Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:13 - ಕನ್ನಡ ಸತ್ಯವೇದವು C.L. Bible (BSI)

13 ಆಕಾಶದಲ್ಲಿ ನೀರು ಭೋರ್ಗರೆಯುವಂತೆ ಭುವಿಯ ಕಟ್ಟಕಡೆಯಿಂದ ಮೋಡಗಳು ಏರುವಂತೆ ಮಳೆಗಾಗಿ ಮಿಂಚು ಹೊಳೆಯುವಂತೆ ತಮ್ಮ ಭಂಡಾರದಿಂದ ಗಾಳಿ ಬೀಸುವಂತೆ - ಮಾಡುತ್ತದೆ ಸರ್ವೇಶ್ವರನಾ ಗರ್ಜನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನ ಗರ್ಜನೆಗೆ ಆಕಾಶದಲ್ಲಿ ನೀರು ಭೋರ್ಗರೆಯುವಂತೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ. ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನ ಗರ್ಜನೆಗೆ ಆಕಾಶದಲ್ಲಿ ನೀರು ಮೊರೋ ಎನ್ನುತ್ತದೆ; ಆತನು ಭೂವಿುಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ; ಮಳೆಗೋಸ್ಕರ ವಿುಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ಗರ್ಜಿಸುವ ಗುಡುಗನ್ನು ಬರಮಾಡುತ್ತಾನೆ. ಆತನು ಆಕಾಶದಿಂದ ನೀರನ್ನು ಮಹಾಪ್ರವಾಹದಂತೆ ಸುರಿಸುತ್ತಾನೆ. ಆತನು ಭೂಮಿಯ ಎಲ್ಲೆಡೆಯಿಂದ ಮೇಘಗಳು ಆಕಾಶಕ್ಕೆ ಏರಿಹೋಗುವಂತೆ ಮಾಡುತ್ತಾನೆ. ಆತನು ಮಳೆಯೊಂದಿಗೆ ಸಿಡಿಲನ್ನು ಬೀಳಿಸುತ್ತಾನೆ. ತನ್ನ ಭಂಡಾರದಿಂದ ಹೊರಗೆ ಗಾಳಿ ಬೀಸುವಂತೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರ ಗರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ, ಅವರು ಭೂಮಿಯ ಕಟ್ಟಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಗೋಸ್ಕರ ಮಿಂಚನ್ನು ಉಂಟುಮಾಡುತ್ತಾರೆ. ತಮ್ಮ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:13
23 ತಿಳಿವುಗಳ ಹೋಲಿಕೆ  

ಏಳಮಾಡುವನು ದಿಗಂತದೊಳು ಮೋಡವನು I ಹೊಳೆಯಮಾಡುವನು ಮಳೆಗೋಸ್ಕರ ಮಿಂಚನು I ಬೀಸಮಾಡುವನು ಉಗ್ರಾಣದಿಂದ ಗಾಳಿಯನು II


ಹಿಮದ ಭಂಡಾರವನು ಹೊಕ್ಕಿರುವೆಯಾ? ಕಲ್ಮಳೆಯ ಬೊಕ್ಕಸವನು ನೋಡಿರುವೆಯಾ?


ಗುಡುಗಿದನು ಸರ್ವೇಶ್ವರ ಗಗನಮಂಡಲದಿಂದ I ಮೊಳಗಿತು ವಾಣಿ ಆ ಪರಾತ್ಪರನ ವದನದಿಂದ I ಸುರಿಯಿತಿದೋ ಕಲ್ಮಳೆ, ಉರಿಗೆಂಡ ಮೇಲಿಂದ II


ಕವಿಸುವನಾತ ಮೋಡಗಳನು ಗಗನದಲಿ I ಸುರಿಸುವನು ಮಳೆಯನು ಬುವಿಯಲಿ I ಬೆಳೆಸುವನು ಹುಲ್ಲನು ಬೆಟ್ಟಗಳಲಿ II


ಕಿವಿಯಿದ್ದರೂ ಅವು ಕೇಳುವುದಿಲ್ಲ I ಅವುಗಳ ಬಾಯಲ್ಲಿ ಉಸಿರೇ ಇಲ್ಲ II


ಆದಿಮೊದಲು ಮೇಘಾರೂಢನಾಗಿರುವನು I ಕೊಂಡಾಡಿರಿ, ಗುಡುಗಿನಂತೆ ಗರ್ಜಿಸುವಾತನನು II


ಅನಂತರ ಎಲೀಯನು ಆಹಾಬನಿಗೆ, “ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ; ದೊಡ್ಡ ಮಳೆಯ ಶಬ್ದವು ಕೇಳಿಸುತ್ತದೆ,” ಎಂದನು.


ಅಂತೆಯೇ ಮೋಶೆ ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದಾಗ ಸರ್ವೇಶ್ವರ ಗುಡುಗನ್ನೂ ಆನೆಕಲ್ಲಿನ ಮಳೆಯನ್ನೂ ಕಳುಹಿಸಿದರು. ಸಿಡಿಲುಗಳು ನೆಲಕ್ಕೆ ಅಪ್ಪಳಿಸಿದವು. ಈಜಿಪ್ಟ್ ದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದರು ಸರ್ವೇಶ್ವರ.


ವಸಂತಕಾಲದಲ್ಲಿ ಮಳೆಗಾಗಿ ಸರ್ವೇಶ್ವರಸ್ವಾಮಿಗೆ ಪ್ರಾರ್ಥನೆ ಮಾಡಿರಿ. ಮೋಡ ಮಿಂಚುಗಳನ್ನು ಗಾಳಿಮಳೆಯನ್ನು ಉಂಟುಮಾಡುವವರು ಅವರೇ. ಸರ್ವರಿಗೂ ಹೊಲಗದ್ದೆಗಳಲ್ಲಿ ಪೈರುಪಚ್ಚೆಗಳನ್ನು ನೀಡುವವರು ಅವರೇ.


ದೇವರಾದ ಸರ್ವೇಶ್ವರ ಸ್ವಾಮಿ ಪರಲೋಕ - ಭೂಲೋಕಗಳನ್ನು ಸೃಷ್ಟಿಮಾಡಿದಾಗ ಯಾವ ಗಿಡಗಳೂ ಭೂಮಿಯಲ್ಲಿ ಇರಲಿಲ್ಲ. ಯಾವ ಬೀಜವೂ ಮೊಳೆತಿರಲಿಲ್ಲ. ಏಕೆಂದರೆ ದೇವರಾದ ಸರ್ವೇಶ್ವರ ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡಲು ಮನುಷ್ಯನೂ ಇರಲಿಲ್ಲ.


ಮಲೆಗಳ ಮೇಲೆ ಮಳೆಗರೆಯುವೆ ಗಗನದಿಂದ I ತೃಪ್ತಿಗೊಂಡಿದೆ ಪೃಥ್ವಿಯು ನಿನ್ನ ಕೃಪೆಗಳಿಂದ II


ಆತನ ಘರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ ಭುವಿಯ ಕಟ್ಟಕಡೆಯಿಂದ ಮೋಡ ಮೇಲೇರುತ್ತದೆ ಮಳೆಗೋಸ್ಕರ ಮಿಂಚು ಹೊಳೆಯುತ್ತದೆ ಆತನ ಭಂಡಾರದಿಂದ ಗಾಳಿ ಬೀಸುತ್ತದೆ.


ಬೆಟ್ಟಗುಡ್ಡಗಳನ್ನು ರೂಪಿಸಿದಾತ ದೇವನೇ ಗಾಳಿಬಿರುಗಾಳಿಯನು ಸೃಜಿಸಿದಾತ ಆತನೇ ತನ್ನಾಲೋಚನೆಯನ್ನು ನರರಿಗರುಹಿಸಿದವ ದೇವನೇ ಹಗಲನ್ನು ಇರುಳನ್ನಾಗಿಸುವವನು ಆತನೇ ಪೊಡವಿಯ ಉನ್ನತ ಸ್ಥಾನದಲ್ಲಿ ನಡೆದಾಡುವವನಾತನೇ ಆತನ ನಾಮಧೇಯ - ಸೇನಾಧೀಶ್ವರ ದೇವರಾದ ಸರ್ವೇಶ್ವರನೇ.


ಮುಂಗಾರು, ಹಿಂಗಾರು ಹೀಗೆ ಸಕಾಲದ ಮಳೆಯನ್ನು ಬರಮಾಡುವವನು ನಾನು. ಸುಗ್ಗಿಯ ಕ್ಲುಪ್ತವಾರಗಳನ್ನು ಪ್ರತ್ಯೇಕಿಸುವವನು ನಾನು. ಆದರೆ ನೀವು ನನ್ನಲ್ಲಿ ಭಯಭಕ್ತಿ ಇಡಲು ಮನದಲ್ಲಿ ನೆನೆಯದೆ ಇದ್ದೀರಿ.


ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.


ನಾನು ಈ ಸ್ಥಳವನ್ನೂ ಇದರ ನಿವಾಸಿಗಳನ್ನೂ ಅಷ್ಟರಮಟ್ಟಿಗೆ ನಾಶಪಡಿಸಿ ಈ ನಗರವನ್ನು ತೋಫೆತಿನ ಪರಿಸ್ಥಿತಿಗೆ ಇಳಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು