Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:8 - ಕನ್ನಡ ಸತ್ಯವೇದವು C.L. Bible (BSI)

8 ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನು ತನ್ನ ದುಷ್ಟ ಹೃದಯದ ನಿಮಿತ್ತ ಹಟಮಾರಿಯಂತೆ ನಡೆದುಕೊಂಡನು. ಆದಕಾರಣ, ಕೈಗೊಳ್ಳಬೇಕೆಂದು ನಾನು ಆಜ್ಞಾಪಿಸಿದ್ದರೂ ಅವರು ಕೈಗೊಳ್ಳದೆಹೋದ ಆ ಒಡಂಬಡಿಕೆಯಲ್ಲೆ ಸೂಚಿಸಲಾಗಿರುವ ಶಾಪಗಳನ್ನೆಲ್ಲ ಅವರ ಮೇಲೆ ಬರಮಾಡಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಗೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಕೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ದುಷ್ಟಹೃದಯ ಹೇಳಿದಂತೆ ಮಾಡಿದರು. ಆಜ್ಞಾಪಾಲನೆ ಮಾಡದಿದ್ದರೆ ಅವರಿಗೆ ಕೆಡುಕಾಗುವದೆಂದು ಒಡಂಬಡಿಕೆಯಲ್ಲಿ ಹೇಳಲಾಗಿದೆ. ಅದಕ್ಕಾಗಿ ನಾನು ಅವರಿಗೆ ಕೇಡುಂಟಾಗುವಂತೆ ಮಾಡಿದೆ, ಒಡಂಬಡಿಕೆಯನ್ನು ಪಾಲಿಸಬೇಕೆಂದು ನಾನು ಅವರಿಗೆ ಆಜ್ಞಾಪಿಸಿದೆ ಆದರೆ ಅವರು ಪಾಲಿಸಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡೆದುಕೊಂಡರು. ಆದ್ದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:8
31 ತಿಳಿವುಗಳ ಹೋಲಿಕೆ  

ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಸ್ವಂತ ಆಲೋಚನೆಗಳನ್ನು ಅನುಸರಿಸಿದರು. ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆದುಕೊಂಡರು. ಮುಂದೆ ಸಾಗದೆ ಹಿಂದಿರುಗಿಯೇ ಹೋದರು.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ. ನನ್ನ ಆಜ್ಞೆಗೆ ಮಣಿಯಲಿಲ್ಲ. ತಮ್ಮ ಪೂರ್ವಜರಿಗಿಂತಲೂ ಕೆಟ್ಟವರಾಗಿ ನಡೆದುಕೊಂಡರು.”


ಅವರಾದರೋ ನನ್ನ ಮಾತನ್ನು ಲೆಕ್ಕಿಸದೆ ನನ್ನ ವಿರುದ್ಧ ದಂಗೆಯೆದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನ್ನು ತ್ಯಜಿಸಲಿಲ್ಲ. ಆಗ ನಾನು ಈಜಿಪ್ಟ್ ದೇಶದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಎಂದುಕೊಂಡೆ.


ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಾ ಬಂದೆ. ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ಸುಖವಾಸಿಗಳಾಗಿರುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ. ಆದರೆ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಆ ಕಾಲ ಬಂದಾಗ ಜೆರುಸಲೇಮನ್ನೇ ‘ಸರ್ವೇಶ್ವರನ ಸಿಂಹಾಸನ’ ಎಂದು ಕರೆಯುವರು. ನನ್ನ ನಾಮಮಹತ್ವದ ಸ್ಥಾನವಾದ ಜೆರುಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದುಬರುವರು. ಆಮೇಲೆ ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು.


“ನಿಮ್ಮ ಪೂರ್ವಜರು ಕಿವಿಗೊಡದೆಹೋದರು: ಹಟಮಾರಿಗಳಾದರು; ಮಂದಮತಿಗಳಾದರು; ಅವರ ಹೃದಯ ಗೋರ್ಕಲ್ಲಿನಂತೆ ಆಯಿತು.


ನಾವು, ನಮ್ಮ ಪೂರ್ವಜರು, ನಮ್ಮ ಅರಸರು, ಅಧಿಕಾರಿಗಳು ಜುದೇಯದ ಊರುಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದಂತೆ ಗಗನದೊಡತಿಯಾದ ದೇವತೆಗೆ ಧೂಪಾರತಿ ಎತ್ತುತ್ತೇವೆ. ಪಾನನೈವೇದ್ಯವನ್ನು ಸುರಿಯುತ್ತೇವೆ. ನಾವು ಬಾಯಿಬಿಟ್ಟು ಹೇಳಿದ ಈ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುತ್ತೇವೆ. ಏಕೆಂದರೆ ಹಾಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬ ಉಂಡು ಸುಖಪಡುತ್ತಿದ್ದೆವು.


‘ಧರ್ಮೋಪದೇಶಕೆ ಮರಳಿ ಮನವೊಲಿದು ಬನ್ನಿ’ ಎಂದು ನೀವೆಷ್ಟೋ ಸಾರಿ ಅವರನ್ನೆಚ್ಚರಿಸಿದಿರಿ ಖಚಿತವಾಗಿ ಆದರೂ ಆಲಿಸಲಿಲ್ಲಾ ಗರ್ವಿಗಳು, ಅವಿಧೇಯರು, ಪಾಪಿಗಳು. ಜೀವಾಧಾರವಾದ ನಿಮ್ಮಾ ವಿಧಿನಿಯಮಗಳನು ಮೀರಿದರು ಮೊಂಡುಬಿದ್ದು ನಿಮ್ಮ ನೊಗಕೆ ಕೊರಳೊಡ್ಡದೆ ಹೋದರು.


ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.


ಈ ದುಷ್ಟಜನರು ನನ್ನ ಮಾತುಗಳನ್ನು ಕೇಳಲೊಲ್ಲರು. ತಮ್ಮ ಹೃದಯದ ಒರಟುತನದಂತೆ ನಡೆದುಬರುತ್ತಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸಿ, ಪೂಜಿಸುತ್ತಿದ್ದಾರೆ. ಇವರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು.


ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು.


ಅವರು ಈ ನಾಡನ್ನು ಸೇರಿದರು, ಅದನ್ನು ಅನುಭವಿಸಿದರು. ಆದರೆ ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ಧರ್ಮಶಾಸ್ತ್ರದ ಅನುಸಾರ ನಡೆಯಲಿಲ್ಲ. ನೀವು ಆಜ್ಞಾಪಿಸಿದವುಗಳಲ್ಲಿ ಒಂದನ್ನೂ ಮಾಡಲಿಲ್ಲ. ಆದಕಾರಣ ನೀವು ಈ ಕೇಡನ್ನೆಲ್ಲ ಅವರ ಮೇಲೆ ಬರಮಾಡಿದ್ದೀರಿ.


ಇದನ್ನು ಕೇಳಿದ ಯೆರೆಮೀಯನು, “ಇಲ್ಲ, ತಮ್ಮನ್ನು ಅವರ ಕೈಗೆ ಒಪ್ಪಿಸುವುದಿಲ್ಲ. ದಯವಿಟ್ಟು ನಾನು ತಮಗೆ ಹೇಳಿರುವ ಸರ್ವೇಶ್ವರನ ವಾಕ್ಯದಂತೆ ನಡೆದುಕೊಳ್ಳಿ. ನಡೆದುಕೊಂಡರೆ ತಮ್ಮ ಪ್ರಾಣ ಉಳಿಯುವುದು, ಒಳ್ಳೆಯದಾಗುವುದು.


ಆದರೂ ಅವರು ಕಿವಿಗೊಟ್ಟು ಕೇಳಲಿಲ್ಲ. ಅನ್ಯದೇವತೆಗಳಿಗೆ ಧೂಪಾರತಿ ಎತ್ತುವುದನ್ನು ನಿಲ್ಲಿಸಲಿಲ್ಲ. ತಮ್ಮ ದುರಾಚಾರವನ್ನು ಕೈಬಿಡಲಿಲ್ಲ.


“ಸರ್ವೇಶ್ವರನ ಹೆಸರಿನಲ್ಲಿ ನೀನು ನಮಗೆ ನುಡಿದ ಮಾತನ್ನು ನಾವು ಕೇಳಲೊಲ್ಲೆವು.


ನಿಮ್ಮ ಪಿತೃಗಳಂತೆ ಆಗಬೇಡಿ. ಅವರಿಗೆ ಪೂರ್ವಕಾಲದ ಪ್ರವಾದಿಗಳು, ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನಿಮ್ಮ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ಬಿಟ್ಟು ಹಿಂದಿರುಗಿ’ ಎಂದು ಸಾರಿದರು. ಆದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ.


ನಾನು ತಡಮಾಡದೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಓಗೊಡದೆ, ಈ ಕೃತ್ಯಗಳನ್ನೆಲ್ಲ ಮಾಡಿದ್ದೀರಿ.


ಒಬ್ಬ ಹಿಬ್ರಿಯನು ತನ್ನನ್ನೇ ನಿಮಗೆ ಮಾರಿಕೊಂಡು ಆರು ವರ್ಷ ನಿಮ್ಮ ಜೀತಗಾರನಾಗಿದ್ದರೆ ಅಂಥ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಿ ಎಂದು ವಿಧಿಸಿದ್ದೆ. ಆದರೆ ನಿಮ್ಮ ಪೂರ್ವಜರು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಆದ್ದರಿಂದ ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ಯೆಹೂದ್ಯರಿಗೂ ಜೆರುಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ’.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು