ಯೆರೆಮೀಯ 11:12 - ಕನ್ನಡ ಸತ್ಯವೇದವು C.L. Bible (BSI)12 ಆಗ ಜುದೇಯದ ನಗರದವರೂ ಜೆರುಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಧೂಪಾರತಿಯೆತ್ತಿದರೋ ಅವುಗಳನ್ನು ಮರೆಹೊಕ್ಕು ಕೂಗಿಕೊಳ್ಳುವರು. ಆದರೆ ಅಂಥ ಕೇಡಿನ ಕಾಲದಲ್ಲಿ ಆ ದೇವತೆಗಳಿಂದ ಅವರಿಗೆ ಯಾವ ರಕ್ಷಣೆಯೂ ದೊರಕದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಗ ಯೆಹೂದದ ಪಟ್ಟಣಗಳವರೂ ಹಾಗು ಯೆರೂಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮೊರೆಹೊಕ್ಕಿ ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವುದಿಲ್ಲ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆಗ ಯೆಹೂದದ ಪಟ್ಟಣಗಳವರೂ ಯೆರೂಸಲೇವಿುನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮರೆಹೊಕ್ಕು ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೂದದ ಪಟ್ಟಣಗಳ ಜನರು ಮತ್ತು ಜೆರುಸಲೇಮ್ ನಗರದ ಜನರು ತಮ್ಮ ವಿಗ್ರಹಗಳ ಹತ್ತಿರ ಹೋಗಿ ಸಹಾಯಕ್ಕಾಗಿ ಪ್ರಾರ್ಥಿಸುವರು. ಆ ವಿಗ್ರಹಗಳ ಮುಂದೆ ಅವರು ಧೂಪ ಹಾಕುವರು. ಆದರೆ ಕೇಡು ಬಂದಾಗ ಯೆಹೂದದ ಜನರಿಗೆ ಸಹಾಯಮಾಡಲು ಆ ವಿಗ್ರಹಗಳಿಗೆ ಸಾಧ್ಯವಾಗುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು. ಆದರೆ ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವುದೇ ಇಲ್ಲ. ಅಧ್ಯಾಯವನ್ನು ನೋಡಿ |