Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:6 - ಕನ್ನಡ ಸತ್ಯವೇದವು C.L. Bible (BSI)

6 ಕಾಡುಗತ್ತೆಗಳು ಬೋಳುಗುಡ್ಡಗಳಲ್ಲಿ ನಿಂತು ನಿಟ್ಟುಸಿರು ಬಿಡುತ್ತವೆ ನರಿಗಳಂತೆ ಗಾಳಿಕೋರುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕಾಡುಕತ್ತೆಗಳು ಬೋಳುಗುಡ್ಡಗಳಲ್ಲಿ ನಿಂತುಕೊಂಡು ನರಿಗಳಂತೆ ನಿಟ್ಟುಸಿರುಬಿಟ್ಟು ಗಾಳಿಯನ್ನು ಹಾರೈಸುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕಾಡುಕತ್ತೆಗಳು ಬೋಳುಗುಡ್ಡಗಳಲ್ಲಿ ನಿಂತುಕೊಂಡು ನರಿಗಳಂತೆ ಅಸುರುಸುರಾಗುತ್ತಾ ಗಾಳಿಯನ್ನು ಹಾರೈಸುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕಾಡುಕತ್ತೆಗಳು ಬೋಳುಬೆಟ್ಟಗಳ ಮೇಲೆ ನಿಂತು ನರಿಗಳಂತೆ ಗಾಳಿಯನ್ನು ಮೂಸುತ್ತವೆ. ಆದರೆ ಅವುಗಳಿಗೆ ಆಹಾರ ಕಾಣಿಸುವದಿಲ್ಲ. ಏಕೆಂದರೆ ತಿನ್ನಬಹುದಾದ ಸಸಿಗಳು ಬೆಳೆದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕಾಡುಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು, ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ. ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:6
7 ತಿಳಿವುಗಳ ಹೋಲಿಕೆ  

ಅಡವಿಯಲ್ಲೆ ಪಳಗಿದ, ಮದದಿಂದ ಗಾಳಿಯನ್ನು ಬುಸಬುಸನೆ ಮೂಸಿನೋಡುವ ಹೆಣ್ಣು ಕಾಡುಕತ್ತೆಯ ಹಾಗಿರುವೆ. ಅದಕ್ಕೆ ಬೆದೆ ಏರಿದಾಗ ಯಾವ ಗಂಡುಕತ್ತೆಯೂ ಅದನ್ನು ಬದಿಗೊತ್ತುವಂತಿಲ್ಲ ಅದನ್ನು ಹುಡುಕುವವುಗಳೆಲ್ಲ ಆಯಾಸಪಡಬೇಕಾಗಿಲ್ಲ. ಅವಳ ತಿಂಗಳಲ್ಲಿ ಅವಳನ್ನು ಸುಲಭವಾಗಿ ದೊರಕಿಸಿಕೊಳ್ಳುವುವು.


ಪಶುಪ್ರಾಣಿಗಳು ನರಳುತ್ತಿವೆ; ದನಕರುಗಳು ಮೇವಿಲ್ಲದೆ ಕಂಗಾಲಾಗಿವೆ; ಕುರಿಮಂದೆಗಳು ಕೂಡ ಕಂಗೆಟ್ಟಿವೆ.


ಈ ಕಾರಣ, ನಮ್ಮ ಹೃದಯ ಕುಂದಿದೆ ಇದೇ ಕಾರಣ, ನಮ್ಮ ಕಣ್ಣು ಮೊಬ್ಬಾಗಿದೆ.


ಮಬ್ಬಾಯಿತು ಕಣ್ಣು ವ್ಯರ್ಥವಾಗಿ ನೆರವನ್ನು ನಿರೀಕ್ಷಿಸುತ ರಕ್ಷಿಸಲಾಗದ ರಾಷ್ಟ್ರಕ್ಕಾಗಿ ಕೋವರದಲ್ಲಿ ಕಾದು ನೋಡುತ.


“ನನ್ನ ತಂದೆ ನಾಡಿಗೆ ನಷ್ಟವನ್ನುಂಟುಮಾಡಿದ್ದಾರೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದುದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು;


ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು; ಓಫೆಲ್ ಗುಡ್ಡವು, ಕೀಸ್ ಕೋವರವು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು