Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:24 - ಕನ್ನಡ ಸತ್ಯವೇದವು C.L. Bible (BSI)

24 ಹೇ ಸರ್ವೇಶ್ವರಾ, ನಮ್ಮನ್ನು ದಂಡಿಸಿ ಸುಧಾರಿಸಿ ಆದರೆ ಮಿತಿಮೀರಬೇಡ, ಕೋಪದಿಂದ ದಂಡಿಸಬೇಡಿ. ಇಲ್ಲವಾದರೆ ನಾವು ನಶಿಸಿ ನಾಶವಾದೇವು !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ಮಿತಿಮೀರ ಬೇಡ. ರೋಷದಿಂದ ದಂಡಿಸದಿರು. ನಾನು ಕೇವಲ ಕ್ಷೀಣನಾದೇನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ವಿುತಿಮೀರಿ ಬೇಡ; ರೋಷದಿಂದ ದಂಡಿಸದಿರು, ನಾನು ಕೇವಲ ಕ್ಷೀಣನಾದೇನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೋವನೇ, ನಮ್ಮನ್ನು ತಿದ್ದು, ಆದರೆ ಕಠೋರನಾಗಬೇಡ, ಕೋಪದಲ್ಲಿ ನಮ್ಮನ್ನು ದಂಡಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಓ ಯೆಹೋವ ದೇವರೇ, ನನ್ನನ್ನು ಶಿಸ್ತುಪಡಿಸಿರಿ. ಆದರೆ ಮಿತಿಮೀರಿ ದಂಡಿಸಬೇಡಿರಿ, ನಿಮ್ಮ ಕೋಪದಲ್ಲಿ ಅಲ್ಲ. ಇಲ್ಲವಾದರೆ ನಾನು ಇಲ್ಲದೆಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:24
10 ತಿಳಿವುಗಳ ಹೋಲಿಕೆ  

ಕೋಪದಿಂದೆನ್ನ ಪ್ರಭು, ಬೈಯಬೇಡ I ರೋಷದಿಂದೆನ್ನನು ದಂಡಿಸಲು ಬೇಡ II


ಖಂಡಿಸಬೇಡೆನ್ನ ಪ್ರಭು, ರೋಷದಿಂದ I ದಂಡಿಸಬೇಡೆನ್ನನು ಕಡುಕೋಪದಿಂದ II


ನಿನ್ನನ್ನು ರಕ್ಷಿಸಲು ನಿನ್ನೊಂದಿಗೆ ನಾನಿರುವೆನು ನಿನ್ನನ್ನು ಯಾವ ರಾಷ್ಟ್ರಗಳಿಗೆ ಅಟ್ಟಿ ಚದರಿಸಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನು ನಿರ್ಮೂಲ ಮಾಡೆನು, ಮಿತಿಮೀರಿ ಶಿಕ್ಷಿಸೆನು; ಆದರೆ ಶಿಕ್ಷಿಸದೆ ಮಾತ್ರ ಬಿಡೆನು - ಇದು ಸರ್ವೇಶ್ವರನಾದ ನನ್ನ ನುಡಿ.”


ನಾಶಗೊಳಿಸುವನಾತ ದೇಶಾಧಿಪತಿಗಳನು ನಿರ್ನಾಮಗೊಳಿಸುವನು ರಾಜಾಧಿರಾಜರನು.


ಪ್ರಯಾಣಮಾಡುವ ವರ್ತಕರು ಇಂಥ ತೊರೆಗಳ ಮಾರ್ಗವಾಗಿ ಮರಳುಗಾಡಿನಲ್ಲೆ ನಾಶವಾಗುವರು ಅಲೆದಲೆದು ನೀರಿಗಾಗಿ.


ಮರಳಿ ಮಾಡು ನಮ್ಮೀಕಾಲದಲಿ ಅವುಗಳನು ಪ್ರಚುರಪಡಿಸು ಪ್ರಸ್ತುತಕಾಲದಲಿ ಅವುಗಳನು ರೋಷಗೊಂಡರೂ ಮರೆಯದಿರು ಕರುಣೆಯನು


ಯಾವ ರಾಷ್ಟ್ರಗಳಿಗೆ ನಿನ್ನನ್ನು ಅಟ್ಟಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನಾದರೋ, ನಿರ್ಮೂಲ ಮಾಡೆನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡೆನು. ಸರ್ವೇಶ್ವರನಾದ ನನ್ನ ನುಡಿ ಇದು.”


ಕನಿಕರಿಸು ಹೇ ಪ್ರಭು, ನಾನು ಬಲಹೀನನು I ಗುಣಪಡಿಸು ಸಡಿಲವಾದ ಎನ್ನೆಲುಬುಗಳನು II


ಗೋದಿಯನ್ನು ಒಕ್ಕುವಾಗ ಕುದುರೆಗಳನ್ನು ಹೊಡೆದು ಗುಂಡನ್ನು ಉರುಳಿಸಿ ಕಾಳನ್ನು ಪುಡಿಪುಡಿಮಾಡುವನೋ? ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು