Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:7 - ಕನ್ನಡ ಸತ್ಯವೇದವು C.L. Bible (BSI)

7 “ನಾನು ನನ್ನ ಮನೆಯನ್ನೇ ತೊರೆದಿದ್ದೇನೆ ನನ್ನ ಸ್ವಂತ ಸೊತ್ತನ್ನೇ ನಿರಾಕರಿಸಿದ್ದೇನೆ ನನಗೆ ಪ್ರಾಣಪ್ರಿಯರಾದ ಜನರನ್ನು ಅವರ ಶತ್ರುಗಳ ಕೈಗೊಪ್ಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ನನ್ನ ಮನೆಯನ್ನು ತೊರೆದು ನನ್ನ ಸ್ವತ್ತನ್ನು ನಿರಾಕರಿಸಿದ್ದೇನೆ; ನನ್ನ ಪ್ರಾಣಪ್ರಿಯಳನ್ನು ಅವಳ ಶತ್ರುಗಳ ಕೈಗೆ ಒಪ್ಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ನನ್ನ ಮನೆಯನ್ನು ತೊರೆದು ನನ್ನ ಸ್ವಾಸ್ತ್ಯವನ್ನು ನಿರಾಕರಿಸಿದ್ದೇನೆ; ನನ್ನ ಪ್ರಾಣಪ್ರಿಯಳನ್ನು ಅವಳ ಶತ್ರುಗಳ ಕೈಗೆ ಒಪ್ಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನಾನು (ಯೆಹೋವನು) ನನ್ನ ಮನೆಯನ್ನು ತ್ಯಜಿಸಿದ್ದೇನೆ. ನಾನು ನನ್ನ ಆಸ್ತಿಯನ್ನು ಬಿಟ್ಟುಬಿಟ್ಟಿದ್ದೇನೆ. ನಾನು ನನ್ನ ಪ್ರಿಯತಮೆಯನ್ನು (ಯೆಹೂದ) ಅವಳ ಶತ್ರುಗಳಿಗೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ನನ್ನ ಮನೆಯನ್ನು ಬಿಟ್ಟಿದ್ದೇನೆ, ನನ್ನ ಸೊತ್ತನ್ನು ತ್ಯಜಿಸಿದ್ದೇನೆ. ನನ್ನ ಪ್ರಾಣಕ್ಕೆ ಅತಿ ಪ್ರಿಯವಾದವಳನ್ನು ಅವಳ ಶತ್ರುಗಳ ಕೈಯಲ್ಲಿ ಒಪ್ಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:7
23 ತಿಳಿವುಗಳ ಹೋಲಿಕೆ  

ಹೇ ಸರ್ವೇಶ್ವರಾ ಯಕೋಬ ಮನೆತನದವರನ್ನು ನೀವು ಕೈ ಬಿಟ್ಟಿದ್ದೀರಿ. ಏಕೆಂದರೆ ಅವರು ಪೌರಸ್ತ್ಯರಂತೆ ಮಾಟಮಂತ್ರ ಮಾಡುವವರು. ಫಿಲಿಷ್ಟಿಯರಂತೆ ಕಣಿಹೇಳುವವರು, ಅನ್ಯದೇಶಿಯರಂತೆ ಆಚಾರವಿಚಾರಗಳನ್ನು ಅನುಕರಿಸುವವರು ಆಗಿಬಿಟ್ಟಿದ್ದಾರೆ.


“ನನಗೆ ಆಪ್ತವಾದ ಜನತೆಯು, ನನಗೆ ಅಸಹ್ಯಕಾರ್ಯಗಳನ್ನು ಮಾಡಿದ್ದೇಕೆ? ನನ್ನ ಆಲಯದಲ್ಲಿ ಅದಕ್ಕಿರುವ ಹಕ್ಕಾದರೂ ಏನು? ವ್ರತಗಳ ಮೂಲಕ, ಪಶುಬಲಿ ಮಾಂಸದ ಮೂಲಕ ಅದು ಬರಲಿರುವ ದಂಡನೆಯನ್ನು ತಡೆಗಟ್ಟಬಲ್ಲದೆ?


“ಅವರ ದುಷ್ಟತನ ಗಿಲ್ಗಾಲಿನಲ್ಲೇ ಪ್ರಾರಂಭವಾಯಿತು. ಅಲ್ಲೇ ಅವರು ನನ್ನ ದ್ವೇಷಕ್ಕೆ ಗುರಿಯಾದರು. ಅವರ ಪಾಪಕೃತ್ಯಗಳ ನಿಮಿತ್ತ ನನ್ನ ಆಲಯದಿಂದ ಹೊರಗಟ್ಟುವೆನು. ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲ ದ್ರೋಹಿಗಳೇ.


ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.


ಎಲ್ಲಾ ರಾಷ್ಟ್ರಗಳನ್ನು ನ್ಯಾಯತೀರ್ಪಿನ ಜೊಸೆಫಾತ್ ಕಣಿವೆಗೆ ಬರಮಾಡುವೆನು. ನನ್ನ ಪ್ರಜೆಯೂ ಸ್ವಜನರೂ ಆದ ಇಸ್ರಯೇಲರಿಗೆ ಅವರು ಮಾಡಿದ ಹಿಂಸೆಗಾಗಿ ನ್ಯಾಯಕೇಳುವೆನು. ಅವರು ನನ್ನ ಪ್ರಜೆಯನ್ನು ದೇಶವಿದೇಶಗಳಿಗೆ ಚದರಿಸಿದ್ದಾರೆ. ನನ್ನ ನಾಡನ್ನು ಹಂಚಿಕೊಂಡಿದ್ದಾರೆ.


ಸಿಯೋನ್ ಶಿಖರದ ಮೇಲೆ ನಿಂತು ಕೊಂಬೂದಿರಿ. ಉಪವಾಸ ದಿನವನ್ನು ಘೋಷಿಸಿರಿ. ಮಹಾಸಭೆಯನ್ನು ಕರೆಯಿರಿ.


ಇಸ್ರಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲ, ನೇತ್ರಾನಂದ ಹಾಗು ಪ್ರಾಣಪ್ರಿಯ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಮಾಡಿಸುವೆನು; ನೀವು ಬಿಟ್ಟುಬಂದಿರುವ ನಿಮ್ಮ ಗಂಡು ಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸರ್ವೇಶ್ವರನಾದ ದೇವರು ನುಡಿದಿದ್ದಾರೆ.


ಇಸ್ರಯೇಲರ ಪರಮ ಪಾವನ ಸ್ವಾಮಿಯಾದ ನನಗೆ ನನ್ನ ಜನರು ಮಾಡಿದ ಅಪರಾಧ ತಮ್ಮ ನಾಡಿನಲ್ಲಿ ತುಂಬಿದ್ದರೂ ಸೇನಾಧೀಶ್ವರ ಸರ್ವೇಶ್ವರನೆಂಬ ದೇವರಾದ ನಾನು ಇಸ್ರಯೇಲನ್ನಾಗಲಿ ಜುದೇಯವನ್ನಾಗಲಿ ತ್ಯಜಿಸಿಬಿಡಲಿಲ್ಲ.


“ಎಲೈ ಜೆರುಸಲೇಮೇ ! ತಲೆಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಡು ಬೋಳುಗುಡ್ಡಗಳಲ್ಲಿ ಶೋಕಗೀತೆಯನ್ನು ಹಾಡು. ಏಕೆಂದರೆ ಸರ್ವೇಶ್ವರನಾದ ನಾನು ಕೋಪಗೊಂಡು, ನಿರಾಕರಿಸಿ, ತ್ಯಜಿಸಿಬಿಟ್ಟಿದ್ದೇನೆ ಈ ವಂಶವನ್ನು,”


ಈ ಕಾರಣ ನನ್ನ ನಾಮಕ್ಕೆ ನೆಲೆಯಾದ ಹಾಗು ನಿಮ್ಮ ಭರವಸೆಗೆ ಆಧಾರವಾದ ಈ ದೇವಾಲಯಕ್ಕೆ, ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ಈ ಸ್ಥಳಕ್ಕೆ ನಾನು ಶಿಲೋಗೆ ಬರಮಾಡಿದ ಗತಿಯನ್ನೇ ಬರಮಾಡುವೆನು.


“ಸ್ವಾಮೀ, ನೀವು ಜುದೇಯವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರೊ? ಸಿಯೋನಿನ ಬಗ್ಗೆ ನಿಮಗೆ ಮನಃಪೂರ್ವಕವಾದ ಅಸಹ್ಯ ಹುಟ್ಟಿದೆಯೊ? ಗುಣವಾಗದಂಥ ಪೆಟ್ಟನ್ನು ನಮಗೆ ಕೊಟ್ಟಿರುವಿರಿ ಏಕೆ? ಸುಖವನ್ನು ನಿರೀಕ್ಷಿಸಿದೆವು, ಸಿಗಲಿಲ್ಲ ನಮಗೆ ಯಾವ ಫಲ. ಸುಕ್ಷೇಮವನ್ನು ಎದುರು ನೋಡಿದೆವು, ಇಗೋ ಬಂದೊದಗಿದೆ ಸಂಕಟ.


ನಾನು ನಿಮಗೆ ಹಕ್ಕು ಬಾಧ್ಯತೆಯಾಗಿ ದಯಪಾಲಿಸಿದ ಸೊತ್ತನ್ನು ನೀವು ದೋಷದಿಂದಲೆ ಕಳೆದುಕೊಳ್ಳುವಿರಿ. ನೀವು ನೋಡದ ನಾಡಿನಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೇ ಊಳಿಗದವರನ್ನಾಗಿ ಮಾಡುವೆನು. ನೀವು ನನ್ನ ಕೋಪಾಗ್ನಿಯನ್ನು ಹೊತ್ತಿಸಿದ್ದೀರಿ. ಅದು ನಿರಂತರವಾಗಿ ಉರಿಯುತ್ತಿರುವುದು.


“ಪ್ರವಾದಿಯಾಗಲಿ, ಯಾಜಕನಾಗಲಿ, ಈ ಜನರಲ್ಲಿ ಯಾರೇ ಆಗಲಿ, ‘ಸರ್ವೇಶ್ವರ ದಯಪಾಲಿಸಿರುವ ಹೊರೆ ಏನು?’ ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆಂದು ಹೇಳು: ‘ನೀವೇ ಸರ್ವೇಶ್ವರನ ಹೊರೆ. ನಿಮ್ಮನ್ನು ಅವರು ಎಸೆದುಬಿಡುವರು.’


ಈ ಕಾರಣ ನಿಮ್ಮನ್ನು ಮತ್ತು ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ನಗರವನ್ನು ನನ್ನೆದುರಿನಿಂದ ಎತ್ತಿ ಎಸೆದುಬಿಡುವೆನು.


ಸರ್ವೇಶ್ವರ ಇಂತೆನ್ನುತ್ತಾರೆ: “ಪ್ರೀತಿಸಿದೆನು ಇಸ್ರಯೇಲನ್ನು ಅದರ ಬಾಲ್ಯಾವಸ್ಥೆಯಿಂದ; ಕರೆದೆನು ನನ್ನ ಆ ಪುತ್ರನನು ಈಜಿಪ್ಟಿನಿಂದ.


ಬೆನ್ಯಾಮೀನ್ ಕುಲ ಕುರಿತು ಮೋಶೆ ನುಡಿದದ್ದು : “ಸರ್ವೇಶ್ವರನಿಗೆ ಪ್ರಿಯನಾದ ಇವನು ನಿರ್ಭಯವಾಗಿ ವಾಸಮಾಡುವನು. ಇವನನ್ನಾತ ತಬ್ಬಿರುವನು ದಿನವಿಡೀ ತನ್ನ ತೋಳತೆಕ್ಕೆಯಲಿ.”


ನನ್ನ ಪ್ರಜೆಗಳಲ್ಲಿ ಉಳಿದಿರುವವರನ್ನು ತಳ್ಳಿಬಿಟ್ಟು ಶತ್ರುಗಳ ಕೈಗೆ ಒಪ್ಪಿಸುವೆನು. ಅವರ ಶತ್ರುಗಳೆಲ್ಲಾ ಬಂದು ಅವರನ್ನು ಸುಲಿದು ಸೂರೆಮಾಡುವರು.


ಗುರಿಮಾಡಿದನು ತನ್ನ ಪ್ರಜೆಯನು ಖಡ್ಗಕೆ I ಉಗ್ರವಾದನು ತನ್ನ ವಾರಸುದಾರರಿಗೆ II


ಕೆರಳಿತು ಕೋಪ ಆ ಜನರ ಮೇಲೆ ಪ್ರಭುವಿಗೆ I ತನ್ನವರಾ ನಡತೆ ಅಸಹ್ಯವಾಯಿತು ಆತನಿಗೆ II


ನೀವು ಈ ಮಾತುಗಳನ್ನು ಕೇಳದೆಹೋದರೆ ಈ ಅರಮನೆ ಹಾಳುಬೀಳುವುದು. ಇದನ್ನು ನನ್ನ ಮೇಲೆ ಆಣೆಯಿಟ್ಟು ಹೇಳುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು