Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:10 - ಕನ್ನಡ ಸತ್ಯವೇದವು C.L. Bible (BSI)

10 ನನ್ನ ಮಾತನ್ನು ಕೇಳದೆಹೋದ ತಮ್ಮ ಮೂಲಪಿತೃಗಳ ದುಷ್ಕೃತ್ಯಗಳ ಕಡೆ ಈ ಜನರು ತಿರುಗಿಕೊಂಡಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸುತ್ತಿದ್ದಾರೆ. ಅವುಗಳನ್ನು ಪೂಜಿಸುತ್ತಿದ್ದಾರೆ. ನಾನು ಅವರ ಪೂರ್ವಜರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಇಸ್ರಯೇಲ್ ವಂಶದವರೂ ಜುದೇಯ ವಂಶದವರೂ ಮೀರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ಮಾತುಗಳನ್ನು ಕೇಳದಿದ್ದ ತಮ್ಮ ಪೂರ್ವಿಕರ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು, ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸಿದ್ದಾರೆ. ಇಸ್ರಾಯೇಲ್ ವಂಶದವರೂ ಮತ್ತು ಯೆಹೂದ ವಂಶದವರೂ ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಮೂಲ ಪಿತೃಗಳ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿದ್ದಾರೆ; ಇಸ್ರಾಯೇಲ್ ವಂಶದವರೂ ಯೆಹೂದ ವಂಶದವರೂ ನಾನು ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರು ತಮ್ಮ ಪೂರ್ವಿಕರು ಮಾಡಿದ ಪಾಪಗಳನ್ನೇ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನ ಸಂದೇಶವನ್ನು ಕೇಳಲು ಒಪ್ಪಲಿಲ್ಲ. ಅವರು ಬೇರೆ ದೇವರುಗಳನ್ನು ಅನುಸರಿಸಿ ಪೂಜಿಸಿದರು. ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಯೆಹೂದ ಮತ್ತು ಇಸ್ರೇಲ್ ವಂಶದವರು ಮೀರಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ಮಾತುಗಳನ್ನು ಕೇಳಲೊಲ್ಲದ ತಮ್ಮ ಪಿತೃಗಳ ಅಕ್ರಮಗಳಿಗೆ ತಿರುಗಿಕೊಂಡಿದ್ದಾರೆ. ಬೇರೆ ದೇವರುಗಳನ್ನು ಸೇವಿಸುವುದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ. ಇಸ್ರಾಯೇಲಿನ ವಂಶದವರೂ ಯೆಹೂದದ ವಂಶದವರೂ ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಗಳನ್ನು ಮೀರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:10
36 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಮೋಶೆಗೆ, “ನೀನು ಮೃತನಾಗಿ ಪಿತೃಗಳಲ್ಲಿಗೆ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು, ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ, ದೇವದ್ರೋಹಿಗಳಾಗಿ ತಾವು ಹೋಗುವ ನಾಡಿನಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿದೆ. ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.


ಅಂಥ ನ್ಯಾಯಾಧಿಪತಿಗಳು ತೀರಿಹೋದ ನಂತರ ಇಸ್ರಯೇಲರು ಮತ್ತೆ ತಮ್ಮ ಹಿಂದಿನವರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಸೇವೆಮಾಡಿ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನೂ ಹಠಮಾರಿತನವನ್ನೂ ಬಿಡಲೇ ಇಲ್ಲ.


ಇಸ್ರಯೇಲರು ಇವರ ಮಾತನ್ನೂ ಕೇಳದೆ ಅನ್ಯದೇವತೆಗಳನ್ನು ಪೂಜಿಸಿ ಅವುಗಳಿಗೆ ಅಡ್ಡಬಿದ್ದು ದೇವದ್ರೋಹಿಗಳಾದರು. ಸರ್ವೇಶ್ವರನ ಆಜ್ಞೆಗಳನ್ನು ಪಾಲಿಸುತ್ತಿದ್ದ ತಮ್ಮ ಪೂರ್ವಜರ ಮಾರ್ಗವನ್ನು ಬೇಗನೆ ತ್ಯಜಿಸಿಬಿಟ್ಟರು. ಅವರಂತೆ ನಡೆಯಲೇ ಇಲ್ಲ.


ಈ ಒಡಂಬಡಿಕೆ, ನಾನು ಪೂರ್ವಜರನ್ನು ಈಜಿಪ್ಟ್ ದೇಶದಿಂದ ಕೈಹಿಡಿದು ಕರೆತಂದಾಗ ಮಾಡಿದ ಒಡಂಬಡಿಕೆಯಂತಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ; ಎಂದೇ, ನಾನು ಅವರನ್ನು ಲಕ್ಷಿಸಲೂ ಇಲ್ಲ, ಎಂದರು ಸರ್ವೇಶ್ವರ.


ನನಗೆ ಬೆನ್ನು ತೋರಿಸಿ, ನನ್ನ ದರ್ಶನವನ್ನು ಬಯಸದೆ, ನನ್ನ ಮಾರ್ಗಬಿಟ್ಟವರನ್ನು ಧ್ವಂಸಮಾಡುವೆನು.”


“ಆದಾಮನಂತೆ ಅವರು ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ. ಅವನಂತೆ ಅವರು ನನಗೆ ದ್ರೋಹವೆಸಗಿದ್ದಾರೆ.


ಇಸ್ರಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ, ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಛರನ್ನು, ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಅಶುದ್ಧಗೊಳಿಸಿದ್ದೀರಿ. ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿ ನಿಮ್ಮ ಅಮಿತ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.


ನಂಬಿಕೆಗೆಟ್ಟ ದ್ರೋಹಿಗಳಾದರು ತಮ್ಮ ಹಿರಿಯರಂತೆ I ಆತನಿಗೆ ಎದುರುಬಿದ್ದರು ಹಿಮ್ಮುಖವಾದ ಬಿಲ್ಲಿನಂತೆ II


“ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ಕೋಪ ಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿ. ಅದನ್ನು ಮರೆಯಬೇಡಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಸರ್ವೇಶ್ವರನ ಆಜ್ಞೆಗಳನ್ನು ಧಿಕ್ಕರಿಸುತ್ತಾ ಬಂದಿದ್ದೀರಿ.


ನನ್ನ ನಿಯಮಗಳನ್ನು ಅಲ್ಲಗಳೆದು, ನನ್ನ ವಿಧಿಗಳನ್ನು ತಳ್ಳಿಬಿಟ್ಟು, ನನ್ನ ಆಜ್ಞೆಗಳಿಗೆ ವಿಧೇಯರಾಗದೆ ನಿಬಂಧನೆಗಳನ್ನೂ ಮೀರಿ ನಡೆದರೆ


ನಿಮ್ಮ ಪಿತೃಗಳಂತೆ ಆಗಬೇಡಿ. ಅವರಿಗೆ ಪೂರ್ವಕಾಲದ ಪ್ರವಾದಿಗಳು, ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನಿಮ್ಮ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ಬಿಟ್ಟು ಹಿಂದಿರುಗಿ’ ಎಂದು ಸಾರಿದರು. ಆದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ.


ಅವರು ಅತ್ತಿತ್ತ ತಿರುಗಿಕೊಳ್ಳುತ್ತಾರೆ. ದೇವರ ಕಡೆ ತಿರುಗಿಕೊಳ್ಳುವುದಿಲ್ಲ. ಅವರು ಮೋಸದ ಬಿಲ್ಲಿಗೆ ಸಮಾನರು. ಸೊಕ್ಕಿನ ನಾಲಿಗೆಯ ನಿಮಿತ್ತ ಅವರ ಮುಖಂಡರು ಹತರಾಗುವರು. ಅವರ ಪತನ ಈಜಿಪ್ಟಿಗೆ ಹಾಸ್ಯಾಸ್ಪದವಾಗುವುದು.”


ಆದರೆ ಸರ್ವೇಶ್ವರ ಹೇಳುವುದೇನೆಂದರೆ: “ಎಫ್ರಯಿಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಜುದೇಯವೇ, ನಿನ್ನನ್ನು ಹೇಗೆ ಸರಿಪಡಿಸಲಿ? ನಿಮ್ಮ ಭಕ್ತಿ ಪ್ರಾತಃಕಾಲದ ಮೋಡದಂತಿದೆ; ಬೇಗನೆ ಮಾಯವಾಗುವ ಇಬ್ಬನಿಯಂತಿದೆ.


ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು.


ಈ ಇಸ್ರಯೇಲರು ಬಾಳ್ ದೇವತೆಯ ಪ್ರತಿಮೆಗಳನ್ನು ಪೂಜಿಸಿ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು.


ಆದಕಾರಣ ನೀನು ಅವರಿಗೆ - ‘ತನ್ನ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದ, ದಂಡಿಸಿದರೂ ತಿದ್ದುಕೊಳ್ಳದ ಜನಾಂಗ ಇದುವೇ; ಸತ್ಯವೆಂಬುದು ಅಳಿದುಹೋಗಿದೆ, ಇದರ ಬಾಯಿಂದ ಕಡಿದುಹೋಗಿದೆ’ ಎಂದು ಹೇಳು.”


‘ನೀನು (ಯೆರೆಮೀಯ) ವಾಸವಾಗಿರುವುದು ಮೋಸಗಾರರ ಮಧ್ಯೆ ಮೋಸಗಾರರಾಗಿರುವುದರಿಂದಲೆ ಅವರು ನನ್ನನ್ನು ಅರಿಯಲೊಲ್ಲರು’ ಎನ್ನುತ್ತಾರೆ ಸರ್ವೇಶ್ವರ.


ಈ ದುಷ್ಟಜನರು ನನ್ನ ಮಾತುಗಳನ್ನು ಕೇಳಲೊಲ್ಲರು. ತಮ್ಮ ಹೃದಯದ ಒರಟುತನದಂತೆ ನಡೆದುಬರುತ್ತಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸಿ, ಪೂಜಿಸುತ್ತಿದ್ದಾರೆ. ಇವರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು.


ಅವರಾದರೋ ನನಗೆ ಕಿವಿಗೊಡಲಿಲ್ಲ. ಕೇಳಲಿಕ್ಕೂ ಕಲಿತುಕೊಳ್ಳಲಿಕ್ಕೂ ಅವರು ಒಪ್ಪಲಿಲ್ಲ.


ಆದರೂ ಅವರು ಕಿವಿಗೊಟ್ಟು ಕೇಳಲಿಲ್ಲ. ಅನ್ಯದೇವತೆಗಳಿಗೆ ಧೂಪಾರತಿ ಎತ್ತುವುದನ್ನು ನಿಲ್ಲಿಸಲಿಲ್ಲ. ತಮ್ಮ ದುರಾಚಾರವನ್ನು ಕೈಬಿಡಲಿಲ್ಲ.


“ಸರ್ವೇಶ್ವರನ ಹೆಸರಿನಲ್ಲಿ ನೀನು ನಮಗೆ ನುಡಿದ ಮಾತನ್ನು ನಾವು ಕೇಳಲೊಲ್ಲೆವು.


ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಇತರ ಜನಾಂಗಗಳಿಗಿಂತಲೂ ಸುತ್ತಲಿನ ದೇಶಗಳಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮವನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.


“ನಿಮ್ಮ ಪೂರ್ವಜರು ಕಿವಿಗೊಡದೆಹೋದರು: ಹಟಮಾರಿಗಳಾದರು; ಮಂದಮತಿಗಳಾದರು; ಅವರ ಹೃದಯ ಗೋರ್ಕಲ್ಲಿನಂತೆ ಆಯಿತು.


ಆಗ ಹೀಗೆಂದೆ: ‘ನಾನು ಕೂಗಿದಾಗ ಅವರು ಕೇಳದೆಹೋದರು; ಅವರು ಕೂಗಿದಾಗ ನಾನು ಕೇಳಲಿಲ್ಲ.’


ಭೂನಿವಾಸಿಗಳು ಮೀರಿಹರು ದೈವಾಜ್ಞೆಗಳನು ಉಲ್ಲಂಘಿಸಿಹರು ದೈವನಿಯಮಗಳನು, ಭಂಗಪಡಿಸಿಹರು ಶಾಶ್ವತ ಒಡಂಬಡಿಕೆಯನ್ನು, ಮಲಿನವಾಗಿಸಿಹರು ನಡತೆಯಿಂದ ಲೋಕವನು.


‘ಈ ನಗರದವರು ತಮ್ಮ ದೇವರಾದ ಸರ್ವೇಶ್ವರನ ಒಡಂಬಡಿಕೆಯನ್ನು ನಿರಾಕರಿಸಿ ಅನ್ಯದೇವತೆಗಳನ್ನು ಪೂಜಿಸಿ ಆರಾಧಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು’ ಎಂದು ಹೇಳಿಕೊಳ್ಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು