Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:7 - ಕನ್ನಡ ಸತ್ಯವೇದವು C.L. Bible (BSI)

7 ಆಗ ಸರ್ವೇಶ್ವರ ನನಗೆ, “ನಾನೊಬ್ಬ ತರುಣ ಎನ್ನಬೇಡ; ಯಾರ ಬಳಿಗೆ ನಿನ್ನನ್ನು ಕಳಿಸುತ್ತೇನೋ, ಅವರೆಲ್ಲರ ಬಳಿಗೆ ನೀನು ಹೋಗಲೇಬೇಕು; ನಾನು ಆಜ್ಞಾಪಿಸುವುದನ್ನೆಲ್ಲ ನುಡಿಯಲೇ ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಯೆಹೋವನು ನನಗೆ, “ಬಾಲಕನು ಎನ್ನಬೇಡ; ನಾನು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಖಂಡಿತವಾಗಿ ಹೋಗುವಿ; ನಾನು ಆಜ್ಞಾಪಿಸುವುದನ್ನೆಲ್ಲಾ ಖಂಡಿತವಾಗಿ ನುಡಿಯುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಯೆಹೋವನು ನನಗೆ - ಬಾಲಕನೆನ್ನಬೇಡ; ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಹೋಗೇ ಹೋಗುವಿ; ನಾನು ಆಜ್ಞಾಪಿಸುವದನ್ನೆಲ್ಲಾ ನುಡಿಯಲೇ ನುಡಿಯುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಯೆಹೋವನು ನನಗೆ, “ನಾನು ಕೇವಲ ಹುಡುಗನೆಂದು ಹೇಳಬೇಡ, ನಾನು ಕಳುಹಿಸುವ ಸ್ಥಳಗಳಿಗೆ ನೀನು ಹೋಗಬೇಕು. ನಾನು ಹೇಳು ಅಂದದ್ದನ್ನೆಲ್ಲ ನೀನು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯೆಹೋವ ದೇವರು ನನಗೆ, “ ‘ನಾನು ಚಿಕ್ಕವನೆಂದು ಹೇಳಬೇಡ.’ ಏಕೆಂದರೆ ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ನೀನು ಹೋಗಬೇಕು. ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಮಾತನಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:7
20 ತಿಳಿವುಗಳ ಹೋಲಿಕೆ  

ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಆ ಜನರು ನಿನ್ನನ್ನು ಕರೆಯುವುದಕ್ಕೆ ಬಂದಿರುವುದರಿಂದ ಎದ್ದು ಅವರ ಜೊತೆಯಲ್ಲಿ ಹೋಗು; ಆದರೆ ನಾನು ಆಜ್ಞಾಪಿಸುವ ಪ್ರಕಾರವೇ ಮಾಡಬೇಕು,” ಎಂದರು.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ನಾನು ನಿನ್ನೊಡನೆ ಮತ್ತೆ ಮಾತಾಡುವಾಗ ನಿನ್ನ ಬಾಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ’ ಎಂದು ನುಡಿಯಬೇಕು; ಕೇಳುವವನು ಕೇಳಲಿ, ಕೇಳದವನು ಬಿಡಲಿ; ಏಕೆಂದರೆ ಅವರು ದ್ರೋಹಿವಂಶದವರೇ.


ಅದಕ್ಕೆ ಮೀಕಾಯೆಹುವು, “ಸರ್ವೇಶ್ವರನಾಣೆ, ನನ್ನ ದೇವರು ಹೇಳುವುದನ್ನು ಮಾತ್ರ ನುಡಿಯುತ್ತೇನೆ,” ಎಂದು ಉತ್ತರಕೊಟ್ಟನು.


ಅದಕ್ಕೆ ಮೀಕಾಯೆಹುವು, “ಸರ್ವೇಶ್ವರನಾಣೆ, ಸರ್ವೇಶ್ವರ ಹೇಳುವುದನ್ನೇ ನುಡಿಯುತ್ತೇನೆ,” ಎಂದು ಉತ್ತರಕೊಟ್ಟನು.


ಅದಕ್ಕೆ ಬಿಳಾಮನು, “ಅದಿರಲಿ, ನಾನೀಗ ಬಂದಾಯಿತು, ಆದರೆ ನಾನಾಗಿ ಏನನ್ನು ಹೇಳುವ ಶಕ್ತಿ ನನಗಿಲ್ಲ, ದೇವರು ಆಡಿಸಿದ ಮಾತನ್ನೇ ಹೇಳಲು ಸಾಧ್ಯ,” ಎಂದು ಹೇಳಿದನು.


ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.


ನನ್ನ ದೇವರಾದ ಸರ್ವೇಶ್ವರಾ, ನನ್ನ ತಂದೆಗೆ ಬದಲಾಗಿ ನಿಮ್ಮಿಂದ ಅರಸನಾಗಿ ನೇಮಕಗೊಂಡಿರುವ ನಿಮ್ಮ ದಾಸನಾದ ನಾನು ಇನ್ನೂ ಚಿಕ್ಕವನು.


“ಯೆರೆಮೀಯನೇ, ನೀನು ಈ ಮಾತುಗಳನ್ನು ಅವರಿಗೆ ಹೇಳಿದರೂ ಅವರು ಕಿವಿಗೊಡುವುದಿಲ್ಲ, ಕರೆದರೂ ಅವರು ಓಗೊಡುವುದಿಲ್ಲ.


ಅವರು ಕೇಳಲಿ ಅಥವಾ ಬಿಡಲಿ ನೀನು ನನ್ನ ವಾಕ್ಯವನ್ನು ಅವರಿಗೆ ನುಡಿಯಲೇಬೇಕು. ಅವರು ದ್ರೋಹಿಗಳೇ ಸರಿ.


ಮಂದೆ ಕಾಯುವುದರಿಂದ ಸರ್ವೇಶ್ವರ ನನ್ನನ್ನು ಬಿಡಿಸಿದರು. ನೀನು ಹೋಗಿ ನನ್ನ ಜನರಾದ ಇಸ್ರಯೇಲರಿಗೆ ಪ್ರವಾದನೆಮಾಡು’ ಎಂದು ಹೇಳಿಕಳುಹಿಸಿದರು.


“ನಾನು ಸರ್ವೇಶ್ವರ; ನಾನು ನಿನಗೆ ಹೇಳುವುದನ್ನೆಲ್ಲ ನೀನು ಈಜಿಪ್ಟಿನ ಅರಸ ಫರೋಹನ ಸನ್ನಿಧಿಯಲ್ಲಿ ಹೇಳಬೇಕು,” ಎಂದರು.


“ನೀನು ನನ್ನ ದೇವಾಲಯದ ಪ್ರಾಕಾರದಲ್ಲಿ ನಿಂತು, ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಜುದೇಯದ ಎಲ್ಲ ಊರಿನವರಿಗೆ ನಾನು ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದನ್ನೂ ಬಿಡಬೇಡ.


ಯೆರೆಮೀಯನು ಜನರೆಲ್ಲರನ್ನು ಸಂಬೋಧಿಸಿ ದೇವರಾದ ಸರ್ವೇಶ್ವರ ತನ್ನ ಮುಖಾಂತರ ಅವರಿಗೆ ಹೇಳಿಕಳುಹಿಸಿದ ಮಾತುಗಳನ್ನೆಲ್ಲ ತಿಳಿಸಿದನು.


“ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿಗಳಿಗೆ ಸಾರು,” ಎಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು