Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:10 - ಕನ್ನಡ ಸತ್ಯವೇದವು C.L. Bible (BSI)

10 ಬಹುಮಂದಿ ಕುರಿಗಾಹಿಗಳು ಬಂದು ಹಾಳುಮಾಡಿದ್ದಾರೆ ನನ್ನ ದ್ರಾಕ್ಷಾತೋಟವನ್ನು. ತುಳಿದುಹಾಕಿದ್ದಾರೆ ನನ್ನಾ ಸೊತ್ತನ್ನು ಕಾಡನ್ನಾಗಿಸಿದ್ದಾರೆ ಆ ನನ್ನ ಪ್ರಿಯ ಆಸ್ತಿಯನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಬಹು ಮಂದಿ ಮಂದೆಗಾರರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವತ್ತನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಬಹುಮಂದಿ ಮಂದೆಗಾರರು ನನ್ನ ತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವಾಸ್ತ್ಯವನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅನೇಕ ಕುರುಬರು ದ್ರಾಕ್ಷಿತೋಟವನ್ನು ಹಾಳುಮಾಡಿದ್ದಾರೆ. ಆ ಕುರುಬರು ನನ್ನ ತೋಟದ ಸಸಿಗಳನ್ನು ತುಳಿದುಬಿಟ್ಟಿದ್ದಾರೆ: ನನ್ನ ಸುಂದರವಾದ ತೋಟವನ್ನು ಮರಳುಗಾಡನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅನೇಕ ಕುರುಬರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಹೊಲವನ್ನು ತುಳಿದುಬಿಟ್ಟಿದ್ದಾರೆ; ನಾನು ಮೆಚ್ಚಿದ ಭಾಗವನ್ನು ಹಾಳಾದ ಮರುಭೂಮಿಯಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:10
21 ತಿಳಿವುಗಳ ಹೋಲಿಕೆ  

“ನನ್ನ ಮಂದೆಯ ಕುರಿಗಳನ್ನು ಚದರಿಸಿ ಹಾಳುಮಾಡುವ ಕುರುಬರಿಗೆ ಧಿಕ್ಕಾರ !” ಇದು ಸರ್ವೇಶ್ವರ ಸ್ವಾಮಿಯ ನುಡಿ.


ನಿಮ್ಮ ಸ್ವಕೀಯ ಜನರು ಸ್ವಲ್ಪಕಾಲ ಮಾತ್ರ ಅನುಭವಿಸಿದಾ ನಿಮ್ಮ ಪವಿತ್ರ ಗರ್ಭಗುಡಿಯನ್ನು ನಮ್ಮ ವೈರಿಗಳು ತುಳಿದು ಹಾಳುಮಾಡಿದರಲ್ಲಾ !


ವೈರಿಗಳಾದ ಕುರುಬರು ತಮ್ಮ ಹಿಂಡುಗಳೊಡನೆ ಅಲ್ಲಿಗೆ ಬಂದು ಅದರ ಎದುರಿಗೆ ಹಾಗೂ ಸುತ್ತಲೂ ತಮ್ಮ ಗುಡಾರಗಳನ್ನು ಹಾಕುವರು. ಪ್ರತಿಯೊಬ್ಬನೂ ತನಗೆ ಇಷ್ಟಬಂದ ಸ್ಥಳದಲ್ಲೇ ಮೇಯಿಸಿಬಿಡುವನು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಎಲೈ ಇಸ್ರಯೇಲ್, ನಾನು ಎಷ್ಟೋ ಆದರದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು, ಅಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು ‘ತಂದೆ’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆಯೆಂದಿದ್ದೆ.


ಆಲಯದ ಹೊರ ಅಂಗಳವನ್ನು ಅಳತೆಮಾಡಬೇಡ; ಅದನ್ನು ಬಿಟ್ಟುಬಿಡು. ಅದನ್ನು ಜನರಿಗೆ ಬಿಟ್ಟುಕೊಡಲಾಗಿದೆ. ಅವರು ಪವಿತ್ರನಗರವನ್ನು ನಲವತ್ತೆರಡು ತಿಂಗಳವರೆಗೆ ತುಳಿದಾಡುವರು.


ಆಗ ವಾದಿಸುವುದು ಹೇಗೆಂದು ನೀವು ಮುಂಚಿತವಾಗಿ ಚಿಂತಿಸಬೇಕಾಗಿಲ್ಲ; ಇದು ನಿಮಗೆ ಮನದಟ್ಟಾಗಿರಲಿ.


ನೇರ್ಗಲ್‍ಸರೆಚರ್, ಸಮ್ಗರ್‍ನೆಬೊ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಜೋಯಿಸರ ಮುಖ್ಯಸ್ಥ ನೇರ್ಗಲ್‍ಸರೆಚರ್, ಹೀಗೆ ಬಾಬಿಲೋನಿಯದ ಅರಸನ ಎಲ್ಲ ಪದಾಧಿಕಾರಿಗಳು ಪುರಪ್ರವೇಶಮಾಡಿ ಮಧ್ಯಮದ್ವಾರದೊಳಗೆ ಕುಳಿತುಕೊಂಡರು


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಎಂದೇ ಗುರಿಮಾಡಿದೆ ಯಕೋಬನ್ನು ಶಾಪಕ್ಕೆ ಈಡುಪಡಿಸಿದೆ ಇಸ್ರಯೇಲನ್ನು ನಿಂದೆದೂಷಣೆಗೆ.”


ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !


“ನರಪುತ್ರನೇ, ಇಸ್ರಯೇಲೆಂಬ ಮಂದೆಯ ಕುರುಬರಿಗೆ ವಿರುದ್ಧ ಈ ದೈವೋಕ್ತಿಯನ್ನು ಪ್ರವಚನ ರೂಪವಾಗಿ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಯ್ಯೋ ಸ್ವಂತ ಹೊಟ್ಟೆ ಹೊರೆದುಕೊಳ್ಳುವ ಇಸ್ರಯೇಲಿನ ಕುರುಬರಿಗೆ ಧಿಕ್ಕಾರ! ಕುರಿಗಳ ಹೊಟ್ಟೆ ಗಮನಿಸುವುದು ಕುರುಬರ ಧರ್ಮವಲ್ಲವೆ?


ಆಗ ಒಬ್ಬ ದೇವದೂತನು ಮಾತಾಡುವುದು ನನಗೆ ಕೇಳಿಸಿತು. ಮಾತಾಡುವವನನ್ನು ಮತ್ತೊಬ್ಬ ದೇವದೂತನು ಸಂಬೋಧಿಸಿ: “ಅನುದಿನದ ಬಲಿಯರ್ಪಣೆಯನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ ದೇವಭಕ್ತಗಣವನ್ನೂ ತುಳಿಯುವುದೂ-ಕನಸಿನ ಇಂಥಾ ಕಾರ್ಯಗಳು ಎಷ್ಟುಕಾಲ ನಡೆಯುವುವು?” ಎಂದು ಪ್ರಶ್ನೆಮಾಡಿದನು.


ಬಿರುಗಾಳಿಯಂತೆ ಅವರನ್ನು ಅಪರಿಚಿತ ಜನಾಂಗಗಳ ಮಧ್ಯೆ ತೂರಿ ಚದರಿಬಿಟ್ಟೆ; ಹಾಗೆ ಅವರು ಚದರಿಹೋದ ಮೇಲೆ ನಾಡು ಹಾಳಾಯಿತು. ಅಲ್ಲಿ ಯಾರೂ ಉಳಿಯದಂತಾಯಿತು. ಅವರ ನಿಮಿತ್ತ ಚೆಲುವ ನಾಡು ನಿರ್ಜನ ಪ್ರದೇಶವಾಯಿತು.”


ಸ್ವಾಮಿ ಜನರ ನಾಯಕರನ್ನೂ ಅಧಿಪತಿಗಳನ್ನೂ ನ್ಯಾಯವಿಚಾರಣೆಗೆ ಗುರಿಪಡಿಸುವರು. “ನೀವು ದ್ರಾಕ್ಷಾತೋಟವನ್ನು ಕಬಳಿಸಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದನ್ನು ಮನೆಗಳಲ್ಲಿ ತುಂಬಿಸಿಕೊಂಡಿದ್ದೀರಿ.


ಆತನ ಕೋಪಾಗ್ನಿಯ ನಿಮಿತ್ತ ಹಾಯಾದ ಗೋಮಾಳಗಳ ಧ್ವಂಸ!


ಗುಹೆಬಿಟ್ಟು ಬಂದ ಸಿಂಹದಂತೆ ಬಂದಿರುವನಾತ. ಆತನ ಕೋಪಾಗ್ನಿಯ ನಿಮಿತ್ತ ತುಂಡರಿಸುವಾ ಖಡ್ಗದ ಪ್ರಯುಕ್ತ ಅವರ ನಾಡಾಗಿದೆ ಬೆಂಗಾಡು.


ಕುರಿಗಾಹಿಗಳು ಇರಲಿಲ್ಲವಾದುದರಿಂದ ಅವು ಚದುರಿಹೋದುವು; ದಿಕ್ಕಾಪಾಲಾಗಿ ಕಾಡಿನ ಸಕಲ ಮೃಗಗಳಿಗೆ ತುತ್ತಾದವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು