Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:6 - ಕನ್ನಡ ಸತ್ಯವೇದವು C.L. Bible (BSI)

6 ಹೇ ಸರ್ವೇಶ್ವರಾ, ನಿಮಗೆ ಸಮಾನನು ಇಲ್ಲ, ನೀವು ಮಹೋತ್ತಮರು ಸಾಮರ್ಥ್ಯದಿಂದ ಕೂಡಿರುವ ನಿಮ್ಮ ನಾಮವೂ ಮಹತ್ತರವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನೇ, ನಿನ್ನ ಸಮಾನನು ಯಾರು ಇಲ್ಲ; ನೀನು ಮಹೋನ್ನತನು, ನಿನ್ನ ನಾಮವು ಸಾಮರ್ಥ್ಯದಿಂದ ಕೂಡಿ ಮಹೋನ್ನತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನೇ, ನಿನ್ನ ಸಮಾನನು ಯಾವನೂ ಇಲ್ಲ; ನೀನು ಮಹತ್ತಮನು, ನಿನ್ನ ನಾಮವೂ ಸಾಮರ್ಥ್ಯದಿಂದ ಕೂಡಿ ಮಹತ್ತಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನೇ, ನಿನ್ನತೆ ಯಾರೂ ಇಲ್ಲ. ನೀನೇ ಮಹೋನ್ನತನು. ನಿನ್ನ ಹೆಸರು ಮಹೋನ್ನತವಾದದ್ದು; ಸಾಮರ್ಥ್ಯಪೂರ್ಣವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಓ ಯೆಹೋವ ದೇವರೇ, ನಿಮ್ಮ ಹಾಗೆ ಯಾರೂ ಇಲ್ಲ. ನೀವು ಮಹೋತ್ತಮರು, ನಿಮ್ಮ ಹೆಸರು ಪರಾಕ್ರಮದಲ್ಲಿ ಮಹತ್ತರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:6
27 ತಿಳಿವುಗಳ ಹೋಲಿಕೆ  

ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ಏಕೆನೆ ಮಹಾತ್ಮನು ಪ್ರಭು, ಬಲು ಸ್ತುತ್ಯರ್ಹನು I ಸಕಲ ದೇವರುಗಳಿಗಿಂತಲೂ ಘನಗಂಭೀರನು II


ಸರ್ವಸ್ತುತಿಗೆ ಪಾತ್ರ, ಪ್ರಭುವು ಪರಮೋನ್ನತ I ದೇವನಗರದಲಿ ಆತನ ಪವಿತ್ರ ಪರ್ವತ II


ಇಸ್ರಯೇಲಿನ ಜನರೇ, ನಿಮ್ಮ ದೇವರಿಗೆ ಸಮಾನನಾರೂ ಇಲ್ಲ, ಆತ ಬರುವನು ಆಕಾಶವನ್ನೇರಿ, ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ಬರುವನು ನಿಮ್ಮ ನೆರವಿಗಾಗಿ.


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ಪ್ರಭು ಮಹಾತ್ಮನು, ಸ್ತುತ್ಯರ್ಹನು I ಆತನ ಮಹಿಮೆ ಅಗಮ್ಯವಾದದು II


ದೇವರ ಸೂಚಕಕಾರ್ಯಗಳು ಎಷ್ಟೋ ಅತಿಶಯ! ಅವರ ಅದ್ಭುತಗಳು ಎಷ್ಟೋ ಅಪಾರ! ಅವರ ರಾಜ್ಯ ಶಾಶ್ವತ ಸಾಮ್ರಾಜ್ಯ; ಅವರ ಆಳ್ವಿಕೆ ತಲತಲಾಂತರಕ್ಕೂ ಸ್ಥಿರ.


ನಮ್ಮ ಪ್ರಭು ಘನವಂತ, ಪರಾಕ್ರಮಿ I ಅಪರಿಮಿತವಾದುದು ಆತನ ಜ್ಞಾನನಿಧಿ II


ಹೇ ದೇವಾ, ಸರ್ವೇಶ್ವರಾ, ತಾವು ಮಹೋನ್ನತರು, ತಮಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದ ಅವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ತಮ್ಮ ಹೊರತು ದೇವರೇ ಇಲ್ಲ ಎಂಬುದು ನಿಶ್ಚಯ.


ನೀವು ಸಾವಿರಾರು ತಲಾಂತರಗಳವರೆಗೂ ದಯೆತೋರುವವರು. ಆದರೆ ಹೆತ್ತವರ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವರು. ನೀವು ಮಹಾಪರಾಕ್ರಮಿಯಾದ ದೇವರು, ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ನಿಮ್ಮ ನಾಮಧೇಯ.


“ಇಂತಿರಲು ನನ್ನನ್ನು ಯಾರಿಗೆ ಹೋಲಿಸಬಲ್ಲಿರಿ?” ಯಾರಿಗೆ ನನ್ನನ್ನು ಸರಿಸಮಾನ ಮಾಡಬಲ್ಲಿರಿ?” ಎಂದು ಕೇಳುತ್ತಿಹರು ಪರಮಪಾವನ ಸ್ವಾಮಿ.


ಅವನು, “ನಾಳೆಯೇ ಆಗಲಿ” ಎಂದನು. ಅದಕ್ಕೆ ಮೋಶೆ, “ತಮ್ಮ ಮಾತಿನ ಪ್ರಕಾರವೇ ಆಗುವುದು.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ನೆನಪಿಗೆ ತಂದುಕೊಳ್ಳಿ ಪ್ರಾಚೀನ ಘಟನೆಗಳನ್ನು ಅರಿತುಕೊಳ್ಳಿ ನಾನೇ ದೇವರು, ಇನ್ನಾರೂ ಇಲ್ಲ ಎಂಬುದನ್ನು ನಾನೇ ಪರಮದೇವರು, ನನಗೆ ಸರಿಸಮಾನವಿಲ್ಲ ಎಂಬುದನ್ನು.


ನನ್ನನ್ನು ಯಾರಿಗೆ ಸರಿಹೋಲಿಸಬಲ್ಲಿರಿ? ನನ್ನನ್ನು ಯಾರಿಗೆ ಸಾಟಿಮಾಡಬಲ್ಲಿರಿ?


ಇಂತಿರಲು ಯಾರಿಗೆ ಹೋಲಿಸಬಲ್ಲಿರಿ ದೇವರನು? ಕೊಡಬಲ್ಲಿರಾ ಆತನಿಗೆ ಯಾವುದಾದರೊಂದು ಉಪಮಾನವನು?


“ಬಿಡಿಸಿದೆ ಬಡವನನು ದರೋಡೆಗಾರರಿಂದ I ರಕ್ಷಿಸಿದೆ ದುರ್ಬಲನನು ಬಲಾಢ್ಯರಿಂದ I ಹೇ ಪ್ರಭು, ನಿನಗೆ ಸಮಾನರಾರೆಂದು” I ಹೊಗಳುವುವು ನನ್ನೆಲುಬುಗಳೊಂದೊಂದು II


ಓ ನಮ್ಮ ದೇವರೇ, ನೀವು ಮಹೋನ್ನತರು, ಶಕ್ತಿಸಾಮರ್ಥ್ಯರು, ಭಯಭಕ್ತಿಗೆ ಪಾತ್ರರು, ಕೃಪಾವಾಗ್ದಾನಗಳ ನೆರವೇರಿಸುವವರು. ಅಲ್ಪವೆಂದೆಣಿಸಬೇಡಿ - ನಮ್ಮ ರಾಜರು, ರಾಜ್ಯಪಾಲರು. ಯಾಜಕರು, ಪ್ರವಾದಿಗಳು, ಹಿರಿಯರು, ಪ್ರಜೆಗಳು ಸಹಿಸಬೇಕಾಗಿಬಂದಿರುವ ಈ ಕಷ್ಟಕಾರ್ಪಣ್ಯಗಳನು.


ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು, ಶ್ರೀಮಂತರನ್ನೂ ಅಧಿಕಾರಿಗಳನ್ನೂ ಉಳಿದ ಜನರನ್ನೂ ಸಂಬೋಧಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿ; ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ಸರ್ವೇಶ್ವರಸ್ವಾಮಿಯನ್ನು ಸ್ಮರಿಸಿಕೊಂಡು, ನಿಮ್ಮ ಸಹೋದರರಿಗಾಗಿ, ಮಡದಿಮಕ್ಕಳಿಗಾಗಿ ಹಾಗು ನಿಮ್ಮ ಮನೆಮಠಗಳಿಗಾಗಿ ಕಾದಾಡಿರಿ,” ಎಂದು ಹುರಿದುಂಬಿಸಿದೆ.


‘ನಮ್ಮಾಶ್ರಯ ದುರ್ಗ ಅವರ ಆಶ್ರಯದುರ್ಗದಂತಲ್ಲ’ ಎಂದು ಅವರ ಶತ್ರುಗಳೇ ಒಪ್ಪಿಕೊಳ್ಳುತ್ತಾರಲ್ಲವೆ?


ಇಲ್ಲವಾದರೆ ಈ ಸಾರಿ ವಿಧಿಸುವ ಈ ಬಾಧೆಗಳು ನಿನ್ನ ಪ್ರಜಾಪರಿವಾರದವರಿಗೆ ಮಾತ್ರವಲ್ಲ ನಿನಗೂ ತಗಲುವುದು. ಇದರಿಂದ ಇಡೀ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


ಆದರೆ ನಮಗೆ ಒಬ್ಬರೇ ದೇವರು. ಅವರು ನಮ್ಮ ಪರಮ ಪಿತ; ಎಲ್ಲ ಸೃಷ್ಟಿಗೂ ಮೂಲಕರ್ತ, ನಾವಿರುವುದು ಅವರಿಗಾಗಿಯೇ. ನಮಗೆ ಒಬ್ಬರೇ ಪ್ರಭು; ಅವರೇ ಯೇಸುಕ್ರಿಸ್ತ. ಅವರ ಮುಖಾಂತರವೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ.


ಹಾಗಲ್ಲ ಯಕೋಬ್ಯರಿಗೆ ಸ್ವಂತವಾದ ದೇವರು ಅವರು ಸಮಸ್ತವನ್ನು ಸೃಷ್ಟಿಸಿದವರು. ಇಸ್ರಯೇಲ್ ಗೋತ್ರ ಅವರಿಗೆ ಸ್ವಾಸ್ತ್ಯ. ‘ಸೇನಾಧೀಶ್ವರ ಸರ್ವೇಶ್ವರ’ ಅವರ ನಾಮಧೇಯ.


ಏಕೆನೆ, ಮಹಾತ್ಮನು ಸರ್ವೇಶ್ವರ ಅತಿ ಸ್ತುತ್ಯರ್ಹನು I ಸಕಲ ದೇವರುಗಳಿಗಿಂತಲೂ ಘನಗಂಭೀರನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು