Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:7 - ಕನ್ನಡ ಸತ್ಯವೇದವು C.L. Bible (BSI)

7 ನಿಮ್ಮ ಪೂರ್ವಜರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ ನನ್ನ ಮಾತನ್ನು ಕೇಳಿರೆಂದು ತಡಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ, ನನ್ನ ಮಾತನ್ನು ಕೇಳಿರಿ ಎಂದು ತಡ ಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದಾರಭ್ಯ ಇಂದಿನವರೆಗೂ ನಾನು ಅವರಿಗೆ - ನನ್ನ ಮಾತನ್ನು ಕೇಳಿರಿ ಎಂದು ಸಾವಕಾಶಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದಾಗ ಅವರಿಗೆ ಒಂದು ಮುನ್ನೆಚ್ಚರಿಕೆಯನ್ನು ಕೊಟ್ಟೆನು. ಇಂದಿನವರೆಗೂ ನಾನು ಮತ್ತೆಮತ್ತೆ ಅವರಿಗೆ ಮುನ್ನೆಚ್ಚರಿಕೆಯನ್ನು ಕೊಟ್ಟೆ. ನನ್ನ ಆಜ್ಞಾಪಾಲನೆ ಮಾಡಬೇಕೆಂದು ಅವರಿಗೆ ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ನಾನು ನಿಮ್ಮ ತಂದೆಗಳಿಗೆ, “ನನ್ನ ಮಾತನ್ನು ಕೇಳಿ,” ಎಂದು ಖಂಡಿತವಾಗಿ ಹೇಳಿದೆನು. ಅವರನ್ನು ಈಜಿಪ್ಟ್ ದೇಶದೊಳಗಿಂದ ಮೇಲೆ ಬರಮಾಡಿದ ದಿವಸ ಮೊದಲುಗೊಂಡು ಇಂದಿನವರೆಗೂ ಆಜ್ಞಾಪಿಸುತ್ತಾ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:7
29 ತಿಳಿವುಗಳ ಹೋಲಿಕೆ  

ಅವರ ಪಿತೃಗಳ ದೇವರಾದ ಸರ್ವೇಶ್ವರ ತಮ್ಮ ಪ್ರಜೆಯನ್ನೂ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ, ತಮ್ಮ ದೂತರ ಮುಖಾಂತರ ಅವರನ್ನು ಎಚ್ಚರಿಸುತ್ತಾ ಬಂದರು.


ಪ್ರಭುವಿನ ಹೆಸರಿನಲ್ಲಿ ನಾನು ನಿಮಗೆ ಒತ್ತಿ ಹೇಳುತ್ತೇನೆ: ಇನ್ನು ಮುಂದೆ ನೀವು ಅನ್ಯಜನರಂತೆ ಜೀವಿಸುವುದನ್ನು ತ್ಯಜಿಸಿರಿ. ಅವರ ಆಲೋಚನೆಗಳು ಹುರುಳಿಲ್ಲದವು.


ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟು ಘನವಾದುದೆಂಬುದನ್ನು ಅವರಿಗೆ ತಿಳಿಸಿ ಎಚ್ಚರಿಸದೆ ಇರಬೇಡ,” ಎಂದು ಹೇಳಿದರು.


ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.


ಇಂಥವರು ತಮ್ಮ ಜೀವನೋಪಾಯಕ್ಕಾಗಿ ತಾವೇ ದುಡಿದು ಸಂಪಾದಿಸಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ಎಚ್ಚರಿಸಿ ಆಜ್ಞಾಪಿಸುತ್ತೇವೆ.


ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಾ ಬಂದೆ. ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ಸುಖವಾಸಿಗಳಾಗಿರುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ. ಆದರೆ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಸರ್ವೇಶ್ವರ ತಮ್ಮ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಿದ್ದರು. ಆದರೂ ನೀವು ಗಮನಿಸಲಿಲ್ಲ; ಕಿವಿಗೊಡಲೂ ಇಲ್ಲ.


ನಾನು ತಡಮಾಡದೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಓಗೊಡದೆ, ಈ ಕೃತ್ಯಗಳನ್ನೆಲ್ಲ ಮಾಡಿದ್ದೀರಿ.


ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾತಿಗೆ ವಿಧೇಯರಾಗಿರಿ; ಅವರನ್ನು ಹೊಂದಿಕೊಂಡೇ ಇರಿ. ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಕೊಟ್ಟ ನಾಡಿನಲ್ಲಿ ನೀವು ಬದುಕಿ ಬಾಳುವುದಕ್ಕೂ ಬಹುಕಾಲ ಇರುವುದಕ್ಕೂ ಅವರೇ ಆಧಾರ.”


ಅವರ ಆಜ್ಞೆಗಳನ್ನು ಅನುಸರಿಸುತ್ತಾ ಅವರು ಹೇಳಿದ ಮಾರ್ಗದಲ್ಲೇ ನಡೆದು ಅವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು.


ನೀವು ಹಾಗು ನಿಮ್ಮ ಪುತ್ರಪೌತ್ರಾದಿ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಈಗ ಬೋಧಿಸುವ ಅವರ ವಿಧಿನಿರ್ಣಯಗಳನ್ನೆಲ್ಲಾ ಅನುಸರಿಸಬೇಕು; ಆಗ ನೀವು ದೀರ್ಘಕಾಲ ಬಾಳುವಿರಿ. ಅದಕ್ಕಾಗಿಯೇ ಇವುಗಳನ್ನು ಆಜ್ಞಾಪಿಸಿದ್ದಾರೆ.


ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಸದಾ ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು; ಆಗ ಅವರಿಗೂ ಅವರ ಸಂತತಿಗೂ ಯಾವಾಗಲೂ ಶುಭವುಂಟಾಗುವುದು.


ಇವುಗಳನ್ನು ಕೈಗೊಂಡು ಅನುಸರಿಸಿರಿ. ಅನುಸರಿಸಿದ್ದೇ ಆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು; ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, ‘ಈ ದೊಡ್ಡ ಜನಾಂಗ ಎಂಥಾ ಜ್ಞಾನವಿವೇಕವುಳ್ಳ ಜನಾಂಗ’, ಎಂದು ಮಾತಾಡಿಕೊಳ್ಳುವರು.


“ಆಮೋನನ ಮಗನೂ ಜುದೇಯದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೇ ವರ್ಷದಿಂದ ಈ ದಿನದವರೆಗೆ, ಅಂದರೆ ಕಳೆದ ಇಪ್ಪತ್ತು ಮೂರು ವರ್ಷಗಳಿಂದ ಸರ್ವೇಶ್ವರ ಸ್ವಾಮಿ ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.


ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು.


‘ರೇಕಾಬನ ಮಗ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇ ಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.


ನಿಮ್ಮ ಪಿತೃಗಳಂತೆ ಆಗಬೇಡಿ. ಅವರಿಗೆ ಪೂರ್ವಕಾಲದ ಪ್ರವಾದಿಗಳು, ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನಿಮ್ಮ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ಬಿಟ್ಟು ಹಿಂದಿರುಗಿ’ ಎಂದು ಸಾರಿದರು. ಆದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ.


ದರ್ಶಿನಿಗಳೆನಿಸಿಕೊಂಡ ತಮ್ಮ ಪ್ರವಾದಿಗಳ ಮುಖಾಂತರ ಇಸ್ರಯೇಲ ಯೆಹೂದ್ಯರಿಗೆ, “ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೂ ನನ್ನ ದಾಸರಾದ ಪ್ರವಾದಿಗಳ ಮುಖಾಂತರ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾವಿಧಿನಿಯಮಗಳನ್ನು ಕೈಕೊಂಡು ನಡೆಯಿರಿ,” ಎಂದು ಖಂಡಿತವಾಗಿ ಹೇಳಿದರು.


ಅವರು ಈ ನಾಡನ್ನು ಸೇರಿದರು, ಅದನ್ನು ಅನುಭವಿಸಿದರು. ಆದರೆ ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ಧರ್ಮಶಾಸ್ತ್ರದ ಅನುಸಾರ ನಡೆಯಲಿಲ್ಲ. ನೀವು ಆಜ್ಞಾಪಿಸಿದವುಗಳಲ್ಲಿ ಒಂದನ್ನೂ ಮಾಡಲಿಲ್ಲ. ಆದಕಾರಣ ನೀವು ಈ ಕೇಡನ್ನೆಲ್ಲ ಅವರ ಮೇಲೆ ಬರಮಾಡಿದ್ದೀರಿ.


ಒಬ್ಬ ಹಿಬ್ರಿಯನು ತನ್ನನ್ನೇ ನಿಮಗೆ ಮಾರಿಕೊಂಡು ಆರು ವರ್ಷ ನಿಮ್ಮ ಜೀತಗಾರನಾಗಿದ್ದರೆ ಅಂಥ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಿ ಎಂದು ವಿಧಿಸಿದ್ದೆ. ಆದರೆ ನಿಮ್ಮ ಪೂರ್ವಜರು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಇಸ್ರಯೇಲಿನವರೇ, ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಆಲಿಸಿರಿ: “ಈ ದೇಶದಲ್ಲಿ ಸತ್ಯ, ಪ್ರೀತಿ, ಭಕ್ತಿ ಎಂಬುದೇ ಇಲ್ಲ. ಇಲ್ಲಿನ ನಿವಾಸಿಗಳ ಮೇಲೆ ಸರ್ವೇಶ್ವರ ಆಪಾದನೆ ಹೊರಿಸಿದ್ದಾರೆ.


“ಯಾಜಕರೇ, ಕೇಳಿ: ಇಸ್ರಯೇಲ್ ಮನೆತನದವರೇ, ಗಮನಿಸಿ. ರಾಜವಂಶದವರೇ ಕಿವಿಗೊಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು