Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:17 - ಕನ್ನಡ ಸತ್ಯವೇದವು C.L. Bible (BSI)

17 ಆದರೆ ಯಾವ ಜನಾಂಗ ಕೇಳುವುದಿಲ್ಲವೋ ಅದನ್ನು ನಾನು ಕಿತ್ತುಹಾಕುವೆನು. ಹೌದು, ಬೇರುಸಹಿತ ಕಿತ್ತುಹಾಕಿ ನಾಶಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಯಾವ ಜನಾಂಗವು ಕೇಳುವುದಿಲ್ಲವೋ ಅದನ್ನು ನಾನು ಕಿತ್ತುಹಾಕುವೆನು, ಹೌದು, ಕಿತ್ತುಹಾಕಿ ನಾಶ ಮಾಡುವೆನು ಎಂಬುದು ಯೆಹೋವನ ನುಡಿ” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ಯಾವ ಜನಾಂಗವು ಕೇಳುವದಿಲ್ಲವೋ ಅದನ್ನು ನಾನು ಕಿತ್ತುಹಾಕುವೆನು, ಹೌದು, ಕಿತ್ತುಹಾಕಿ ನಾಶಮಾಡುವೆನು ಎಂಬದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯಾವ ಜನಾಂಗವಾದರೂ ನನ್ನ ಸಂದೇಶವನ್ನು ಕೇಳದೆಹೋದರೆ ಅದನ್ನು ಸಂಪೂರ್ಣವಾಗಿ ನಾಶಮಾಡುವೆನು. ಒಣಗಿ ಸತ್ತುಹೋದ ಸಸಿಯಂತೆ ಅದನ್ನು ಕಿತ್ತು ಎಸೆದುಬಿಡುವೆನು.” ಇದು ಯೆಹೋವನಿಂದ ಬಂದ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಅವರು ಕೇಳದೆ ಹೋದರೆ, ಆ ಜನಾಂಗವನ್ನು ಸಂಪೂರ್ಣವಾಗಿ ಕಿತ್ತು ನಾಶಮಾಡುವೆನು,” ಎಂದು ಯೆಹೋವ ದೇವರು ನುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:17
15 ತಿಳಿವುಗಳ ಹೋಲಿಕೆ  

ನಾಶವಾಗುವುವು ನಿನ್ನ ಸೇವೆಮಾಡಲೊಲ್ಲದ ರಾಜ್ಯಗಳು, ಜನಾಂಗಗಳು; ಹೌದು, ಸಂಪೂರ್ಣವಾಗಿ ಹಾಳಾಗುವುವು ಆ ಜನಾಂಗಗಳು.


“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”


ಆದರೆ ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯ ಒಡೆದು ನಾಲ್ಕು ದಿಕ್ಕುಗಳಿಗೂ ಸೀಳಿಹೋಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ಪ್ರಬಲವಾಗಿ ಇದ್ದಂತೆ ಅದು ಇನ್ನು ಪ್ರಬಲವಾಗದು.


ಕಿತ್ತು ಬಿಸಾಡಿದರು ಕ್ರೋಧಿಗಳು ಆ ಲತೆಯನು ಬಾಡಿಸಿತು ಅದರ ಫಲವನು ಮೂಡಣಗಾಳಿಯು ಮುದುರಿ ಒಣಗಿಹೋದುವು ಅದರ ಗಟ್ಟಿಕೊಂಬೆಗಳು.


ಅವರನ್ನು ಕೀಳಲು ಕೆಡವಲು, ಅಳಿಸಲು ಹಾಳುಮಾಡಲು, ಈ ಮೊದಲು ಎಚ್ಚರವಹಿಸಿದ ಹಾಗೆಯೆ ಇನ್ನು ಮುಂದೆ ಅವರನ್ನು ಕಟ್ಟಲು ಹಾಗು ನೆಡಲು ಎಚ್ಚರವಹಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ಒಂದು ಜನಾಂಗವನ್ನು ಅಥವಾ ಒಂದು ರಾಜ್ಯವನ್ನು ಕಿತ್ತು, ಕೆಡವಿ, ನಾಶಪಡಿಸಿ ಎಂದು ನಾನು ಎಂದಾದರೂ ಅಪ್ಪಣೆ ಕೊಡಲು ಸಾಧ್ಯ.


ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”


ಆಶಾಭಂಗಪಟ್ಟು ಅವಮಾನ ಹೊಂದುವರು ನಿನ್ನ ಮೇಲೆ ಕೋಪಗೊಂಡವರು ನಾಶವಾಗಿ ನಿರ್ಮೂಲವಾಗುವರು ನಿನ್ನ ಸಂಗಡ ವ್ಯಾಜ್ಯವಾಡಿದವರು.


ನಿನ್ನ ಆಶೇರಾ ದೇವತೆಯ ವಿಗ್ರಹಗಳನ್ನು ಕಿತ್ತೊಗೆದು, ನಿನ್ನ ಪಟ್ಟಣಗಳನ್ನು ನೆಲಸಮ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು