Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:25 - ಕನ್ನಡ ಸತ್ಯವೇದವು C.L. Bible (BSI)

25 ನಮ್ಮ ಉದ್ಧಾರಕರಾದ ಏಕೈಕ ದೇವರಿಗೆ ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಅಧಿಪತ್ಯ, ಅಧಿಕಾರ ಆದಿಯಲ್ಲಿ ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲಿ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಶಕ್ತನಾಗಿರುವ ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಎಲ್ಲಾ ಕಾಲಕ್ಕಿಂತ ಮೊದಲೂ [ಇದ್ದ ಹಾಗೆ] ಈಗಲೂ ಯಾವಾಗಲೂ ಇರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆತನೊಬ್ಬನೇ ದೇವರು. ನಮ್ಮನ್ನು ರಕ್ಷಿಸುವಾತನು ಆತನೊಬ್ಬನೇ. ಆದಿಯಿಂದ ಇದ್ದಹಾಗೆ ಈಗಲೂ ಯಾವಾಗಲೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ಆತನಿಗೆ ಪ್ರಭಾವ, ಮಹತ್ವ, ಆಧಿಪತ್ಯ ಮತ್ತು ಅಧಿಕಾರಗಳು ಇರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಮ್ಮ ರಕ್ಷಕರಾದ ಒಬ್ಬರೇ ದೇವರಿಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಬಲವು, ಅಧಿಕಾರಗಳು ಎಂದೂ ಇದ್ದಂತೆ ಈಗಲೂ ಯಾವಾಗಲೂ ಇರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತ್ಯಾ ಅಮ್ಕಾ ರಾಕ್ತಲ್ಯಾ ಎಕ್ಲ್ಯಾಚ್ ದೆವಾಕ್, ಜೆಜು ಕ್ರಿಸ್ತಾ ಅಮ್ಚ್ಯಾ ಧನಿಯಾಚ್ಯಾ ವೈನಾ ಮಹಿಮಾ, ವೈಭವ್, ರಾಜ್ವಟ್ಕಿ ಅನಿ ಅಧಿಕಾರ್ , ಅದ್ದಿ, ಅತ್ತಾ ಅನಿ ಸದಾ ಸರ್ವತಾಕ್ ತೆಕಾಚ್ ರ್‍ಹಾಂವ್ದಿತ್, ಆಮೆನ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:25
32 ತಿಳಿವುಗಳ ಹೋಲಿಕೆ  

ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


ಕಾರಣ, ದೇವರಿಂದ ಸಿಗುವಂಥ ಗೌರವವನ್ನು ಅರಸದೆ ನಿಮ್ಮ ನಿಮ್ಮಲ್ಲೇ ಪರಸ್ಪರ ಗೌರವವನ್ನು ಬಯಸುತ್ತೀರಿ. ಹೀಗಿರುವಲ್ಲಿ ನಿಮ್ಮಲ್ಲಿ ವಿಶ್ವಾಸಮೂಡಲು ಹೇಗೆ ತಾನೆ ಸಾಧ್ಯ? ಪಿತನ ಮುಂದೆ ನಾನು ನಿಮ್ಮನ್ನು ಆಪಾದಿಸುತ್ತಿರುವೆನೆಂದು ಎಣಿಸಬೇಡಿ.


ಸಮಸ್ತವೂ ಉಂಟಾಗುವುದು ಅವರಿಂದಲೇ; ಮುಂದುವರಿಯುವುದೂ ಅವರ ಮುಖಾಂತರವೇ; ಇರುವುದೂ ಅವರಿಗೋಸ್ಕರವೇ. ಆ ಪ್ರಭುವಿಗೆ ಯುಗಯುಗಾಂತರಕ್ಕೂ ಸ್ತುತಿಸ್ತೋತ್ರ ಸಲ್ಲಲಿ. ಆಮೆನ್.


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಯೇಸುಕ್ರಿಸ್ತರು, ನಿನ್ನೆ ಇದ್ದಹಾಗೆಯೇ ಇಂದೂ ಎಂದೆಂದೂ ಇದ್ದಾರೆ.


ನಮ್ಮ ಪ್ರಭು ಘನವಂತ, ಪರಾಕ್ರಮಿ I ಅಪರಿಮಿತವಾದುದು ಆತನ ಜ್ಞಾನನಿಧಿ II


ತಮ್ಮ ಪಿತನಾದ ದೇವರ ಸೇವೆಗೆ ನಮ್ಮನ್ನು ದೈವೀರಾಜ್ಯದ ಯಾಜಕರನ್ನಾಗಿ ಮಾಡಿದವರೂ ಆದ ಯೇಸುಕ್ರಿಸ್ತರಿಗೆ ಮಹಿಮೆ ಮತ್ತು ಅಧಿಪತ್ಯ ಯುಗಯುಗಾಂತರಕ್ಕೂ ಸಲ್ಲಲಿ! ಆಮೆನ್.


ಜ್ಞಾನಾಂಬುದಿಯಾದ ಆ ಏಕೈಕ ದೇವರಿಗೆ ಯೇಸುಕ್ರಿಸ್ತರ ಮುಖಾಂತರ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


“ಹೇ ಸರ್ವೇಶ್ವರಾ, ನಮ್ಮ ಪಿತೃ ಯಕೋಬನ ದೇವರೇ, ಸದಾಕಾಲಕ್ಕೂ ಸ್ತುತಿಸ್ತೋತ್ರ ಸಲ್ಲಲಿ ನಿಮಗೆ! ಹೇ ಸರ್ವೇಶ್ವರಾ, ಮಹಿಮೆ, ಪ್ರತಾಪ, ವೈಭವ, ಪರಾಕ್ರಮ, ಪ್ರತಿಭೆ, ನಿಮ್ಮವೇ, ಭೂಮ್ಯಾಕಾಶಗಳಲ್ಲಿರುವ ಸಮಸ್ತವೂ ನಿಮ್ಮದೇ. ಸರ್ವೇಶ್ವರಾ, ರಾಜ್ಯಭಾರವೂ ನಿಮ್ಮದೇ. ಸರ್ವವನು ಮಹೋನ್ನತರಾಗಿ ಆಳುವವರೂ ನೀವೇ.


ನೀವು ಆರಾಧಿಸುವುದು ಯಾರೆಂದು ನಿಮಗೇ ತಿಳಿಯದು. ನಾವು ಆರಾಧಿಸುವುದು ಯಾರೆಂದು ನಮಗೆ ತಿಳಿದಿದೆ. ಏಕೆಂದರೆ ಲೋಕೋದ್ಧಾರಕ ಬರುವುದು ಯೆಹೂದ್ಯರಿಂದಲೇ.


ಹೇಳಿ, ನ್ಯಾಯಸ್ಥಾನಕ್ಕೆ ಬಂದು ನಿಮ್ಮ ವಾದವನ್ನು ಮಂಡಿಸಿ; ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಪರ್ಯಾಲೋಚಿಸಿ ನೋಡಲಿ. ಪ್ರಾರಂಭದಿಂದಲೂ ಈ ವಿಷಯವನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮುಂಚೆಯೇ ತಿಳಿಸಿದವನು ನಾನಲ್ಲದೆ ಇನ್ಯಾರು? ನನ್ನ ಹೊರತು ಇನ್ನು ಯಾವ ದೇವರೂ ಇಲ್ಲ; ನಾನಲ್ಲದೆ ಸತ್ಯಸ್ವರೂಪನು, ಉದ್ಧಾರಕನು ಆದ ದೇವನಿಲ್ಲವೇ ಇಲ್ಲ.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ:


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ಹೀಗಿರುವಾಗ, ಜಗದ್ರಕ್ಷಕರಾದ ದೇವರ ದಯೆಯೂ ಅವರ ಜನಪ್ರೇಮವೂ ಪ್ರಕಟವಾದವು.


ಬದಲಿಗೆ, ತಾವು ಒಳ್ಳೆಯವರು ಮತ್ತು ಸ್ವಾಮಿನಿಷ್ಠೆಯುಳ್ಳವರು ಎಂದು ಹೆಸರು ಪಡೆಯಲಿ. ಜಗದ್ರಕ್ಷಕರಾದ ದೇವರ ಉಪದೇಶಕ್ಕೆ ಎಲ್ಲಾ ವಿಧದಲ್ಲೂ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಬೋಧಿಸು.


ಹೀಗೆ ಮಾಡುವುದು ಒಳ್ಳೆಯದು, ನಮ್ಮ ಉದ್ಧಾರಕರಾದ ದೇವರಿಗೆ ಮೆಚ್ಚುಗೆಯಾದುದು.


ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು.


ಸೃಜಿಸಿರುವೆ ಎಲ್ಲವನು ಸುಜ್ಞಾನದಿಂದ I ಜಗವೆಲ್ಲ ತುಂಬಿದೆ ನಿನ್ನ ಸೃಷ್ಟಿಯಿಂದ II


“ಹೊಡೆದನು ಆಸರೆಯನು, ಚಿಮ್ಮಿತು ನೀರು, ಹರಿಯಿತು ನೆರೆಯು I ಆದರೆ ಕೊಡಬಲ್ಲನೆ ರೊಟ್ಟಿ, ಒದಗಿಸುವನೆ ಮಾಂಸವನು?” II


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


“ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ I ಉಲ್ಲಾಸಿಸುತ್ತಿದೆ ಮುಕ್ತಿದಾತ ದೇವನಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು