Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:13 - ಕನ್ನಡ ಸತ್ಯವೇದವು C.L. Bible (BSI)

13 ಜನರು ಗೋದಿಯನ್ನು ಬಿತ್ತಿದರು ಆದರೆ ಮುಳ್ಳುಗಿಡವನ್ನು ಕೊಯ್ದರು ! ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರು ಆದರೆ ಯಾವ ಲಾಭವೂ ಗಿಟ್ಟದೆಹೋಯಿತು. ತಮ್ಮ ಬೆಳೆಯ ವಿಷಯವಾಗಿ ಹೇಸಬೇಕಾಯಿತು ನನ್ನ ಕೋಪಾಗ್ನಿಯೆ ಇದಕ್ಕೆ ಕಾರಣವಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ. ಯೆಹೋವನ ರೋಷಾಗ್ನಿಯ ನಿಮಿತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ; ಯೆಹೋವನ ರೋಷಾಗ್ನಿಯ ನಿವಿುತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜನರು ಗೋಧಿಯನ್ನು ಬಿತ್ತುವರು; ಆದರೆ ಅವರು ಕೇವಲ ಮುಳ್ಳಿನ ರಾಶಿಯನ್ನು ಕೊಯ್ಯುವರು. ಅವರು ತುಂಬ ದಣಿಯುವವರೆಗೆ ಕಷ್ಟಪಟ್ಟು ಕೆಲಸ ಮಾಡುವರು. ಆದರೆ ಆ ಎಲ್ಲಾ ಕೆಲಸದ ಪ್ರತಿಫಲವಾಗಿ ಅವರಿಗೆ ಏನೂ ಸಿಗುವದಿಲ್ಲ. ಅವರು ತಮ್ಮ ಬೆಳೆಗಳಿಂದ ನಾಚಿಕೆಪಟ್ಟುಕೊಳ್ಳುವರು. ಯೆಹೋವನ ರೋಷವು ಹಾಗೆಲ್ಲ ಮಾಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಗೋಧಿಯನ್ನು ಬಿತ್ತಿದ್ದಾರೆ, ಆದರೆ ಮುಳ್ಳುಗಳನ್ನು ಕೊಯ್ಯುವವರು ಕಷ್ಟಪಟ್ಟಿದ್ದಾರೆ, ಆದರೆ ಪ್ರಯೋಜನವಾಗುವುದಿಲ್ಲ. ಯೆಹೋವ ದೇವರ ಉಗ್ರಕೋಪದ ಉರಿಯಿಂದ ನಿಮ್ಮ ಸುಗ್ಗಿಯ ನಿಮಿತ್ತ ನಾಚಿಕೆ ಪಡುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:13
19 ತಿಳಿವುಗಳ ಹೋಲಿಕೆ  

ನೀವು ಬಿತ್ತಿದ ಬೀಜ ಬಹಳ, ಪಡೆದ ಫಲ ವಿರಳ; ತಿನ್ನುತ್ತೀರಿ, ಆದರೆ ತೃಪ್ತಿಯಿಲ್ಲ; ಕುಡಿಯುತ್ತೀರಿ, ಆದರೆ ದಾಹ ನೀಗುವುದಿಲ್ಲ. ಹೊದೆಯುತ್ತೀರಿ, ಆದರೆ ಚಳಿ ಹೋಗುವುದಿಲ್ಲ. ದುಡಿಮೆಗಾರನ ದುಡ್ಡಿನ ಚೀಲ ತೂತಿನ ಚೀಲ.”


ನೀವು ಬೀಜವನ್ನು ಬಿತ್ತಿದರೂ ಬೆಳೆಯನ್ನು ಕೊಯ್ಯಲಾರಿರಿ. ಕಾಳನ್ನು ಗಾಣಕ್ಕೆ ಸುರಿದರೂ ಎಣ್ಣೆಯನ್ನು ತೆಗೆಯಲಾರಿರಿ. ದ್ರಾಕ್ಷಿಯನ್ನು ಆಲೆಮನೆಗೆ ಹಾಕಿದರೂ ದ್ರಾಕ್ಷಾರಸವನ್ನು ಕುಡಿಯಲಾರಿರಿ.


“ಹೊಲದಲ್ಲಿ ನೀವು ಎಷ್ಟು ಬೀಜ ಬಿತ್ತಿದರೂ ಮಿಡತೆಯ ದಂಡುಬಂದು ಅದನ್ನು ತಿಂದುಬಿಡುವುದು; ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವುದು;


ಆಹಾರವಲ್ಲದ್ದಕ್ಕೆ ಹಣವನು ವ್ಯಯಮಾಡುವುದೇಕೆ? ತೃಪ್ತಿ ತರದ ಪದಾರ್ಥಕ್ಕೆ ನಿಮ್ಮ ದುಡಿತದ ವೆಚ್ಚವೇಕೆ? ಕಿವಿಗೊಡಿ ನನಗೆ, ಒಳಿತನ್ನು ತಿಂದು ಆನಂದಪಡಿ ಆ ಮೃಷ್ಟಾನ್ನವನುಂಡು.


ನೀವು ಈ ದಂಡನೆಗಳಿಗೆ ಗುರಿಯಾಗುವಿರಿ. ನಿಮಗೆ ಕ್ಷಯ ರೋಗ, ಚಳಿಜ್ವರ ಮುಂತಾದ ಭೀಕರ ವ್ಯಾಧಿಗಳು ಬರುವಂತೆ ಮಾಡುವೆನು. ಇವುಗಳ ನಿಮಿತ್ತ ನೀವು ಕಂಗೆಡುವಿರಿ, ಮನಗುಂದಿ ಹೋಗುವಿರಿ. ನಿಮ್ಮ ಬಿತ್ತನೆಯ ಫಲ ನಿಮಗೆ ಸಿಗದೆ ಹೋಗುವುದು. ಅದು ಶತ್ರುಗಳ ಪಾಲಾಗುವುದು.


ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು. ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥವಾಗುವುದು. ಇದೆಲ್ಲ ಸೇನಾಧೀಶ್ವರ ಸರ್ವೇಶ್ವರನ ಚಿತ್ತವಷ್ಟೆ.


ಇನ್ನೂ ನೋಡಿದೆ - ಸೊಂಪಾದ ನಾಡು ಈಗ ಸುಡುಗಾಡು ಅಕಟಾ ! ಸರ್ವೇಶ್ವರನ ಮುಂದೆ, ಅವರ ಕೋಪಾಗ್ನಿಯ ಮುಂದೆ ಊರುಗಳೆಲ್ಲವು ಪಾಳುಬಿದ್ದಿದ್ದವು.


ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಂದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯಫಲ.


ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು. ನಿಮ್ಮ ಹೊಲಗದ್ದೆಗಳಲ್ಲಿ ಬೆಳೆಯಾಗದು; ನಿಮ್ಮ ತೋಟ ತೋಪುಗಳ ಮರಗಳು ಫಲಿಸವು.


ಎಲ್ಲರು ತಂತಮ್ಮ ಗೆಳೆಯರಿಗೆ ಮೋಸಮಾಡುತ್ತಾರೆ ಸತ್ಯವನ್ನು ನುಡಿವುದೇ ಇಲ್ಲ; ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ ಆಯಾಸವಾಗುವ ಮಟ್ಟಿಗೂ ಕೆಡಕನ್ನು ಮಾಡುತ್ತಿದ್ದಾರೆ.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ಗುರಿಮಾಡಿದನು ತನ್ನ ಪ್ರಜೆಯನು ಖಡ್ಗಕೆ I ಉಗ್ರವಾದನು ತನ್ನ ವಾರಸುದಾರರಿಗೆ II


ಇವರು ಗಾಳಿಯನ್ನು ಬಿತ್ತುತ್ತಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅವರ ಪೈರು ತೆನೆಗೆ ಬಾರದು. ಕಾಳು ಮೊಳೆತರೂ ಕೂಳು ದೊರಕದು. ಒಂದು ವೇಳೆ ದೊರಕಿದರೂ ಅನ್ಯಜನರು ಅದನ್ನು ಕಬಳಿಸಿಬಿಡುವರು.


ನೀವು ನಿರೀಕ್ಷಿಸಿದ್ದು ಸಮೃದ್ಧಿ ಸುಗ್ಗಿ. ಆದರೆ ಸಿಕ್ಕಿದ್ದು ಕಿಂಚಿತ್ತು ಮಾತ್ರ; ಅದನ್ನು ಮನೆಗೆ ತಂದಾಗ ನಾನದನ್ನು ಗಾಳಿಗೆ ತೂರಿಬಿಟ್ಟೆ. ಇದಕ್ಕೆ ಕಾರಣವೇನು?” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ. “ಕಾರಣವೇನೆಂದರೆ ನನ್ನ ಆಲಯ ಪಾಳುಬಿದ್ದಿರುವಾಗ ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸ್ವಂತ ಮನೆಯ ಕೆಲಸದಲ್ಲಿ ಮಗ್ನನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು