Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:3 - ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರಾ, ನನ್ನ ಪರಿಚಯ ನಿಮಗಿದೆ ನಿಮ್ಮ ನೋಟ ನನ್ನ ಮೇಲಿದೆ. ನನ್ನ ಹೃದಯ ನಿಮ್ಮೊಂದಿಗಿದೆ, ಇದರ ಪರೀಕ್ಷೆ ನಿಮ್ಮಿಂದಾಗಿದೆ. ಅವರನ್ನೋ, ಕುರಿಗಳೋ ಎಂಬಂತೆ ಕೊಲೆಗೆ ಕರೆದೊಯ್ಯಿರಿ ವಧ್ಯದಿವಸದವರೆಗೂ ಅವರನ್ನು ವಿಂಗಡಿಸಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನೇ, ನೀನು ನನ್ನನ್ನು ತಿಳಿದಿದ್ದಿ, ನನ್ನನ್ನು ನೋಡುತ್ತಾ ನಿನ್ನೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತಿ. ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನೇ, ನೀನು ನನ್ನನ್ನು ತಿಳಿದಿದ್ದೀ, ನನ್ನನ್ನು ನೋಡುತ್ತಾ ನಿನ್ನೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತೀ, ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಯೆಹೋವನೇ, ನಿನಗೆ ನನ್ನ ಹೃದಯದ ಬಗ್ಗೆ ತಿಳಿದಿದೆ, ನೀನು ನನ್ನನ್ನು ನೋಡಿ ನನ್ನ ಮನಸ್ಸನ್ನು ಪರೀಕ್ಷಿಸುವೆ. ವಧೆಗೆ ಎಳೆದುಕೊಂಡು ಹೋಗುವ ಕುರಿಗಳಂತೆ ಆ ಕೆಡುಕರನ್ನು ಎಳೆದುಹಾಕು. ಅವರನ್ನು ವಧೆಯ ದಿನಕ್ಕೆಂದು ಆರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರೇ, ನೀವು ನನ್ನನ್ನು ತಿಳಿದಿದ್ದೀರಿ, ನನ್ನನ್ನು ನೋಡುತ್ತಾ ನಿಮ್ಮೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತೀರಿ, ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:3
23 ತಿಳಿವುಗಳ ಹೋಲಿಕೆ  

ನನಗಲ್ಲ, ನನ್ನ ಹಿಂಸಕರಿಗೆ ಅವಮಾನವಾಗಲಿ. ಭಯಭ್ರಾಂತಿ ನನ್ನನ್ನಲ್ಲ, ಅವರನ್ನು ಅಪಹರಿಸಲಿ. ಅವರಿಗೆ ಕೇಡುಗಾಲವನ್ನು ಬರಮಾಡಿ ಬೇರುಸಹಿತ ಅವರನ್ನು ನಾಶಪಡಿಸಿರಿ !


“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.


ಲೋಕದಲ್ಲಿ ನೀವು ಸುಖಭೋಗಿಗಳಾಗಿ ವಿಲಾಸ ಜೀವನ ನಡೆಸಿದ್ದೀರಿ. ವಧೆಯ ದಿನಕ್ಕಾಗಿ ಪಶುಗಳಂತೆ ನಿಮ್ಮನ್ನೇ ಕೊಬ್ಬಿಸಿಕೊಂಡಿದ್ದೀರಿ.


ಹೃದಯ ವೀಕ್ಷಿಸು, ಇರುಳೆಲ್ಲ ವಿಚಾರಿಸು, ಅಗ್ನಿಪರೀಕ್ಷೆ ಮಾಡಿಸು I ನಾ ದೋಷರಹಿತ, ಮಾತಲಿ ತಪ್ಪದವ, ಎಂದಾಗ ತೀರ್ಮಾನಿಸು II


ಅದರ ಗೂಳಿಗಳನ್ನೆಲ್ಲ ಕೊಲ್ಲಿರಿ. ಹೋಗಲಿ ಅವು ವಧ್ಯಸ್ಥಾನಕ್ಕೆ. ಅವುಗಳಿಗೆ ಧಿಕ್ಕಾರ. ಅವುಗಳಿಗೆ ಬಂದಿದೆ ವಿಪತ್ಕಾಲ! ಸಮೀಪಿಸಿದೆ ದಂಡನೆಯ ದಿನ!


ತಿಳಿದುಕೋ ದೇವಾ, ನನ್ನ ಹೃದಯವನು ಪರೀಕ್ಷಿಸಿ I ಅರಿತುಕೋ ನನ್ನ ಆಲೋಚನೆಗಳನು ಪರಿಶೋಧಿಸಿ II


ಸಾಚವಾದುದೆನ್ನ ನಡತೆ, ಅಚಲವಾದುದೆನ್ನ ನಂಬುಗೆ I ನೀಚ ನಾನಲ್ಲವೆಂದು ಪ್ರಭು, ನ್ಯಾಯ ತೀರಿಸೆನಗೆ II


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ಬಾಬಿಲೋನಿಯರು ತಮ್ಮ ದೇಶದಲ್ಲೆ ಹತರಾಗಿ ಬೀಳುವರು. ಅದರ ಬೀದಿಗಳಲ್ಲೆ ಕತ್ತಿಗೆ ತುತ್ತಾಗಿ ಮಣ್ಣುಪಾಲಾಗುವರು.


ಮೋವಾಬು ಹಾಳಾಗಿದೆ ಸುಟ್ಟುಹೋದ ಅದರ ನಗರಗಳಿಂದ ಹೊಗೆ ಎದ್ದಿದೆ. ಅದರ ಸರ್ವಶ್ರೇಷ್ಟ ಯುವಕರು ಹೋಗಿದ್ದಾರೆ ಹತರಾಗುವುದಕ್ಕೆ, ಸರ್ವಶಕ್ತ ಸರ್ವೇಶ್ವರನೆಂಬ ನಾಮವುಳ್ಳ ರಾಜಾಧಿರಾಜನ ನುಡಿಯಂತೆ.


ಸರ್ವಶಕ್ತರಾದ ಸರ್ವೇಶ್ವರಾ, ನೀವು ಸತ್ಪುರುಷರನ್ನು ಪರಿಶೋಧಿಸುವವರು ಅಂತರಿಂದ್ರಿಯಗಳನ್ನೂ ಅಂತರಾಳವನ್ನೂ ವೀಕ್ಷಿಸುವವರು. ನನ್ನ ವ್ಯಾಜ್ಯವನ್ನು ನಿಮಗೆ ಅರಿಕೆಮಾಡಿರುವೆನು ನನ್ನ ಹಿಂಸಕರಿಗೆ ನೀವು ವಿಧಿಸುವ ಪ್ರತಿದಂಡನೆಯನ್ನು ನಾನು ನೋಡುವಂತೆ ಮಾಡಿ.


ಪರೀಕ್ಷಿಸುವನು ಪ್ರಭು ಸಜ್ಜನ ದುರ್ಜನರನು I ದ್ವೇಷಿಸುವನು ಮನಸಾರೆ ಹಿಂಸಾತ್ಮಕರನು II


ಮಾನವರ ಹೃನ್ಮನವನರಿತಿಹ ಸತ್ಯಸ್ವರೂಪಿ ದೇವಾ, I ದುರುಳರ ಕೆಡುಕನಳಿಸಯ್ಯಾ, ಸತ್ಯವಂತರನು ನೀ ಉಳಿಸಯ್ಯಾ II


ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು.


ನನ್ನ ದೇವರೇ, ನೀವು ಹೃದಯವನ್ನು ಪರೀಕ್ಷಿಸುವವರು ಹಾಗೂ ಯಥಾರ್ಥಚಿತ್ತರನ್ನು ಮೆಚ್ಚುವವರು ಎಂಬುವುದನ್ನು ನಾನು ಬಲ್ಲೆ. ನಾನಿದನ್ನೆಲ್ಲಾ ಅರ್ಪಿಸಿರುವುದು ಶುದ್ಧಮನಸ್ಸಿನಿಂದಲೇ, ಸ್ವಂತ ಇಷ್ಟದಿಂದಲೇ. ಇಲ್ಲಿ ಕೂಡಿರುವ ನಿಮ್ಮ ಪ್ರಜೆಗಳೂ ಸ್ವಂತ ಇಷ್ಟದಿಂದಲೇ ನಿಮಗೆ ಕಾಣಿಕೆಗಳನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


ಸಹಜ ಪ್ರವೃತ್ತಿಯಿಂದ ಬೇಟೆಗಾಗಿಯೂ ಕೊಲೆಗಾಗಿಯೂ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತೆ ಬಾಳುವ ಈ ದುರ್ಬೋಧಕರಾದರೋ ತಮಗೆ ತಿಳಿಯದವುಗಳನ್ನು ದೂಷಣೆಮಾಡುತ್ತಾರೆ. ಆ ಪ್ರಾಣಿಗಳು ನಾಶವಾಗುವಂತೆಯೇ ಇವರೂ ನಾಶವಾಗುತ್ತಾರೆ.


ಅದಕ್ಕೆ ನಾನು : “ಸರ್ವೇಶ್ವರಾ, ನೀವು ಎಲ್ಲವನ್ನು ಬಲ್ಲವರು. ನನ್ನನ್ನು ನೆನಪಿಗೆ ತಂದುಕೊಂಡು ನೆರವುನೀಡಿ. ನನಗಾಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸಿರಿ. ಅವರಿಗೆ ಹೆಚ್ಚು ತಾಳ್ಮೆತೋರಿ ನನ್ನನ್ನು ನಿರ್ಮೂಲಮಾಡಬೇಡಿ. ನಿಮ್ಮ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆ ಎಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿ.


ನಾನಾದರೋ ‘ಕೇಡನ್ನು ಬರಮಾಡಿ’ ಎಂದು ನಿಮ್ಮನ್ನು ತವಕಪಡಿಸಲಿಲ್ಲ. ಅನಿವಾರ್ಯ ವಿಪತ್ತಿನ ದಿನವನ್ನು ನಾನು ಅಪೇಕ್ಷಿಸಲಿಲ್ಲ. ಇದು ನಿಮಗೆ ತಿಳಿದ ವಿಷಯ. ನನ್ನ ಮಾತುಗಳು ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯಿಂದ ಹೊರಟವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು