Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:3 - ಕನ್ನಡ ಸತ್ಯವೇದವು C.L. Bible (BSI)

3 ಅಲ್ಲದೆ, ಜುದೇಯದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಜುದೇಯದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರುಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ಜನರು ಸೆರೆಹೋಗುವ ತನಕ ಸರ್ವೇಶ್ವರ ಸ್ವಾಮಿಯ ವಾಣಿ ಇವನಿಗೆ ಕೇಳಿಬರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದಲ್ಲದೆ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆಹೋಗುವ ತನಕ ಅವನು ಯೆಹೋವನ ವಾಕ್ಯವನ್ನು ಹೊಂದುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅಲ್ಲದೆ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಆಳಿಕೆಯ ಹನ್ನೊಂದನೆಯ ವರುಷದ ಐದನೆಯ ತಿಂಗಳಿನಲ್ಲಿ ಯೆರೂಸಲೇವಿುನವರು ಸೆರೆಹೋಗುವ ತನಕ ಯೆಹೋವನ ವಾಕ್ಯವು ಒದಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋಯಾಕೀಮನು ಯೆಹೂದದಲ್ಲಿ ಆಳುವಾಗಲೂ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಯೆಹೋಯಾಕೀಮನು ಯೋಷೀಯನ ಮಗನು. ಯೆಹೂದದಲ್ಲಿ ಚಿದ್ಕೀಯನು ಆಳಿದ ಹನ್ನೊಂದು ವರ್ಷ ಐದು ತಿಂಗಳ ಕಾಲ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಚಿದ್ಕೀಯನು ಸಹ ಯೋಷೀಯನ ಮಗನಾಗಿದ್ದನು. ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರ್ಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ನಿವಾಸಿಗಳು ಸೆರೆ ಒಯ್ಯಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಲ್ಲದೆ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಕಾಲದ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆ ಹೋಗುವ ತನಕ ಯೆಹೋವ ದೇವರ ವಾಕ್ಯವು ಒದಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:3
19 ತಿಳಿವುಗಳ ಹೋಲಿಕೆ  

ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿನದಲ್ಲಿ ನಗರದ ಪೌಳಿಗೋಡೆ ಒಡಕುಬಿದ್ದು ಜೆರುಸಲೇಮ್ ಶತ್ರುವಶವಾಯಿತು.


ಫರೋಹ ನೆಕೋವನು, ಯೋಷೀಯನಿಗೆ ಬದಲಾಗಿ ಅವನ ಮಗ ಎಲ್ಯಾಕೀಮನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು, ಯೆಹೋವಾಹಾಜನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದನು; ಯೆಹೋವಾಹಾಜನು ಅಲ್ಲೆ ಮೃತನಾದನು.


“ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳುಗಳ ಉಪವಾಸ ಇವು ಯೆಹೂದ್ಯ ವಂಶಕ್ಕೆ ವಿಶೇಷ ಹಬ್ಬದ ದಿನಗಳಾಗಿ ಮಾರ್ಪಟ್ಟು, ಜನರು ಹರ್ಷಿಸಿ ಆನಂದಿಸುವರು. ಇಂತಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.”


“ಯಾಜಕರಿಗೂ ನಾಡಿನ ಸಕಲ ಜನರಿಗೂ ಹೀಗೆಂದು ತಿಳಿಸಲು: ನೀವು ಕಳೆದ ಎಪ್ಪತ್ತು ವರ್ಷಗಳಿಂದ 5ನೇ ಮತ್ತು 7ನೇ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡಿದ್ದು ನನಗೋಸ್ಕರವೋ?


ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು, ಅವನ ಸಮಸ್ತ ಸೈನ್ಯವು, ಅವನ ಕೈಕೆಳಗಿನ ಭೂರಾಜರೆಲ್ಲರು ಹಾಗೂ ಸಕಲ ಪ್ರಜೆಗಳು ಜೆರುಸಲೇಮಿಗೂ ಅದಕ್ಕೆ ಸೇರಿದ ಎಲ್ಲ ಊರುಗಳಿಗೂ ವಿರುದ್ಧ ಯುದ್ಧಮಾಡುತ್ತಿದ್ದಾಗ ಸರ್ವೇಶ್ವರ ಯೆರೆಮೀಯನಿಗೆ ಈ ವಿಷಯವನ್ನು ತಿಳಿಸಿದರು:


ಯೋಷೀಯನಿಗೆ ನಾಲ್ಕು ಜನಮಕ್ಕಳು: ಯೋಹಾನಾನ್, ಯೆಹೋಯಾಕೀಮ್, ಚಿದ್ಕೀಯ ಮತ್ತು ಶಲ್ಲೂಮ್.


ಬಾಬಿಲೋನಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬುವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ‘ಚಿದ್ಕೀಯ’ ಎಂಬ ಹೆಸರಿಟ್ಟನು.


ಸರ್ವೇಶ್ವರ ಸ್ವಾಮಿ ಈ ವಾಣಿಯನ್ನು ನನಗೆ ದಯಪಾಲಿಸಿದರು :


ಯೋಷೀಯನ ಮಗನಾದ ಜುದೇಯದ ಅರಸ ಯೆಹೋಯಾಕೀಮನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ಯೆರೆಮೀಯನಾದ ನನಗೆ ದಯಪಾಲಿಸಿದ ವಾಕ್ಯ ಇದು:


“ನೀನು ಗ್ರಂಥ ಬರೆಯುವ ಒಂದು ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತಾಡಿದಂದಿನಿಂದ ಇಂದಿನವರೆಗೆ ಇಸ್ರಯೇಲ್, ಯೆಹೂದ ಹಾಗೂ ಸಕಲ ರಾಷ್ಟ್ರಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲ ಬರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು