Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:4 - ಕನ್ನಡ ಸತ್ಯವೇದವು C.L. Bible (BSI)

4 ಏಕೆಂದರೆ, ಕೆಲವರು ಕಳ್ಳತನದಿಂದ ನಿಮ್ಮ ಸಭೆಯೊಳಗೆ ಸೇರಿಕೊಂಡಿದ್ದಾರೆ. ಇವರು ಭಕ್ತಿಹೀನರು; ನಮ್ಮ ದೇವರ ಅನುಗ್ರಹದ ನೆವದಲ್ಲಿ ತಮ್ಮ ಕಾಮಾಭಿಲಾಷೆಗಳನ್ನು ಸಮರ್ಥಿಸಿಕೊಳ್ಳುತ್ತಿರುವವರು; ನಮ್ಮ ಏಕೈಕ ಒಡೆಯರೂ ಪ್ರಭುವೂ ಆದ ಯೇಸುಕ್ರಿಸ್ತರನ್ನು ನಿರಾಕರಿಸುವವರು. ಇಂಥವರಿಗೆ ದಂಡನೆಯಾಗಬೇಕೆಂದು ಬಹಳ ಹಿಂದೆಯೇ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅರಿಯದವರೂ ಆಗಿರುವ ಕೆಲವು ಜನರು ಸಭೆಯಲ್ಲಿ ಕಳ್ಳತನದಿಂದ ಹೊಕ್ಕಿದ್ದಾರೆ; ಅವರಿಗೆ ಈ ದಂಡನೆಯಾಗಬೇಕೆಂದು ಪೂರ್ವದಲ್ಲೇ ಅವರ ವಿಷಯವಾಗಿ ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಕೆಲವು ಜನರು ರಹಸ್ಯವಾಗಿ ನಿಮ್ಮ ಸಭೆಯಲ್ಲಿ ಪ್ರವೇಶಿಸಿದ್ದಾರೆ. ಇವರಿಗಾಗುವ ದಂಡನೆಯ ಕುರಿತು ಬಹುಕಾಲದ ಹಿಂದೆಯೇ ಪ್ರವಾದಿಗಳು ಬರೆದಿದ್ದಾರೆ. ಈ ಜನರು ದೇವರಿಗೆ ವಿರುದ್ಧವಾಗಿದ್ದಾರೆ. ಅವರು ಪಾಪಕೃತ್ಯಗಳನ್ನು ಮಾಡುವುದಕ್ಕಾಗಿ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಅವರು ನಮ್ಮ ಒಬ್ಬನೇ ಒಡೆಯನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನನ್ನು ಹಿಂಬಾಲಿಸದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆಪಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡೆಸುವವರೂ ನಮ್ಮ ಒಬ್ಬರೇ ಕರ್ತ ಆಗಿರುವ ದೇವರನ್ನು ಮತ್ತು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಲ್ಲಗಳೆಯುವ ಕೆಲವು ಜನರೂ ರಹಸ್ಯವಾಗಿ ಸಭೆಯೊಳಗೆ ಹೊಕ್ಕಿದ್ದಾರೆ. ಇವರು ದಂಡನೆಗೋಸ್ಕರ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಕಶ್ಯಾಕ್ ಮಟ್ಲ್ಯಾರ್, ಉಲ್ಲಿ ದೆವಸ್ಪಾನ್ ನಸಲ್ಲಿ ಲೊಕಾ ಅಮ್ಚ್ಯಾ ಮದ್ದಿ ಚುಕುನ್ ಯೆವ್ನ್ ಗುಸ್ಲಾತ್, ತೆಂಚಿ ಬುರ್ಶಿ ವಾಟಾ ದಾಕ್ವುಸಾಟ್ನಿ ಅಮ್ಚ್ಯಾ ದೆವಾಚ್ಯಾ ಕುರ್ಪೆಚ್ಯಾ ಬಾತ್ಮಿಚ್ಯಾ ವಿಶಯಾತ್ ತೆನಿ ಚುಕ್‍ ಸಾಂಗ್ತಾತ್. ಅನಿ ತೆನಿ ಜೆಜು ಕ್ರಿಸ್ತಾಕ್ ಅಮ್ಚ್ಯಾ ಗುರುಕ್ ಅನಿ ಧನಿಯಾಕ್ ತಿರಸ್ಕಾರ್ ಕರ್ಲಾತ್. ಲೈ ದಿಸಾ ಫಾಟಿ ತೆಂಕಾ ಗಾವ್ತಲ್ಲ್ಯಾ ಶಿಕ್ಷೆಚ್ಯಾ ವಿಶಯಾತ್ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:4
32 ತಿಳಿವುಗಳ ಹೋಲಿಕೆ  

ಗೂಢಾಚಾರರಾಗಿ ಬಂದಿದ್ದ ಕೆಲವು ಸಹೋದರರು ಅಲ್ಲಿದ್ದುದರಿಂದ ಒತ್ತಾಯ ನಡೆದೀತೆಂಬ ಶಂಕೆ ಇತ್ತು. ಇವರು ಕ್ರಿಸ್ತಯೇಸುವಿನಲ್ಲಿ ನಮಗಿರುವ ಮುಕ್ತ ಸ್ವಾತಂತ್ರ್ಯದ ಬಗ್ಗೆ ಗುಟ್ಟಾಗಿ ವಿಚಾರಿಸಲು ಬಂದಿದ್ದರು. ನಮ್ಮನ್ನು ಪುನಃ ದಾಸತ್ವದಲ್ಲಿ ಸಿಕ್ಕಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು.


ಮುಖ್ಯವಾಗಿ, ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಬಲಿಯಾಗಿರುವವರನ್ನು ಮತ್ತು ದೇವರ ಅಧಿಕಾರವನ್ನು ತೃಣೀಕರಿಸುವವರನ್ನು ಅವರು ಶಿಕ್ಷಿಸದೆ ಬಿಡುವುದಿಲ್ಲ.


ಅಸತ್ಯವಾದಿ ಎಂದರೆ ಯಾರು? ಯೇಸುವೇ ಕ್ರಿಸ್ತ ಎಂಬುದನ್ನು ಯಾರು ಅಲ್ಲಗಳೆಯುತ್ತಾನೋ ಅವನೇ ಅಸತ್ಯವಾದಿ; ಅವನೇ ಕ್ರಿಸ್ತವಿರೋಧಿ. ಅವನು ಪಿತನನ್ನು ಮತ್ತು ಪುತ್ರನನ್ನು ತಿರಸ್ಕರಿಸುತ್ತಾನೆ.


ಸ್ವತಂತ್ರರಂತೆ ಬಾಳಿರಿ; ಆದರೆ ಕೆಟ್ಟತನವನ್ನು ಮರೆಮಾಚಲು ನಿಮ್ಮ ಸ್ವಾತಂತ್ರ್ಯವನ್ನು ದುರುಪಯೋಗಮಾಡಿಕೊಳ್ಳಬೇಡಿ; ದೇವರಿಗೆ ದಾಸರಾಗಿ ಬಾಳಿರಿ.


“ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು.


ಇವರಲ್ಲಿ ಕೆಲವರು ಮನೆಮನೆಗಳಿಗೆ ನುಸಳಿ ನಾನಾ ಪಾಪಗಳಿಂದಲೂ ಕಾಮನೆಗಳಿಂದಲೂ ಕೂಡಿರುವ ಮತಿಗೆಟ್ಟ ಮಹಿಳೆಯರನ್ನು ವಶಪಡಿಸಿಕೊಳ್ಳುವರು.


ಸಹೋದರರೇ, ನೀವು ಮುಕ್ತ ಸ್ವತಂತ್ರ ಜೀವನವನ್ನು ನಡೆಸಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾರೆ. ಆದರೆ, ಆ ಸ್ವಾತಂತ್ರ್ಯವನ್ನು ದೈಹಿಕ ಬಯಕೆಗಳಿಗೆ ಸಾಧನವಾಗಿ ಮಾಡಿಕೊಳ್ಳಬೇಡಿ. ಬದಲಾಗಿ, ನೀವು ಒಬ್ಬರಿಗೊಬ್ಬರು ಪ್ರೀತಿಯಿಂದ ಸೇವೆಮಾಡಿರಿ.


ಈಗಿರುವ ಭೂಮ್ಯಾಕಾಶಗಳನ್ನು ಅದೇ ವಾಕ್ಯದ ಬಲದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲಾಗಿದೆ. ದುರ್ಜನರು ವಿನಾಶವಾಗಬೇಕಾದ ನ್ಯಾಯತೀರ್ಪಿನ ದಿನದವರೆಗೂ ಇವನ್ನು ಉಳಿಸಲಾಗಿದೆ.


ಆತನೆನಗೆ ದುರ್ಗ, ರಕ್ಷಕ, ಶರಣು I ನಾನೆಂದಿಗೂ ಕದಲಿ ಬೀಳೆನು II


ದುರ್ಜನರ ಆಲೋಚನೆಯಂತೆ ನಡೆಯದೆ I ಪಾಪಾತ್ಮರ ಪಥದಲಿ ಕಾಲೂರದೆ I ಧರ್ಮನಿಂದಕರ ಕೂಟದಲಿ ಕೂರದೆ II


ಭಕ್ತಿಹೀನರು ತಮಗೆ ವಿರುದ್ಧ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಬರುವರು,” ಎಂದು ಪ್ರವಾದಿಸಿದ್ದಾನೆ.


“ಸಜ್ಜನರೇ ಸದ್ಗತಿಯನ್ನು ಹೊಂದುವುದು ಕಷ್ಟವಾಗುವುದಾದರೆ ಇನ್ನು ಭಕ್ತಿಹೀನರೂ ಪಾಪಿಗಳೂ ಆದವರ ಪಾಡೇನು?” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ.


ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.


ನಮ್ಮ ಕಡೆಯ ಕೆಲವು ಜನರು ನಮ್ಮಿಂದ ಯಾವ ಆದೇಶವನ್ನೂ ಪಡೆಯದೆ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮ ಮನಸ್ಸನ್ನು ಕಲಕಿದರೆಂಬ ಸಮಾಚಾರ ನಮ್ಮ ಗಮನಕ್ಕೆ ಬಂದಿದೆ.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ಒಂದು ರಾತ್ರಿ ಎಲ್ಲರೂ ನಿದ್ರಿಸುತ್ತಿರುವಾಗ, ಅವನ ವೈರಿ ಬಂದು, ಗೋದಿಯ ನಡುವೆ ಕಳೆಗಳನ್ನು ಬಿತ್ತಿ ಹೋದ.


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಕುತ್ತಿಗೆಗೆ ಬಂದಿದ್ದವು ಸಾವಿನ ಅಲೆಗಳು ನಡುಕ ಹುಟ್ಟಿಸಿದ್ದವು ವಿನಾಶಪ್ರವಾಹಗಳು.


ಯಾರಾದರೂ ತನ್ನ ಸಂಬಂಧಿಕರನ್ನು, ವಿಶೇಷವಾಗಿ ಸ್ವಂತ ಕುಟುಂಬದವರನ್ನು ಸಂರಕ್ಷಿಸದೆಹೋದರೆ, ಅಂಥವನು ವಿಶ್ವಾಸಭ್ರಷ್ಟನೂ ಅವಿಶ್ವಾಸಿಗಳಿಗಿಂತ ತುಚ್ಛನಾದವನೂ ಆಗಿದ್ದಾನೆ.


ನಾವು ಆತನೊಡನೆ ಸತ್ತಿದ್ದರೆ, ಆತನೊಡನೆ ಜೀವಿಸುತ್ತೇವೆ; ಸೈರಣೆಯುಳ್ಳವರು ನಾವಾದರೆ, ಆತನೊಡನೆ ರಾಜ್ಯವಾಳುತ್ತೇವೆ; ನಾವಾತನನು ನಿರಾಕರಿಸಿದರೆ, ನಮ್ಮನ್ನಾತನು ನಿರಾಕರಿಸುತ್ತಾನೆ.


ಆದರೆ, ಆ ದುರ್ಜನರ ಅನೈತಿಕ ನಡವಳಿಕೆಯನ್ನು ಕಂಡು ಅತಿಯಾಗಿ ಮನನೊಂದಿದ್ದ ಲೋತ ಎಂಬ ಸತ್ಪುರುಷನನ್ನು ಸಂರಕ್ಷಿಸಿದರು.


“ತಮ್ಮ ದುರಿಚ್ಛೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರು,” ಎಂದು ಅವರು ಎಚ್ಚರಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು