Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:12 - ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರ ಭೂಮಿಯನ್ನು ನಿರ್ಮಿಸಿದ್ದಾರೆ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ್ದಾರೆ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ್ದಾರೆ ವಿವೇಕದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನು ತನ್ನ ಶಕ್ತಿಯಿಂದ ಭೂವಿುಯನ್ನು ನಿರ್ಮಿಸಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೇವರು ತನ್ನ ಶಕ್ತಿಯಿಂದ ಭೂಲೋಕವನ್ನು ಸೃಷ್ಟಿಸಿದನು. ದೇವರು ತನ್ನ ಜ್ಞಾನದಿಂದ ಈ ಜಗತ್ತನ್ನು ನಿರ್ಮಿಸಿದನು. ತನ್ನ ವಿವೇಕದಿಂದ ದೇವರು ಈ ಭೂಮಂಡಲದ ಮೇಲೆ ಆಕಾಶವನ್ನು ಹೊದಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ದೇವರು ತಮ್ಮ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿ, ತಮ್ಮ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತಮ್ಮ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:12
38 ತಿಳಿವುಗಳ ಹೋಲಿಕೆ  

ಆಕಾಶಮಂಡಲವನ್ನು ಹರಡಿದವನು ದೇವರೇ ಕಡಲಿನ ತರಂಗಗಳನ್ನು ಮೆಟ್ಟಿದವನು ಆತನೊಬ್ಬನೇ.


ಆದಿಯಲ್ಲಿ ದೇವರು ಪರಲೋಕ - ಭೂಲೋಕವನ್ನು ಸೃಷ್ಟಿಮಾಡಿದರು.


ಸರ್ವೇಶ್ವರಸ್ವಾಮಿ ಜ್ಞಾನದ ಮೂಲಕ ಜಗವನ್ನು ಸ್ಥಾಪಿಸಿದ ವಿವೇಕದ ಮುಖಾಂತರ ಗಗನವನ್ನು ಸ್ಥಿರಗೊಳಿಸಿದ.


ಆಸೀನನಾಗಿಹನು ಆತ ಭೂಮಂಡಲಕ್ಕಿಂತ ಮೇಲೆ ಭೂನಿವಾಸಿಗಳು ಕಾಣುತಿಹರು ಆತನಿಗೆ ಮಿಡತೆಗಳಂತೆ ಹರಡಿಹನು ಆಕಾಶಮಂಡಲವನು ನವಿರು ಬಟ್ಟೆಯಂತೆ ಮೇಲೆತ್ತಿಕಟ್ಟಿಹನು ಅದನ್ನು ನಿವಾಸದ ಗುಡಾರದಂತೆ.


ಇರಲಿ ಇಹದಲಿ, ಇರಲಿ ಪರದಲಿ, ಅಶರೀರ ಒಡೆಯರಾಗಲಿ, ಒಡೆತನವಾಗಲಿ, ಅಧಿಕಾರಿಗಳಾಗಲಿ, ಆಧಿಪತ್ಯವಾಗಿರಲಿ, ಆದುದೆಲ್ಲವೂ ಆತನಲಿ, ಆತನಿಂದ, ಆತನಿಗಾಗಿ.


ದಿವ್ಯವಾಣಿಯ ಮುಖಾಂತರವೇ ಸಮಸ್ತವೂ ಉಂಟಾಯಿತು. ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಿಲ್ಲ.


ಕಡಲನು ತಳಪಾಯವನಾಗಿಸಿದವನು ಆತನೆ I ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೆ II


ಇಸ್ರಯೇಲಿನ ವಿಷಯವಾಗಿ ಸರ್ವೇಶ್ವರಸ್ವಾಮಿ ನುಡಿದ ದೈವೋಕ್ತಿ: ಆಕಾಶಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿಭಾರವನ್ನು ಹಾಕಿ, ಮಾನವನ ಜೀವಾತ್ಮವನ್ನು ಸೃಷ್ಟಿಸುವ ಸರ್ವೇಶ್ವರ ಇಂತೆನ್ನುತ್ತಾರೆ:


“ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಭುಜಬಲದಿಂದಲೂ ಮಹಾಶಕ್ತಿಯಿಂದಲೂ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


ಆಕಾಶದಲ್ಲಿ ನೀರು ಭೋರ್ಗರೆಯುವಂತೆ ಭುವಿಯ ಕಟ್ಟಕಡೆಯಿಂದ ಮೋಡಗಳು ಏರುವಂತೆ ಮಳೆಗಾಗಿ ಮಿಂಚು ಹೊಳೆಯುವಂತೆ ತಮ್ಮ ಭಂಡಾರದಿಂದ ಗಾಳಿ ಬೀಸುವಂತೆ - ಮಾಡುತ್ತದೆ ಸರ್ವೇಶ್ವರನಾ ಗರ್ಜನೆ.


ತಮ್ಮ ಪ್ರಜೆಗೆ ಇಂತೆನ್ನುತ್ತಾರೆ ಸರ್ವೇಶ್ವರ ಸ್ವಾಮಿ : “ನಿನಗೆ ದಯಪಾಲಿಸುವೆನು ಸದುತ್ತರವನು ಪ್ರಸನ್ನತೆಯ ಕಾಲದಲಿ ಸಹಾಯ ನೀಡುವೆನು ರಕ್ಷಣೆಯ ದಿನದಲಿ ನಿನ್ನನು ಕಾಪಾಡಿ ನೇಮಿಸುವೆನು ಜನತೆಗೆ ಸ್ಥಿರ ಒಡಂಬಡಿಕೆಯಾಗಿ.


ಭೂಮಿಗೆ ಅಸ್ತಿವಾರ ಹಾಕಿದ್ದು ನನ್ನ ಕೈಯೇ, ಆಕಾಶವನ್ನು ಹರಡಿದ್ದು ನನ್ನ ಬಲಗೈಯೇ ಇವೆರಡೂ ಬರುತ್ತವೆ ನಾ ಕರೆದ ಮಾತ್ರಕ್ಕೇ.


ಕೇಳಿ, ಆಕಾಶಮಂಡಲವನ್ನು ಸೃಷ್ಟಿಸಿದ ಸರ್ವೇಶ್ವರನ ಮಾತನ್ನು : ಭೂಲೋಕವನ್ನು ನಿರ್ಮಿಸಿ, ರೂಪಿಸಿ, ಸ್ಥಾಪಿಸಿದ ದೇವರು ಆತನು. ಅದನ್ನು ಶೂನ್ಯಸ್ಥಾನವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದವನು ಆತನು. ಅಂಥವನು ಇಂತೆನ್ನುತ್ತಾನೆ : “ಸರ್ವೇಶ್ವರ ನಾನೇ; ನಾನಲ್ಲದೆ ಇನ್ನಾರೂ ಇಲ್ಲ.


ಜಗವನು, ಅದರಲ್ಲಿನ ಮನುಜರನು ಸೃಜಿಸಿದವನು ನಾನೇ, ಆಕಾಶಮಂಡಲವನು ವಿಶಾಲವಾಗಿ ಹರಡಿದ್ದು ನನ್ನ ಕೈಗಳೇ, ಸೂರ್ಯ, ಚಂದ್ರ, ನಕ್ಷತ್ರಗಳನು ನಿಯಂತ್ರಿಸುವವನು ನಾನೆ.


ತಾಯ ಗರ್ಭದಿಂದ ರೂಪಿಸಿ ನಿನ್ನನು ಹೊರತಂದ ಸರ್ವೇಶ್ವರ ಹೇಳಿಹನು ಇದನ್ನು : “ಸರ್ವವನು ಸೃಷ್ಟಿಸಿದ ಸರ್ವೇಶ್ವರನು ನಾನೆ ಗಗನಮಂಡಲವನು ವಿಸ್ತರಿಸಿದವನು ನಾನೆ ಭೂಮಂಡಲವನು ಹರಡಿದವನು ನಾನೆ ನನಗಾಗ ನೆರವಾಗಲು ಯಾರಾದರೂ ಇದ್ದರೆ?


ಆಕಾಶಮಂಡಲವನ್ನುಂಟುಮಾಡಿ ಹರಡಿದ ದೇವರು, ಭೂಮಂಡಲವನ್ನೂ ಅದರಲ್ಲಿ ಬೆಳೆದುದೆಲ್ಲವನ್ನೂ ವೃದ್ಧಿಗೊಳಿಸುವವನು, ಭೂನಿವಾಸಿಗಳಿಗೆ ಜೀವವನ್ನೂ ಭೂಚರರಿಗೆ ಜೀವಾತ್ಮವನ್ನೂ ಅನುಗ್ರಹಿಸುವಾ ಸರ್ವೇಶ್ವರ ಇಂತೆನ್ನುತಿಹನು :


ಸೃಜಿಸಿರುವೆ ಎಲ್ಲವನು ಸುಜ್ಞಾನದಿಂದ I ಜಗವೆಲ್ಲ ತುಂಬಿದೆ ನಿನ್ನ ಸೃಷ್ಟಿಯಿಂದ II


ಸೃಷ್ಟಿಯಾಯಿತು ಗಗನ ಮಂಡಲ ಆತನ ನುಡಿಯೊಂದಕೆ I ರೂಪುಗೊಂಡಿತು ತಾರಾ ಮಂಡಲ ಅವನುಸಿರು ಮಾತ್ರಕೆ II


ಆಕಾಶಕ್ಕೆ ಏರಿ ಮರಳಿದವನು ಯಾರು? ಮುಷ್ಟಿಯಲ್ಲಿ ಗಾಳಿಯನ್ನು ಹಿಡಿದಿಟ್ಟವನು ಯಾರು? ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಎಲ್ಲೆಮೇರೆಗಳನ್ನು ನಿಗದಿಮಾಡಿದವನು ಯಾರು? ಆತನ ಹೆಸರೇನು? ಆತನ ಮಗನ ಹೆಸರೇನು? ಬಲ್ಲೆಯಾ?


ಇರುವುದು ತಲತಲಾಂತರಕು ನಿನ್ನ ಸತ್ಯತೆ I ನೀ ಸ್ಥಾಪಿಸಿದ ಭೂಮಂಡಲಕ್ಕಿದೆ ಸ್ಥಿರತೆ II


ನಿರ್ಮಿಸಿದನು ತನ್ನ ಮಂದಿರವನು ಪರ್ವತದಂತೆ I ಶಾಶ್ವತವಾಗಿ ತಾನು ಸ್ಥಾಪಿಸಿದ ಭೂಮಿಯಂತೆ II


ಉತ್ತರ ದಿಕ್ಕನ್ನು ವಿಸ್ತರಿಸಿಹನು ಶೂನ್ಯದ ಮೇಲೆ ಭೂಮಂಡಲವನ್ನು ತೂಗುಹಾಕಿಹನು ಏನೂ ಇಲ್ಲದರ ಮೇಲೆ.


ತೊಟ್ಟುಕೊಂಡಿರುವೆ ಬೆಳಕನೇ ಬಟ್ಟೆಯಂತೆ I ಹರಡಿಸಿರುವೆ ಆಗಸವನು ಗುಡಾರದಂತೆ II


ವಹಿಸಿಹನು ಪ್ರಭು, ರಾಜ್ಯಾಧಿಕಾರವನು I ಧರಿಸಿಹನು ಘನತೆಯ ವಸ್ತ್ರ ಲಾಂಛನವನು I ತೊಟ್ಟಿಹನು ಶೌರ್ಯವೆಂಬ ನಡುಕಟ್ಟನು I ಸ್ಥಿರಪಡಿಸಿಹನು ಕದಲದಂತೆ ಜಗವನು II


ದೇವರಾದ ಸರ್ವೇಶ್ವರ ಸ್ವಾಮಿ ಪರಲೋಕ - ಭೂಲೋಕಗಳನ್ನು ಸೃಷ್ಟಿಮಾಡಿದಾಗ ಯಾವ ಗಿಡಗಳೂ ಭೂಮಿಯಲ್ಲಿ ಇರಲಿಲ್ಲ. ಯಾವ ಬೀಜವೂ ಮೊಳೆತಿರಲಿಲ್ಲ. ಏಕೆಂದರೆ ದೇವರಾದ ಸರ್ವೇಶ್ವರ ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡಲು ಮನುಷ್ಯನೂ ಇರಲಿಲ್ಲ.


ದೇವರಂತೆ ಆಕಾಶಮಂಡಲವನು ನಿನ್ನಿಂದ ನಿರ್ಮಿಸಲಾದೀತೆ? ಎರಕ ಹೊಯ್ದು ಕನ್ನಡಿಯಂತೆ ಅದನು ಗಟ್ಟಿಮಾಡಲಾದೀತೆ?


“ಇಸ್ರಯೇಲಿನ ದೇವರೇ, ಸೇನಾಧೀಶ್ವರ ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ.


ಹಾಗಲ್ಲ ಯಕೋಬ್ಯರಿಗೆ ಸ್ವಂತವಾದ ದೇವರು ಅವರು ಸಮಸ್ತವನ್ನು ಸೃಷ್ಟಿಸಿದವರು. ಇಸ್ರಯೇಲ್ ಗೋತ್ರ ಅವರಿಗೆ ಸ್ವಾಸ್ತ್ಯ. ‘ಸೇನಾಧೀಶ್ವರ ಸರ್ವೇಶ್ವರ’ ಅವರ ನಾಮಧೇಯ.


ನನ್ನ ಮಹಾಶಕ್ತಿಯಿಂದಲೂ ನೀಡುಗೈಯಿಂದಲೂ ಲೋಕವನ್ನೂ ಭೂಮಿಯನ್ನೂ ಅದರ ಮಾನವರನ್ನು ಮತ್ತು ಪ್ರಾಣಿಗಳನ್ನೂ ಸೃಷ್ಟಿಸಿದವನೂ ನಾನೇ. ಈ ನನ್ನ ಸೃಷ್ಟಿಯನ್ನು ನನಗೆ ಸರಿ ತೋಚಿದವನಿಗೆ ಕೊಡಬಲ್ಲೆ.


ಶೂನ್ಯ ಪ್ರತಿಮೆಗಳು ಅನ್ಯರಾಷ್ಟ್ರಗಳ ದೇವರುಗಳೆಲ್ಲ I ಸರ್ವೇಶ್ವರನಿಂದಲೇ ಉಂಟಾಯಿತು ಆಕಾಶಮಂಡಲವೆಲ್ಲ II


ಭೋರ್ಗರೆವ ಸಮುದ್ರಗಳನು, ಗರ್ಜಿಸುವ ತರಂಗಗಳನು I ದೊಂಬಿಯೇಳುವ ಜನಾಂಗಗಳನು ಶಮನಗೊಳಿಸುವವನು ನೀನು II


ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು