Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:5 - ಕನ್ನಡ ಸತ್ಯವೇದವು C.L. Bible (BSI)

5 ಸೌತೆ ತೋಟದ ಬೆದರುಗಂಬದಂತಿರುವ ಈ ಬೊಂಬೆಗಳು ಮಾತನಾಡಲಾರವು. ಅವನ್ನು ಹೊತ್ತುಕೊಂಡು ಹೋಗಬೇಕು, ಅವು ನಡೆಯಲಾರವು. ಅವುಗಳಿಗೆ ನೀವು ಅಂಜಬೇಕಾಗಿಲ್ಲ, ಅವು ಕೇಡುಮಾಡಲಾರವು; ಮೇಲುಮಾಡಲಿಕ್ಕೂ ಸಾಮರ್ಥ್ಯವಿಲ್ಲದಿರುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು; ಹೊತ್ತುಕೊಂಡು ಹೋಗಬೇಕು, ನಡೆಯಲಾರವು. ಅವುಗಳಿಗೆ ಹೆದರಬೇಡಿರಿ, ಕೇಡುಮಾಡಲಾರವು; ಒಳ್ಳೆಯದನ್ನು ಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ” ಎಂದು ಹೇಳುತ್ತಾನೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇಂಥಾ ಬೊಂಬೆಗಳು ಸೌತೆಯ ತೋಟದ ಬೆದರುಗಂಬದಂತಿವೆ, ಮಾತಾಡಲಾರವು; ಹೊತ್ತುಕೊಂಡುಹೋಗಬೇಕು, ನಡೆಯಲಾರವು. ಅವುಗಳಿಗೆ ಅಂಜಬೇಡಿರಿ, ಕೇಡುಮಾಡಲಾರವು, ಮೇಲುಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬೇರೆ ಜನಾಂಗದವರ ವಿಗ್ರಹಗಳು ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಬೆದರುಕಂಬಗಳಂತಿವೆ. ಅವರ ವಿಗ್ರಹಗಳು ಮಾತಾಡಲಾರವು; ಅವು ನಡೆಯಲಾರವು. ಜನರು ಆ ವಿಗ್ರಹಗಳನ್ನು ಹೊತ್ತುಕೊಂಡು ಹೋಗಬೇಕು. ಆದ್ದರಿಂದ ಆ ವಿಗ್ರಹಗಳಿಗೆ ಹೆದರಬೇಡಿರಿ. ಅವು ನಿಮಗೆ ಕೇಡನ್ನೂ ಮಾಡಲಾರವು; ಸಹಾಯವನ್ನೂ ಮಾಡಲಾರವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಅವರ ವಿಗ್ರಹಗಳು ಮಾತನಾಡುವುದಿಲ್ಲ. ಅವುಗಳನ್ನು ಹೊತ್ತುಕೊಳ್ಳತಕ್ಕದ್ದು, ಏಕೆಂದರೆ ಅವು ನಡೆಯಲಾರವು. ಅವುಗಳಿಗೆ ಭಯಪಡಬೇಡಿರಿ. ಏಕೆಂದರೆ, ಅವು ಕೆಟ್ಟದ್ದನ್ನು ಮಾಡಲಾರವು. ಒಳ್ಳೆಯದನ್ನು ಮಾಡುವುದೂ ಸಹ ಅವುಗಳಲ್ಲಿ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:5
16 ತಿಳಿವುಗಳ ಹೋಲಿಕೆ  

ಅದನ್ನು ಮೆರವಣಿಗೆ ಮಾಡುತ್ತಾರೆ ಹೊತ್ತು ಹೆಗಲಮೇಲೆ ಪ್ರತಿಷ್ಠಾಪನೆ ಮಾಡುತ್ತಾರೆ ಇಟ್ಟು ಪೀಠದ ಮೇಲೆ. ಕೂಗಿಕೊಂಡರೂ ಜರುಗದದು ಅಲ್ಲಿಂದ ಉತ್ತರಿಸಿ ಬಿಡಿಸದು ಯಾರನ್ನು ಕಷ್ಟದಿಂದ.


ನೀವು ಅನ್ಯಮತಸ್ಥರಾಗಿದ್ದಾಗ, ನಿಮಗೆ ಮನಸ್ಸು ಬಂದಂತೆಲ್ಲಾ ಮೂಕ ವಿಗ್ರಹಗಳ ಬಳಿ ಹೋಗಿ ಬರುತ್ತಿದ್ದಿರಿ; ಇದನ್ನು ನೀವೇ ಬಲ್ಲಿರಿ.


ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವ ಬಗ್ಗೆ ನನ್ನ ಅಭಿಪ್ರಾಯ ಹೀಗಿದೆ: ವಿಗ್ರಹಗಳಿಗೆ ನಿಜವಾದ ಅಸ್ತಿತ್ವವಿಲ್ಲ. ದೇವರು ಒಬ್ಬರೇ ಹೊರತು ಬೇರೆ ದೇವರಿಲ್ಲ. ಇದು ನಮಗೆ ತಿಳಿದ ವಿಷಯ.


ಮರದ ತುಂಡಿಗೆ, ‘ಎಚ್ಚೆತ್ತುಕೊ’; ಜಡಕಲ್ಲಿಗೆ, ‘ಎದ್ದೇಳು’ ಎಂದು ಆಜ್ಞಾಪಿಸುವವನು ನಿಜಕ್ಕೂ ಬುದ್ಧಿಹೀನನು. ಬೊಂಬೆಯು ಬೋಧಿಸಬಲ್ಲದೇ? ಬೆಳ್ಳಿಬಂಗಾರವನ್ನು ಅದಕ್ಕೆ ಹೊದಿಸಿರುವುದೇನೋ ನಿಜ. ಆದರೆ ಅದಕ್ಕೆ ಉಸಿರೋ ಇಲ್ಲವೇ ಇಲ್ಲ.


ತಗ್ಗಿದೆ ಬೇಲ್ ದೇವತೆ ಕುಗ್ಗಿದೆ ನೆಬೋ ದೇವತೆ ಅವುಗಳ ಪ್ರತಿಮೆಗಳನು ಕತ್ತೆಗಳು ಹೊತ್ತಿವೆ. ನೀವು ಮೆರವಣಿಗೆಯಾಗಿ ಹೊರುತ್ತಿದ್ದ ಆ ಬೊಂಬೆಗಳೆ, ಭಾರವಾದ ಹೊರೆಯಾಗಿವೆ, ಬಳಲಿದಾ ಪಶುಗಳಿಗೆ


“ಅಳಿದುಳಿದ ಅನ್ಯಜನರೇ, ನೆರೆದು ಬನ್ನಿ, ಒಟ್ಟಿಗೆ ನನ್ನ ಬಳಿಗೆ ಬನ್ನಿ. ತಮ್ಮ ಮರದ ಬೊಂಬೆಯನು ಹೊತ್ತು ತಿರುಗುವವರು ರಕ್ಷಿಸಲಾಗದ ದೇವತೆಗೆ ಮೊರೆಯಿಡುವ ಬುದ್ಧಿಹೀನರು.


ಅಂತೆಯೇ ತರಲಾದ ಹೋರಿಗಳಲ್ಲಿ ಒಂದನ್ನು ಅವರು ತೆಗೆದುಕೊಂಡು ಸಿದ್ಧಪಡಿಸಿದರು. ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ, ನಮಗೆ ಕಿವಿಗೊಡು,” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರು. ಆದರೆ ಯಾವ ವಾಣಿಯೂ ಕೇಳಿಸಲಿಲ್ಲ; ಅವರು ಪೀಠದ ಸುತ್ತಲೂ ಕುಣಿದಾಡಿದರು. ಆದರೂ ಯಾರೂ ಉತ್ತರಕೊಡಲಿಲ್ಲ.


ಇದರ ಮುಂದೆ ತಿಳುವಳಿಕೆಯಿಲ್ಲದ ಪಶುಪ್ರಾಯರು ಜನರೆಲ್ಲರು. ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಅವನು ಎರಕ ಹೊಯ್ದ ವಿಗ್ರಹಗಳು ಟೊಳ್ಳು, ಶ್ವಾಸವಿಲ್ಲದವುಗಳು.


ಅಲ್ಲಿ ಮಾನವರ ಕೈಯಿಂದ ಮಾಡಲಾದ ಮರ ಮತ್ತು ಕಲ್ಲಿನ ದೇವರುಗಳನ್ನು ಪೂಜಿಸುವಿರಿ; ಅವುಗಳಿಂದ ನೋಡುವುದಕ್ಕಾಗಲಿ, ಕೇಳುವುದಕ್ಕಾಗಲಿ, ತಿನ್ನಲಿಕ್ಕಾಗಲಿ, ಮೂಸುವುದಕ್ಕಾಗಲಿ ಆಗದು.


ಆಗ ಸರ್ವೇಶ್ವರ ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ, “ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆಹೋದ ಅನ್ಯದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?” ಎಂದು ಹೇಳಿಸಿದರು.


ವ್ಯರ್ಥ, ಬೆಟ್ಟಗುಡ್ಡಗಳಿಗೆ ಮೋವಾಬ್ಯರು ತೀರ್ಥಯಾತ್ರೆಗೈದರೂ, ವ್ಯರ್ಥ, ಪ್ರಾರ್ಥನೆ ಮಾಡಲು ಅವರು ಗರ್ಭಗುಡಿಗೆ ಹೋದರೂ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು