Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:22 - ಕನ್ನಡ ಸತ್ಯವೇದವು C.L. Bible (BSI)

22 ಇವು ನನಗೇಕೆ ಸಂಭವಿಸಿದವು ಎಂದು ಮನದೊಳಗೇ ನೀನು ಅಂದುಕೊಳ್ಳುವೆ. ನೀನು ಮಾಡಿದುದು ಮಹಾಪಾಪ ! ಆದ್ದರಿಂದ ನಿನ್ನ ಉಡುಗೆಯನ್ನೇ ಕೀಳಲಾಗುವುದು. ನೀನು ಅತ್ಯಾಚಾರಕ್ಕೆ ಈಡಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ಇವು ನನಗೆ ಏಕೆ ಸಂಭವಿಸಿದವು” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇವು ನನಗೆ ಏಕೆ ಸಂಭವಿಸಿದವು ಎಂದು ನೀನು ಮನದೊಳಗೆ ಅಂದುಕೊಂಡರೆ ನಿನ್ನ ನೆರಿಗೆಯು ಕೀಳಲ್ಪಟ್ಟು ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಇಂಥ ಕೇಡು ನನಗೆ ಏಕೆ ಉಂಟಾಯಿತು?” ಎಂದು ನಿನ್ನನ್ನು ನೀನೇ ಕೇಳಿಕೊಳ್ಳಬಹುದು. ನೀನು ಮಾಡಿದ ಅನೇಕ ಪಾಪಗಳ ಫಲದಿಂದಲೇ ಆಯಿತು. ನಿನ್ನ ಪಾಪಗಳ ಫಲವಾಗಿ ನಿನ್ನ ಲಂಗವನ್ನು ಹರಿಯಲಾಯಿತು. ನಿನ್ನ ಪಾದರಕ್ಷೆಯನ್ನು ಕಿತ್ತುಕೊಳ್ಳಲಾಯಿತು. ನಿನ್ನನ್ನು ಕಂಗೆಡಿಸುವದಕ್ಕಾಗಿ ಅವರು ಹೀಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಒಂದು ವೇಳೆ, “ಇವು ನನಗೆ ಏಕೆ ಸಂಭವಿಸಿದವು?” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ನೆರಿಗೆಯು ಕೀಳಲಾಗುವುದು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:22
24 ತಿಳಿವುಗಳ ಹೋಲಿಕೆ  

ಇಂತೆನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ: “ನಿನೆವೆ, ನಿನಗೆ ನಾ ವಿರೋಧಿಯಾಗಿರುವೆನು ಬಿಚ್ಚಿ ಮುಖದ ಮೇಲೆತ್ತುವೆನು ನಿನ್ನ ನೆರಿಗೆಗಳನು ಜನಾಂಗಗಳಿಗೆ ತೋರಿಸುವೆನು ನಿನ್ನ ಬೆತ್ತಲೆತನವನು ರಾಜ್ಯಗಳಿಗೆ ಕಾಣಿಸುವೆನು ನಿನ್ನ ಅವಮಾನವನು.


‘ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯೇ ಇವುಗಳನ್ನೆಲ್ಲ ನಮಗೇಕೆ ಮಾಡಿದ್ದಾರೆ?’ ಎಂದು ಕೇಳುವಾಗ ನೀನು ಅವರಿಗೆ, ‘ನೀವು ಸರ್ವೇಶ್ವರನನ್ನೇ ತೊರೆದು, ಸ್ವಂತನಾಡಿನಲ್ಲೆ ಅನ್ಯದೇವತೆಗಳಿಗೆ ಸೇವೆಸಲ್ಲಿಸಿದ್ದೀರಿ. ಅಂತೆಯೇ ಹೊರನಾಡಿನಲ್ಲಿ ಅನ್ಯರಿಗೆ ಸೇವೆಮಾಡುವಿರಿ’ ಎಂದು ಹೇಳು.”


ಅವಳ ನಲ್ಲರ ಕಣ್ಣೆದುರಿಗೆ ಅವಳ ಲಜ್ಜೆಗೇಡಿತನವನ್ನು ಬಯಲುಮಾಡುವೆನು. ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.


ಜೆರುಸಲೇಮ್ ಅಶುದ್ಧಳಾದಳು ಪದೇ ಪದೇ ಪಾಪಮಾಡಿ. ಹೊಗಳುತ್ತಿದ್ದವರೇ ತೆಗಳುವವರಾದರು ಆಕೆಯ ನಗ್ನತೆಯನ್ನು ನೋಡಿ. ಆಕೆಯೋ ನಿಟ್ಟುಸಿರಿಡುತ್ತಿರುವಳು ಮುಖವನ್ನು ಮರೆಮಾಡಿ.


ನಿನ್ನ ಉಡುಗೆಯನ್ನು ನಿನ್ನ ಕಣ್ಮುಂದೆಯೇ ಕೀಳಿಸುವೆನು. ನೀನು ಅತ್ಯಾಚಾರಕ್ಕೆ ಈಡಾಗುವೆ.


‘ಆ ಜನರು ನಮಗಿಂತ ಹೆಚ್ಚುಮಂದಿ ಇದ್ದಾರೆ; ಅವರನ್ನು ಹೊರದೂಡಲು ನಮ್ಮಿಂದ ಹೇಗಾದೀತು? ಎಂದುಕೊಳ್ಳುತ್ತೀರೋ?


ಒಡೆಯರಾದ ಸ್ವಾಮಿ ಅವರ ನಡುನೆತ್ತಿಯನ್ನು ಹುಣ್ಣಾಗಿಸಿ ಬೋಳುಮಾಡುವರು. ಅವರ ಮಾನವನ್ನು ಬಯಲುಮಾಡುವರು.


“ಆಗ ದೀಪವನ್ನು ಹಿಡಿದುಕೊಂಡು ಜೆರುಸಲೇಮನ್ನೆಲ್ಲಾ ಹುಡುಕಿಬಿಡುವೆನು. ‘ಸರ್ವೇಶ್ವರ ಮೇಲನ್ನಾಗಲಿ, ಕೇಡನ್ನಾಗಲಿ ಏನನ್ನೂ ಮಾಡುವುದಿಲ್ಲ’ ಎಂದುಕೊಳ್ಳುವ ಮದ್ಯದ ಮಡ್ಡಿಯಂಥ ಜಡ ಮನಸ್ಕರನ್ನು ದಂಡಿಸುವೆನು.


ಎಫ್ರಯಿಮ್ ಹೇಳಿಕೊಳ್ಳುವುದೇನೆಂದರೆ: “ನಾನು ಐಶ್ವರ್ಯವಂತನಾಗಿಬಿಟ್ಟೆ, ನನಗಾಗಿ ಆಸ್ತಿಪಾಸ್ತಿಯನ್ನು ಗಳಿಸಿಕೊಂಡಿದ್ದೇನೆ. ನನ್ನ ಗಳಿಕೆಯಲ್ಲಿ ಪಾಪವೆಂಬ ದೋಷವೇನೂ ಇಲ್ಲ.”


ಇಲ್ಲವಾದರೆ ಅವಳನ್ನು ನಗ್ನವಾಗಿಸಿ (ಹುಟ್ಟಿದಾಗ ಇದ್ದಂತೆ) ಬೆತ್ತಲೆಯಾಗಿ ನಿಲ್ಲಿಸುವೆನು. ಅವಳನ್ನು ಬೆಂಗಾಡನ್ನಾಗಿ ಮಾಡಿ, ಮರುಭೂಮಿಯಂತೆ ಮಾರ್ಪಡಿಸಿ, ನೀರಡಿಕೆಯಿಂದ ಸಾಯುವಂತೆ ಮಾಡುವೆನು.


ಭೋಗಾಸಕ್ತಳೆ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ‘ಏಕೈಕಳು ನಾನೇ, ನನ್ನ ಹೊರತು ಇನ್ನಾರು ಇಲ್ಲ,’ ಎನ್ನುವವಳೇ, ‘ವಿಧವೆಯಾಗೆನು, ಪುತ್ರಶೋಕ ಎನಗಿರದು’ ಎನ್ನುವವಳೇ, ಇದನು ಕೇಳು :


ಅದೇ ಪ್ರಕಾರ ಅಸ್ಸೀರಿಯದ ಅರಸನು ಈಜಿಪ್ಟಿನ ಸೆರೆಯಾಳುಗಳನ್ನೂ ಸುಡಾನಿನ ಕೈದಿಗಳನ್ನೂ - ದೊಡ್ಡವರು ಚಿಕ್ಕವರು ಎನ್ನದೆ ಎಲ್ಲರನ್ನೂ ಬಟ್ಟೆಯಿಲ್ಲದೆ ಬೆತ್ತಲೆಯಾಗಿಸಿ, ಬರಿಗಾಲಿನಲ್ಲೇ ಸೆರೆಮನೆಗೆ ನಡೆಯುವಂತೆ ಮಾಡುವನು. ಹೀಗೆ ಈಜಿಪ್ಟಿನ ನಿವಾಸಿಗಳನ್ನು ಮಾನಭಂಗಕ್ಕೆ ಗುರಿಪಡಿಸುವನು.


“ಪ್ರವಾದಿ ಹೇಳಿದ ಮಾತು ಸರ್ವೇಶ್ವರನ ಮಾತಲ್ಲವೆಂದು ತಿಳಿದುಕೊಳ್ಳುವುದು ಹೇಗೆ ಎಂದುಕೊಳ್ಳುತ್ತೀರೋ?


‘ಈ ಭಾಗ್ಯ ನಮ್ಮ ಸಾಮರ್ಥ್ಯ ಸಾಹಸಗಳಿಂದಲೇ ನಮಗೆ ಲಭಿಸಿತು’ ಎಂದುಕೊಂಡೀರಿ ಎಚ್ಚರಿಕೆ!


ಅವರ ಪ್ರವಾದನೆಗೆ ಕಿವಿಗೊಡುವ ಜನರು ಕೂಡ ಕ್ಷಾಮಖಡ್ಗಗಳಿಗೆ ತುತ್ತಾಗುವರು. ಜೆರುಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು. ಅವರನ್ನೂ ಅವರ ಮಡದಿ ಮಕ್ಕಳನ್ನೂ ಹೂಣಲು ಸಹ ಯಾರೂ ಇರುವುದಿಲ್ಲ. ಅವರ ದುಷ್ಟತನವನ್ನು ಅವರ ಮೇಲೆಯೆ ಸುರಿದುಬಿಡುವೆನು.”


ನಿನ್ನ ವಸ್ತ್ರಗಳನ್ನು ಸೆಳೆದು, ನಿನ್ನ ಚಂದದ ಒಡವೆಗಳನ್ನು ಕಳಚಿಬಿಡುವರು.


ಅವರ ತಾಯಿ ವೇಶ್ಯೆಯಾಗಿದ್ದಾಳೆ. ಲಜ್ಜೆಗೆಟ್ಟ ಹೆಂಗಸಾಗಿ ವರ್ತಿಸಿದ್ದಾಳೆ. ‘ನನಗೆ ಅನ್ನಪಾನ, ಉಣ್ಣೆ ಉಡಿಗೆ, ಎಣ್ಣೆತೈಲ, ಪಾಯಸಪಾನಕಗಳನ್ನು ಕೊಡುವಂಥ ನಲ್ಲರ ಹಿಂದೆ ಹೋಗುವೆನು’ ಎಂದುಕೊಂಡಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು