ಯೆರೆಮೀಯ 11:16 - ಕನ್ನಡ ಸತ್ಯವೇದವು C.L. Bible (BSI)16 ಸರ್ವೇಶ್ವರನಾದ ನಾನು ಅದಕ್ಕೆ ‘ಸುಂದರ ಫಲದಿಂದ ಕೂಡಿದ ಚೆಲುವಾದ ಹಚ್ಚನೆಯ ಓಲಿವ್ ಮರ’ ಎಂದು ಹೆಸರಿಟ್ಟೆ. ಆದರೆ ಅದೇ ಮರಕ್ಕೆ ಬೆಂಕಿಯಿಟ್ಟು ಧಗಧಗನೆ ಉರಿಯುವಂತೆ ಮಾಡುವೆನು. ಅದರ ರೆಂಬೆಗಳು ಸುಟ್ಟುಹೋಗುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೆಹೋವನು ನಿನಗೆ ಸುಂದರವಾದ ಫಲದಿಂದ ಕೂಡಿದ ಹಸಿರಾದ ಒಲೀವ್ ಮರವೆಂದು ಹೆಸರಿಟ್ಟಿದ್ದನು. ಆದರೆ ಅವನು ಆ ಮರಕ್ಕೆ ಬೆಂಕಿ ಹಚ್ಚಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೆಹೋವನು ನಿನಗೆ ಸುಂದರಫಲದಿಂದ ಅಂದವಾದ ಹಚ್ಚನೆಯ ಒಲೀವಮರವೆಂದು ಹೆಸರಿಟ್ಟಿದ್ದನು; ಆ ಮರಕ್ಕೆ ಬೆಂಕಿಯಿಕ್ಕಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಯೆಹೋವನು ನಿನಗೆ ‘ನೋಡಲು ಸುಂದರವಾದ ಹಸಿರು ಆಲೀವ್ ಮರ ಎಂದು’ ಹೆಸರು ಕೊಟ್ಟನು. ಆದರೆ ಯೆಹೋವನು ಬಿರುಗಾಳಿ ಬೀಸಿ ಆ ಮರಕ್ಕೆ ಬೆಂಕಿ ಇಡುವನು. ಆಗ ಅದರ ಕೊಂಬೆಗಳು ಸುಟ್ಟುಹೋಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಸೌಂದರ್ಯವಾದ ಒಳ್ಳೆಯ ಹಣ್ಣುಳ್ಳ ಹಸುರಾದ ಓಲಿವ್ ಗಿಡವೆಂದು ಯೆಹೋವ ದೇವರು ನಿನಗೆ ಹೆಸರಿಟ್ಟರು. ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸುವನು. ಅದರ ಕೊಂಬೆಗಳು ಮುರಿದು ಹೋಗುವುವು. ಅಧ್ಯಾಯವನ್ನು ನೋಡಿ |