Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:21 - ಕನ್ನಡ ಸತ್ಯವೇದವು C.L. Bible (BSI)

21 ನಿನ್ನೊಡನೆ ಗೆಳೆಯರಂತೆ ಬಾಳಲು ನೀನೇ ಪಳಗಿಸಿದವರನ್ನು ನಿನಗೆ ಒಡೆಯರನ್ನಾಗಿ ನಾನು ನೇಮಿಸುವಾಗ ಏನು ಹೇಳುವೆ? ಹೆರುವವಳಿಗೆ ಬರುವಂಥ ವೇದನೆ ಆಗ ನಿನಗೆ ಬರದೆ ಇರುವುದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿನ್ನೊಡನೆ ಗೆಳೆಯರಂತೆ ಬಾಳಲು ನೀನು ಅಭ್ಯಾಸಮಾಡಿಸಿದವರನ್ನು ಯೆಹೋವನು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವುದಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಿನ್ನಲ್ಲಿ ಬಳಿಕೆಗೊಳ್ಳುವಂತೆ ನೀನು ಅಭ್ಯಾಸಮಾಡಿಸಿದವರನ್ನು [ಯೆಹೋವನು] ನಿನಗೆ ತಲೆಯಾಗಿ ನೇವಿುಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವದಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನು ನಿನಗೆ ಆ ಮಂದೆಯ ಲೆಕ್ಕವನ್ನೊಪ್ಪಿಸು ಎಂದು ಕೇಳಿದರೆ ಏನು ಹೇಳುವೆ? ಜನರಿಗೆ ದೇವರ ಬಗ್ಗೆ ತಿಳಿಸುವದು ನಿನ್ನ ಕರ್ತವ್ಯವಾಗಿತ್ತು. ನಿನ್ನ ನಾಯಕರು ಜನರಿಗೆ ಮಾರ್ಗದರ್ಶನ ಮಾಡಬೇಕಾಗಿತ್ತು. ಆದರೆ ಅವರು ತಮ್ಮ ಕೆಲಸವನ್ನು ಮಾಡಲಿಲ್ಲ. ಆದ್ದರಿಂದ ನಿನಗೆ ಹೆಚ್ಚಿನ ನೋವು ಮತ್ತು ಕಷ್ಟಗಳು ಉಂಟಾಗುವವು. ಪ್ರಸವವೇದನೆಯಂಥ ನೋವು ನಿನಗಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿಮ್ಮ ವಿಶೇಷ ಮಿತ್ರರಾಗಿ ನೀವು ಬೆಳೆಸಿದವರನ್ನು ಯೆಹೋವ ದೇವರು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳೋ ಎಂಬಂತೆ ಹಿಡಿಯುವುದಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:21
17 ತಿಳಿವುಗಳ ಹೋಲಿಕೆ  

ಭಯಭ್ರಾಂತರಾಗುವರು ಅವರೆಲ್ಲರು; ಆಕ್ರಮಿಸುವುವು ಅವರನ್ನು ಯಾತನೆ ವೇದನೆಗಳು. ಸಂಕಟಪಡುವರವರು ಹೆರುವ ಹೆಂಗಸಿನಂತೆ; ಒಬ್ಬರನ್ನೊಬ್ಬರು ನೋಡುವರು ದಿಗ್ಭ್ರಾಂತರಾದವರಂತೆ; ಅವರ ಮುಖಗಳು ಕೆಂಪೇರುವುವು ಬೆಂಕಿಯಂತೆ.


ಸಿಯೋನ್ ನಗರಿ ಪ್ರಸವವೇದನೆ ಪಡುವವಳಂತೆ ಚೊಚ್ಚಲ ಹೆರಿಗೆಯ ವೇದನೆಯನ್ನು ಅನುಭವಿಸುವವಳಂತೆ ಕಿರಿಚಿಕೊಳ್ಳುವ ಕೂಗನ್ನು ನಾನು ಕೇಳಿದ್ದೇನೆ. ಉಬ್ಬಸಪಡುತ್ತಾ ಎರಡು ಕೈಗಳನ್ನೂ ಚಾಚಿ ‘ಅಯ್ಯೋ ನನಗೆ ಕೇಡು, ಕೊಲೆಗಡುಕನ ಮುಂದೆ ನನ್ನ ಪ್ರಾಣ ಉಡುಗುತ್ತಿದೆ’ ಎಂದು ಅರುಚಿಕೊಳ್ಳುತ್ತಿಹಳು.


ಜುದೇಯದ ಅರಸನ ಮನೆಯಲ್ಲಿ ಉಳಿದಿರುವ ಎಲ್ಲ ಮಹಿಳೆಯರನ್ನು ಬಾಬಿಲೋನಿಯದ ಅರಸನ ದಳಪತಿಗಳ ಬಳಿಗೆ ತರಲಾಗುವುದು. ಆ ಮಹಿಳೆಯರೇ: ‘ಆಪ್ತ ಮಿತ್ರರು ನಿನ್ನನ್ನು ವಂಚಿಸಿ ಒಳಪಡಿಸಿಕೊಂಡರು; ನಿನ್ನ ಕಾಲುಗಳು ಬದಿಯಲ್ಲಿ ಹೂತಿರುವುದನ್ನು ನೋಡಿಯೂ ನಿನ್ನಿಂದ ದೂರವಾದರು’ ಎಂದು ತಮ್ಮನ್ನು ನಿಂದಿಸುವರು.


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ದಂಡನೆಯ ದಿನದಂದು ಏನು ಮಾಡುವಿರಿ? ದೂರದಿಂದ ಬರುವ ವಿನಾಶದಿಂದ ಹೇಗೆ ಪಾರಾಗುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಆಸ್ತಿಪಾಸ್ತಿಯನ್ನು ಎಲ್ಲಿ ಅವಿತಿಡುವಿರಿ?


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ನಿನ್ನನ್ನು ಸಂಹರಿಸುವವನೆದುರಿಗೆ ನಿಂತು, ‘ನಾನು ದೇವರು’ ಎಂದು ಹೇಳಬಲ್ಲೆಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ!


ನಗರಗಳನ್ನು ಹಿಡಿಯುವನು, ಕೋಟೆಗಳನ್ನು ಆಕ್ರಮಿಸುವನು. ಆ ದಿನದಂದು, ಹೆರುವ ಹೆಂಗಸಿನ ಎದೆಯಂತೆ ಅದರುವುದು ಮೋವಾಬಿನ ಶೂರರ ಎದೆ.


ಗಂಡಸು ಪ್ರಸವವೇದನೆ ಪಡುವುದುಂಟೆ, ಹೇಳು? ಆದರೂ ಪ್ರತಿಯೊಬ್ಬನು ಹೆರುವ ಮಹಿಳೆಯಂತೆ ಸೊಂಟ ಹಿಸಿಕಿಕೊಳ್ಳುವುದು ನನ್ನ ಕಣ್ಣಿಗೆ ಬೀಳುತ್ತಿದೆ ಏಕೆ? ಅವರ ಮುಖಗಳು ಬಿಳಿಚಿಕೊಂಡಿವೆ ಏಕೆ?


‘ಲೆಬನೋನ್’ ಅರಮನೆಯಲ್ಲಿ ವಾಸಿಸುವವಳೇ, ದೇವದಾರುಗಳ ನಡುವೆ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂಥ ಸಂಕಟಗಳು ಸಂಭವಿಸಿದಾಗ ನಿನಗೊದಗುವ ಪರಿಸ್ಥಿತಿ ಎಷ್ಟೋ ದುಃಖಕರ !


ಜೆರುಸಲೇಮಿನ ಜನರು : “ಈ ಸುದ್ದಿಯನ್ನು ಕೇಳಿದಾಗ ನಮ್ಮ ಕೈಗಳು ಜೋಲುಬಿದ್ದುವು. ಪ್ರಸವವೇದನೆಯಂಥ ಯಾತನೆ ನಮ್ಮನ್ನು ಆವರಿಸಿತು.


ನಾನು ಕಂಡ ಈ ಭೀಕರ ದರ್ಶನದಿಂದ ನನಗೆ ಸೊಂಟ ಮುರಿದಂತಾಗಿದೆ. ಹೆರಿಗೆಯಂಥ ಬೇನೆಯುಂಟಾಗಿದೆ. ಕಿವಿ ಕಿತ್ತುಹೋಗುವಂತಿದೆ. ಕಣ್ಣು ಕರುಡಾಗುವಂತಿದೆ.


ಆಹಾಜನು ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪೆಲೆಸರನ ಬಳಿಗೆ ದೂತರನ್ನು ಕಳುಹಿಸಿ, “ನಾನು ನಿಮ್ಮ ಸೇವಕ ಹಾಗು ಕುವರ; ನೀವು ಬಂದು ನನ್ನನ್ನು, ನನಗೆ ವಿರುದ್ಧ ದಂಡೆತ್ತಿ ಬಂದಿರುವ ಸಿರಿಯಾದವರ ಮತ್ತು ಇಸ್ರಯೇಲರ ಅರಸುಗಳ ಕೈಗೆ ಸಿಕ್ಕದಂತೆ, ಕಾಪಾಡಿ,” ಎಂದು ಹೇಳಿಸಿದನು.


ಇವೆಲ್ಲವೂ ಪ್ರಸವ ವೇದನೆಯ ಪ್ರಾರಂಭ ಮಾತ್ರ.


ನಾನು, ‘ಅನ್ಯದೇವತೆಗಳನ್ನು ಅರಸಿ ಓಡಬೇಡ, ನಿನ್ನ ಪಾದರಕ್ಷೆ ಸವೇದೀತು, ನಿನ್ನ ಗಂಟಲು ಸೊರಗೀತು’ ಎಂದೆ. ನೀನೋ, ‘ಆ ಮಾತು ಆಶಾದಾಯಕವಲ್ಲ, ಅದನ್ನು ಕೇಳಲಾಗದು; ಅನ್ಯದೇವತೆಗಳ ಮೇಲೆ ಮೋಹಗೊಂಡಿದ್ದೇನೆ. ಅವರನ್ನೇ ಹಿಂಬಾಲಿಸುತ್ತೇನೆ’ ಎಂದೆ.”


ಎಲೈ ಜೆರುಸಲೇಮ್, ಸೂರೆಯಾಗುವಾಗ ಏನು ಮಾಡುವೆ? ಪಟ್ಟದ ಬಟ್ಟೆಗಳನ್ನು ಉಟ್ಟುಕೊಂಡು ಚಿನ್ನದ ಒಡವೆಗಳನ್ನು ತೊಟ್ಟುಕೊಂಡು ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೆ ಏನು ಪ್ರಯೋಜನ? ಎಲ್ಲವೂ ವ್ಯರ್ಥ ! ನಿನ್ನ ಮಿಂಡರೇ ನಿನ್ನನ್ನು ತಿರಸ್ಕರಿಸಿ ನಿನ್ನ ಪ್ರಾಣಹುಡುಕುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು