Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:6 - ಕನ್ನಡ ಸತ್ಯವೇದವು C.L. Bible (BSI)

6 ಅಂತೆಯೇ, ತಮ್ಮ ಆದ್ಯ ಅಂತಸ್ತನ್ನು ಉಳಿಸಿಕೊಳ್ಳದೆ, ತಮ್ಮ ಯೋಗ್ಯ ನಿವಾಸವನ್ನು ಕಳೆದುಕೊಂಡ ದೇವದೂತರನ್ನು ಶಾಶ್ವತ ಸಂಕಲೆಗಳಿಂದ ಬಂಧಿಸಲಾಯಿತು; ಮಹಾದಿನದಲ್ಲಿ ಸಂಭವಿಸುವ ದಂಡನೆಯ ತೀರ್ಪಿಗಾಗಿ ಅವರನ್ನು ಕಾರ್ಗತ್ತಲೆಯಲ್ಲಿ ಕೂಡಿಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತಮ್ಮ ದೊರೆತನವನ್ನು ಕಾಪಾಡದೆ ತಮಗೆ ತಕ್ಕ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದಲ್ಲಿ ಆಗುವ ದಂಡನೆಯ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಇಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವದೂತರು ಅಧಿಕಾರವನ್ನು ಹೊಂದಿದ್ದರೂ ಅದನ್ನು ಉಳಿಸಿಕೊಳ್ಳಲಾರದೆ ಸ್ವಂತ ವಾಸಸ್ಥಾನವನ್ನು ಬಿಟ್ಟುಹೋದದ್ದನ್ನು ನೆನಸಿಕೊಳ್ಳಿರಿ. ಆದ್ದರಿಂದ ಪ್ರಭುವು ಈ ದೇವದೂತರನ್ನು ಅಂಧಕಾರದಲ್ಲಿಟ್ಟನು. ಅವರನ್ನು ಶಾಶ್ವತವಾದ ಬೇಡಿಗಳಿಂದ ಬಂಧಿಸಲಾಯಿತು. ಮಹಾದಿನದಂದು ಅವರಿಗೆ ತೀರ್ಪು ನೀಡುವುದಕ್ಕಾಗಿ ಆತನು ಅವರನ್ನು ಅಲ್ಲಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ಅವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅನಿ ಅಪ್ನಾಚೊ ಹುದ್ದೊ ಸಂಬಾಳುನ್ ಘೆವ್ನ್ ರ್‍ಹಾತಲೆ ಸೊಡುನ್, ಅಪ್ನಿ ರ್‍ಹಾತಲೊ ಜಾಗೊ ಕಳ್ದುನ್ ಘೆಟಲ್ಲ್ಯಾ ದೆವಾಚ್ಯಾ ದುತಾಕ್ನಿ ಮೊಟ್ಯಾ ಝಡ್ತಿ ಕರ್‍ತಲ್ಲ್ಯಾ ದಿಸಾಸಾಟ್ನಿ; ದಾಟ್ಲ್ಯಾ ಕಾಳ್ಕಾತ್ ಖೊಲಾತ್, ಕನ್ನಾಚ್ ತುಟಿನಸಲ್ಲ್ಯಾ ಸರ್ಪೊಳ್ಯಾನಿ ಭಾಂದುನ್ ಥವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:6
12 ತಿಳಿವುಗಳ ಹೋಲಿಕೆ  

ಪಾಪಮಾಡಿದ ದೇವದೂತರನ್ನೂ ದೇವರು ದಂಡಿಸದೆ ಬಿಡಲಿಲ್ಲ. ಅವರನ್ನು ನರಕಕ್ಕೆ ದಬ್ಬಿದರು. ಅಂತಿಮ ತೀರ್ಪಿನ ದಿನವನ್ನು ಎದುರುನೋಡುತ್ತಾ ಕಾದಿರುವಂತೆ, ಕಾರಿರುಳ ಕೂಪದಲ್ಲಿ ಕೂಡಿಹಾಕಿದರು.


ನಮ್ಮ ಹೋರಾಟ ಕೇವಲ ನರಮಾನವರೊಂದಿಗಲ್ಲ, ದಿಗಂತದಲ್ಲಿರುವ ಅಧಿಕಾರಿಗಳ ಹಾಗೂ ಆಧಿಪತ್ಯಗಳ ವಿರುದ್ಧ; ಪ್ರಸ್ತುತ ಅಂಧಕಾರಲೋಕಾಧಿಪತಿಗಳ ಹಾಗೂ ಅಶರೀರ ದುಷ್ಟಗಣಗಳ ವಿರುದ್ಧ.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಅವರು ಯೇಸುವನ್ನು ನೋಡಿದೊಡನೆಯೇ, “ಓ ದೇವರ ಪುತ್ರನೇ, ನಿಮಗೇಕೆ ನಮ್ಮ ಗೊಡವೆ? ನಿಯಮಿತಕಾಲಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಬಂದಿರಾ?” ಎಂದು ಕೂಗಿಕೊಂಡರು.


ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.


ಬದಲಿಗೆ, ಅತ್ಯಂತ ಭಯದಿಂದ ಎದುರುನೋಡಬೇಕಾದ ದಂಡನಾತೀರ್ಪು ಹಾಗೂ ದೇವರ ಶತ್ರುಗಳನ್ನು ದಹಿಸುವ ಉಗ್ರಕೋಪಾಗ್ನಿ - ಇವುಗಳು ಮಾತ್ರ ನಮಗೆ ಉಳಿದಿರುತ್ತವೆ.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಜನರನ್ನು ಮರುಳುಗೊಳಿಸುತ್ತಿದ್ದ ಪಿಶಾಚಿಯನ್ನು ಗಂಧಕದ ಅಗ್ನಿ ಸರೋವರಕ್ಕೆ ಎಸೆಯಲಾಯಿತು. ಆ ಮೃಗವನ್ನೂ ಕಪಟ ಪ್ರವಾದಿಯನ್ನೂ ಮೊದಲೇ ಅದಕ್ಕೆ ಎಸೆಯಲಾಗಿತ್ತು. ಇವರೆಲ್ಲರೂ ಯುಗಯುಗಾಂತರಗಳವರೆಗೆ ಹಗಲಿರುಳೆನ್ನದೆ ಅಲ್ಲಿಯೇ ಬೇನೆಬೇಗುದಿಗಳಿಂದ ನರಳುವರು.


ತೀರ್ಪಿನ ದಿನ ಆ ಊರಿನ ಗತಿ ಸೊದೋಮ್ ಮತ್ತು ಗೊಮೋರ ಊರುಗಳ ಗತಿಗಿಂತ ಕಠಿಣವಾಗಿರುವುದೆಂದು ನಾನು ನಿಮಗೆ ಒತ್ತಿ ಹೇಳುತ್ತೇನೆ.


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ತಮ್ಮ ನಾಚಿಕೆಗೇಡಿತನದ ನೊರೆಯನ್ನು ಕಾರುವ ಸಾಗರದ ಹುಚ್ಚು ತೆರೆಗಳು; ದಿಕ್ಕುಗೆಟ್ಟ ತಾರೆಗಳಿವರು. ಇವರಿಗಾಗಿ ಕಾದಿದೆ ನಿರಂತರ ಕಾರ್ಗತ್ತಲಿನ ಕಂದಕ.


ಪಿಶಾಚಿಯೂ ಸೈತಾನನೂ ಆಗಿರುವ ಘಟಸರ್ಪವನ್ನು, ಅಂದರೆ ಪುರಾತನ ಸರ್ಪವನ್ನು, ಆತನು ಹಿಡಿದು ಒಂದು ಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು