Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:20 - ಕನ್ನಡ ಸತ್ಯವೇದವು C.L. Bible (BSI)

20 ನನ್ನ ಗುಡಾರ ಹಾಳಾಗಿದೆ, ಹಗ್ಗಗಳು ಕಿತ್ತುಹೋಗಿವೆ. ಮಕ್ಕಳು ನನ್ನನ್ನು ಬಿಟ್ಟು ಕಾಣದೆಹೋಗಿದ್ದಾರೆ ಗುಡಾರ ಹಾಕಲು, ಪರದೆ ಬಿಗಿಯಲು, ಯಾರೂ ಇಲ್ಲವಾಗಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನನ್ನ ಗುಡಾರವು ಹಾಳಾಗಿದೆ, ಹಗ್ಗಗಳು ಹರಿದುಹೋಗಿವೆ, ಮಕ್ಕಳು ನನ್ನೊಳಗಿಂದ ತೊಲಗಿ ಇಲ್ಲವಾಗಿದ್ದಾರೆ. ನನ್ನ ಗುಡಾರವನ್ನು ಹಾಕುವುದಕ್ಕೂ, ನನ್ನ ಪರದೆಗಳನ್ನು ಬಿಗಿಯುವುದಕ್ಕೂ ಇನ್ನು ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನನ್ನ ಗುಡಾರವು ಹಾಳಾಗಿದೆ, ಹಗ್ಗಗಳು ಹರಿದುಹೋಗಿವೆ, ಮಕ್ಕಳು ನನ್ನೊಳಗಿಂದ ತೊಲಗಿ ಇಲ್ಲವಾಗಿದ್ದಾರೆ; ನನ್ನ ಗುಡಾರವನ್ನು ಹಾಕುವದಕ್ಕೂ ನನ್ನ ಪರದೆಗಳನ್ನು ಬಿಗಿಯುವದಕ್ಕೂ ಇನ್ನು ಯಾರೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನನ್ನ ಗುಡಾರವು ಹಾಳಾಗಿದೆ. ಗುಡಾರದ ಎಲ್ಲಾ ಹಗ್ಗಗಳು ಕಿತ್ತುಹೋಗಿವೆ. ನನ್ನ ಮಕ್ಕಳು ನನ್ನನ್ನು ಬಿಟ್ಟು ಹೊರಟುಹೋಗಿದ್ದಾರೆ. ನನ್ನ ಗುಡಾರವನ್ನು ಹಾಕುವದಕ್ಕೆ ಯಾರೂ ಉಳಿದಿಲ್ಲ. ನನಗಾಗಿ ಒಂದು ಆಸರೆಯನ್ನು ನಿರ್ಮಿಸುವದಕ್ಕೆ ಯಾರೂ ಉಳಿದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ. ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ; ಅವರು ಇಲ್ಲ. ಇನ್ನು ಮೇಲೆ ನನ್ನ ಡೇರೆಯನ್ನು ಹರಡುವುದಕ್ಕೂ, ನನ್ನ ಪರದೆಗಳನ್ನು ನಿಲ್ಲಿಸುವುದಕ್ಕೂ ಒಬ್ಬನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:20
12 ತಿಳಿವುಗಳ ಹೋಲಿಕೆ  

ನಾಶನದ ಮೇಲೆ ನಾಶನದ ಸುದ್ದಿ, ನಾಡೆಲ್ಲ ಕಾಡಾಯಿತು. ದಿಢೀರೆಂದು ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ತುಂಡುತುಂಡಾದವು !


ಸರ್ವೇಶ್ವರ ಹೀಗೆನ್ನುತ್ತಾರೆ: “ಕೇಳಿಬರುತ್ತಿದೆ ರಾಮಾ ಊರಿನೊಳು ರೋದನ ಗೋಳಾಟ, ಅಘೋರ ಆಕ್ರಂದನ. ಕಳೆದುಕೊಂಡ ಮಕ್ಕಳಿಗಾಗಿ ಗೋಳಾಡುತ್ತಿಹಳು ರಾಖೇಲಳು ಇನ್ನಿಲ್ಲದ ಅವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು.”


ವಿಸ್ತರಿಸು ನಿನ್ನ ಗುಡಾರವನು, ಚಾಚು ಮುಂದಕೆ ಗುಡಾರದ ಬಟ್ಟೆಗಳನು, ಹೆದರಬೇಡ; ಉದ್ದಮಾಡು ಹಗ್ಗಗಳನು, ಬಲಪಡಿಸು ಗೂಟಗಳನು.


ಅದರ ಅಗಣಿತ ದ್ರೋಹಗಳಿಗಾಗಿ ಸರ್ವೇಶ್ವರ ಮಾಡಿದನದನ್ನು ದುಃಖಕ್ಕೆ ಈಡಾಗಿ, ಅದರ ವಿರೋಧಿಯೇ ಅದಕ್ಕೀಗ ಅಧಿಪತಿ ! ಅದರ ಶತ್ರುಗಳಿಗೋ ಸುಖಸಮೃದ್ಧಿ ! ಅದರ ಹಸುಳೆಗಳೂ ಸೆರೆಹೋಗಿವೆ ವೈರಿಯ ವಶವಾಗಿ !


ಆಕಾಶವನ್ನ ಹರಡಿದೆ; ಭುವಿಯನ್ನು ಸ್ಥಾಪಿಸಿದೆ; ಸಿಯೋನಿಗೆ ‘ನೀನೆನ್ನ ಜನತೆ’ ಎಂದೆ ನಾನಾಡುವುದನೆ ನಿನ್ನಿಂದ ಮಾತನಾಡಿಸಿದೆ, ನಿನ್ನನು ನನ್ನ ಅಂಗೈಯಲಿ ಕೊರೆದು ಕಾದಿಟ್ಟೆ.”


ದುರ್ಜನರು ನೆಲಕ್ಕುರುಳಿ ನಿರ್ಮೂಲರಾಗುವರು; ಸಜ್ಜನರ ತಲೆಮಾರು ಸ್ಥಿರವಾಗಿ ನಿಲ್ಲುವುದು.


ನನ್ನನು ನೋಡುವ ಕಣ್ಣಿಗೆ ನಾನಿನ್ನು ಕಾಣಿಸುವುದಿಲ್ಲ. ನಿನ್ನ ಕಣ್ಣು ನನ್ನ ಕಡೆಗೆ ತಿರುಗಿದ್ದರೂ ನಾನು ಬದುಕಿರುವುದಿಲ್ಲ.


ಅವಳನ್ನು ಕರೆದುಕೊಂಡು ಹೋಗುವವನಾರೂ ಇಲ್ಲ, ಆಕೆ ಹೆತ್ತಾ ಮಕ್ಕಳೊಳು; ಅವಳ ಕೈಹಿಡಿದು ನಡೆಸುವವನು ಒಬ್ಬನೂ ಇಲ್ಲ, ಆಕೆ ಸಾಕಿದ ಕುವರರೊಳು.


ನನ್ನ ಜನಾಂಗಕ್ಕೆ ಸೇರಿದ ಮಹಿಳೆಯರನ್ನು ಪ್ರಿಯವಾದ ಅವರ ಗೃಹಗಳಿಂದ ಹೊರದಬ್ಬುತ್ತೀರಿ. ಅವರ ಹಸುಳೆಗಳಿಗೆ ನನ್ನ ಆಶೀರ್ವಾದ ಇನ್ನೆಂದಿಗೂ ಲಭಿಸದಂತೆ ಮಾಡುತ್ತೀರಿ.


‘ಇಗೋ, ಸಿಯೋನ್ ಯಾರಿಗೂ ಬೇಡವಾದವಳು, ಭ್ರಷ್ಟಳಾದಳು’ ಎಂದು ಜನರು ನಿನ್ನನ್ನು ಜರೆವುದು ನನಗೆ ಹಿಡಿಸದು ನಿನ್ನನ್ನು ಗುಣಪಡಿಸುವೆನು ನಿನ್ನ ಗಾಯಗಳನ್ನು ವಾಸಿಮಾಡುವೆನು - ಇದು ಸರ್ವೇಶ್ವರನಾದ ನನ್ನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು