ ವಾಯಿದೆಯ ದಿನವೆಲ್ಲ ನಾ ಕಾದಿರುವೆ.


ನಮ್ಮ ಉದ್ಧಾರಕರಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತಯೇಸುವಿನ ಆಜ್ಞಾನುಸಾರ, ನಾನು ಕ್ರಿಸ್ತಯೇಸುವಿನ ಪ್ರೇಷಿತನಾಗಿದ್ದೇನೆ. ಪಿತನಾದ ದೇವರೂ ನಮ್ಮ ಪ್ರಭುವಾದ ಕ್ರಿಸ್ತಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ!


ಒನೇಸಿಫೊರನ ಕುಟುಂಬವನ್ನು ಪ್ರಭು ಆಶೀರ್ವದಿಸಲಿ. ಆತನು ಅನೇಕ ಸಾರಿ ನನ್ನನ್ನು ಆದರಿಸಿದನು.


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ಸಂಶಯಪಡುವವರಿಗೆ ಸಹೃದಯದಿಂದ ನೆರವಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು