Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:12 - ಕನ್ನಡ ಸತ್ಯವೇದವು C.L. Bible (BSI)

12 ಇವರು ಉಪವಾಸ ಕೈಗೊಂಡರೂ ಇವರ ಮೊರೆಯನ್ನು ನಾನು ಕೇಳುವುದಿಲ್ಲ. ದಹನಬಲಿಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದರೂ ಸ್ವೀಕರಿಸುವುದಿಲ್ಲ. ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಇವರನ್ನು ಮುಗಿಸಿಬಿಡುತ್ತೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇವರು ಉಪವಾಸ ಮಾಡುವಾಗ ಇವರ ಮೊರೆಯನ್ನು ಕೇಳೆನು; ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು; ಖಡ್ಗ ಕ್ಷಾಮ ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು ಉಪವಾಸ ಮಾಡಿದರೂ, ನಾನು ಅವರ ಮೊರೆಯನ್ನು ಕೇಳುವುದಿಲ್ಲ. ಅವರು ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವರನ್ನು ಅಂಗೀಕರಿಸುವುದಿಲ್ಲ. ಆದರೆ ನಾನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:12
32 ತಿಳಿವುಗಳ ಹೋಲಿಕೆ  

ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು. ಅವರನ್ನು ಕಟಾಕ್ಷಿಸೆನು, ಉಳಿಸೆನು; ಅವರು ನನ್ನ ಕಿವಿಯಲ್ಲಿ ಎಷ್ಟು ಗಟ್ಟಿಯಾಗಿ ಕೂಗಿಕೊಂಡರೂ ನಾನು ಆಲಿಸೆನು.”


ಆದಕಾರಣ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ : ಇಗೋ, ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ಬರಮಾಡುವೆನು. ಇವರು ನನಗೆ ಮೊರೆಯಿಟ್ಟರೂ ನಾನೂ ಕಿವಿಗೊಡೆನು.


ಅವರು ಶೆಬದ ಧೂಪವನ್ನಾಗಲಿ, ದೂರದೇಶದ ಒಳ್ಳೆಯ ಸುಗಂಧವನ್ನಾಗಲಿ ತಂದು ನನಗೆ ಅರ್ಪಿಸುವುದರಿಂದ ನನಗೆ ಏನೂ ಪ್ರಯೋಜನವಿಲ್ಲ. ಅವರು ಒಪ್ಪಿಸುವ ದಹನಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಯಜ್ಞಬಲಿಗಳೂ ನನಗೆ ಇಷ್ಟವಿಲ್ಲ.


ಆಗ ನನಗೆ ಮೊರೆಯಿಟ್ಟರೂ ಉತ್ತರಿಸೆನು; ಆತುರದಿಂದ ಹುಡುಕಿದರೂ ನಾನು ಕಾಣಸಿಗೆನು.


ಆಗ ಹೀಗೆಂದೆ: ‘ನಾನು ಕೂಗಿದಾಗ ಅವರು ಕೇಳದೆಹೋದರು; ಅವರು ಕೂಗಿದಾಗ ನಾನು ಕೇಳಲಿಲ್ಲ.’


ಇಷ್ಟೆಲ್ಲಾ ಮಾಡಿದಂಥ ನೀವು ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತೀರಿ. ಆದರೆ ಅವರು ನಿಮಗೆ ಉತ್ತರಕೊಡುವುದಿಲ್ಲ. ಬದಲಿಗೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಿಮಗೆ ವಿಮುಖರಾಗುವರು.”


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಖಡ್ಗ, ಕ್ಷಾಮ, ದುಷ್ಟಮೃಗ, ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಜೆರುಸಲೇಮಿನ ಮೇಲೆ ಒಟ್ಟಿಗೆ ಬರಮಾಡಿ ಜನ ಜಾನುವಾರಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!


ಅವರಿಗೂ ಅವರ ಪೂರ್ವಜರಿಗೂ ನಾನು ಅನುಗ್ರಹಿಸಿದ ನಾಡಿನಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ, ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು.”


ಅವರು ಘೋರ ಮರಣಕ್ಕೆ ಗುರಿಯಾಗುವರು. ಅವರಿಗಾಗಿ ಯಾರೂ ದುಃಖಿಸುವುದಿಲ್ಲ. ಅವರನ್ನು ಯಾರೂ ಹೂಣುವುದಿಲ್ಲ. ಅವರು ಗೊಬ್ಬರವಾಗಿ ಭೂಮಿಯ ಮೇಲೆ ಬಿದ್ದಿರುವರು. ಖಡ್ಗದಿಂದ ಹಾಗು ಕ್ಷಾಮದಿಂದ ಅವರು ನಾಶವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಜಂತುಗಳಿಗೂ ಆಹಾರವಾಗುವುವು.”


ಇವರಿಗಾಗಲಿ ಇವರ ಪೂರ್ವಜರಿಗಾಗಲಿ ಪರಿಚಯವಿಲ್ಲದ ಜನಾಂಗಗಳ ನಡುವೆ ಇವರನ್ನು ಚದರಿಸಿಬಿಡುವೆನು. ಇವರು ಅಳಿದು ಹಾಳಾಗುವ ತನಕ ಇವರ ಹಿಂದೆ ಖಡ್ಗವನ್ನು ಕಳಿಸುವೆನು.”


“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ? ನಮ್ಮನ್ನು ನಾವೇ ತಗ್ಗಿಸಿಕೊಂಡಿದ್ದೇವೆ, ನೀನು ಗಮನಿಸದೆ ಇರುವುದೇಕೆ?” ಎಂದುಕೊಳ್ಳುತ್ತಾರೆ.


ಧರ್ಮಶಾಸ್ತ್ರಕ್ಕೆ ಕಿವಿಮುಚ್ಚಿಕೊಳ್ಳುವವನ ಪ್ರಾರ್ಥನೆ, ದೇವರಿಂದ ತಿರಸ್ಕೃತವಾದ ಪ್ರಾರ್ಥನೆ.


ದುಷ್ಟರು ಅರ್ಪಿಸುವ ಬಲಿಯಜ್ಞ ಅಸಹ್ಯ; ದುರಾಲೋಚನೆಯಿಂದ ಅರ್ಪಿಸುವುದು ಮತ್ತೂ ಅಸಹ್ಯ.


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


ಆಗ ಬೂದು ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು, ‘ಮೃತ್ಯು’ ಎಂದು. ಅವನನ್ನು ‘ಮೃತ್ಯುಲೋಕ’ ಎಂಬಾತನು ಹಿಂಬಾಲಿಸಿದನು. ಇವರಿಗೆ ಖಡ್ಗ, ಕ್ಷಾಮ, ಅಂಟುಜಾಡ್ಯ, ಕಾಡುಮೃಗ ಇವುಗಳಿಂದ ಭೂಲೋಕದ ಕಾಲುಭಾಗದ ಜನತೆಯನ್ನು ಕೊಂದುಹಾಕುವುದಕ್ಕೆ ಅಧಿಕಾರವನ್ನು ಕೊಡಲಾಗಿತ್ತು.


ಅವನಿಗೆ ಕಷ್ಟದುಃಖ ಬಂದೊದಗಲು ದೇವರು ಆಲೈಸುವನೆ ಅವನ ಮೊರೆಯನು?


“ನಾನು ಕೊಯ್ಲಿಗೆ ಕೈಹಾಕಲು ನೋಡಿದೆ. ಆದರೆ ದ್ರಾಕ್ಷೆಯ ಬಳ್ಳಿಗಳಲ್ಲಿ ಹಣ್ಣಿಲ್ಲ, ಅಂಜೂರದ ಮರದಲ್ಲಿ ಫಲವಿಲ್ಲ. ಎಲೆಯೂ ಬಾಡಿಹೋಗಿದೆ. ಪರರ ತುಳಿತಕ್ಕೆ ಈಡಾಗಿ ಇರುವುದು ಕಾಣುತ್ತದೆ. ಇದು ಸರ್ವೇಶ್ವರನಾದ ನನ್ನ ನುಡಿ.”


ಈ ನಗರದಲ್ಲಿ ವಾಸಮಾಡುವ ಜನರನ್ನೂ ಜಾನುವಾರುಗಳನ್ನೂ ಹಿಂಸೆಗೆ ಗುರಿಪಡಿಸುವೆನು; ಘೋರ ಜಾಡ್ಯಕ್ಕೆ ತುತ್ತಾಗಿಸಿ ಸಾಯುವಂತೆ ಮಾಡುವೆನು.


“ಇಗೋ, ಮುತ್ತಿಗೆಯ ದಿಬ್ಬಗಳು! ನಗರವನ್ನು ಆಕ್ರಮಿಸಲು ಬಂದುಬಿಟ್ಟಿದ್ದಾರೆ. ಖಡ್ಗ-ಕ್ಷಾಮ-ವ್ಯಾಧಿಗಳಿಂದ ನಗರವು ವಿರೋಧಿಗಳಾದ ಬಾಬಿಲೋನಿಯರ ಕೈ ಹಿಡಿತಕ್ಕೆ ಸಿಕ್ಕಿಹೋಗಿದೆ. ನೀವು ನುಡಿದಂತೆ ನೆರವೇರಿದೆ. ನಿಮ್ಮ ಕಣ್ಣಿಗೆ ಎಲ್ಲ ಬಟ್ಟಬಯಲಾಗಿದೆ.


“ನಾನು ಆ ನಾಡಿನ ಮೇಲೆ ಕೋಪಕಾರಿ, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನ ಜಾನುವಾರುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ


ಅವರು ತಮ್ಮ ದನಕುರಿಗಳೊಂದಿಗೆ ಸರ್ವೇಶ್ವರಸ್ವಾಮಿಯನ್ನು ಅರಸಿಹೋದರೂ, ಅವರನ್ನು ಕಾಣರು. ಸರ್ವೇಶ್ವರ ಅವರಿಂದ ಮರೆಯಾಗಿದ್ದಾರೆ.


“ನಿಮ್ಮ ಹಬ್ಬಹುಣ್ಣಿಮೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ. ನಿಮ್ಮ ಉತ್ಸವಗಳ ವಾಸನೆಯೂ ನನಗೆ ಬೇಡ.


“ನನ್ನ ಬಲಿಪೀಠದ ಮೇಲೆ ಯಾರೂ ಜ್ಯೋತಿಯನ್ನು ವ್ಯರ್ಥವಾಗಿ ಬೆಳಗಿಸದಂತೆ ಮಹಾದೇವಾಲಯದ ಬಾಗಿಲನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು. ನಾನು ನಿಮ್ಮನ್ನು ಮೆಚ್ಚಿಕೊಂಡಿಲ್ಲ. ನಿಮ್ಮ ಕೈಯಿಂದ ಕಾಣಿಕೆಗಳನ್ನು ನಾನು ಸ್ವೀಕರಿಸುವುದಿಲ್ಲ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನೀವು ಇನ್ನೊಂದು ಕೆಲಸವನ್ನು ಮಾಡುತ್ತೀರಿ: ‘ಸರ್ವೇಶ್ವರ ನಮ್ಮ ಕಾಣಿಕೆಗಳನ್ನು ಲಕ್ಷಿಸುವುದಿಲ್ಲ. ನಮ್ಮ ಕೈಯಿಂದ ಅವುಗಳನ್ನು ಪ್ರಸನ್ನತೆಯಿಂದ ಸ್ವೀಕರಿಸುವುದಿಲ್ಲ’ ಎಂದುಕೊಂಡು ನರಳುತ್ತಾ ಗೋಳಾಡುತ್ತಾ ಕಣ್ಣೀರಿನಿಂದ ಬಲಿಪೀಠವನ್ನೇ ಮುಳುಗಿಸಿಬಿಡುತ್ತೀರಿ.


ಆದುದರಿಂದ ಯೆರೆಮೀಯನೇ, ಈ ಜನರ ಪರವಾಗಿ ಬೇಡಿಕೊಳ್ಳಬೇಡ. ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂಬೇಡ. ಅವರಿಗೆ ಕೇಡು ಬಂದಾಗ ನನ್ನನ್ನು ಗೋಗರೆದರೂ ನಾನು ಕೇಳುವುದಿಲ್ಲ.


ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು