Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:4 - ಕನ್ನಡ ಸತ್ಯವೇದವು C.L. Bible (BSI)

4 ಅದನ್ನು ಅಲಂಕರಿಸುತ್ತಾರೆ ಬೆಳ್ಳಿಬಂಗಾರಗಳಿಂದ ಅದು ಅಲುಗದ ಹಾಗೆ ಭದ್ರಪಡಿಸುತ್ತಾರೆ ಮೊಳೆಸುತ್ತಿಗೆಯಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದನ್ನು ಬೆಳ್ಳಿ, ಬಂಗಾರಗಳಿಂದ ಭೂಷಿಸುತ್ತಾರೆ, ಅಲುಗದಂತೆ ಮೊಳೆಗಳಿಂದ, ಸುತ್ತಿಗೆಯಿಂದ ಭದ್ರಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅದನ್ನು ಬೆಳ್ಳಿಬಂಗಾರಗಳಿಂದ ಭೂಷಿಸುತ್ತಾರೆ, ಅಲುಗದಹಾಗೆ ಮೊಳೆಗಳಿಂದ ಸುತ್ತಿಗೆಯಿಂದ ಭದ್ರಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ತಮ್ಮ ವಿಗ್ರಹಗಳನ್ನು ಬೆಳ್ಳಿಬಂಗಾರಗಳಿಂದ ಸುಂದರವಾಗಿ ಅಲಂಕರಿಸುತ್ತಾರೆ. ಸುತ್ತಿಗೆಯಿಂದ ಮೊಳೆ ಬಡಿದು ಅವುಗಳು ಬೀಳದಂತೆ ನಿಲ್ಲಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ. ಮೊಳೆಗಳಿಂದಲೂ ಸುತ್ತಿಗೆಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:4
9 ತಿಳಿವುಗಳ ಹೋಲಿಕೆ  

ಅದನ್ನು ಮೆರವಣಿಗೆ ಮಾಡುತ್ತಾರೆ ಹೊತ್ತು ಹೆಗಲಮೇಲೆ ಪ್ರತಿಷ್ಠಾಪನೆ ಮಾಡುತ್ತಾರೆ ಇಟ್ಟು ಪೀಠದ ಮೇಲೆ. ಕೂಗಿಕೊಂಡರೂ ಜರುಗದದು ಅಲ್ಲಿಂದ ಉತ್ತರಿಸಿ ಬಿಡಿಸದು ಯಾರನ್ನು ಕಷ್ಟದಿಂದ.


ಕಮ್ಮಾರನು ಮುಟ್ಟನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸ ಮಾಡುತ್ತಾನೆ; ಬಲವಾದ ತೋಳಿನಿಂದ ಚಮಟಿಕೆ ಹಿಡಿದು ಬಡಿದು ವಿಗ್ರಹವನ್ನು ರೂಪಿಸುತ್ತಾನೆ; ಹಸಿದು ಬಳಲುತ್ತಾನೆ, ಬಾಯಾರಿ ಸೊರಗುತ್ತಾನೆ.


ರಾಷ್ಟ್ರಗಳ ವಿಗ್ರಹಗಳು ಬರೀ ಬೆಳ್ಳಿಬಂಗಾರ I ಅವುಗಳೆಲ್ಲ ಮಾನವನ ಕೈಕೆಲಸಗಳು ಮಾತ್ರ II


ಅವರ ವಿಗ್ರಹ ಬರೀ ಬೆಳ್ಳಿ ಬಂಗಾರ I ಅವು ಮಾನವನ ಕೈ ಕೆಲಸಗಳು ಮಾತ್ರ II


ಸುರಿಯುತ್ತಾರೆ ಜನರು ಚಿನ್ನವನ್ನು ಚೀಲದಿಂದ ತೂಗಿ ತೂಕಹಾಕುತ್ತಾರೆ ಬೆಳ್ಳಿಯನ್ನು ತಕ್ಕಡಿಯಿಂದ. ದೇವರನ್ನು ಮಾಡಿಸುತ್ತಾರೆ ಕೂಲಿಕೊಟ್ಟು ಅಕ್ಕಸಾಲಿಗನಿಂದ ಪೂಜಿಸುತ್ತಾರೆ ಅದನ್ನು ಸಾಷ್ಟಾಂಗ ನಮಸ್ಕಾರದಿಂದ.


ಈಗ ಎಫ್ರಯಿಮರ ಪಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅವರು ಬೆಳ್ಳಿಬಂಗಾರವನ್ನು ಕರಗಿಸಿ ಇಷ್ಟಬಂದಂತೆ ಬೊಂಬೆಗಳನ್ನು ಮಾಡಿಕೊಂಡಿದ್ದಾರೆ. ಅವೆಲ್ಲವು ಶಿಲ್ಪಿಗಳ ಕೈಕೆಲಸವೇ ಹೊರತು ಮತ್ತೇನು ಅಲ್ಲ. ಇಂಥ ವಿಗ್ರಹಗಳನ್ನು ಪೂಜೆಗಾಗಿ ಪ್ರತಿಷ್ಠಾಪನೆಮಾಡುತ್ತಾರೆ. ಬುದ್ಧಿಜೀವಿಗಳಾದ ಇವರು ಬಸವನಿಗೆ ಮುದ್ದಿಡುತ್ತಾರೆ.


ಮರದ ತುಂಡಿಗೆ, ‘ಎಚ್ಚೆತ್ತುಕೊ’; ಜಡಕಲ್ಲಿಗೆ, ‘ಎದ್ದೇಳು’ ಎಂದು ಆಜ್ಞಾಪಿಸುವವನು ನಿಜಕ್ಕೂ ಬುದ್ಧಿಹೀನನು. ಬೊಂಬೆಯು ಬೋಧಿಸಬಲ್ಲದೇ? ಬೆಳ್ಳಿಬಂಗಾರವನ್ನು ಅದಕ್ಕೆ ಹೊದಿಸಿರುವುದೇನೋ ನಿಜ. ಆದರೆ ಅದಕ್ಕೆ ಉಸಿರೋ ಇಲ್ಲವೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು