Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:3 - ಕನ್ನಡ ಸತ್ಯವೇದವು C.L. Bible (BSI)

3 ಅವರಲ್ಲಿನ ಶ್ರೀಮಂತರು ತಮ್ಮ ಊಳಿಗದವರನ್ನು ನೀರಿಗೆ ಕಳಿಸುತ್ತಾರೆ. ಅವರೋ ಕೊಳಗಳಲ್ಲಿ ನೀರು ಕಾಣದೆ ಬರೀ ಬಿಂದಿಗೆಗಳೊಂದಿಗೆ ಹಿಂದಿರುಗುತ್ತಾರೆ. ನಿರಾಶೆಗೊಂಡು, ನಾಚಿಕೆಪಟ್ಟು ಮೋರೆ ಮುಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರಿಗೆ ಕಳುಹಿಸುತ್ತಾರೆ; ಅವರು ಕೊಳಗಳಿಗೆ ಹೋದಾಗ ನೀರು ಕಾಣುವದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ; ಆಶೆಗೆಟ್ಟು ನಾಚಿಕೆಪಟ್ಟು ಮೋರೆ ಮುಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜನನಾಯಕರು ನೀರು ತರುವದಕ್ಕಾಗಿ ತಮ್ಮ ಸೇವಕರನ್ನು ಕಳುಹಿಸುತ್ತಾರೆ. ಆ ಸೇವಕರು ನೀರಿರುವ ಸ್ಥಳಗಳಿಗೆ ಹೋಗುತ್ತಾರೆ. ಆದರೆ ಅಲ್ಲಿ ಅವರಿಗೆ ನೀರು ಸಿಕ್ಕುವದಿಲ್ಲ. ಸೇವಕರು ಕೇವಲ ಪಾತ್ರೆಗಳನ್ನು ತೆಗೆದುಕೊಂಡು ಹಿಂದಿರುಗಿ ಬರುತ್ತಾರೆ. ಅವರು ನಾಚಿಕೆಪಟ್ಟುಕೊಳ್ಳುತ್ತಾರೆ ಮತ್ತು ಪೇಚಾಡುತ್ತಾರೆ. ಅವರು ನಾಚಿಕೆಯಿಂದ ತಮ್ಮ ಮುಖಗಳನ್ನು ಮುಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ. ಇವರು ಬಾವಿಗಳಿಗೆ ಬರುತ್ತಾರೆ. ಆದರೆ ನೀರು ಸಿಕ್ಕಲ್ಲ. ಬರೀ ಪಾತ್ರೆಗಳುಳ್ಳವರಾಗಿ ತಿರುಗಿಕೊಳ್ಳುತ್ತಾರೆ. ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ, ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:3
23 ತಿಳಿವುಗಳ ಹೋಲಿಕೆ  

ದಾವೀದನು, ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೇಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು.


ನನ್ನ ಕೊಲೆಗೆಂದು ಯತ್ನಿಸುವವರು ನಾಚಿ ಗಲಿಬಿಲಿಗೊಳ್ಳಲಿ I ನನ್ನಳಿವನು ಕೋರುವಂಥವರು ಲಜ್ಜೆಯಿಂದ ಹಿಂದಿರುಗಲಿ II


ಅಸ್ಸೀರಿಯದ ಅರಸನಾದ ನನ್ನ ಮಾತನ್ನು ಕೇಳಿ; ನನ್ನೊಡನೆ ಒಪ್ಪಂದಮಾಡಿಕೊಂಡು ನನ್ನ ಆಶ್ರಯವನ್ನು ಸೇರಿರಿ, ಆಗ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರಮರದ ಹಾಗು ದ್ರಾಕ್ಷಾಲತೆಯ ಹಣ್ಣುಗಳನ್ನು ತಿನ್ನುವನು; ತನ್ನ ಬಾವಿಯ ನೀರನ್ನೇ ಕುಡಿಯುವನು.


ಹಲವಾರು ಊರಿನವರು ಕುಡಿಯುವ ನೀರಿಗಾಗಿ ಪರದಾಡುತ್ತಾ ಪಕ್ಕದ ಪಟ್ಟಣಕ್ಕೆ ಹೋದರೂ ಅವರ ದಾಹವು ಇಂಗಲಿಲ್ಲ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.


“ನನ್ನ ಜನರು ಇಬ್ಬಗೆಯ ಅಪರಾಧಗಳನ್ನು ಎಸಗಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನೇ ತೊರೆದುಬಿಟ್ಟಿದ್ದಾರೆ! ತೊಟ್ಟಿಗಳನ್ನು, ನೀರುನಿಲ್ಲದ ಬಿರುಕು ತೊಟ್ಟಿಗಳನ್ನು ತಮಗಾಗಿ ಕೊರೆದುಕೊಂಡಿದ್ದಾರೆ!”


ಕಾಡುಮೃಗಗಳು ನಿನ್ನ ಕಡೆಗೆ ತಲೆಯೆತ್ತಿವೆ; ಹಳ್ಳಕೊಳ್ಳಗಳು ಬತ್ತಿಹೋಗಿವೆ; ಹುಲ್ಲುಗಾವಲನ್ನು ಕಾಳ್ಗಿಚ್ಚು ದಹಿಸಿಬಿಟ್ಟಿದೆ.


ಆದರೆ ನನ್ನ ಸಂಗಡ ಇರುವರು ಸರ್ವೇಶ್ವರ ಭಯಂಕರ ಶೂರನಂತೆ ನನ್ನ ಹಿಂಸಕರು ಮುಗ್ಗರಿಸಿ ಬೀಳುವರು ಜಯಸಾಧಿಸದೆ. ನಾಚಿಕೆಗೆ ಈಡಾಗುವರು ತಮ್ಮ ಯೋಜನೆ ಕೈಗೂಡದೆ ಶಾಶ್ವತ ಅವಮಾನಕ್ಕೆ ಗುರಿಯಾಗುವರು ಎಂದಿಗೂ ಮರೆಯಲಾಗದಂತೆ.


ನಾಡಿನಲ್ಲಿ ಮಳೆಯಿಲ್ಲದೆ ಭೂಮಿ ಬಿರುಕುಬಿಟ್ಟಿದೆ ನೇಗಿಲಯೋಗಿ ನಿರಾಶೆಗೊಂಡು ಮೋರೆ ಮುಚ್ಚಿಕೊಳ್ಳುತ್ತಾನೆ.


ಮಾನಭಂಗವಾಗಲಿ ನನ್ನಾ ನಿಂದಕರಿಗೆ I ಬಟ್ಟೆಯಂತೆ ಅವರಿಗಂಟಿಕೊಳ್ಳಲಿ ಹೇಸಿಗೆ II


ಆಶಿಸಿದಷ್ಟೂ ಆಶಾಭಂಗಪಡುತ್ತಾರೆ ಆ ಪ್ರಯಾಣಿಕರು ನಂಬಿದಷ್ಟೂ ನಿರೀಕ್ಷೆಗೆಡುತ್ತಾರೆ ಆ ವರ್ತಕರು.


ಮೊರ್ದೆಕೈ, ಪುನಃ ಅರಮನೆಯ ಬಾಗಿಲಿಗೆ ಬಂದನು. ಹಾಮಾನನಾದರೋ ವ್ಯಸನಕ್ರಾಂತನಾಗಿ ಮುಖ ಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಧಾವಿಸಿದನು.


ಕೆಲವು ದಿವಸಗಳಾದ ನಂತರ ನಾಡಿನಲ್ಲಿ ಮಳೆಯಿಲ್ಲದ್ದರಿಂದ ಹಳ್ಳವು ಬತ್ತಿಹೋಯಿತು.


ಅರಸನು ತನ್ನ ಮುಖ ಮುಚ್ಚಿಕೊಂಡು, “ಮಗ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ಮಗನೇ,” ಎಂದು ಬಹಳವಾಗಿ ಗೋಳಾಡಿದನು.‍


ಅಲ್ಲಿಂದಲೂ ನಿರಾಶೆಯಿಂದ ತಲೆಯ ಮೇಲೆ ಕೈಹೊತ್ತು ಹೊರಡುವಿರಿ. ನೀವು ಯಾರಲ್ಲಿ ನಂಬಿಕೆಯಿಟ್ಟಿದ್ದಿರೋ ಅವರನ್ನು ಸರ್ವೇಶ್ವರನಾದ ನಾನು ನಿರಾಕರಿಸಿದ್ದೇನೆ. ಅವರಿಂದ ನಿಮ್ಮ ಕಾರ್ಯ ಕೈಗೂಡದು.”


ಆದಕಾರಣವೇ ಹದಮಳೆಗೆ ಅಡ್ಡಿಯಾಯಿತು. ವಸಂತಕಾಲದ ಮಳೆ ಬರದೆಹೋಯಿತು. ಇನ್ನೂ ನೀನು ವೇಶ್ಯೆ ಮುಖದವಳು, ಲಜ್ಜೆಗೆಟ್ಟವಳು !


ನನಗೇಕೆ ನಿರಂತರವಾದ ವೇದನೆ? ಗುಣವಾಗದ ಗಡಸು ಗಾಯ? ನೀರು ಇರುವುದಾಗಿ ತೋರಿಸಿಕೊಳ್ಳುವ ಕಳ್ಳ ತೊರೆಯಾಗಬೇಕೆ ನೀವು ನನಗೆ?”


ದಾಹದಿಂದ ಸೇದುಹೋಗಿದೆ ಮೊಲೆಕೂಸಿನ ನಾಲಿಗೆ ಅನ್ನವಿಕ್ಕುವರಾರೂ ಇಲ್ಲ, ಹಂಬಲಿಸುವ ಆ ಹಸುಳೆಗಳಿಗೆ.


ಇಲ್ಲವಾದರೆ ಅವಳನ್ನು ನಗ್ನವಾಗಿಸಿ (ಹುಟ್ಟಿದಾಗ ಇದ್ದಂತೆ) ಬೆತ್ತಲೆಯಾಗಿ ನಿಲ್ಲಿಸುವೆನು. ಅವಳನ್ನು ಬೆಂಗಾಡನ್ನಾಗಿ ಮಾಡಿ, ಮರುಭೂಮಿಯಂತೆ ಮಾರ್ಪಡಿಸಿ, ನೀರಡಿಕೆಯಿಂದ ಸಾಯುವಂತೆ ಮಾಡುವೆನು.


ಜನಾಂಗಗಳಲ್ಲಿ ಯಾರಾದರೂ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ರಾಜಾಧಿರಾಜನೆಂದು ಆರಾಧಿಸಲು ಬರದೆಹೋದರೆ, ಅವರಿಗೆ ಮಳೆಯೇ ಬರದು.


“ಸುಗ್ಗಿಗೆ ಮೂರು ತಿಂಗಳಿರುವಾಗಲೂ ಮಳೆಯನ್ನು ತಡೆದವನು ನಾನೇ. ಒಂದೂರಿಗೆ ಮಳೆಯಾಗುವಂತೆಯೂ ಮತ್ತೊಂದೂರಿಗೆ ಮಳೆಯಾಗದಂತೆಯೂ ಮಾಡಿದವನು ನಾನೇ. ಒಂದು ಹೊಲಕ್ಕೆ ಮಳೆಯಾಗುವಂತೆ, ಮತ್ತೊಂದು ಹೊಲ ಮಳೆಯಿಲ್ಲದೆ ಬಾಡಿಹೋಗುವಂತೆ ಮಾಡಿದವನು ನಾನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು