Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:25 - ಕನ್ನಡ ಸತ್ಯವೇದವು C.L. Bible (BSI)

25 ಸರ್ವೇಶ್ವರಾ, ನಿಮ್ಮನ್ನು ಅರಿತುಕೊಳ್ಳದವರ ಮೇಲೆ ನಿಮ್ಮ ನಾಮವನ್ನು ಉಚ್ಚರಿಸದವರ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದುಬಿಡಿ. ಅವರು ಯಕೋಬ್ಯರನ್ನು ಕಬಳಿಸಿದ್ದಾರೆ ಹೌದು, ಪೂರ್ತಿಯಾಗಿ ಕಬಳಿಸಿಬಿಟ್ಟಿದ್ದಾರೆ ಅವರ ನಿವಾಸಗಳನ್ನು ನಾಶಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಿನಗೆ ಕೋಪ ಬಂದಿದ್ದರೆ ಬೇರೆ ಜನಾಂಗಗಳನ್ನು ಶಿಕ್ಷಿಸು. ಅವರು ನಿನ್ನನ್ನು ಅರಿಯದವರಾಗಿದ್ದಾರೆ; ಗೌರವಿಸದವರಾಗಿದ್ದಾರೆ. ಅವರು ನಿನ್ನನ್ನು ಆರಾಧಿಸುವುದಿಲ್ಲ. ಆ ಜನಾಂಗಗಳು ಯಾಕೋಬ್ಯರ ವಂಶವನ್ನು ನಾಶಮಾಡಿದರು. ಅವರು ಇಸ್ರೇಲನ್ನು ಸಂಪೂರ್ಣವಾಗಿ ನಾಶಮಾಡಿದರು. ಅವರು ಇಸ್ರೇಲರ ವಾಸಸ್ಥಳವನ್ನು ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಿಮ್ಮನ್ನು ತಿಳಿಯದವರ ಮೇಲೆಯೂ, ನಿಮ್ಮ ಹೆಸರನ್ನು ಅರಿಯದ ದೇಶಗಳ ಮೇಲೆಯೂ, ನಿಮ್ಮ ಕೋಪವನ್ನು ಸುರಿದುಬಿಡಿರಿ. ಏಕೆಂದರೆ, ಅವರು ಯಾಕೋಬ್ಯರನ್ನು ನುಂಗಿಬಿಟ್ಟಿದ್ದಾರೆ. ಹೌದು, ಅವರನ್ನು ನುಂಗಿದ್ದಲ್ಲದೆ, ಅವರ ಸ್ವದೇಶವನ್ನು ಸಹ ನಾಶಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:25
28 ತಿಳಿವುಗಳ ಹೋಲಿಕೆ  

ವೈರಿ ಕುದುರೆಗಳ ಬುಸುಗುಟ್ಟುವಿಕೆ ಏಕೆ ಕೇಳಿಬರುತ್ತಿದೆ ದಾನಿನಿಂದ? ನಾಡನ್ನೆ ಕಂಪಿಸುತ್ತಿದೆ ಅವುಗಳ ಕೆನೆತದ ನಾದ. ಶತ್ರುಗಳು ಬಂದೇಬಿಟ್ಟರು ! ನಾಡನ್ನೂ ಅದರಲ್ಲಿ ಇರುವುದೆಲ್ಲವನ್ನೂ, ನಗರವನ್ನೂ ಅದರ ನಿವಾಸಿಗಳನ್ನೂ ನುಂಗಿಯೇ ಬಿಟ್ಟರು !”


ದುರ್ಜನರೆನ್ನ ಜನರನು ಅನ್ನದಂತೆ ನುಂಗುವುದೇಕೆ? I ಪ್ರಭುವನು ನೆನೆಯದಾ ದುಷ್ಕರ್ಮಿಗಳಿಗೆ ಅರಿವಿಲ್ಲವೇಕೆ? I


ಕೇಡಿಗರ ನಿವಾಸಗಳ ಗತಿ ಹೀಗೆಯೇ ದೇವರನು ಅಲಕ್ಷಿಸುವವನ ಸ್ಥಿತಿ ಇದುವೇ.”


ದೇವರ ಅರಿವೇ ಇಲ್ಲದ ಅನ್ಯಜನರಂತೆ ಕಾಮಾತಿರೇಕದಿಂದ ವರ್ತಿಸಬಾರದು.


ನೆಮ್ಮದಿಯಿಂದ ಬಾಳುವ ರಾಷ್ಟ್ರಗಳ ಮೇಲೆ ಬಹಳ ಸಿಟ್ಟುಗೊಂಡಿದ್ದೇನೆ. ಏಕೆಂದರೆ, ನಾನು ಜೆರುಸಲೇಮಿನ ವಿರುದ್ಧ ಕಿಂಚಿತ್ತೇ ಕೋಪಗೊಂಡಿದ್ದಾಗ ಅವರು ಕೇಡಿಗೆ ಕೇಡು ಕೂಡಿಸಿಬಿಟ್ಟರು.


ನನಗೆ ಬೆನ್ನು ತೋರಿಸಿ, ನನ್ನ ದರ್ಶನವನ್ನು ಬಯಸದೆ, ನನ್ನ ಮಾರ್ಗಬಿಟ್ಟವರನ್ನು ಧ್ವಂಸಮಾಡುವೆನು.”


“ಇಸ್ರಯೇಲ್ ಚದರಿಹೋದ ಮಂದೆ. ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ. ಮೊಟ್ಟಮೊದಲು ಅಸ್ಸೀರಿಯಾದ ಅರಸನು ಅದನ್ನು ಕಬಳಿಸಿದನು. ಕಟ್ಟಕಡೆಗೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ಕಂಡಕಂಡವರೆಲ್ಲರು ಅವರನ್ನು ಕಬಳಿಸಿದ್ದಾರೆ. ಅವರ ವಿರೋಧಿಗಳು, ‘ನಾವು ಅವರನ್ನು ಕಬಳಿಸಿದ್ದು ದೋಷವಲ್ಲ, ಏಕೆಂದರೆ, ಸತ್ಯಸ್ವರೂಪರಾದ ಸರ್ವೇಶ್ವರನಿಗೆ, ತಮ್ಮ ಪೂರ್ವಜರ ನಂಬಿಕೆ ನಿರೀಕ್ಷೆಯಾದ ಸರ್ವೇಶ್ವರನಿಗೆ ವಿರುದ್ಧ ಅವರು ಪಾಪಮಾಡಿದ್ದಾರೆ,’ ಎಂದುಕೊಂಡರು.


ಕೇಡು ಮಾಡಬಂದರೆನಗೆ ಕೊಲೆಗಡುಕರು I ಎಡವಿಬಿದ್ದರು, ತಾವೇ ಅಳಿದುಹೋದರು II


ಜಾಗೃತರಾಗಿರಿ, ದುರ್ಮಾರ್ಗವನ್ನು ಬಿಟ್ಟುಬಿಡಿ, ಸನ್ಮತಿಯುಳ್ಳವರಾಗಿರಿ. ದೇವರನ್ನು ಅರಿಯದ ಮೂಢರು ನಿಮ್ಮಲ್ಲಿ ಕೆಲವರು ಇದ್ದಾರೆ. ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.


ನಿಮ್ಮ ಪಟ್ಟಣದಲ್ಲಿ ನಾನು ತಿರುಗಾಡುತ್ತಾ, ನೀವು ಪೂಜಿಸುವ ವಿಗ್ರಹಗಳನ್ನು ಗಮನಿಸುತ್ತಾ ಇದ್ದಾಗ ಒಂದು ಬಲಿಪೀಠವು ಕಣ್ಣಿಗೆ ಬಿದ್ದಿತು. ಅದರ ಮೇಲೆ ‘ಅಜ್ಞಾತ ದೇವರಿಗೆ’ ಎಂಬ ಲಿಖಿತವಿತ್ತು. ನೀವು ಅರಿಯದೆ ಆರಾಧಿಸುವ ಆ ದೇವರನ್ನೇ ಅರುಹಿಸಲು ನಾನು ಬಂದಿರುತ್ತೇನೆ.


ನೀತಿಸ್ವರೂಪಿಯಾದ ಪಿತನೇ, ಲೋಕವು ನಿಮ್ಮನ್ನು ಅರಿತುಕೊಳ್ಳಲಿಲ್ಲ. ಆದರೆ ನಾನು ಅರಿತಿದ್ದೇನೆ. ನನ್ನನ್ನು ಕಳುಹಿಸಿದವರು ನೀವೆಂದು ಇವರು ತಿಳಿದುಕೊಂಡಿದ್ದಾರೆ.


ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಸ್ವಲ್ಪತಾಳಿರಿ, ನಾನು ತಪ್ಪನ್ನು ನಿಮಗೆ ತೋರಿಸುವ ದಿನಕ್ಕಾಗಿ ಕಾದಿರಿ. ರಾಷ್ಟ್ರಗಳನ್ನು ಒಂದಾಗಿಸಲು, ರಾಜ್ಯಗಳನ್ನು ಒಂದುಗೂಡಿಸಲು ನಿರ್ಧರಿಸಿದ್ದೇನೆ; ಹೀಗೆ ಅವುಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನು ಸುರಿಸಲು ತೀರ್ಮಾನಿಸಿದ್ದೇನೆ. ಲೋಕವೆಲ್ಲವು ನನ್ನ ಕೋಪಾಗ್ನಿಯಿಂದ ಧ್ವಂಸವಾಗುವುದು.


ಸುತ್ತಮುತ್ತಲೂ ದಿಗಿಲು ಹುಟ್ಟಿಸುವ ನನ್ನ ಹಗೆಗಳನ್ನೆ ಕರೆಸಿದೆಯಲ್ಲಾ ಹಬ್ಬಕ್ಕೋ ಎಂಬಂತೆ ! ಸರ್ವೇಶ್ವರನ ಪ್ರಕೋಪದ ದಿನದಂದು ತಪ್ಪಿಸಿಕೊಳ್ಳಲಿಲ್ಲ ಯಾರೂ; ಉಳಿಯಲಿಲ್ಲ ಯಾರೂ. ಶತ್ರು ಸಂಹರಿಸಿಬಿಟ್ಟನಲ್ಲಾ ನಾನು ಸಾಕಿ ಆರೈಕೆ ಮಾಡಿದವರನ್ನೂ !


ನಿಮ್ಮ ನಾಮಸ್ಮರಣೆ ಮಾಡುವವನು ಯಾರೂ ಇಲ್ಲ. ನಿಮ್ಮ ಆಶ್ರಯ ಕೋರುವ ಆಸಕ್ತನು ಎಲ್ಲಿಯೂ ಇಲ್ಲ. ಏಕೆಂದರೆ ನೀವು ನಮಗೆ ವಿಮುಖರಾಗಿದ್ದೀರಿ. ನಮ್ಮ ಪಾಪಗಳ ವಶಕ್ಕೆ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.


“ಯಕೋಬೇ, ನೀನೆನ್ನ ನಾಮಸ್ಮರಣೆ ಮಾಡದೆಹೋದೆ; ಇಸ್ರಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡೆ.


ಅನಂತರ ದೇವಾಲಯದೊಳಗಿಂದ ಬಂದ ಮಹಾಶಬ್ದವನ್ನು ಕೇಳಿದೆ. ಅದು ಆ ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿ ತುಂಬಿರುವ ದೇವರ ರೋಷವನ್ನು ಭೂಮಿಯ ಮೇಲೆ ಸುರಿಯಿರಿ,” ಎಂದು ಆಜ್ಞಾಪಿಸಿತು.


ನಿನ್ನ ರೌದ್ರ ಅವರ ಮೇಲೆರಗಲಿ I ನಿನ್ನ ಕೋಪಾಗ್ನಿ ಅವರನು ದಹಿಸಲಿ II


ಬೇರಾವ ಜನಾಂಗಕ್ಕೂ ಆತ ಹೀಗೆ ಮಾಡಿಲ್ಲ I ಆತನ ವಿಧಿನಿಯಮಗಳನು ಅವರಿಗೆ ತಿಳಿಸಿಲ್ಲ I ಅಲ್ಲೆಲೂಯ! II


ಇವರು ಇಸ್ರಯೇಲರನ್ನು ನುಂಗಿಬಿಡಲು ಬಾಯಿ ತೆರೆದಿದ್ದಾರೆ. ಇಷ್ಟಾದರೂ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಸರ್ವೇಶ್ವರ ಸ್ವಾಮಿ ಯೆರೆಮೀಯನಾದ ನನಗೆ ದಯಪಾಲಿಸಿದ ವಾಕ್ಯ ಇದು :


ಆದರೂ ನಿನ್ನನ್ನು ಕಬಳಿಸುವವರನ್ನು ಕಬಳಿಸಲಾಗುವುದು ನಿನ್ನ ಶತ್ರುಗಳೆಲ್ಲ ತಪ್ಪದೆ ಸೆರೆಹೋಗುವರು ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು ನಿನ್ನನ್ನು ಕೊಳ್ಳೆಹೊಡೆಯುವವರು ಕೊಳ್ಳೆಗೆ ಈಡಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು