Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:20 - ಕನ್ನಡ ಸತ್ಯವೇದವು C.L. Bible (BSI)

20 ಆಗ ನಾನು, “ಸೇನಾಧೀಶ್ವರರಾದ ಸರ್ವೇಶ್ವರಾ, ನೀವು ಹೃನ್ಮನಗಳನ್ನು ಪರೀಕ್ಷಿಸಿ ನ್ಯಾಯವಾದ ತೀರ್ಪನ್ನು ನೀಡುವವರು. ನೀವು ಅವರಿಗೆ ಮಾಡುವ ಪ್ರತೀಕಾರವನ್ನು ನಾನು ಕಾಣುವೆನು. ನನ್ನ ವ್ಯಾಜ್ಯವನ್ನು ನಿಮ್ಮ ಕೈಗೊಪ್ಪಿಸಿದ್ದೇನೆ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹೃದಯವನ್ನೂ, ಅಂತರಿಂದ್ರಿಯವನ್ನೂ ಪರೀಕ್ಷಿಸಿ, ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆಮಾಡಿದ್ದೇನಷ್ಟೆ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹೃದಯವನ್ನೂ ಅಂತರಿಂದ್ರಿಯವನ್ನೂ ಪರೀಕ್ಷಿಸಿ ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆ ಮಾಡಿದ್ದೇನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಯೆಹೋವನೇ, ನೀನು ನ್ಯಾಯಪರನಾದ ತೀರ್ಪುಗಾರ. ಜನರ ಹೃದಯವನ್ನು ಮತ್ತು ಬುದ್ಧಿಯನ್ನು ಹೇಗೆ ಪರೀಕ್ಷಿಸಬೇಕೆಂದು ನಿನಗೆ ಗೊತ್ತು. ನಾನು ನನ್ನ ವಾದವನ್ನು ನಿನ್ನ ಮುಂದೆ ಮಂಡಿಸುತ್ತೇನೆ ಮತ್ತು ನೀನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡು ಎಂದು ಅರಿಕೆ ಮಾಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ನೀತಿಯಾಗಿ ನ್ಯಾಯತೀರಿಸುವಂಥ ಅಂತರಿಂದ್ರಿಯಗಳನ್ನೂ, ಹೃದಯವನ್ನೂ ಶೋಧಿಸುವಂಥ ಸೇನಾಧೀಶ್ವರ ಯೆಹೋವ ದೇವರೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ಏಕೆಂದರೆ ನಿನಗೆ ನನ್ನ ವ್ಯಾಜ್ಯವನ್ನು ಒಪ್ಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:20
35 ತಿಳಿವುಗಳ ಹೋಲಿಕೆ  

ಸರ್ವಶಕ್ತರಾದ ಸರ್ವೇಶ್ವರಾ, ನೀವು ಸತ್ಪುರುಷರನ್ನು ಪರಿಶೋಧಿಸುವವರು ಅಂತರಿಂದ್ರಿಯಗಳನ್ನೂ ಅಂತರಾಳವನ್ನೂ ವೀಕ್ಷಿಸುವವರು. ನನ್ನ ವ್ಯಾಜ್ಯವನ್ನು ನಿಮಗೆ ಅರಿಕೆಮಾಡಿರುವೆನು ನನ್ನ ಹಿಂಸಕರಿಗೆ ನೀವು ವಿಧಿಸುವ ಪ್ರತಿದಂಡನೆಯನ್ನು ನಾನು ನೋಡುವಂತೆ ಮಾಡಿ.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ಮಾನವರ ಹೃನ್ಮನವನರಿತಿಹ ಸತ್ಯಸ್ವರೂಪಿ ದೇವಾ, I ದುರುಳರ ಕೆಡುಕನಳಿಸಯ್ಯಾ, ಸತ್ಯವಂತರನು ನೀ ಉಳಿಸಯ್ಯಾ II


ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ನನಗಲ್ಲ, ನನ್ನ ಹಿಂಸಕರಿಗೆ ಅವಮಾನವಾಗಲಿ. ಭಯಭ್ರಾಂತಿ ನನ್ನನ್ನಲ್ಲ, ಅವರನ್ನು ಅಪಹರಿಸಲಿ. ಅವರಿಗೆ ಕೇಡುಗಾಲವನ್ನು ಬರಮಾಡಿ ಬೇರುಸಹಿತ ಅವರನ್ನು ನಾಶಪಡಿಸಿರಿ !


ಅದಕ್ಕೆ ನಾನು : “ಸರ್ವೇಶ್ವರಾ, ನೀವು ಎಲ್ಲವನ್ನು ಬಲ್ಲವರು. ನನ್ನನ್ನು ನೆನಪಿಗೆ ತಂದುಕೊಂಡು ನೆರವುನೀಡಿ. ನನಗಾಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸಿರಿ. ಅವರಿಗೆ ಹೆಚ್ಚು ತಾಳ್ಮೆತೋರಿ ನನ್ನನ್ನು ನಿರ್ಮೂಲಮಾಡಬೇಡಿ. ನಿಮ್ಮ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆ ಎಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿ.


ನನ್ನ ದೇವರೇ, ನೀವು ಹೃದಯವನ್ನು ಪರೀಕ್ಷಿಸುವವರು ಹಾಗೂ ಯಥಾರ್ಥಚಿತ್ತರನ್ನು ಮೆಚ್ಚುವವರು ಎಂಬುವುದನ್ನು ನಾನು ಬಲ್ಲೆ. ನಾನಿದನ್ನೆಲ್ಲಾ ಅರ್ಪಿಸಿರುವುದು ಶುದ್ಧಮನಸ್ಸಿನಿಂದಲೇ, ಸ್ವಂತ ಇಷ್ಟದಿಂದಲೇ. ಇಲ್ಲಿ ಕೂಡಿರುವ ನಿಮ್ಮ ಪ್ರಜೆಗಳೂ ಸ್ವಂತ ಇಷ್ಟದಿಂದಲೇ ನಿಮಗೆ ಕಾಣಿಕೆಗಳನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು.


ಕಂಚುಗಾರನಾದ ಅಲೆಗ್ಸಾಂಡರನು ನನಗೆ ಬಹಳ ಕೇಡುಮಾಡಿದ್ದಾನೆ. ಪ್ರಭು ಅವನ ಕೃತ್ಯಗಳಿಗೆ ತಕ್ಕ ಶಿಕ್ಷೆಯನ್ನು ವಿಧಿಸುವರು.


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ : ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ?


ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II


“ಕರುಣಿಸೆನ್ನನು, ಕರುಣಿಸು, ದೇವನೇ I ನನ್ನಾತ್ಮದ ಆಸರೆಯು ನೀನೇ II ನನ್ನ ಗಂಡಾಂತರವು ನೀಗುವ ಪರಿಯಂತ I ನಿನ್ನ ರೆಕ್ಕೆಗಳಡಿ ನಾನಿರುವೆ ಸುರಕ್ಷಿತ II


ನಿರ್ಣಯಿಸು ನನ್ನ ನ್ಯಾಯವನು ಓ ದೇವಾ I ವಾದಿಸು ಆ ಭಕ್ತಿಹೀನ ಜನತೆಯ ವಿರುದ್ಧ I ಬಿಡಿಸೆನ್ನನು ವಂಚಕರಿಂದ, ಅಧರ್ಮಿಗಳಿಂದ II


ಖಡ್ಗ ಗುರಾಣಿಗಳನು ಧರಿಸಿಕೊ I ನನಗೆ ರಕ್ಷಣೆಯಾಗಿ ನಿಂತುಕೊ II


ನಾನು ನೀನಾಗಿದ್ದರೆ ದೇವರಿಗೆ ಮೊರೆಯಿಡುತ್ತಿದ್ದೆ ನನ್ನ ವಿಷಯವನು ಆತನ ಕೈಗೆ ಬಿಡುತ್ತಿದ್ದೆ.


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಸರ್ವೇಶ್ವರ ನ್ಯಾಯಾಧಿಪತಿಯಾಗಿ ನಮ್ಮಿಬ್ಬರ ವ್ಯಾಜ್ಯವನ್ನು ತೀರಿಸಲಿ; ಅವರೇ ನೋಡಿ ನನ್ನ ಪರವಾಗಿ ವಾದಿಸಿ ನನ್ನನ್ನು ನಿಮ್ಮ ಕೈಯಿಂದ ತಪ್ಪಿಸಲಿ,” ಎಂದು ಹೇಳಿದನು.


ಹೇ ಪ್ರಭು, ಜಗದ ಜನಾಂಗಕೆ ನ್ಯಾಯ ದೊರಕಿಸುವವನು ನೀನು I ನನಗೂ ನ್ಯಾಯ ದೊರಕಿಸು : ನಿರಪರಾಧಿ, ನೀತಿವಂತ ನಾನು II


ನಲಿವರು ಸಜ್ಜನರು ಈ ಪ್ರತೀಕಾರ ನೋಟದಲಿ I ಕಾಲುತೊಳೆಯುವರವರು ಆ ದುರ್ಜನರ ನೆತ್ತರಲಿ II


ತಿಳಿದುಕೋ ದೇವಾ, ನನ್ನ ಹೃದಯವನು ಪರೀಕ್ಷಿಸಿ I ಅರಿತುಕೋ ನನ್ನ ಆಲೋಚನೆಗಳನು ಪರಿಶೋಧಿಸಿ II


ಸರ್ವೇಶ್ವರಾ, ನನ್ನ ಪರಿಚಯ ನಿಮಗಿದೆ ನಿಮ್ಮ ನೋಟ ನನ್ನ ಮೇಲಿದೆ. ನನ್ನ ಹೃದಯ ನಿಮ್ಮೊಂದಿಗಿದೆ, ಇದರ ಪರೀಕ್ಷೆ ನಿಮ್ಮಿಂದಾಗಿದೆ. ಅವರನ್ನೋ, ಕುರಿಗಳೋ ಎಂಬಂತೆ ಕೊಲೆಗೆ ಕರೆದೊಯ್ಯಿರಿ ವಧ್ಯದಿವಸದವರೆಗೂ ಅವರನ್ನು ವಿಂಗಡಿಸಿಡಿ.


ಆಗ ಸರ್ವೇಶ್ವರನ ಆತ್ಮ ನನ್ನಲ್ಲಿ ಆವೇಶ ಉಂಟುಮಾಡಿತು. ಹೀಗೆ ಸಾರಬೇಕೆಂದು ಅಪ್ಪಣೆ ಆಯಿತು: ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲ್ ವಂಶದವರೇ, ನೀವು ಹೀಗೆ ಮಾತಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.


ಹಿಜ್ಕೀಯನು, ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ, ದೇವಾಲಯಕ್ಕೆ ಹೋಗಿ ಅದನ್ನು ಸರ್ವೇಶ್ವರ ಸ್ವಾಮಿಯ ಮುಂದೆ ತೆರೆದಿಟ್ಟು, ಹೀಗೆಂದು ಪ್ರಾರ್ಥನೆ ಮಾಡಿದನು:


ನನಗೆ ರಕ್ಷೆ ನೀಡುವ ಗುರಾಣಿ, ದೇವನೇ I ನೇರಮನಸ್ಕರಿಗೆ ಸಂರಕ್ಷಣೆ ಆತನೆ II


“ಸ್ವಾಮೀ, ನೀನೇ ನನ್ನ ಪರವಾಗಿ ವಾದಿಸಿದೆ ನನ್ನ ಪ್ರಾಣವನ್ನು ಉಳಿಸಿದೆ.


ಸರ್ವೇಶ್ವರಾ, ನಿನಗೆ ತಿಳಿದಿದೆ ನನಗಾದ ಅನ್ಯಾಯ ದೊರಕುವಂತೆ ಮಾಡು ನನಗೆ ನ್ಯಾಯ.


“ಹೇ, ಸರ್ವೇಶ್ವರಾ, ಅವರ ದುಷ್ಕೃತ್ಯಗಳಿಗೆ ತಕ್ಕ ಪ್ರತೀಕಾರ ನೀಡು ಅವರಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು