Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:21 - ಕನ್ನಡ ಸತ್ಯವೇದವು C.L. Bible (BSI)

21 ನಮ್ಮ ಪಾಲಕರು ಪಶುಪ್ರಾಯರು ಸರ್ವೇಶ್ವರನ ಕಡೆಗೆ ಕಣ್ಣೆತ್ತದೆಹೋದರು. ಆ ಕಾರಣ ಅವರ ಕಾರ್ಯ ಸಾರ್ಥಕವಾಗಲಿಲ್ಲ ಚದರಿಹೋದವು ಅವರ ಹಿಂಡುಗಳೆಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಏಕೆಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ. ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಏಕಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ; ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಕುರುಬರು ಬುದ್ಧಿಗೇಡಿಗಳಾಗಿದ್ದಾರೆ. ಅವರು ಯೆಹೋವನನ್ನು ಹುಡುಕುವ ಪ್ರಯತ್ನ ಮಾಡುವುದಿಲ್ಲ. ಅವರು ಜ್ಞಾನಿಗಳಲ್ಲ, ಅವರ ಹಿಂಡುಗಳು ಚದರಿಹೋಗುವವು; ಕಳೆದುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಏಕೆಂದರೆ, ಕುರುಬರು ಪಶುಗಳಂತಾದರು. ಅವರು ಯೆಹೋವ ದೇವರನ್ನು ಹುಡುಕಲಿಲ್ಲ. ಆದ್ದರಿಂದ ಅವರು ಸಫಲವಾಗುವುದಿಲ್ಲ. ಅವರ ಮಂದೆಗಳೆಲ್ಲಾ ಚದರಿಸಲಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:21
18 ತಿಳಿವುಗಳ ಹೋಲಿಕೆ  

ಬಹುಮಂದಿ ಕುರಿಗಾಹಿಗಳು ಬಂದು ಹಾಳುಮಾಡಿದ್ದಾರೆ ನನ್ನ ದ್ರಾಕ್ಷಾತೋಟವನ್ನು. ತುಳಿದುಹಾಕಿದ್ದಾರೆ ನನ್ನಾ ಸೊತ್ತನ್ನು ಕಾಡನ್ನಾಗಿಸಿದ್ದಾರೆ ಆ ನನ್ನ ಪ್ರಿಯ ಆಸ್ತಿಯನ್ನು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಸರ್ವೇಶ್ವರ ಹೀಗೆನ್ನುತ್ತಾರೆ: “ಎಂತಲೇ ಕುರಿಗಾಹಿಗಳ ಮೇಲೆ ನನ್ನ ಕೋಪ ಭುಗಿಲೆದ್ದಿದೆ. ಆ ಮುಂದಾಳುಗಳ ಮೇಲೆ ನನ್ನ ದಂಡನೆ ಎರಗಲಿದೆ. ಸೇನಾಧೀಶ್ವರ ಸರ್ವೇಶ್ವರನಾದ ನಾನು ಜುದೇಯ ಕುಲವನ್ನು ನನ್ನ ಮಂದೆಯಂತೆ ಪರಿಪಾಲಿಸುವೆನು. ಅದನ್ನು ವೀರ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವೆನು.


ಮಂದೆಯ ಕುರುಬನು ಸುತ್ತಮುತ್ತಲು ಚದರಿಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ ನಾನು ನನ್ನ ಕುರಿಗಳನ್ನು ಹುಡುಕುವೆನು;


ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು.


ಜ್ಞಾನಿಗಳು ನಾಚಿಕೆಪಡುವರು, ನಿಬ್ಬೆರಗಾಗಿ ಬೋನಿಗೆ ಸಿಕ್ಕಿಬೀಳುವರು. ಏಕೆಂದರೆ ಸರ್ವೇಶ್ವರನಾದ ನನ್ನ ಮಾತನ್ನು ಅವರು ನಿರಾಕರಿಸಿದ್ದಾರೆ. ಇದು ತಾನೋ ಅವರ ಜ್ಞಾನ?


ಯಾಜಕರು, ‘ಸರ್ವೇಶ್ವರ ಸ್ವಾಮಿ ಎಲ್ಲಿ? ಎಂದು ವಿಚಾರಿಸಲೇ ಇಲ್ಲ. ಧರ್ಮಶಾಸ್ತ್ರಿಗಳು ನನ್ನನ್ನು ಅರಿತುಕೊಳ್ಳಲಿಲ್ಲ. ಪ್ರಜಾಪಾಲಕರು ನನಗೆ ದ್ರೋಹಮಾಡಿದರು. ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದನೆ ಮಾಡಿದರು. ನಿರರ್ಥಕವಾದುವುಗಳನ್ನು ಪೂಜಿಸಿದರು.’


“ಇಸ್ರಯೇಲ್ ಚದರಿಹೋದ ಮಂದೆ. ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ. ಮೊಟ್ಟಮೊದಲು ಅಸ್ಸೀರಿಯಾದ ಅರಸನು ಅದನ್ನು ಕಬಳಿಸಿದನು. ಕಟ್ಟಕಡೆಗೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ಅವರ ಒಂಟೆಗಳು ಕೊಳ್ಳೆಯಾಗುವುವು. ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವುವು. ಮುಂದಲೆಗೂದಲು ಕತ್ತರಿಸಿಕೊಳ್ಳುವ ಆ ಜನರನ್ನು ಎಲ್ಲ ಕಡೆಯ ಗಾಳಿಗೂ ತೂರುವೆನು. ಎಲ್ಲ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.


ಇದರ ಮುಂದೆ ತಿಳುವಳಿಕೆಯಿಲ್ಲದ ಪಶುಪ್ರಾಯರು ಜನರೆಲ್ಲರು. ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಅವನು ಎರಕ ಹೊಯ್ದ ವಿಗ್ರಹಗಳು ಟೊಳ್ಳು, ಶ್ವಾಸವಿಲ್ಲದವುಗಳು.


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ಹೀಗಿದೆ ಸರ್ವೇಶ್ವರನ ನುಡಿ: “ಇವನು ಮಕ್ಕಳನ್ನು ಕಳೆದುಕೊಂಡ ವ್ಯಕ್ತಿ ತನ್ನ ಜನ್ಮವನ್ನು ಸಾರ್ಥಕ ಮಾಡಿಕೊಳ್ಳದ ವ್ಯಕ್ತಿ ಇವನ ಸಂತಾನದಲ್ಲಿ ಇನ್ನು ಯಾವನೂ ದಾವೀದನ ಸಿಂಹಾಸನದಲ್ಲಿ ಕೂರನು, ಜುದೇಯವನ್ನು ಆಳಿ ಬಾಳನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು