Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:19 - ಕನ್ನಡ ಸತ್ಯವೇದವು C.L. Bible (BSI)

19 “ಸ್ವಾಮೀ, ನೀವು ಜುದೇಯವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರೊ? ಸಿಯೋನಿನ ಬಗ್ಗೆ ನಿಮಗೆ ಮನಃಪೂರ್ವಕವಾದ ಅಸಹ್ಯ ಹುಟ್ಟಿದೆಯೊ? ಗುಣವಾಗದಂಥ ಪೆಟ್ಟನ್ನು ನಮಗೆ ಕೊಟ್ಟಿರುವಿರಿ ಏಕೆ? ಸುಖವನ್ನು ನಿರೀಕ್ಷಿಸಿದೆವು, ಸಿಗಲಿಲ್ಲ ನಮಗೆ ಯಾವ ಫಲ. ಸುಕ್ಷೇಮವನ್ನು ಎದುರು ನೋಡಿದೆವು, ಇಗೋ ಬಂದೊದಗಿದೆ ಸಂಕಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನನ್ನು ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದಿಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮ ಕಾಲವನ್ನೂ ಎದುರುನೋಡಿದೆವು, ಹಾ, ಅಂಜಿಕೆಯೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನೇ, ನೀನು ಯೆಹೂದ ಜನಾಂಗವನ್ನು ಸಂಪೂರ್ಣವಾಗಿ ತಿರಸ್ಕರಿಸಿರುವೆಯಾ? ಯೆಹೋವನೇ, ನೀನು ಚೀಯೋನನ್ನು ದ್ವೇಷಿಸುವೆಯಾ? ನಾವು ಪುನಃ ಗುಣಹೊಂದಲಾರದ ಹಾಗೆ ನಮ್ಮನ್ನು ಹೊಡೆದು ಗಾಯಗೊಳಿಸಿರುವೆಯಲ್ಲ. ನೀನು ಹೀಗೇಕೆ ಮಾಡಿದೆ? ನಾವು ನೆಮ್ಮದಿಯನ್ನು ನಿರೀಕ್ಷಿಸಿದೆವು, ಆದರೆ ಒಳ್ಳೆಯದೇನೂ ಆಗಲಿಲ್ಲ. ನಾವು ಕ್ಷೇಮವನ್ನು ಎದುರುನೋಡುತ್ತಿದ್ದೆವು. ಆದರೆ ಕೇವಲ ಭಯ ನಮ್ಮೆದುರಿಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿ ಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟು ಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ. ಕ್ಷೇಮ ಕಾಲವನ್ನು ಎದುರು ನೋಡಿದೆವು, ಹಾ, ಅಂಜಿಕೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:19
26 ತಿಳಿವುಗಳ ಹೋಲಿಕೆ  

ತಿರುಗಿಸು ನಮ್ಮನ್ನು ನಿನ್ನ ಕಡೆಗೆ ತಿರುಗುವೆವು ನೀನು ತಿರುಗಿಸಿದ ಹಾಗೆ. ಪ್ರಾಚೀನ ವೈಭವವನ್ನು ಮರಳಿ ದಯಪಾಲಿಸು ನಮಗೆ.


ಸುಖಶಾಂತಿಯನ್ನು ನಿರೀಕ್ಷಿಸಿದೆವು, ಯಾವ ಒಳಿತೂ ಸಿಗಲಿಲ್ಲ. ಸುಕ್ಷೇಮ ಕಾಲವನ್ನು ಎದುರುನೋಡಿದೆವು. ನಮಗೆ ಗಿಟ್ಟಿದ್ದು ಭಯಭ್ರಾಂತಿ ಮಾತ್ರ.


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಸರ್ವೇಶ್ವರ ಆದ ನಾನು ಅವರನ್ನು ತಳ್ಳಿಬಿಟ್ಟಿರುವುದರಿಂದ ಅವರು ಕಂದುಬೆಳ್ಳಿ ಎನಿಸಿಕೊಳ್ಳುವರು.”


ನಿನ್ನ ಪರ ವಾದಿಸುವವರಿಲ್ಲ, ನಿನ್ನ ವ್ರಣಕ್ಕೆ ಔಷಧವಿಲ್ಲ ನಿನ್ನನ್ನು ಆರೈಕೆ ಮಾಡುವವರಿಲ್ಲ.


ನನಗೇಕೆ ನಿರಂತರವಾದ ವೇದನೆ? ಗುಣವಾಗದ ಗಡಸು ಗಾಯ? ನೀರು ಇರುವುದಾಗಿ ತೋರಿಸಿಕೊಳ್ಳುವ ಕಳ್ಳ ತೊರೆಯಾಗಬೇಕೆ ನೀವು ನನಗೆ?”


ನನ್ನ ಸೊತ್ತಾದ ಜನತೆ ನನ್ನ ಪಾಲಿಗೆ ಅರಣ್ಯದ ಸಿಂಹದಂತೆ ನನಗೆದುರಾಗಿ ಅದು ಗರ್ಜಿಸಿದೆ, ಎಂದೇ ಅದನ್ನು ಹಗೆಮಾಡಿರುವೆ.


ರಣರೌದ್ರನಾದನು ಇದನರಿತ ದೇವನು I ತೊರೆದನು ಅಸಹ್ಯದಿಂದ ಇಸ್ರಯೇಲರನು II


ನಾನು ಒಳಿತನು ನಿರೀಕ್ಷಿಸಿದಾಗ ಕೇಡು ಬಂದೊದಗಿತು ಬೆಳಕನು ಎದುರು ನೋಡುವಾಗ ಕತ್ತಲು ಕವಿಯಿತು.


ಮಬ್ಬಾಯಿತು ಕಣ್ಣು ವ್ಯರ್ಥವಾಗಿ ನೆರವನ್ನು ನಿರೀಕ್ಷಿಸುತ ರಕ್ಷಿಸಲಾಗದ ರಾಷ್ಟ್ರಕ್ಕಾಗಿ ಕೋವರದಲ್ಲಿ ಕಾದು ನೋಡುತ.


ಎಲೌ ಜೆರುಸಲೇಮ್ ಯುವತಿಯೇ, ನಿನಗೆ ಏನು ಹೇಳಲಿ? ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಸಿಯೋನ್ ಕನ್ಯೆಯೇ, ನಿನ್ನನ್ನು ಹೇಗೆ ಸಂತೈಸಲಿ? ಸಂತೈಸುವ ಸಾಮತಿಯನ್ನು ಎಲ್ಲಿಂದ ತರಲಿ? ನಿನಗೊದಗಿರುವ ನಾಶ ಸಾಗರದಂತೆ ಅಪಾರ ನಿನ್ನನ್ನು ಸ್ವಸ್ಥಗೊಳಿಸಲು ಯಾರಿಂದ ತಾನೆ ಸಾಧ್ಯ?


ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!


ಗಿಲ್ಯಾದಿನಲ್ಲಿ ಔಷಧವಿಲ್ಲವೆ? ಅಲ್ಲಿ ವೈದ್ಯನು ಸಿಕ್ಕನೆ? ಮತ್ತೇಕೆ ಗುಣವಾಗಲಿಲ್ಲ ನನ್ನ ಜನತೆಗೆ?


“ಎಲೈ ಜೆರುಸಲೇಮೇ ! ತಲೆಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಡು ಬೋಳುಗುಡ್ಡಗಳಲ್ಲಿ ಶೋಕಗೀತೆಯನ್ನು ಹಾಡು. ಏಕೆಂದರೆ ಸರ್ವೇಶ್ವರನಾದ ನಾನು ಕೋಪಗೊಂಡು, ನಿರಾಕರಿಸಿ, ತ್ಯಜಿಸಿಬಿಟ್ಟಿದ್ದೇನೆ ಈ ವಂಶವನ್ನು,”


ಇಂತೆಂದ ನೀನೆ ತ್ಯಜಿಸಿರುವೆ ನಿನ್ನಾಭಿಷಿಕ್ತನನು I ತಳ್ಳಿಬಿಟ್ಟಿರುವೆ ಕೋಪಾವೇಶದಿಂದ ಅವನನು II


ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.


“ನಾನು ನನ್ನ ಮನೆಯನ್ನೇ ತೊರೆದಿದ್ದೇನೆ ನನ್ನ ಸ್ವಂತ ಸೊತ್ತನ್ನೇ ನಿರಾಕರಿಸಿದ್ದೇನೆ ನನಗೆ ಪ್ರಾಣಪ್ರಿಯರಾದ ಜನರನ್ನು ಅವರ ಶತ್ರುಗಳ ಕೈಗೊಪ್ಪಿಸಿದ್ದೇನೆ.


ಮಾರೋತಿನ ನಿವಾಸಿಗಳು ತಮ್ಮ ಸಂಕಟ ಪರಿಹಾರವಾಗುವುದೋ ಇಲ್ಲವೋ ಎಂದು ವೇದನೆಪಡುತ್ತಾರೆ: ಏಕೆಂದರೆ ಸ್ವಾಮಿಯಿಂದ ಬಂದ ವಿಪತ್ತು ಜೆರುಸಲೇಮಿನ ಪುರದ್ವಾರವನ್ನು ಮುಟ್ಟಿದೆ.


ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು.


ಹೌದು, ಸರ್ವೇಶ್ವರ ಹೀಗೆನ್ನುತ್ತಾರೆ: “ನಿನ್ನ ಗಾಯಗಳು ಗುಣಹೊಂದವು ನಿನ್ನ ಹುಣ್ಣನ್ನು ವಾಸಿಮಾಡಲಾಗದು.


ಇಸ್ರಯೇಲರ ಪರಮ ಪಾವನ ಸ್ವಾಮಿಯಾದ ನನಗೆ ನನ್ನ ಜನರು ಮಾಡಿದ ಅಪರಾಧ ತಮ್ಮ ನಾಡಿನಲ್ಲಿ ತುಂಬಿದ್ದರೂ ಸೇನಾಧೀಶ್ವರ ಸರ್ವೇಶ್ವರನೆಂಬ ದೇವರಾದ ನಾನು ಇಸ್ರಯೇಲನ್ನಾಗಲಿ ಜುದೇಯವನ್ನಾಗಲಿ ತ್ಯಜಿಸಿಬಿಡಲಿಲ್ಲ.


ಸುತ್ತಮುತ್ತಲೂ ದಿಗಿಲು ಹುಟ್ಟಿಸುವ ನನ್ನ ಹಗೆಗಳನ್ನೆ ಕರೆಸಿದೆಯಲ್ಲಾ ಹಬ್ಬಕ್ಕೋ ಎಂಬಂತೆ ! ಸರ್ವೇಶ್ವರನ ಪ್ರಕೋಪದ ದಿನದಂದು ತಪ್ಪಿಸಿಕೊಳ್ಳಲಿಲ್ಲ ಯಾರೂ; ಉಳಿಯಲಿಲ್ಲ ಯಾರೂ. ಶತ್ರು ಸಂಹರಿಸಿಬಿಟ್ಟನಲ್ಲಾ ನಾನು ಸಾಕಿ ಆರೈಕೆ ಮಾಡಿದವರನ್ನೂ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು