Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:15 - ಕನ್ನಡ ಸತ್ಯವೇದವು C.L. Bible (BSI)

15 ಆದರೆ ಅವರನ್ನು ಕಿತ್ತುಹಾಕಿದ ಮೇಲೆ ಮತ್ತೆ ಅವರಿಗೆ ಕನಿಕರಿಸುವೆನು. ಪ್ರತಿಯೊಬ್ಬನನ್ನು ಅವನವನ ಆಸ್ತಿಪಾಸ್ತಿಗೆ ಅವನವನ ನಾಡಿಗೆ ಮರಳಿ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೋಡಿರಿ, ನಾನು ಅವರನ್ನು ಕಿತ್ತುಹಾಕಿದ ಮೇಲೆ ತಿರುಗಿ ಅವರ ಮೇಲೆ ಕನಿಕರಪಟ್ಟು ಪ್ರತಿಯೊಬ್ಬನನ್ನೂ ಅವನವನ ಸ್ವತ್ತಿಗೂ, ಅವನವನ ದೇಶಕ್ಕೂ ಪುನಃ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೋಡಿರಿ, ನಾನು ಅವರನ್ನು ಕಿತ್ತುಹಾಕಿದ ಮೇಲೆ ತಿರಿಗಿ ಅವರ ಮೇಲೆ ಕನಿಕರಪಟ್ಟು ಪ್ರತಿಯೊಬ್ಬನನ್ನೂ ಅವನವನ ಸ್ವಾಸ್ತ್ಯಕ್ಕೂ ಅವನವನ ದೇಶಕ್ಕೂ ಪುನಃ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಳಿಕ ನಾನು ಅವರಿಗಾಗಿ ಪರಿತಪಿಸುವೆನು. ನಾನು ಪ್ರತಿಯೊಂದು ಕುಟುಂಬವನ್ನು ಅದರ ಸ್ವಾಸ್ತ್ಯಕ್ಕೂ ಅದರ ದೇಶಕ್ಕೂ ಕರೆತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾನು ಅವರನ್ನು ಕಿತ್ತು ಹಾಕಿದ ಮೇಲೆ, ನಾನು ಹಿಂದಿರುಗಿ ಅವರನ್ನು ಕರುಣಿಸುವೆನು. ತಮ್ಮ ತಮ್ಮ ಸೊತ್ತಿಗೂ, ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:15
16 ತಿಳಿವುಗಳ ಹೋಲಿಕೆ  

ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ನೀಗಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ಆದರೂ ಬರಲಿರುವಾ ದಿನದಂದು ತಪ್ಪಿಸುವೆನು ಮೋವಾಬಿನ ದುರವಸ್ಥೆಯನ್ನು ಎನ್ನುತ್ತಾರೆ ಸರ್ವೇಶ್ವರ. - ಇತಿ ಮೋವಾಬನ್ನು ಕುರಿತ ತೀರ್ಪು.


ಇದು ಸರ್ವೇಶ್ವರನಾದ ನನ್ನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ನೀಗಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ಸನಾತನ ಸೌಭಾಗ್ಯಕ್ಕೆ ಮರಳಿಸುವೆನು ನನ್ನ ಜನರಾದ ಇಸ್ರಯೇಲರನು. ವಾಸಮಾಡುವರವರು ಪಾಳುಬಿದ್ದ ಪಟ್ಟಣಗಳನು ಮತ್ತೆ ಕಟ್ಟಿಕೊಂಡು. ಕುಡಿಯುವರು ಸಮೃದ್ಧಿಯಾಗಿ ದ್ರಾಕ್ಷಾತೋಟಗಳನ್ನು ಮಾಡಿಕೊಂಡು. ತಿನ್ನುವರು ಯಥೇಚ್ಛವಾಗಿ ಫಲವೃಕ್ಷಗಳನು ಬೆಳೆಸಿಕೊಂಡು.


ಆಗ, ನಿಮ್ಮ ದೇವರಾದ ಸರ್ವೇಶ್ವರ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ನಿಮ್ಮನ್ನು ಚದುರಿಸಿದ ಎಲ್ಲ ದೇಶಗಳಿಂದ ಮತ್ತೆ ಕೂಡಿಸುವರು.


ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಸರ್ವೇಶ್ವರನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿ ಒಬ್ಬನೂ ನಾನು ಕೊಟ್ಟ ಸೊತ್ತಿಗೆ ತಿರುಗಿ ಬರಬಹುದು’ ಎಂದು ಆಜ್ಞಾಪಿಸಿದೆ.


ಇಸ್ರಯೇಲರು ಎಲ್ಲರು ತಮ್ಮ ತಮ್ಮ ಸೊತ್ತುಗಳನ್ನು ಸ್ವತಂತ್ರಿಸಿಕೊಳ್ಳುವ ಪರ್ಯಂತರ ನಾವು ನಮ್ಮ ಮನೆಗಳಿಗೆ ಹಿಂದಿರುಗುವುದಿಲ್ಲ.


‘ಅಳಿದುಹೋದ ದಾವೀದನ ಮನೆತನವನು ಪುನರ್‍ಸ್ಥಾಪಿಸಲು ಮರಳಿ ಬರುವೆನು ಪಾಳುಬಿದ್ದುದನು ಜೀರ್ಣೋದ್ಧಾರಗೊಳಿಸುವೆನು ಸುಭದ್ರವಾಗಿ ನಿಲ್ಲಿಸುವೆನು ಅದನ್ನು.


ನೀನು ಉತ್ತರ ದಿಕ್ಕಿಗೆ ಹೋಗಿ ಆ ಇಸ್ರಯೇಲಿಗೆ ಈ ಸಂದೇಶವನ್ನು ಸಾರು - ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ; ಭ್ರಷ್ಟಳಾದ ಇಸ್ರಯೇಲೇ, ಹಿಂದಿರುಗು; ನಾನು ಅಷ್ಟು ಕೋಪಮುಖದಿಂದ ನಿನ್ನನ್ನು ನೋಡುವುದಿಲ್ಲ. ನಾನು ಕರುಣಾಮೂರ್ತಿ, ನಿತ್ಯಕೋಪಿಯಲ್ಲ.


ಆ ಕಾಲ ಬಂದಾಗ ಜೆರುಸಲೇಮನ್ನೇ ‘ಸರ್ವೇಶ್ವರನ ಸಿಂಹಾಸನ’ ಎಂದು ಕರೆಯುವರು. ನನ್ನ ನಾಮಮಹತ್ವದ ಸ್ಥಾನವಾದ ಜೆರುಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದುಬರುವರು. ಆಮೇಲೆ ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು.


‘ಸರ್ವೇಶ್ವರ ಸ್ವಾಮಿಯ ಜೀವದಾಣೆ’ ಎಂದು ಸತ್ಯ, ನ್ಯಾಯ, ನೀತಿಗೆ ಅನುಗುಣವಾಗಿ ಪ್ರಮಾಣಮಾಡಿರಿ, ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯಲು ಆಶಿಸುವರು, ನನ್ನಲ್ಲೇ ಹೆಮ್ಮೆಪಡುವರು.”


ಅವರ ಮೇಲೆ ಕನಿಕರ ತೋರಿ ಕಟಾಕ್ಷಿಸಿ ಈ ನಾಡಿಗೆ ಮರಳಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡುವುದಿಲ್ಲ; ನೆಡುವೆನು, ಕೀಳುವುದಿಲ್ಲ.


ಹೌದು, ನಾನು ನಿಮಗೆ ದೊರೆಯುವೆನು. ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಿಮ್ಮನ್ನು ಅಟ್ಟಲಾಗಿದ್ದ ಸಮಸ್ತ ದೇಶಗಳಿಂದಲೂ ಸಕಲ ರಾಷ್ಟ್ರಗಳ ಮಧ್ಯೆಯಿಂದಲೂ ಒಟ್ಟುಗೂಡಿಸಿ, ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.’


ಆದರೆ ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯ ಒಡೆದು ನಾಲ್ಕು ದಿಕ್ಕುಗಳಿಗೂ ಸೀಳಿಹೋಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ಪ್ರಬಲವಾಗಿ ಇದ್ದಂತೆ ಅದು ಇನ್ನು ಪ್ರಬಲವಾಗದು.


ಬದಲಿಗೆ, ‘ಇಸ್ರಯೇಲರನ್ನು ಉತ್ತರ ದೇಶದಿಂದ ಹಾಗು ಅವರನ್ನು ತಾನು ತಳ್ಳಿಬಿಟ್ಟಿದ್ದ ಎಲ್ಲ ಸೀಮೆಗಳಿಂದ ಬಿಡಿಸಿ ಬರಮಾಡಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವರು. ನಾನು ಅವರ ಪೂರ್ವಜರಿಗೆ ದಯಪಾಲಿಸಿದ ನಾಡಿಗೆ ಅವರನ್ನು ಮರಳಿ ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು