Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:24 - ಕನ್ನಡ ಸತ್ಯವೇದವು C.L. Bible (BSI)

24 ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ ಹರ್ಷದೊಡನೆ ನಿಲ್ಲಿಸುವದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆತನು (ದೇವರು) ಬಲಶಾಲಿಯಾಗಿದ್ದಾನೆ. ನೀವು ಬೀಳದಂತೆ ಆತನು ನಿಮಗೆ ಸಹಾಯ ಮಾಡಬಲ್ಲನು. ಆತನು ನಿಮ್ಮಲ್ಲಿ ಯಾವ ತಪ್ಪೂ ಇಲ್ಲದಂತೆ ಮಾಡಿ, ತನ್ನ ಮಹಿಮಾ ಸನ್ನಿಧಿಗೆ ತರುವುದಕ್ಕೂ ನಿಮಗೆ ಮಹಾಸಂತೋಷವನ್ನು ಕೊಡುವುದಕ್ಕೂ ಶಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಎಡವಿಬೀಳದಂತೆ ನಿಮ್ಮನ್ನು ಕಾಪಾಡುವುದಕ್ಕೂ ತಮ್ಮ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ಅತ್ಯಂತ ಹರ್ಷದೊಡನೆ ನಿರ್ದೋಷಿಗಳನ್ನಾಗಿ ನಿಲ್ಲಿಸುವುದಕ್ಕೂ ಶಕ್ತರಾಗಿರುವ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಅತ್ತಾ ತುಮ್ಕಾ ತುಮಿ ಪಡಿನಸ್ತಾನಾ ರಾಕ್ತಲ್ಯಾ, ಅನಿ ಅಪ್ನಾಚ್ಯಾ ಮಹಿಮೆಚ್ಯಾ ಹಾಜಿರ್ಪಾನಾತ್ ಖುಶಿನ್ ಕಾಯ್ಬಿ ಚುಕ್ ನಸಲ್ಲಿ ಲೊಕಾ ಕರುನ್ ಥವ್ತಲ್ಯಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:24
28 ತಿಳಿವುಗಳ ಹೋಲಿಕೆ  

ಪ್ರಭು ನನ್ನನ್ನು ಸಕಲ ಕೇಡುಗಳಿಂದ ರಕ್ಷಿಸಿ, ತಮ್ಮ ಸ್ವರ್ಗಸಾಮ್ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ಸೇರಿಸುವರು. ಯುಗಯುಗಾಂತರಕ್ಕೂ ಅವರಿಗೆ ಮಹಿಮೆ ಸಲ್ಲಲಿ, ಆಮೆನ್.


ನಮ್ಮಲ್ಲಿ ಕಾರ್ಯಸಾಧಿಸುವ ಹಾಗೂ ನಮ್ಮ ಆಶೆ-ಆಕಾಂಕ್ಷೆಗಿಂತಲೂ ಬೇಡಿಕೆ-ಕೋರಿಕೆಗಿಂತಲೂ ಅಧಿಕವಾದುದನ್ನು ಮಾಡಲು ದೇವರು ಶಕ್ತರು. ಅವರಿಗೆ ಧರ್ಮಸಭೆಯಲ್ಲೂ ಕ್ರಿಸ್ತಯೇಸುವಿನಲ್ಲೂ ಯುಗಯುಗಾಂತರಕ್ಕೂ ತಲತಲಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ಈಗಲಾದರೋ ಯೇಸುಕ್ರಿಸ್ತರ ದೈವಿಕ ಮರಣದ ಫಲವಾಗಿ ನಿಮಗೂ ದೇವರಿಗೂ ಸಂಧಾನ ನಡೆದಿದೆ. ಹೀಗೆ ದೇವರು ನಿಮ್ಮನ್ನು ತಮ್ಮ ಸನ್ನಿಧಿಗೆ ಸೇರಿಸಿಕೊಳ್ಳಲು ನೀವು ಪವಿತ್ರರೂ ನಿಷ್ಕಳಂಕರೂ ದೋಷರಹಿತರೂ ಆಗಿರುವಂತೆ ಮಾಡಿದ್ದಾರೆ.


ಧರ್ಮಸಭೆ ಕಳಂಕಕಲ್ಮಷವಾಗಲಿ, ಸುಕ್ಕುಬೊಕ್ಕೆಯಾಗಲಿ ಇಲ್ಲದ ಸೌಂದರ್ಯವತಿಯಾಗಿ ತಮಗೆ ಅರ್ಪಿಸಿಕೊಳ್ಳುವಂತೆ ಹೀಗೆ ಮಾಡಿದರು.


ಪ್ರಭು ಯೇಸುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನು ಯೇಸುಕ್ರಿಸ್ತರೊಡನೆ ಪುನರುತ್ಥಾನಗೊಳಿಸಿ ತಮ್ಮ ಸಾನ್ನಿಧ್ಯಕ್ಕೆ ಬರಮಾಡಿಕೊಳ್ಳುವರು ಎಂಬುದನ್ನು ನಾವು ಬಲ್ಲೆವು. ಅಂತೆಯೇ ನಿಮ್ಮನ್ನೂ ಬರಮಾಡಿಕೊಳ್ಳುವರು.


ಸುಳ್ಳು ಮಾತು ಅವರ ಬಾಯಿಂದ ಬರುವುದಿಲ್ಲ; ಅವರು ನಿರ್ದೋಷಿಗಳು.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಬದಲಿಗೆ, ಯೇಸುಕ್ರಿಸ್ತರ ಬಾಧೆಗಳಲ್ಲಿ ಪಾಲುಹೊಂದಿರುತ್ತೀರೆಂದು ಸಂತೋಷಪಡಿ; ಅವರ ಮಹಿಮೆಯು ಪ್ರತ್ಯಕ್ಷವಾಗುವಾಗ ಪೂರ್ಣ ಹರ್ಷಾನಂದವನ್ನು ಪಡೆಯುವಿರಿ.


ನಿಮ್ಮ ಬಗ್ಗೆ ದೇವರಿಗಿರುವ ಪ್ರೇಮಾಸೂಯೆ ನನಗೂ ಇದೆ. ನಿಷ್ಕಳಂಕ ಕನ್ನಿಕೆಯೊಬ್ಬಳನ್ನು ಅವಳ ಏಕೈಕ ವರನಿಗೆ ನಿಶ್ಚಯಿಸುವ ರೀತಿಯಲ್ಲಿ ನಾನು ಕ್ರಿಸ್ತಯೇಸುವೆಂಬ ಏಕೈಕ ಪುರುಷನಿಗೆ ನಿಮ್ಮನ್ನು ನಿಶ್ಚಯಮಾಡಿದ್ದೇನೆ.


ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು.


ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು, ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು.”


ಮತ್ತೊಬ್ಬನ ದಾಸನ ಮೇಲೆ ದಂಡನೆಯ ತೀರ್ಪುಕೊಡಲು ನೀನು ಯಾರು? ಅವನು ಸಮರ್ಥನು ಅಥವಾ ಅಸಮರ್ಥನು ಎಂದು ತೀರ್ಪುಕೊಡುವುದು ಅವನ ಯಜಮಾನನಿಗೆ ಸೇರಿದ್ದು. ಅವನು ಸಮರ್ಥನಾಗುವಂತೆ ಮಾಡಲು ಪ್ರಭು ಶಕ್ತರು.


ಅಮರ ಭಾಗ್ಯಗಳನು ನೀನನುಗ್ರಹಿಸಿದೆ I ಶ್ರೀಸನ್ನಿಧಿಯಲಾತನನು ತೋಷಗೊಳಿಸಿದೆ II


ನಿತ್ಯಜೀವವನ್ನು ದಯಪಾಲಿಸುವ ಕರುಣಾಮಯ ಪ್ರಭು ಯೇಸುಕ್ರಿಸ್ತರನ್ನು ಎದುರುನೋಡುತ್ತಾ ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ.


ಕ್ರಿಸ್ತಯೇಸುವೇ ನಿಮ್ಮ ನೈಜ ಜೀವವಾಗಿದ್ದಾರೆ. ಅವರು ಪುನರಾಗಮಿಸುವಾಗ ನೀವೂ ಸಹ ಅವರ ಮಹಿಮೆಯಲ್ಲಿ ಪಾಲುಗಾರರಾಗಿ ಅವರೊಂದಿಗೆ ಪ್ರತ್ಯಕ್ಷರಾಗುವಿರಿ.


ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.


ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ, ತನ್ನ ಪಿತನ ಹಾಗೂ ದೇವದೂತರ ಪ್ರಭಾವದೊಡನೆ ಬರುವಾಗ, ನಾಚಿಕೆಪಡುವನು.


“ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.


ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಬರುವೆನಾಗ ನಿನ್ನ ಬಲಿಪೀಠದ ಬಳಿಗೆ I ನನ್ನಾನಂದ ನಿಧಿಯಾದ ನಿನ್ನ ಸನ್ನಿಧಿಗೆ I ವೀಣೆ ನುಡಿಸಿ ದೇವಾ, ನಿನ್ನ ಸ್ತುತಿಸಲಿಕೆ II


ಒಬ್ಬನು ಇಡೀ ಧರ್ಮಶಾಸ್ತ್ರವನ್ನೇ ಕೈಗೊಂಡು ಒಂದೇ ಒಂದು ನಿಯಮವನ್ನು ಮೀರಿ ನಡೆದರೂ ಅವನು ಇಡೀ ಧರ್ಮಶಾಸ್ತ್ರವನ್ನೇ ಮೀರಿ ನಡೆದಂತಾಗುತ್ತದೆ.


ಸಹೋದರರೇ, ನೀವು ದೇವರಿಂದ ಕರೆಹೊಂದಿದವರು; ದೇವರಿಂದ ಆಯ್ಕೆಯಾದವರು. ಈ ವರದಲ್ಲಿ ದೃಢವಾಗಿರಲು ಮತ್ತಷ್ಟು ಪ್ರಯತ್ನಿಸಿರಿ. ಹೀಗೆ ಮಾಡಿದರೆ, ನೀವೆಂದಿಗೂ ವಿಶ್ವಾಸಭ್ರಷ್ಟರಾಗಲಾರಿರಿ.


ಶುದ್ಧಿಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನದ ಗುಡಾರದ ಬಾಗಿಲಲ್ಲಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು