Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ : ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನೀನು ಧರ್ಮಸ್ವರೂಪನಾಗಿರುವದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು, ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆಗೆ ಏಕೆ ಸುಫಲವಾಗುತ್ತದೆ? ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನಾನು ನಿನ್ನ ಜೊತೆ ವಾದ ಮಾಡಿದರೆ, ನೀನು ಯಾವಾಗಲೂ ನ್ಯಾಯಪರನೆಂಬುದು ರುಜುವಾತಾಗುತ್ತದೆ. ಆದರೂ ನ್ಯಾಯಪೂರ್ಣವಲ್ಲದ ಕೆಲವು ವಿಷಯಗಳ ಬಗ್ಗೆ ನಾನು ನಿನ್ನನ್ನು ಕೇಳಬಯಸುತ್ತೇನೆ. ದುಷ್ಟರು ಏಕೆ ಅಭಿವೃದ್ಧಿ ಹೊಂದುತ್ತಾರೆ? ನಿನ್ನ ವಿಶ್ವಾಸಕ್ಕೆ ಪಾತ್ರರಾಗದವರು ನೆಮ್ಮದಿಯ ಜೀವನ ನಡೆಸಲು ಹೇಗೆ ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಓ ಯೆಹೋವ ದೇವರೇ, ನಾನು ನಿಮ್ಮ ಸಂಗಡ ವಾದಿಸುವಾಗ, ನೀವು ನೀತಿವಂತರೇ ಆಗಿದ್ದೀರಿ. ಆದರೂ ನಾನು ನಿಮ್ಮ ಸಂಗಡ ನ್ಯಾಯವಾದವುಗಳನ್ನು ಕುರಿತು ಮಾತನಾಡುವೆನು. ದುಷ್ಟರ ಮಾರ್ಗವು ಸಮೃದ್ಧಿಯಾಗುವುದು ಏಕೆ? ಮಹಾ ವಂಚನೆ ಮಾಡುವವರೆಲ್ಲರು ಸುಖವಾಗಿರುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:1
44 ತಿಳಿವುಗಳ ಹೋಲಿಕೆ  

ಅಹಂಕಾರಿಗಳೇ ಭಾಗ್ಯವಂತರು; ದುಷ್ಕರ್ಮಿಗಳು ಚೆನ್ನಾಗಿ ಅಭಿವೃದ್ಧಿಯಾಗುತ್ತಿದ್ದಾರೆ, ಅಷ್ಟೇ ಅಲ್ಲ, ದೇವರನ್ನೇ ಪರೀಕ್ಷೆಗೆ ಗುರಿಪಡಿಸಿ ಸುರಕ್ಷಿತವಾಗಿದ್ದಾರೆ,” ಎಂದು ನೀವು ಹೇಳಿದ್ದೀರಿ.


ದುರುಳರು ಚಿಗುರಬಹುದು ಹುಲ್ಲಿನಂತೆ I ಕೆಡುಕರು ಅರಳಬಹುದು ಹೂವಿನಂತೆ I ಅವರ ಅಳಿವಂತೂ ಕಟ್ಟಿಟ್ಟ ಬುತ್ತಿಯಂತೆ II


ಕೇಡು ಮಾಡುವವರ ನೋಡಿ ಸಿಡಿಮಿಡಿಯಾಗಬೇಡ I ದುರಾಚಾರಿಗಳ ಕಂಡು ಮಚ್ಚರಗೊಳ್ಳಬೇಡ II


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಾವೋ ಲಜ್ಜೆಗೆಟ್ಟವರು. ಹೌದು, ಯೆಹೂದ್ಯರು ಹಾಗು ಜೆರುಸಲೇಮಿನ ನಿವಾಸಿಗಳು ಈಗಾಗಲೆ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ತಳ್ಳಲ್ಪಟ್ಟಿದ್ದಾರೆ. ದೂರದ ದೇಶಗಳಿಗೂ ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಎಲ್ಲ ಇಸ್ರಯೇಲರು ನಾಚಿಕೆಗೆ ಈಡಾಗಿದ್ದಾರೆ.


ಸಮೃದ್ಧಿಯಾಗಿವೆ ಕಳ್ಳಕಾಕರ ಗುಡಾರಗಳು ಸುರಕ್ಷಿತವಾಗಿರುವರು ದೇವರನ್ನೆ ಕೆರಳಿಸುವವರು ಅಂಗೈಯಲ್ಲಿರುವುದೇ ಅವರಿಗೆ ದೇವರು!


ಜಡವಾಗಿಹೋಗಿದೆ ಧರ್ಮಶಾಸ್ತ್ರ; ಸ್ತಬ್ಧವಾಗಿದೆ ನ್ಯಾಯನೀತಿಯ ಚಕ್ರ. ಸಜ್ಜನರಿಗಿಂತ ದುರ್ಜನರ ಕೈ ಮೇಲಾಗಿದೆ; ಎಂದೇ ನ್ಯಾಯನೀತಿ ತಲೆಕೆಳಗಾಗಿದೆ.


ಹೌದು ದೇವಾ, ನಿನಗೆ ದ್ರೋಹವೆಸಗಿದೆ I ನಿನ್ನ ಕಣ್ಗೆ ಕೆಟ್ಟದುದನೆ ಮಾಡಿದೆ II ನಿನ್ನ ನಿರ್ಣಯವು ನ್ಯಾಯಯುತ I ನೀ ನೀಡುವ ತೀರ್ಪು ನಿರ್ಲಿಪ್ತ II


ದುರುಳನೋರ್ವ ಮಹಾಗರ್ವದಿಂದ ಬಾಳುತ್ತಿದ್ದ I ಹುಲುಸಾಗಿ ಬೆಳೆದ ದೇವದಾರು ಮರದಂತಿದ್ದ II


ಆದರೆ ಅದರ ಮಧ್ಯೆಯಿರುವ ಸರ್ವೇಶ್ವರ ನ್ಯಾಯಸ್ವರೂಪಿ, ಎಂದಿಗೂ ಅನ್ಯಾಯ ಮಾಡುವುದಿಲ್ಲ. ದಿನದಿನವೂ ತಪ್ಪದೆ ನ್ಯಾಯ ದೊರಕಿಸುತ್ತಾರೆ. ಅವರಿಗೆ ಗುಟ್ಟಾಗಿರುವುದು ಯಾವುದೂ ಇಲ್ಲ. ಅನ್ಯಾಯಮಾಡುವವನಿಗಾದರೋ ನಾಚಿಕೆ ಎಂಬುದೇ ಇಲ್ಲ.


ಆಗ ನಾನು, “ಸೇನಾಧೀಶ್ವರರಾದ ಸರ್ವೇಶ್ವರಾ, ನೀವು ಹೃನ್ಮನಗಳನ್ನು ಪರೀಕ್ಷಿಸಿ ನ್ಯಾಯವಾದ ತೀರ್ಪನ್ನು ನೀಡುವವರು. ನೀವು ಅವರಿಗೆ ಮಾಡುವ ಪ್ರತೀಕಾರವನ್ನು ನಾನು ಕಾಣುವೆನು. ನನ್ನ ವ್ಯಾಜ್ಯವನ್ನು ನಿಮ್ಮ ಕೈಗೊಪ್ಪಿಸಿದ್ದೇನೆ,” ಎಂದೆನು.


ನಿನ್ನ ಸೋದರರೇ, ನಿನ್ನ ತೌರುಮನೆಯವರೇ ನಿನಗೆ ದ್ರೋಹವೆಸಗಿದ್ದಾರೆ. ಇವರೇ ನಿನ್ನ ಬೆನ್ನಟ್ಟಿಬಂದು ಧಿಕ್ಕಾರ ಕೂಗಿದ್ದಾರೆ. ಇಂತಿರಲು ಇವರು ಸವಿನುಡಿದರೂ ನಂಬಲೆಬೇಡ.”


ಇಸ್ರಯೇಲ್ ವಂಶದವರೂ ಜುದೇಯ ವಂಶದವರೂ ನನಗೆ ಬಹಳವಾಗಿ ದ್ರೋಹವೆಸಗಿದ್ದಾರೆ. ಇದು ಸರ್ವೇಶ್ವರನಾದ ನನ್ನ ನುಡಿ.”


ಸರ್ವಶಕ್ತನೊಡನೆ ಮಾತಾಡಲು ನನಗಿದೆ ಆಸೆ ದೇವರೊಂದಿಗೆ ವಾದಿಸಲು ನನಗಿದೆ ಅಪೇಕ್ಷೆ.


ಸರ್ವೇಶ್ವರಾ, ಇಸ್ರಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀವು ಧರ್ಮಸ್ವರೂಪರೆಂದು ಸ್ಪಷ್ಟವಾಯಿತು. ನಾವಾದರೋ ನಿಮ್ಮ ದೃಷ್ಟಿಯಲ್ಲಿ ಅಪರಾಧಿಗಳು, ಈ ನಮ್ಮ ದುಷ್ಕೃತ್ಯದ ಸಲುವಾಗಿ ನಿಮ್ಮೆದುರಿನಲ್ಲಿ ನಿಲ್ಲಲಾರೆವು.”


“ಆದಾಮನಂತೆ ಅವರು ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ. ಅವನಂತೆ ಅವರು ನನಗೆ ದ್ರೋಹವೆಸಗಿದ್ದಾರೆ.


ಹೌದು, ಹೌದು ನೀ ಕೇಳಿಲ್ಲ, ತಿಳಿದೂ ಇಲ್ಲ ಅದಿಯಿಂದ ನಿನ್ನ ಕಿವಿ ತೆರೆದೂ ಇಲ್ಲ ನೀನು ಆಗರ್ಭ ದ್ರೋಹಿ, ಮಹಾ ಕುಟಿಲ ಎಂಬುದು ನನಗೆ ತಿಳಿದು ಇದೆಯಲ್ಲ !


ಯಕೋಬ್ಯರ ಅರಸನಾದ ಸರ್ವೇಶ್ವರ ಇಂತೆನ್ನುತ್ತಾರೆ : “ನಾಡದೇವತೆಗಳೇ, ಹೊರಗೆ ಬರಲಿ ನಿಮ್ಮ ವ್ಯಾಜ್ಯ ಸಾಬೀತಾಗಲಿ ನಿಮ್ಮ ನ್ಯಾಯ.


ಮೂಢರು ತಮ್ಮ ಉದಾಸೀನತೆಯಿಂದಲೆ ಹತರಾಗುವರು. ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೆ ನಾಶವಾಗುವರು.


ಎಲ್ಲ ಜೀವಿಗಳಿಗೆ ನೀ ಕೈ ನೀಡುವವನು I ಎಲ್ಲರ ಕೋರಿಕೆಗಳನು ಈಡೇರಿಸುವವನು II


ಹೇ ಪ್ರಭೂ, ನೀನು ಸತ್ಯವಂತ I ನಿನ್ನ ವಿಧಿಯು ನ್ಯಾಯಸಮ್ಮತ II


ನಾ ಬಲ್ಲೆ ಪ್ರಭು, ನಿನ್ನ ವಿಧಿಗಳು ನೀತಿಯುತವೆಂದು I ಕಷ್ಟಕೆ ನನ್ನನು ಗುರಿಪಡಿಸಿರುವುದು ಉಚಿತವೆಂದು II


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ನಮ್ಮ ಮೇಲೆ ನೀವೆಷ್ಟೇ ಕೇಡನು ಬರಮಾಡಿದರೂ ನೀವು ನ್ಯಾಯವಂತರು, ಸತ್ಯಸ್ವರೂಪಿ, ನಾವೋ ದುಷ್ಟರು!


ಪ್ರಭು ಕೃಪಾಳು, ನ್ಯಾಯಪ್ರಿಯನು I ಕರುಣಾಮಯನು, ನಮ್ಮ ದೇವನು II


ಲೋಕದಲ್ಲಿ ನಡೆಯುವ ನಿರರ್ಥಕ ಕಾರ್ಯ ಒಂದುಂಟು; ದುರ್ಜನರ ನಡತೆಗೆ ಆಗಬೇಕಾದ ತಕ್ಕ ಶಿಕ್ಷೆ ಸಜ್ಜನರಿಗೆ ಆಗುತ್ತದೆ. ಸಜ್ಜನರಿಗೆ ಸಿಗಬೇಕಾದ ಸಂಭಾವನೆ ದುರ್ಜನರಿಗೆ ಸಿಗುತ್ತದೆ. ಇದು ನಿರರ್ಥಕವೆಂದೇ ಹೇಳುತ್ತೇನೆ.


ಅವಳು ಇಂಥವುಗಳನ್ನೆಲ್ಲ ಮಾಡಿದ ಮೇಲೆ ನನ್ನ ಬಳಿಗೆ ಮರಳಿ ಬಂದೇ ಬರುವಳು ಎಂದುಕೊಂಡಿದ್ದೆ. ಆದರೆ ಬರಲಿಲ್ಲ. ಆಗ ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ಇದನ್ನು ನೋಡಿದಳು.


“ಆದರೆ ಓ ಇಸ್ರಯೇಲ್ ವಂಶಜರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹಮಾಡಿರುವುದು ನಿಶ್ಚಯ. ಇದು ಸರ್ವೇಶ್ವರನಾದ ನನ್ನ ನುಡಿ.”


ಅಕಟಾ, ದಾರಿಗರು ತಂಗುವ ಗುಡಿಸಲೊಂದು ಕಾಡಿನಲ್ಲಿ ಸಿಗಬಾರದೆ ! ಆಗ ಜನರನ್ನು ತ್ಯಜಿಸಿಬಿಟ್ಟು ನಾನಲ್ಲಿಗೆ ತೆರಳುತ್ತಿದ್ದೆ ! ಅವರೆಲ್ಲರು ವ್ಯಭಿಚಾರಿಗಳು, ದ್ರೋಹಿಗಳ ಗುಂಪೇ ಅಲ್ಲವೆ?


ಕ್ರಯಪತ್ರವನ್ನು ನೇರೀಯನ ಮಗ ಬಾರೂಕನ ಕೈಗೆ ಕೊಟ್ಟಮೇಲೆ ನಾನು ಸ್ವಾಮಿಗೆ ಹೀಗೆ ಪ್ರಾರ್ಥನೆಮಾಡಿದೆ:


“ಸರ್ವೇಶ್ವರನು ನ್ಯಾಯಸ್ವರೂಪಿ, ನಾನಾದರೊ ಆತನ ಆಜ್ಞೆ ಮೀರಿದ ದ್ರೋಹಿ. ಜನಾಂಗಗಳೇ, ನೀವೆಲ್ಲರು ಕಿವಿಗೊಡಿ, ನನ್ನ ಸಂಕಟ ನೋಡಿ ! ನನ್ನ ಯುವಕ ಯುವತಿಯರು, ಇಗೋ, ಸೆರೆಹೋಗಿರುವರು ನೋಡಿ.


“ಆದರೆ ನೀವು, ‘ಸರ್ವೇಶ್ವರನ ಕ್ರಮ ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೆ? ನಿಮ್ಮ ಕ್ರಮವೇ ಸರಿಯಲ್ಲವಷ್ಟೆ.


ಕಲ್ಲುಕುಪ್ಪೆಯ ಮೇಲೂ ಬೇರುಗಳನ್ನು ಹೆಣೆದುಕೊಳ್ವನು ಕಲ್ಲಿನ ಸಂದಿಗೊಂದಿಗಳ ನಡುವೆ ನುಗ್ಗಬಲ್ಲನು ಅವನು;


ನಗರಗಳಲ್ಲಿ ನರಳುವವರಿದ್ದಾರೆ ಗಾಯಗೊಂಡವರು ಮೊರೆಯಿಡುತ್ತಾರೆ ಆದರೆ ದೇವರು ಕಿವಿಗೊಡದಿದ್ದಾನೆ.


ಅವರು ಆಧರಿಸಿ ನಿಂತಿರುವುದು ದೇವರಿತ್ತ ಅಭಯದ ನಿಮಿತ್ತ ಆತನ ಕಟಾಕ್ಷ ಅವರ ಮಾರ್ಗದತ್ತ.


ಅಂತರಂಗ ಶುದ್ಧಿಯನು ನೀ ಬಯಸುತಿ I ಅಂತರ್ಯ ಜ್ಞಾನವನು ಉದಯಗೊಳಿಸುತಿ II


ಆದಕಾರಣ ಸರ್ವೇಶ್ವರ ಈ ಕೇಡನ್ನು ಸಕಾಲಕ್ಕೆ ನಮ್ಮ ಮೇಲೆ ಬರಮಾಡಿದ್ದಾರೆ. ನಮ್ಮ ದೇವರಾದ ಸರ್ವೇಶ್ವರ ತಾವು ಮಾಡುವ ಸಕಲ ಕಾರ್ಯಗಳಲ್ಲೂ ನ್ಯಾಯಸ್ವರೂಪರು. ನಾವೋ ಅವರ ಮಾತನ್ನು ಕೇಳಲಿಲ್ಲ.


“ನೀವು ನಿಮ್ಮ ಮಾತುಗಳಿಂದ ಪ್ರಭುವನ್ನು ಬೇಸರಗೊಳಿಸಿದ್ದೀರಿ. ‘ಯಾವ ವಿಷಯದಲ್ಲಿ ಅವರನ್ನು ಬೇಸರಗೊಳಿಸಿದ್ದೇವೆ?’ ಎನ್ನುತ್ತೀರೋ? ‘ಕೆಡುಕರೆಲ್ಲರೂ ದೇವರ ದೃಷ್ಟಿಯಲ್ಲಿ ಒಳ್ಳೆಯವರು. ಅವರೇ ಆತನಿಗೆ ಬೇಕಾದವರು’ ಎಂದು ಹೇಳುವುದರಿಂದ: ‘ನ್ಯಾಯ ತೀರಿಸುವ ದೇವರೆಲ್ಲಿ?’ ಎಂದು ಕೇಳುವುದರಿಂದ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು