Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:21 - ಕನ್ನಡ ಸತ್ಯವೇದವು C.L. Bible (BSI)

21 ನಿಮ್ಮ ನಾಮವನ್ನು ಮುಂದಿಟ್ಟು, ನಮಗೆ ಅವಮಾನ ಮಾಡಬೇಡಿ ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ ನಮ್ಮೊಡನೆ ಮಾಡಿದ ಒಡಂಬಡಿಕೆಯನ್ನು ನೆನೆಯಿರಿ. ಅದನ್ನು ಭಂಗಪಡಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ. ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ, ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನೇ, ನಿನ್ನ ಹೆಸರಿನ ಒಳ್ಳೆಯತನ ಉಳಿಸಿಕೊಳ್ಳುವದಕ್ಕಾದರೂ ನಮ್ಮನ್ನು ದೂರ ತಳ್ಳಬೇಡ. ನಿನ್ನ ಮಹಿಮೆಯ ಸಿಂಹಾಸನದ ಗೌರವವನ್ನು ಕುಂದಿಸಬೇಡ. ನೀನು ನಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿಕೊ. ಆ ಒಡಂಬಡಿಕೆಯನ್ನು ಮುರಿಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿಮ್ಮ ನಾಮದ ಮೇಲೆ ದೃಷ್ಟಿಯಿಡಿ, ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ, ಅವಮಾನಪಡಿಸಬೇಡಿ. ನೀವು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:21
39 ತಿಳಿವುಗಳ ಹೋಲಿಕೆ  

ಸರ್ವೇಶ್ವರಾ, ನಮ್ಮ ದ್ರೋಹಗಳು ಹಲವು ನಿಮಗೆ ವಿರುದ್ಧ ಪಾಪಮಾಡಿದೆವು. ನಮ್ಮ ಅಪರಾಧಗಳೇ ನಮಗೆ ವಿರುದ್ಧ ಸಾಕ್ಷಿ ನೀಡುತ್ತಿವೆ ಆದರೂ ನಿಮ್ಮ ನಾಮದ ನಿಮಿತ್ತ ಕೈನೀಡು ನಮಗೆ.


ನೆನಪಿಗೆ ತಂದುಕೊಂಡನು ತನ್ನೊಡಂಬಡಿಕೆಯನು I ದಯಾಳುತನದಿಂದ ತೋರಿದನವರಿಗೆ ಕರುಣೆಯನು I ಬಂಧಿಸಿದವರಿಂದಲೂ ದಯೆಯನು ದೊರಕಿಸಿದನು II


ಆ ಕಾಲ ಬಂದಾಗ ಜೆರುಸಲೇಮನ್ನೇ ‘ಸರ್ವೇಶ್ವರನ ಸಿಂಹಾಸನ’ ಎಂದು ಕರೆಯುವರು. ನನ್ನ ನಾಮಮಹತ್ವದ ಸ್ಥಾನವಾದ ಜೆರುಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದುಬರುವರು. ಆಮೇಲೆ ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು.


ಆದಿಯಿಂದಲೂ ಉನ್ನತಸ್ಥಾನದಲ್ಲಿದೆ ನಮ್ಮ ಪವಿತ್ರಾಲಯ ಅದು ಮಹಿಮೆಯ ಸಿಂಹಾಸನ.


ಆಲಯದ ಹೊರ ಅಂಗಳವನ್ನು ಅಳತೆಮಾಡಬೇಡ; ಅದನ್ನು ಬಿಟ್ಟುಬಿಡು. ಅದನ್ನು ಜನರಿಗೆ ಬಿಟ್ಟುಕೊಡಲಾಗಿದೆ. ಅವರು ಪವಿತ್ರನಗರವನ್ನು ನಲವತ್ತೆರಡು ತಿಂಗಳವರೆಗೆ ತುಳಿದಾಡುವರು.


ದೇವರು ಯೇಸುಕ್ರಿಸ್ತರಲ್ಲಿ ನಮಗೆ ತೋರಿದ ದಯೆಯ ಮೂಲಕ ತಮ್ಮ ಅನುಗ್ರಹದ ಶ್ರೀಮಂತಿಕೆಯನ್ನು ಮುಂದಣ ಯುಗಗಳಲ್ಲಿ ತಿಳಿಯಪಡಿಸುವುದೇ ಅವರ ಉದ್ದೇಶವಾಗಿತ್ತು.


ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.


ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನು I ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು II


ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಪ್ರಮಾಣಮಾಡಿ ಹೇಳಿದ್ದೇನೆಂದರೆ: “ಯಕೋಬ ವಂಶದವರ ಉದ್ಧಟತನವನ್ನು ದ್ವೇಷಿಸುತ್ತೇನೆ. ಅವರ ಮೋಜಿನ ಮಹಲುಗಳನ್ನು ತೃಣೀಕರಿಸುತ್ತೇನೆ. ಅವರ ರಾಜಧಾನಿಯನ್ನೂ ಅದರಲ್ಲಿರುವುದೆಲ್ಲವನ್ನೂ ಶತ್ರುವಶಕ್ಕೆ ಒಪ್ಪಿಸುತ್ತೇನೆ.”


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಾವೋ ಲಜ್ಜೆಗೆಟ್ಟವರು. ಹೌದು, ಯೆಹೂದ್ಯರು ಹಾಗು ಜೆರುಸಲೇಮಿನ ನಿವಾಸಿಗಳು ಈಗಾಗಲೆ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ತಳ್ಳಲ್ಪಟ್ಟಿದ್ದಾರೆ. ದೂರದ ದೇಶಗಳಿಗೂ ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಎಲ್ಲ ಇಸ್ರಯೇಲರು ನಾಚಿಕೆಗೆ ಈಡಾಗಿದ್ದಾರೆ.


ನುಡಿಯುವಾತನು ನನಗೆ ಹೀಗೆ ಹೇಳಿದನು: “ನರಪುತ್ರನೇ, ಇದು ನನ್ನ ಸಿಂಹಾಸನಸ್ಥಾನ, ನನ್ನ ಪಾದಸನ್ನಿಧಿ. ಇಲ್ಲಿ ನಾನು ಇಸ್ರಯೇಲರ ಮಧ್ಯೆ ಸದಾ ವಾಸಿಸುವೆನು. ಇಸ್ರಯೇಲ್ ವಂಶದವರಾಗಲಿ ಅವರ ಅರಸರಾಗಲಿ, ತಮ್ಮ ದೇವದ್ರೋಹದಿಂದ, ಗತಿಸಿದ ಅರಸರ ಶವಗಳಿಂದ ಹಾಗು


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಯೇಲ್ ವಂಶದವರಿಗೆಲ್ಲ ಕೃಪೆತೋರುವೆನು.


ಇಸ್ರಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲ, ನೇತ್ರಾನಂದ ಹಾಗು ಪ್ರಾಣಪ್ರಿಯ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಮಾಡಿಸುವೆನು; ನೀವು ಬಿಟ್ಟುಬಂದಿರುವ ನಿಮ್ಮ ಗಂಡು ಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸರ್ವೇಶ್ವರನಾದ ದೇವರು ನುಡಿದಿದ್ದಾರೆ.


ಹೇ, ಸರ್ವೇಶ್ವರಾ ಕಟಾಕ್ಷಿಸು ! ಇಷ್ಟೆಲ್ಲಾ ನೀ ಮಾಡಿದ್ದು ಯಾರಿಗೆಂದು ಯೋಚಿಸು ! ತಾಯಂದಿರು ತಿನ್ನಬೇಕೆ ತಾವು ಆರೈಕೆ ಮಾಡಿದ ತಮ್ಮ ಕರುಳ ಕುಡಿಯನ್ನೇ? ಹತರಾಗಬೇಕೆ ಯಾಜಕರೂ ಪ್ರವಾದಿಗಳೂ ಸ್ವಾಮಿಯ ಪವಿತ್ರಾಲಯದಲ್ಲೆ?


ದೋಚಿಕೊಂಡನು ದ್ರೋಹಿ ಆಕೆಯ ಆಸ್ತಿಯನ್ನು ಕೈಚಾಚಿ. 'ಸೇರಿಸಬಾರದು ಸಭೆಗೆ ಮ್ಲೇಚ್ಛರನ್ನು’ ಎಂಬುದು ದೇವನ ಆಣತಿ. ಆದರಿಗೋ ಅಂಥವರೇ ಪವಿತ್ರಾಲಯ ಪ್ರವೇಶಿಸುವ ದುರ್ಗತಿ !


“ಸ್ವಾಮೀ, ನೀವು ಜುದೇಯವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರೊ? ಸಿಯೋನಿನ ಬಗ್ಗೆ ನಿಮಗೆ ಮನಃಪೂರ್ವಕವಾದ ಅಸಹ್ಯ ಹುಟ್ಟಿದೆಯೊ? ಗುಣವಾಗದಂಥ ಪೆಟ್ಟನ್ನು ನಮಗೆ ಕೊಟ್ಟಿರುವಿರಿ ಏಕೆ? ಸುಖವನ್ನು ನಿರೀಕ್ಷಿಸಿದೆವು, ಸಿಗಲಿಲ್ಲ ನಮಗೆ ಯಾವ ಫಲ. ಸುಕ್ಷೇಮವನ್ನು ಎದುರು ನೋಡಿದೆವು, ಇಗೋ ಬಂದೊದಗಿದೆ ಸಂಕಟ.


ಕೆರಳಿತು ಕೋಪ ಆ ಜನರ ಮೇಲೆ ಪ್ರಭುವಿಗೆ I ತನ್ನವರಾ ನಡತೆ ಅಸಹ್ಯವಾಯಿತು ಆತನಿಗೆ II


ತಳ್ಳಬೇಡೆನ್ನನು ದೇವಾ, ನಿನ್ನ ಸನ್ನಿಧಿಯಿಂದ I ದೂಡಬೇಡ ನಿನ್ನ ಪವಿತ್ರಾತ್ಮನನು ನನ್ನಿಂದ II


ಇದ ಕಂಡು ಸರ್ವೇಶ್ವರ ಬೇಸರಗೊಂಡ ತನ್ನಾ ಕುವರಕುವರಿಯರ ನಡತೆಯ ನೋಡಿ ನೊಂದುಕೊಂಡ.


ನಾನು ನಿಮ್ಮ ಮಧ್ಯೆ ನಿವಾಸಿಸುವೆನು. ನಿಮ್ಮನ್ನು ಕೈಬಿಡೆನು.


ತಮ್ಮ ದಾಸರಾದ ಅಬ್ರಹಾಮ್, ಇಸಾಕ್ ಹಾಗು ಯಕೋಬರನ್ನು ನೆನಪಿಗೆ ತಂದುಕೊಳ್ಳಿ. ತಾವು ತಮ್ಮ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನು; ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನು; ಮತ್ತು ಅವರು ಈ ನಾಡನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರು’ ಎಂದು ತಾವು ಮಾತುಕೊಡಲಿಲ್ಲವೆ?” ಎಂದನು.


ಸರ್ವೇಶ್ವರನ ದಯೆ ನಿಮ್ಮನ್ನು ಸ್ವಕೀಯ ಜನರನ್ನಾಗಿ ಆರಿಸಿಕೊಂಡ ಮೇಲೆ, ಅವರು ತಮ್ಮ ಮಹೋನ್ನತ ನಾಮದ ನಿಮಿತ್ತ, ನಿಮ್ಮನ್ನು ಖಂಡಿತವಾಗಿ ಕೈಬಿಡುವುದಿಲ್ಲ.


ನಿನ್ನ ನಾಮದ ನಿಮಿತ್ತ ನನ್ನನು ಈಕ್ಷಿಸು I ಎನ್ನ ಘೋರ ಪಾಪವನು ಪ್ರಭು ಕ್ಷಮಿಸು II


ಪ್ರಸಿದ್ಧಪಡಿಸುವರು ನಿನ್ನ ರಾಜ್ಯದ ಮಹತ್ವವನು I ವರ್ಣಿಸುವರವರು ನಿನ್ನ ಶಕ್ತಿ ಸಾಮರ್ಥ್ಯವನು II


ಜೆರುಸಲೇಮ್, ಕಾವಲಿಟ್ಟಿರುವೆ ನಿನ್ನ ಗೋಡೆ ಸುತ್ತಲು ಮೌನವಿರಕೂಡದು ಆ ಕಾವಲಿಗರು ಹಗಲಿರುಳು.


ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಬಿಡುಗಡೆ ಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು, ಕೈಯನ್ನು ಹಿಂದಕ್ಕೆ ತೆಗೆದುಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು