Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:19 - ಕನ್ನಡ ಸತ್ಯವೇದವು C.L. Bible (BSI)

19 ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. “ಮರವನ್ನು ಫಲಸಹಿತ ನಾಶಪಡಿಸೋಣ, ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ. ಅವನ ಹೆಸರೇ ಇಲ್ಲದಂತಾಗಲಿ,” ಎಂದು ಅವರು ಕುಯುಕ್ತಿ ಕಲ್ಪಿಸಿದ್ದರು. ಆದರೆ ನನಗೆ ಅದು ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು. “ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ” ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು; ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಜನರು ನನ್ನ ವಿರುದ್ಧ ಕೆಲಸ ಮಾಡುತ್ತಿದ್ದಾರೆಂಬುದನ್ನು ಯೆಹೋವನು ನನಗೆ ತೋರಿಸುವ ಮುಂಚೆ ನಾನು ವಧೆಗಾಗಿ ತೆಗೆದುಕೊಂಡು ಹೋದ ಸಾಧುಕುರಿಯಂತೆ ಇದ್ದೆನು. ಅವರು ನನ್ನ ವಿರೋಧಿಗಳೆಂದು ನಾನು ತಿಳಿದುಕೊಂಡಿರಲಿಲ್ಲ. ಅವರು ನನ್ನ ಬಗ್ಗೆ ಹೀಗೆ ಹೇಳುತ್ತಿದ್ದರು: “ಮರವನ್ನು ಮತ್ತು ಅದರ ಫಲಗಳನ್ನು ನಾಶಮಾಡೋಣ; ಅವನನ್ನು ಕೊಂದುಬಿಡೋಣ; ಜನರು ಅವನನ್ನು ಮರೆತುಬಿಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. ಆದರೆ ನನ್ನ ವಿರುದ್ಧ ಸಂಚು ಹೂಡುತ್ತಿದ್ದಾರೆಂದು ನನಗೆ ತಿಳಿದಿರಲಿಲ್ಲ. “ಮರವನ್ನು ಫಲ ಸಹಿತ ನಾಶ ಪಡಿಸೋಣ, ಜೀವ ಲೋಕದಿಂದ ಇವನನ್ನು ನಿರ್ಮೂಲ ಮಾಡೋಣ, ಅವನ ಹೆಸರೇ ಇಲ್ಲದಂತಾಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:19
28 ತಿಳಿವುಗಳ ಹೋಲಿಕೆ  

ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ.


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ಇಂತೆನ್ನುತಿಹರು : “ಬನ್ನಿ ಸಂಹರಿಸೋಣ I ಆತನ ಜನಾಂಗ ಉಳಿಯದಂತೆ ಮಾಡೋಣ I ಇಸ್ರಯೇಲೆಂಬ ನಾಮವನಳಿಸಿಬಿಡೋಣ” II


ನನಗೆ ವಿರುದ್ಧ ಜನರಾಡುವ ಗುಸುಗುಸು ಮಾತು ಕೇಳಿ ಬರುತಿದೆ I ಭಯಭೀತಿ ಎನ್ನನಾವರಿಸಿದೆ, ಒಳಸಂಚು, ಪ್ರಾಣಹರಣ ನಡೆಯುತಿವೆ II


ಸುಜ್ಞಾನದ ಕ್ರಯ ಯಾರಿಗೂ ಗೊತ್ತಿಲ್ಲ ಜೀವಿತರಲ್ಲಿ ಅದನ್ನು ಕಂಡವರಿಲ್ಲ.


ಪ್ರಭುವಿನೊಳಿತನು ನಾ ಕಾಣುವೆ ಜೀವಲೋಕದೊಳು I ನಾನಿಟ್ಟಿರುವೆ ನಂಬಿಕೆ ನಿರೀಕ್ಷೆ ಅದರೊಳು II


ಗಾದ್ ಕುಲದಿಂದ ರೆಗೂವೇಲನ ಮಗ ಎಲ್ಯಾಸಾಫ್


ಜೀವಲೋಕದಲ್ಲಿ ಇನ್ನು ದೇವನನ್ನು ಕಾಣೆನೆಂದುಕೊಂಡೆ ಭೂಲೋಕನಿವಾಸಿಗಳಲ್ಲಿ ಒಬ್ಬನನ್ನೂ ನೋಡಲಾರೆನೆಂದುಕೊಂಡೆ.


ಕಳ್ಳನ ಸಾಧನಗಳು ಕೆಟ್ಟವುಗಳೇ. ಅವನ ಯೋಜನೆಗಳು ಅಬದ್ಧವಾದುವೇ. ದೀನದಲಿತರ ಕೋರಿಕೆಗಳು ನ್ಯಾಯಬದ್ಧವಾಗಿದ್ದರೂ ಸುಳ್ಳುಮಾತುಗಳಿಂದ ಅವರನ್ನು ಹಾಳುಮಾಡುತ್ತಾನೆ.


ಸಜ್ಜನರ ಸ್ಮರಣೆ ಮಂಗಳಕರ; ದುರ್ಜನರ ಹೆಸರು ಅಸಹ್ಯಕರ.


ವಧ್ಯಸ್ಥಾನಕ್ಕೆ ಹೋಗುವ ಹೋರಿಯಂತೆ, ಬಲೆಗೆ ಸಿಕ್ಕಿಬೀಳುವ ಜಿಂಕೆಯಂತೆ,


ಎಂದೇ ನಡೆವೆನು ನಾನು ಪ್ರಭುವಿನ ಕಣ್ಮುಂದೆ I ಅಂತೆಯೇ ಬಾಳುವೆ ಜೀವಲೋಕದೊಳಿದ್ದೇ II


ನಿರ್ಮೂಲವಾಗಲಿ ಅವನಾ ಪೀಳಿಗೆ I ನಿರ್ನಾಮವಾಗಲಿ ಮರುವಂಶದೊಳಗೆ II


ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.


ಪ್ರಭುವೇ, ನನಗಾಶ್ರಯ ನೀನೇ I ನನ್ನ ಬಾಳಿನ ಸೊತ್ತು ನೀನೇ I ಕೂಗಿ ನಿನಗೆ ಮೊರೆಯಿಡುತ್ತೇನೆ II


ಅಚಲನಾಗಿರುವನು ನೀತಿವಂತನು I ಮರೆಯಲಾರರು ಎಂದಿಗೂ ಆತನನು II


ನಸುಕುವನು ದೇವರು ನಿನ್ನನು ನಿರುತ I ದೂರಮಾಡುವನು ನಿನ್ನಾ ಗುಡಾರದಿಂದ I ಕಿತ್ತೆಸೆದುಬಿಡುವನು ಜೀವದ ನಾಡಿಂದ II


ನನಗೆ ಆಪತ್ತೊದಗಲದೊ ಸಂತೋಷಿಸಿದರು ಸಭೆಗೂಡಿ I ಸೂರೆಮಾಡಿದರು ತಿರುತಿರುಗಿ ಆ ಭ್ರಷ್ಟರೊಟ್ಟುಗೂಡಿ II


ಜನರಿಗೆ ತಿಳಿಸಬೇಕೆಂದು ಸರ್ವೇಶ್ವರ ಆಜ್ಞಾಪಿಸಿದ್ದನ್ನೆಲ್ಲ ಯೆರೆಮೀಯನು ನುಡಿದು ಮುಗಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಸುತ್ತುಗಟ್ಟಿದರು.


ನೀನೇ ನೋಡಿರುವೆ ವೈರಿಗಳು ನನ್ನ ವಿರುದ್ಧ ಸಾಧಿಸಿದ ಹಗೆಯನ್ನು ಅವರು ಕಲ್ಪಿಸಿಕೊಂಡ ಕುಯುಕ್ತಿಯನ್ನು.


“ಏಲಾಮೂ ಅಲ್ಲಿದೆ; ಅದರ ಪ್ರಜೆಯೆಲ್ಲಾ ಅದರ ಗೋರಿಯನ್ನು ಸುತ್ತಿಕೊಂಡಿವೆ.ಅವರೆಲ್ಲರೂ ಸಂಹೃತರು, ಖಡ್ಗಹತರು; ಜೀವಲೋಕದಲ್ಲಿ ಭೀಕರವಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.


ದುಷ್ಟನೇ, ನೀತಿವಂತನ ಮನೆಗೆ ಕನ್ನಹಾಕಬೇಡ; ಅವನು ಕೂಡಿಸಿದ್ದನ್ನು ಕೊಳ್ಳೆಹೊಡೆಯಬೇಡ.


ನಿನಗೆ ವಿರುದ್ಧವಾಗಿ ಅವರು ಯುದ್ಧಮಾಡುವರು; ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗಿರುವೆನು. ಇದು ಸರ್ವೇಶ್ವರನಾದ ನನ್ನ ನುಡಿ".


ಎಫ್ರಯಿಮನ ದೇವಜನರಿಗೆ ಪ್ರವಾದಿಯೇ ಕಾವಲುಗಾರ. ಆದರೂ ಅವನ ಹಾದಿಯಲ್ಲೆಲ್ಲ ಬೇಟೆಯ ಬಲೆ ಒಡ್ಡಲಾಗಿದೆ. ದೇವರ ಆಲಯದಲ್ಲೂ ಅವನಿಗೆ ಹಗೆತನ ಕಾದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು