Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:15 - ಕನ್ನಡ ಸತ್ಯವೇದವು C.L. Bible (BSI)

15 “ನನಗೆ ಆಪ್ತವಾದ ಜನತೆಯು, ನನಗೆ ಅಸಹ್ಯಕಾರ್ಯಗಳನ್ನು ಮಾಡಿದ್ದೇಕೆ? ನನ್ನ ಆಲಯದಲ್ಲಿ ಅದಕ್ಕಿರುವ ಹಕ್ಕಾದರೂ ಏನು? ವ್ರತಗಳ ಮೂಲಕ, ಪಶುಬಲಿ ಮಾಂಸದ ಮೂಲಕ ಅದು ಬರಲಿರುವ ದಂಡನೆಯನ್ನು ತಡೆಗಟ್ಟಬಲ್ಲದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯ ಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ, ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸುವುದೋ? ಇಂಥವುಗಳ ಮೂಲಕ ತಪ್ಪಿಸಿಕೊಂಡೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸಿಯಾವೇ? ಇಂಥವುಗಳ ಮೂಲಕ ತಪ್ಪಿಸಿಕೊಂಡೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನನ್ನ ಪ್ರೇಯಸಿ (ಯೆಹೂದ) ನನ್ನ ಪವಿತ್ರ ಆಲಯದಲ್ಲಿ ಏಕೆ ಇದ್ದಾಳೆ? ಇಲ್ಲಿ ಇರಲು ಅವಳಿಗೆ ಅಧಿಕಾರವಿಲ್ಲ. ಅವಳು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾಳೆ. ಯೆಹೂದವೇ, ಹರಕೆಗಳಿಂದ ಮತ್ತು ಪ್ರಾಣಿಗಳ ಬಲಿಯಿಂದ ನಿನ್ನ ವಿನಾಶವನ್ನು ತಡೆಯಬಹುದೆಂದು ತಿಳಿದುಕೊಂಡಿರುವಿಯಾ? ನನಗೆ ಹೋಮವನ್ನು ಅರ್ಪಿಸಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಬಹುದೆಂದು ತಿಳಿದುಕೊಂಡಿರುವಿಯಾ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ನನ್ನ ಪ್ರಿಯಳಿಗೆ ನನ್ನ ಆಲಯದಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡೆಸಿದ್ದಾಳೆ. ನೀನು ಸಮರ್ಪಿಸಿದ ಮಾಂಸದ ಬಲಿಯು ನಿನ್ನ ಶಿಕ್ಷೆಯನ್ನು ರದ್ದುಗೊಳಿಸುವುದೋ? ನೀನು ಕೆಟ್ಟತನ ಮಾಡುವಾಗ ಉಲ್ಲಾಸಪಡುತ್ತೀ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:15
29 ತಿಳಿವುಗಳ ಹೋಲಿಕೆ  

ಅವರು ಸಂತೋಷಿಸುವುದು ಕೇಡನ್ನು ಮಾಡುವುದರಲ್ಲಿ. ಉಲ್ಲಾಸಿಸುವುದು ಕೆಟ್ಟವರ ದುಷ್ಟತನದಲ್ಲಿ,


ಮನಃಶುದ್ಧಿಯುಳ್ಳವರಿಗೆ ಎಲ್ಲವೂ ಶುದ್ಧವಾಗಿಯೇ ಇದೆ. ಭ್ರಷ್ಟರಿಗೆ ಮತ್ತು ಅವಿಶ್ವಾಸಿಗಳಿಗೆ ಯಾವುದೂ ಶುದ್ಧವಲ್ಲ. ಏಕೆಂದರೆ, ಅವರ ಮನಸ್ಸೂ ಮನಸ್ಸಾಕ್ಷಿಯೂ ಮಲಿನವಾಗಿದೆ.


ಆದರೆ ನೀವು ಅಹಂಭಾವದಿಂದ ಕೊಚ್ಚಿಕೊಳ್ಳುತ್ತೀರಿ. ಹಾಗೆ ಕೊಚ್ಚಿಕೊಳ್ಳುವುದು ಸರಿಯಲ್ಲ.


ಶುಭಸಂದೇಶವನ್ನು ತಿರಸ್ಕರಿಸಿದ್ದರಿಂದ ಇಸ್ರಯೇಲರು ದೇವರಿಗೆ ಶತ್ರುಗಳಾದರು. ಹೀಗಾದುದು ನಿಮ್ಮ ಹಿತಕ್ಕೋಸ್ಕರವೆ. ದೇವರಿಂದ ಆಯ್ಕೆ ಆದವರಾದರಿಂದ, ಪಿತಾಮಹ ಅಬ್ರಹಾಮ್, ಇಸಾಕ್ ಮತ್ತು ಯಕೋಬರ ನಿಮಿತ್ತ ಅವರು ದೇವರಿಗೆ ಮಿತ್ರರಾದರು.


ಯೇಸುವನ್ನು ಕಂಡೊಡನೆ ಗಟ್ಟಿಯಾಗಿ ಕೂಗುತ್ತಾ ಅವರ ಮುಂದೆ ಅಡ್ಡಬಿದ್ದು, “ಯೇಸುವೇ, ಪರಾತ್ಪರ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದಯವಿಟ್ಟು ನನ್ನನ್ನು ಪೀಡಿಸಬೇಡಿ,” ಎಂದು ದನಿಯೆತ್ತಿ ಬೇಡಿಕೊಂಡನು.


“ಆಮೇಲೆ ರಾಜನು ಅತಿಥಿಗಳನ್ನು ನೋಡಲುಬಂದ. ಅಲ್ಲಿ ವಿವಾಹಕ್ಕೆ ತಕ್ಕ ವಸ್ತ್ರವನ್ನು ಧರಿಸದೆ ಬಂದಿದ್ದ ಒಬ್ಬನನ್ನು ಕಂಡ.


ಅನಂತರ ಸರ್ವೇಶ್ವರ ನನಗೆ ಹೇಳಿದ್ದೇನೆಂದರೆ: “ನನ್ನ ಜನರಾದ ಇಸ್ರಯೇಲಿನವರು ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು, ಅವುಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ಬಯಸುತ್ತಾರೆ. ಆದರೂ ಸರ್ವೇಶ್ವರ ಅವರನ್ನು ಪ್ರೀತಿಸುತ್ತಾರೆ. ಇದಕ್ಕೆ ನಿದರ್ಶನವಾಗಿ, ನೀನು ಹೋಗಿ, ಜಾರನಿಗೆ ಪ್ರಿಯಳೂ ಮತ್ತು ವ್ಯಭಿಚಾರಿಣಿಯೂ ಆದ ಸ್ತ್ರೀಯೊರ್ವಳನ್ನು ಪ್ರೀತಿಸು.”


ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!


“ನಾನು ನನ್ನ ಮನೆಯನ್ನೇ ತೊರೆದಿದ್ದೇನೆ ನನ್ನ ಸ್ವಂತ ಸೊತ್ತನ್ನೇ ನಿರಾಕರಿಸಿದ್ದೇನೆ ನನಗೆ ಪ್ರಾಣಪ್ರಿಯರಾದ ಜನರನ್ನು ಅವರ ಶತ್ರುಗಳ ಕೈಗೊಪ್ಪಿಸಿದ್ದೇನೆ.


“ಭ್ರಷ್ಟರಾದ ಜನರೇ, ನನಗೆ ಅಭಿಮುಖರಾಗಿರಿ, ನಾನು ನಿಮಗೆ ಅಧಿಪತಿ. ನಿಮ್ಮಲ್ಲಿ ಒಂದು ಪಟ್ಟಣಕ್ಕೆ ಒಬ್ಬನಂತೆ, ಗೋತ್ರಕ್ಕೆ ಇಬ್ಬರಂತೆ ಆರಿಸಿ ಸಿಯೋನಿಗೆ ಕರೆತರುವೆನು.


ಭ್ರಷ್ಟಳಾದ ಇಸ್ರಯೇಲ್ ನನಗೆ ವಿಮುಖಳಾಗಿ ವ್ಯಭಿಚಾರಿಣಿಯಂತೆ ವರ್ತಿಸಿದ ಕಾರಣದಿಂದಲೆ, ನಾನು ಅವಳನ್ನು ನಿರಾಕರಿಸಿ ವಿವಾಹ ವಿಚ್ಛೇದನ ಪತ್ರಕೊಟ್ಟದ್ದನ್ನು ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನೋಡಿಯೂ ಅಂಜದೆಹೋದಳು. ತಾನೂ ಹೋಗಿ ವೇಶ್ಯೆಯಂತೆ ವರ್ತಿಸಿದಳು.


“ನೀನು ಹೋಗಿ ಜೆರುಸಲೇಮ್ ನಗರಕ್ಕೇ ಕೇಳಿಸುವಂತೆ ಈ ಸಂದೇಶವನ್ನು ಸಾರು : ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವ ವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆಯಿಲ್ಲದ ಅರಣ್ಯಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ; ಇದು ನಿನ್ನ ಹಿತಕ್ಕಾಗಿಯೇ.


ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.


ಧರ್ಮಶಾಸ್ತ್ರಕ್ಕೆ ಕಿವಿಮುಚ್ಚಿಕೊಳ್ಳುವವನ ಪ್ರಾರ್ಥನೆ, ದೇವರಿಂದ ತಿರಸ್ಕೃತವಾದ ಪ್ರಾರ್ಥನೆ.


ನೆರೆಯವನನ್ನು ಮೋಸಗೊಳಿಸಿ “ತಮಾಷೆಗಾಗಿ ಮಾಡಿದೆ” ಎನ್ನುವನವನು


ದುಷ್ಟರು ಅರ್ಪಿಸುವ ಬಲಿಯಜ್ಞ ಅಸಹ್ಯ; ದುರಾಲೋಚನೆಯಿಂದ ಅರ್ಪಿಸುವುದು ಮತ್ತೂ ಅಸಹ್ಯ.


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


ಮೂರ್ಖನಿಗೆ ಕೆಡುಕುಮಾಡುವ ಚಟ; ಬುದ್ಧಿವಂತನಿಗೆ ಜ್ಞಾನಗಳಿಸುವ ಹಟ.


ದುರ್ಜನರಿಗೆ ದೇವ ಹೇಳುವನು ಇಂತೆಂದು I “ನನ್ನ ವಿಧಿಗಳ ಪಠಿಸುವ ಹಕ್ಕು ನಿಮಗೆಂತು? I ನನ್ನ ನಿಬಂಧನೆಗಳ ನೀವು ಜಪಿಸುವುದೆಂತು?” II


ನಿನಗೆ ಪ್ರಿಯರಾದ ನಮ್ಮ ಮೊರೆಯನಾಲಿಸು I ನಿನ್ನ ಭುಜಬಲದಿಂದ ನಮ್ಮನು ಜಯಗೊಳಿಸು II


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ಕೀಳಾದ ನಿನ್ನ ಸೂಳೆಗಾರಿಕೆಯನ್ನು, ಗುಡ್ಡೆ, ಕಣಿವೆಗಳಲ್ಲಿ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಜೆರುಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲಬೇಕು?”


“ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು ! ನನ್ನಾಲಯದಲ್ಲೆ ಅವರು ನಡೆಸುವ ಕೆಟ್ಟತನವನ್ನು ನಾನು ಕಂಡಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು