Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:9 - ಕನ್ನಡ ಸತ್ಯವೇದವು C.L. Bible (BSI)

9 ಆ ಬೊಂಬೆಗಳ ಭೂಷಣಕ್ಕಾಗಿ ಸಾಗಿಬರುತ್ತವೆ ತಾರ್ಷೀಷಿನಿಂದ ಬೆಳ್ಳೀತಗಡುಗಳು, ಊಫಜಿನಿಂದ ಚಿನ್ನ. ಅವು ಕೆತ್ತನೆಗಾರನ, ಎರಕದವನ ಕೈಕೆಲಸಗಳು ಅವುಗಳ ಉಡುಪು ನೀಲಧೂಮ್ರ ವರ್ಣದ ವಸ್ತ್ರಗಳು. ಇವೆಲ್ಲವು ಕೇವಲ ಕಲಾಕುಶಲರ ಕೌಶಲ್ಯಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬೆಳ್ಳಿಯ ತಗಡುಗಳು ತಾರ್ಷೀಷಿನಿಂದಲೂ, ಕೆತ್ತನೆಗಾರನ ಮತ್ತು ಎರಕದವನ ಕೈಕೆಲಸವಾದ ಚಿನ್ನವೂ ಊಫಜಿನಿಂದಲೂ ಸಾಗಿಬರುತ್ತವೆ. ನೀಲಧೂಮ್ರ ವಸ್ತ್ರಗಳು ಅವುಗಳ ಉಡುಪಾಗಿವೆ, ಇವೆಲ್ಲಾ ಕುಶಲಕರ್ಮಿಗಳ ಕೌಶಲ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬೆಳ್ಳಿಯ ತಗಡುಗಳು ತಾರ್ಷೀಷಿನಿಂದಲೂ ಕೆತ್ತನೆಗಾರನ ಮತ್ತು ಎರಕದವನ ಕೈಕೆಲಸವಾದ ಚಿನ್ನವು ಊಫಜಿನಿಂದಲೂ ಸಾಗಿಬರುತ್ತವೆ; ನೀಲಧೂಮ್ರವಸ್ತ್ರಗಳು ಅವುಗಳ ಉಡುಪಾಗಿವೆ; ಇವೆಲ್ಲಾ ಕುಶಲರ ಕೌಶಲ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರು ತಾರ್ಷೀಷ್ ನಗರದ ಬೆಳ್ಳಿಯಿಂದಲೂ ಧಿಫಜ್ ನಗರದ ಬಂಗಾರದಿಂದಲೂ ತಮ್ಮ ವಿಗ್ರಹಗಳನ್ನು ಮಾಡುತ್ತಾರೆ. ಆ ವಿಗ್ರಹಗಳನ್ನು ಬಡಗಿಗಳು, ಕಮ್ಮಾರರು ಮತ್ತು ಅಕ್ಕಸಾಲಿಗರು ಮಾಡುತ್ತಾರೆ; ಅವರು ನೀಲಿ ಮತ್ತು ಕಂದು ಬಣ್ಣದ ಬಟ್ಟೆಗಳನ್ನು ಆ ವಿಗ್ರಹಗಳಿಗೆ ತೊಡಿಸುತ್ತಾರೆ. ಅವು ಕುಶಲರ ಕೌಶಲ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ, ಬಂಗಾರವನ್ನು ಊಫಜಿನಿಂದ ತರುತ್ತಾರೆ. ಅದು ಕೆತ್ತನೆಯವನ ಕೆಲಸವು ಮತ್ತು ಎರಕ ಹೊಯ್ಯುವವನ ಕೈಯಿಂದ ಉಂಟಾದವುಗಳೂ ಆಗಿವೆ. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ. ಅವುಗಳೆಲ್ಲಾ ಕೌಶಲ್ಯಗಾರರ ಕೈಕೆಲಸವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:9
12 ತಿಳಿವುಗಳ ಹೋಲಿಕೆ  

ಅವರ ವಿಗ್ರಹ ಬರೀ ಬೆಳ್ಳಿ ಬಂಗಾರ I ಅವು ಮಾನವನ ಕೈ ಕೆಲಸಗಳು ಮಾತ್ರ II


ಕಣ್ಣೆತ್ತಿ ನೋಡಲು, ನಾರುಬಟ್ಟೆಯನ್ನು ಹೊದ್ದುಕೊಂಡಿದ್ದ, ಊಫಜಿನ ಬಂಗಾರದ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡಿದ್ದ, ಒಬ್ಬ ವ್ಯಕ್ತಿ ನನಗೆ ಕಾಣಿಸಿದ.


ವಿಗ್ರಹವಾದರೋ ಎರಕ ಹೊಯ್ಯಲ್ಪಟ್ಟಿತು ಶಿಲ್ಪಿಯಿಂದ ಅದಕ್ಕೆ ಬಡಿದಿರುವ ಚಿನ್ನದ ಕವಚ ಅಕ್ಕಸಾಲಿಗನಿಂದ ಅದಕ್ಕೆ ತೊಡಿಸಿರುವ ಬೆಳ್ಳಿಸರಪಣಿ ಆ ವಾಜನಿಂದ.


ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷಿಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.


ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. ಆದುದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಹಾಗೂ ಸೀಸಗಳನ್ನು ನಿನಗೆ ಒದಗಿಸುತ್ತಿದ್ದರು.


ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II


ಕರಾವಳಿಯ ನಿವಾಸಿಗಳೇ, ಗೋಳಾಡಿರಿ, ಸಮುದ್ರವನ್ನು ದಾಟಿ ತಾರ್ಷೀಷಿಗೆ ಹೋಗಿರಿ.


ನಿನ್ನ ಹಾಯಿ ನಿನಗೆ ಧ್ವಜವಾಗಲೆಂದೆ ಮಾಡಿಹರು ಈಜಿಪ್ಟಿನ ಕಸೂತಿಯ ನಾರುಮಡಿಯಿಂದ. ನಿನ್ನ ಮೇಲ್ಕಟ್ಟು ಚಿತ್ರಿತವಾಗಿದೆ ಎಲೀಷ ಕರಾವಳಿಯ ಊದಾ ಕಡುಗೆಂಪುಗಳಿಂದ.


ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.


ಮರದ ತುಂಡಿಗೆ, ‘ಎಚ್ಚೆತ್ತುಕೊ’; ಜಡಕಲ್ಲಿಗೆ, ‘ಎದ್ದೇಳು’ ಎಂದು ಆಜ್ಞಾಪಿಸುವವನು ನಿಜಕ್ಕೂ ಬುದ್ಧಿಹೀನನು. ಬೊಂಬೆಯು ಬೋಧಿಸಬಲ್ಲದೇ? ಬೆಳ್ಳಿಬಂಗಾರವನ್ನು ಅದಕ್ಕೆ ಹೊದಿಸಿರುವುದೇನೋ ನಿಜ. ಆದರೆ ಅದಕ್ಕೆ ಉಸಿರೋ ಇಲ್ಲವೇ ಇಲ್ಲ.


ಅರಸನ ಹಡಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.


ಆ ಬಸವ ಇಸ್ರಯೇಲಿನ ಕೈಕೆಲಸವೇ. ಶಿಲ್ಪಿ ಕೊಟ್ಟ ರೂಪವದು; ಅದು ದೇವರಲ್ಲ. ಸಮಾರ್ಯದ ಬಸವನು ನುಚ್ಚುನೂರಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು