Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:18 - ಕನ್ನಡ ಸತ್ಯವೇದವು C.L. Bible (BSI)

18 ನಾನು ಹೇಳುವುದನ್ನು ಗಮನದಿಂದ ಕೇಳು - ಈ ದಿನ ನಿನ್ನನ್ನು ಜುದೇಯದ ಅರಸರು, ಅಧಿಪತಿಗಳು, ಯಾಜಕರು, ಜನಸಾಮಾನ್ಯರು, ಹೀಗೆ ನಾಡಿನವರೆಲ್ಲರನ್ನು ಎದುರಿಸತಕ್ಕವನನ್ನಾಗಿ ಮಾಡಿದ್ದೇನೆ; ಕೋಟೆಕೊತ್ತಲಗಳಿಂದ ಸುಸಜ್ಜಿತ ನಗರವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ತಾಮ್ರದ ಪೌಳಿಗೋಡೆಯನ್ನಾಗಿಯೂ ನಿನ್ನನ್ನು ಸ್ಥಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ, ಕಬ್ಬಿಣದ ಕಂಬವನ್ನಾಗಿಯೂ, ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇಗೋ, ನೀನು ನನ್ನ ವಿಷಯವಾಗಿ ಹೇಳಬೇಕು. ನಾನು ನಿನ್ನನ್ನು ಭದ್ರವಾದ ನಗರವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ಕಂಚಿನ ಗೋಡೆಯನ್ನಾಗಿಯೂ ಮಾಡುತ್ತೇನೆ. ನೀನು ದೇಶದಲ್ಲಿ ಎಲ್ಲರಿಗೂ ಎದುರಾಗಿ ನಿಲ್ಲಬಹುದು, ಯೆಹೂದ ದೇಶದ ರಾಜರ ವಿರುದ್ಧವಾಗಿಯೂ ಯೆಹೂದದ ನಾಯಕರ ವಿರುದ್ಧವಾಗಿಯೂ ಯೆಹೂದದ ಯಾಜಕರ ವಿರುದ್ಧವಾಗಿಯೂ ಯೆಹೂದದೇಶದ ಜನರ ವಿರುದ್ಧವಾಗಿಯೂ ನೀನು ನಿಲ್ಲುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧವಾಗಿಯೂ, ಅದರ ಪ್ರಧಾನರಿಗೆ ವಿರೋಧವಾಗಿಯೂ, ಅದರ ಯಾಜಕರಿಗೆ ವಿರೋಧವಾಗಿಯೂ, ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತ್ತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ, ಕಬ್ಬಿಣದ ಸ್ತಂಭವಾಗಿಯೂ, ಕಂಚಿನ ಗೋಡೆಗಳಾಗಿಯೂ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:18
21 ತಿಳಿವುಗಳ ಹೋಲಿಕೆ  

ನೆರವಾಗಿಹನು ನನಗೆ ಸ್ವಾಮಿ ಸರ್ವೇಶ್ವರ ಎಂದೇ ತಲೆತಗ್ಗಿಸಲಿಲ್ಲ ನಾನು ನಾಚಿಕೆಯಿಂದ ಗಟ್ಟಿಮಾಡಿಕೊಂಡೆ ಮುಖವನು ಕಗ್ಗಲ್ಲಿನ ಹಾಗೆ ಆಶಾಭಂಗಪಡಲಾರೆನೆಂದು ಗೊತ್ತು ನನಗೆ.


ನಾನು ನಿನ್ನನ್ನು ಆ ಜನರಿಗೆ ದುರ್ಗಮವಾದ ಕಂಚಿನ ಪೌಳಿಗೋಡೆಯನ್ನಾಗಿಸುವೆನು. ನಿನಗೆ ವಿರುದ್ಧ ಅವರು ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗದು. ನಿನ್ನ ನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು.


ಸರ್ವೇಶ್ವರ ಯೆರೆಮೀಯನಿಗೆ ಹೀಗೆ ಎಂದರು : “ನಿನ್ನನ್ನು ನನ್ನ ಜನವೆಂಬ ಅದುರಿಗೆ ಶೋಧಕನನ್ನಾಗಿ ನೇಮಿಸಿದ್ದೇನೆ. ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು.


“ಇಸ್ರಯೇಲರ ದೇವರಾದ ಸರ್ವೇಶ್ವರ ಹೀಗೆ ಎನ್ನುತ್ತಾರೆ - ನನ್ನ ಅಭಿಪ್ರಾಯವನ್ನು ವಿಚಾರಿಸಲು ನಿಮ್ಮನ್ನು ನನ್ನ ಬಳಿಗೆ ಕಳಿಸಿದ ಜುದೇಯದ ಅರಸನಿಗೆ ಹೀಗೆಂದು ಹೇಳಿರಿ: ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶಕ್ಕೆ ಹಿಂದಿರುಗುವುದು.


ಬಾಬಿಲೋನಿನ ಅರಸನು ಈ ನಗರವನ್ನು ಆಕ್ರಮಿಸುವನು. ಇದು ಅವನ ವಶವಾಗುವುದು ನಿಶ್ಚಯ” ಎಂದು ಸಾರುತ್ತಿದ್ದನು.


ನೀವು ಯಾವ ನಾಡಿನಲ್ಲಿ ವಾಸಮಾಡಲು ಬಯಸಿ ಹೋಗುತ್ತೀರೋ ಆ ನಾಡಿನಲ್ಲಿ ಖಡ್ಗ-ಕ್ಷಾಮ-ವ್ಯಾಧಿಗಳಿಂದ ಸಾಯುವಿರಿ. ಇದು ನಿಶ್ಚಯ ಎಂದು ತಿಳಿಯಿರಿ,” ಎಂದನು.


ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಂಧಿತನಾಗಿ ಅವನ ವಶವಾಗುವೆ. ಬಾಬಿಲೋನಿನ ಅರಸನ ಸಮಕ್ಷಮದಲ್ಲಿ ನಿಲ್ಲುವೆ. ಅವನು ನಿನ್ನೊಡನೆ ಮುಖಾಮುಖಿಯಾಗಿ ಮಾತಾಡುವನು. ನೀನು ಬಾಬಿಲೋನಿಗೆ ಗಡಿಪಾರಾಗುವೆ.


ಇಸ್ರಯೇಲರ ದೇವರಾದ ಸರ್ವೇಶ್ವರ ಇಂತೆನ್ನುತ್ತಾರೆ: ‘ಇಗೋ ನಿಮ್ಮ ಪೌಳಿಗೋಡೆಗೆ ಮುತ್ತಿಗೆ ಹಾಕಿರುವ ಬಾಬಿಲೋನಿನ ಅರಸನಿಗೂ ಅವನ ಸೈನಿಕರಿಗೂ ವಿರುದ್ಧವಾಗಿ ನೀವು ಹಿಡಿದಿರುವ ಆಯುಧಗಳನ್ನು ನಿಮ್ಮ ವಿರುದ್ಧವಾಗಿಯೇ ತಿರುಗಿಸಿಬಿಡುವೆನು. ಅವುಗಳನ್ನೆಲ್ಲ ಈ ನಗರದ ನಡುವೆ ಗುಡ್ಡೆಹಾಕಿಸುವೆನು.


ಅವನನ್ನು ಯೇಸುವಿನ ಬಳಿಗೆ ಕರತಂದನು. (’ಮೆಸ್ಸೀಯ’ ಎಂದರೆ ಅಭಿಷಿಕ್ತನಾದ ಲೋಕೋದ್ಧಾರಕ ಎಂದು ಅರ್ಥ). ಯೇಸು ಸಿಮೋನನನ್ನು ನೋಡಿ, “ಯೊವಾನ್ನನ ಮಗನಾದ ಸಿಮೋನನೇ, ಇನ್ನು ಮುಂದೆ ನಿನ್ನನ್ನು ಕೇಫನೆಂದು ಕರೆಯುವರು,” ಎಂದು ನುಡಿದರು. (’ಕೇಫ’ ಎಂದರೆ ‘ಪೇತ್ರ’ ಇಲ್ಲವೇ ‘ಬಂಡೆ’ ಎಂದರ್ಥ).


ತಾವು ಬಾಬಿಲೋನಿಯದ ಅರಸನ ಪದಾಧಿಕಾರಿಗಳಿಗೆ ಮೊರೆಹೋಗದಿದ್ದರೆ ಈ ನಗರವು ಬಾಬಿಲೋನಿನವರ ಕೈವಶವಾಗುವುದು. ಅವರು ಇದನ್ನು ಬೆಂಕಿ ಇಂದ ಸುಟ್ಟುಬಿಡುವರು. ತಾವು ಅವರ ಕೈಯಿಂದ ತಪ್ಪಿಸಿಕೊಳ್ಳಲಾರಿರಿ,” ಎಂದು ಹೇಳಿದನು.


ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.


ನೀನು ಎದ್ದು ನಡುಕಟ್ಟಿಕೊ, ನಾನು ಆಜ್ಞಾಪಿಸುವುದನ್ನೆಲ್ಲ ಅವರಿಗೆ ತಿಳಿಸು, ಅವರಿಗೆ ಹೆದರಬೇಡ; ಹೆದರಿದರೆ ನಾನೂ ನಿನ್ನನ್ನು ಅವರ ಮುಂದೆ ಹೆದರಿಸುವೆನು.


ನಿನಗೆ ವಿರುದ್ಧವಾಗಿ ಅವರು ಯುದ್ಧಮಾಡುವರು; ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗಿರುವೆನು. ಇದು ಸರ್ವೇಶ್ವರನಾದ ನನ್ನ ನುಡಿ".


“ನನ್ನ ಹೆತ್ತತಾಯೇ, ನನ್ನ ಗತಿಯನ್ನು ಏನು ಹೇಳಲಿ! ಜಗದ ಜನರಿಗೆಲ್ಲ ನಾನೊಬ್ಬ ಜಗಳಗಂಟಿಗ, ವ್ಯಾಜ್ಯಗಾರ. ನಾನು ಹಣವನ್ನು ಸಾಲವಾಗಿ ಕೊಟ್ಟವನಲ್ಲ, ಕೊಂಡವನೂ ಅಲ್ಲ. ಆದರೂ ನನ್ನನ್ನು ಎಲ್ಲರು ಶಪಿಸುವವರೇ.


ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.


ಆದರೆ ನನ್ನ ಸಂಗಡ ಇರುವರು ಸರ್ವೇಶ್ವರ ಭಯಂಕರ ಶೂರನಂತೆ ನನ್ನ ಹಿಂಸಕರು ಮುಗ್ಗರಿಸಿ ಬೀಳುವರು ಜಯಸಾಧಿಸದೆ. ನಾಚಿಕೆಗೆ ಈಡಾಗುವರು ತಮ್ಮ ಯೋಜನೆ ಕೈಗೂಡದೆ ಶಾಶ್ವತ ಅವಮಾನಕ್ಕೆ ಗುರಿಯಾಗುವರು ಎಂದಿಗೂ ಮರೆಯಲಾಗದಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು