ಯೆರೆಮೀಯ 14:17 - ಕನ್ನಡ ಸತ್ಯವೇದವು C.L. Bible (BSI)17 “ನೀನು ನಿನ್ನ ದುಃಖವನ್ನು ಅವರಿಗೆ ಹೀಗೆಂದು ವ್ಯಕ್ತಪಡಿಸು - ‘ರಾತ್ರಿಹಗಲು ನನ್ನ ಕಣ್ಣೀರು ಸುರಿಯಲಿ ನಿರಂತರವಾಗಿ ಏಕೆಂದರೆ ನನ್ನ ಜನವೆಂಬ ಯುವತಿ ಗಾಯಗೊಂಡಿದ್ದಾಳೆ ತೀವ್ರವಾಗಿ, ಹೌದು, ಅವಳಿಗೆ ಪೆಟ್ಟುಬಿದ್ದಿದೆ ಗಡುಸಾಗಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನೀನು ಈ ಮಾತನ್ನು ಅವರಿಗೆ ಹೇಳು - ನನ್ನ ಕಣ್ಣೀರು ರಾತ್ರೀಹಗಲು ನಿರಂತರ ಸುರಿಯಲಿ; ಏಕಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟುಬಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಯೆರೆಮೀಯನೇ, ಯೆಹೂದದ ಜನರಿಗೆ ಈ ಸಂದೇಶವನ್ನು ಹೇಳು: ‘ನನ್ನ ಕಣ್ಣುಗಳಲ್ಲಿ ಕಣ್ಣೀರು ತುಂಬಿಕೊಂಡಿದೆ. ನಾನು ನಿರಂತರವಾಗಿ ಹಗಲಿರುಳು ಅಳುವೆನು. ನಾನು ನನ್ನ ಕನ್ಯೆಯಾದ ಮಗಳಿಗಾಗಿ ಅಳುವೆನು. ನಾನು ನನ್ನ ಜನರಿಗಾಗಿ ಅಳುವೆನು. ಏಕೆಂದರೆ ಯಾರೋ ಒಬ್ಬರು ಅವರನ್ನು ಹೊಡೆದು ಸದೆಬಡಿದಿದ್ದಾರೆ, ಅವರಿಗೆ ಬಹಳ ಗಾಯಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಆದ್ದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು. “ ‘ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ. ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ಏಟಿನಿಂದಲೂ, ದೊಡ್ಡ ಪೆಟ್ಟಿನಿಂದಲೂ ಗಾಯಗೊಂಡಿದ್ದಾಳೆ. ಅಧ್ಯಾಯವನ್ನು ನೋಡಿ |