Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:4 - ಕನ್ನಡ ಸತ್ಯವೇದವು C.L. Bible (BSI)

4 ಇನ್ನೆಷ್ಟರವರೆಗೆ ನಾಡು ದುಃಖಿಸುತ್ತಿರಬೇಕು? ಅದರ ಎಲ್ಲೆಎಲ್ಲೆಗಳಲ್ಲಿ ಹುಲ್ಲು ಸೊಪ್ಪು ಒಣಗಿರಬೇಕು? ನಾಡಜನರ ನೀಚತನದ ನಿಮಿತ್ತ ಮಾಯವಾಗಿವೆ ಪ್ರಾಣಪಕ್ಷಿಗಳು ಕೂಡ. ‘ನಮ್ಮ ನಡತೆಯನ್ನು ಗಮನಿಸರು ದೇವರು’ ಎಂದುಕೊಳ್ಳುತ್ತಿರುವರು ಆ ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲುಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಹಾಗು ಪಕ್ಷಿಗಳು ಬಡಿದುಕೊಂಡು ಹೋಗಿವೆ. “ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವುದೇ ಇಲ್ಲ” ಎಂದು ಹೇಳಿದ್ದಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವದರಿಂದ ಮೃಗಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವದೇ ಇಲ್ಲ ಎಂದು ಹೇಳಿದ್ದಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಷ್ಟು ಕಾಲದವರೆಗೆ ಭೂಮಿಯು ಒಣಗಿರಬೇಕು? ಎಷ್ಟು ಕಾಲದವರೆಗೆ ಹುಲ್ಲು ಒಣಗಿ ನಿರ್ಜೀವವಾಗಿರಬೇಕು? ದೇಶದಲ್ಲಿ ಪಶುಪಕ್ಷಿಗಳು ಸತ್ತುಹೋಗಿವೆ. ಇದು ದುಷ್ಟರ ತಪ್ಪಾದರೂ ಆ ದುಷ್ಟರು, “ನಮಗೆ ಏನಾಗುವದೆಂದು ನೋಡಲು ಯೆರೆಮೀಯನು ಬಹಳ ದಿವಸ ಬದುಕಿರಲಾರ” ಎಂದು ಹೇಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು, ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯ ಗತಿಯನ್ನು ನೋಡುವುದೇ ಇಲ್ಲ, ಎಂದು ಹೇಳಿದ್ದಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:4
22 ತಿಳಿವುಗಳ ಹೋಲಿಕೆ  

ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !


ಕಣ್ಣೆತ್ತಿ ನೋಡಿದೆ, ಏನಾಶ್ಚರ್ಯ ! ಜನರೊಬ್ಬರೂ ಇಲ್ಲ, ಆಕಾಶದ ಪಕ್ಷಿಗಳೆಲ್ಲವೂ ಕಾಣೆಯಾಗಿದ್ದವು.


ಒಣನೆಲವಾಗಿಸಿದನಾತ ಬುಗ್ಗೆಗಳನು I ಉಪ್ಪುನೆಲವಾಗಿಸಿದ ಫಲಭೂಮಿಯನು II


ಸೃಷ್ಟಿಸಮಸ್ತವು ಇಂದಿನವರೆಗೆ ನರಳುತ್ತಾ ಪ್ರಸವವೇದನೆಪಡುತ್ತಾ ಇದೆ ಎಂಬುದು ನಮಗೆ ತಿಳಿದಿದೆ.


ಇದರಿಂದ ನಾಡು ಶೋಕಸಾಗರದಲ್ಲಿ ಮುಳುಗಿದೆ. ಅದರ ನಿವಾಸಿಗಳೆಲ್ಲ ನರಳುತ್ತಿದ್ದಾರೆ. ನೆಲದ ಮೇಲಿನ ಜಂತುಗಳು, ಆಕಾಶದ ಪಕ್ಷಿಗಳು ಬಳಲುತ್ತಿವೆ. ಜಲಜಂತುಗಳು ಸಹ ನಶಿಸಿಹೋಗುತ್ತಿವೆ.


ದೈವಶಾಪದ ನಿಮಿತ್ತ ದೇಶ ದುಃಖಿಸುತ್ತಿದೆ ವ್ಯಭಿಚಾರದಿಂದ ನಾಡು ತುಂಬಿತುಳುಕುತ್ತಿದೆ ಅಡವಿಯ ಹುಲ್ಲುಗಾವಲು ಬಾಡಿದೆ. ನಾಡಿನ ಜನರು ಹಿಡಿದೋಡುತ್ತಿರುವ ಮಾರ್ಗ ದುರ್ಮಾರ್ಗ ಅನ್ಯಾಯ ಸಾಧನೆಗಾಗಿಯೆ ಅವರ ಅಧಿಕಾರ ಪ್ರಯೋಗ.


“ಸರ್ವೇಶ್ವರನಾದ ನಾನು ಹೇಳುವುದನ್ನು ಗಮನಿಸಿರಿ; ಇಗೋ, ನನ್ನ ಕೋಪವೆಂಬ ರೋಷಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಕಾಡುಮರಗಳ ಮೇಲೂ ಭೂಮಿಯ ಬೆಳೆಯ ಮೇಲೂ ಅದನ್ನು ಕಾರುವೆನು. ಅದು ಆರದೆ ದಹಿಸುವುದು!”


ಅಂಜೂರದ ಮರ ಚಿಗುರದೆಹೋದರೂ ದ್ರಾಕ್ಷಾಲತೆಗಳಲ್ಲಿ ಹಣ್ಣು ಕಾಣದೆಹೋದರೂ ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ ಹೊಲಗದ್ದೆಗಳು ಆಹಾರ ಕೊಡದೆಹೋದರೂ ಕುರಿಹಟ್ಟಿಗಳು ಬರಿದಾಗಿಹೋದರೂ ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


“ಜುದೇಯ ನಾಡು ದುಃಖಿಸುತ್ತಿದೆ ಅದರ ಪುರದ್ವಾರಗಳು ಬಹಳ ಕಪ್ಪಾಗಿವೆ. ಜೆರುಸಲೇಮಿನವರ ಗೋಳಾಟ ಕೇಳಿಸುತ್ತಿದೆ.


ಪ್ರವಾದಿಗಳು ಆಡುವುದೆಲ್ಲ ಬರೀ ಗಾಳಿಮಾತುಗಳು. ದೈವೋಕ್ತಿಯೆಂಬುದು ಅವುಗಳಲ್ಲಿ ಇಲ್ಲ. ಅವರಿಗೇ ತಗಲಲಿ ಅವರು ಹೇಳುವುದೆಲ್ಲ,” ಎಂದುಕೊಂಡಿದ್ದಾರೆ.


ಲೋಕ ದುಃಖಿಸುವುದು ಆಕಾಶ ಕಪ್ಪಗಾಗುವುದು ಇದು ಸರ್ವೇಶ್ವರ ಆಡಿದ ಮಾತು. ಇದನ್ನು ಬದಲಾಯಿಸುವಂತಿಲ್ಲ. ಇದು ಅವರ ತೀರ್ಮಾನ; ಇದನ್ನು ರದ್ದುಗೊಳಿಸುವಂತಿಲ್ಲ.


ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II ನಿಮ್ಮ ದುಷ್ಟತನವನು ಕಣ್ಮುಂದೆಯಿಡುವೆನು I ನೀವು ಅಪರಾಧಿಗಳೆಂದು ಸ್ಥಾಪಿಸದೆಬಿಡೆನು II


ಹೌದು, ಹಾಳುಮಾಡಿದ್ದಾರೆ ಪಾಳುಬಿದ್ದು ಅದು ನನಗೆ ಗೋಳಿಡುತ್ತಿದೆ ಯಾವನೂ ಗಮನಕ್ಕೆ ತಂದುಕೊಳ್ಳದೆ ನಾಡೆಲ್ಲ ಬಿಕೋ ಎನ್ನುತ್ತಿದೆ.


ಪಶುಪ್ರಾಣಿಗಳು ನರಳುತ್ತಿವೆ; ದನಕರುಗಳು ಮೇವಿಲ್ಲದೆ ಕಂಗಾಲಾಗಿವೆ; ಕುರಿಮಂದೆಗಳು ಕೂಡ ಕಂಗೆಟ್ಟಿವೆ.


ಆಮೋಸನ ಪ್ರಕಟನೆ: ಗರ್ಜಿಸುತಿಹನು ಸರ್ವೇಶ್ವರ ಸಿಯೋನಿನಿಂದ ಧ್ವನಿಗೈಯುತಿಹನು ಜೆರುಸಲೇಮಿನಿಂದ; ಬಾಡಿಹೋಗುತ್ತಿವೆ ಕುರುಬರಾ ಹುಲ್ಲುಗಾವಲುಗಳು ಒಣಗಿಹೋಗುತ್ತಿವೆ ಕಾರ್ಮೆಲ್ ಗುಡ್ಡದ ನೆತ್ತಿಯ ಗಿಡಗಳು.


ಆಗ ದೇವದೂತನು: “ಸೇನಾಧಿಶ್ವರ ಸರ್ವೇಶ್ವರಾ, ಕಳೆದ ಎಪ್ಪತ್ತು ವರ್ಷಗಳಿಂದ ನೀವು ಕೋಪದಿಂದಿರುವಿರಿ, ಏಕೆ? ಇನ್ನೆಷ್ಟು ಕಾಲ ಜೆರುಸಲೇಮಿಗೂ ಜುದೇಯದ ಇತರ ಪಟ್ಟಣಗಳಿಗೂ ಕರುಣೆತೋರಿಸದೆ ಇರುವಿರಿ?” ಎಂದು ಕೇಳಿದ.


ಸೊರಗಿಹೋಗುವುದು ಲೋಕ ದುಃಖಿಸುತ್ತಾ ಕುಗ್ಗಿಹೋಗುವುದು ಬುವಿ ಗೋಳಾಡುತ್ತಾ ಕಂಗೆಟ್ಟುಹೋಗುವನು ಪ್ರತಿಯೊಬ್ಬ ವಿಶ್ವವಿಖ್ಯಾತ.


ಇದಕಾರಣ ಕಬಳಿಸಿದೆ ಜಗವನು ಶಾಪ, ತಟ್ಟಿದೆ ಆ ಜನರಿಗೆ ದಂಡನೆಯ ತಾಪ. ಸುಟ್ಟಮೇಲೆ ಉಳಿದಿಹರು ಅವರಲಿ ಕೆಲವರು ಮಾತ್ರ.


ಇಂಥವುಗಳಿಗಾಗಿ ನಾನು ಅವರನ್ನು ಹಿಂಸಿಸಬಾರದೆ? ಇಂಥ ಜನಾಂಗದ ಮೇಲೆ ಸೇಡನ್ನು ತೀರಿಸಿಕೊಳ್ಳದಿರುವೆನೆ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು