Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:7 - ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರಾ, ನಮ್ಮ ದ್ರೋಹಗಳು ಹಲವು ನಿಮಗೆ ವಿರುದ್ಧ ಪಾಪಮಾಡಿದೆವು. ನಮ್ಮ ಅಪರಾಧಗಳೇ ನಮಗೆ ವಿರುದ್ಧ ಸಾಕ್ಷಿ ನೀಡುತ್ತಿವೆ ಆದರೂ ನಿಮ್ಮ ನಾಮದ ನಿಮಿತ್ತ ಕೈನೀಡು ನಮಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ, ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು. ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ ನಿನ್ನ ಹೆಸರಿನ ನಿವಿುತ್ತ ಕಾರ್ಯವನ್ನು ಸಾಧಿಸು; ನಮ್ಮ ದ್ರೋಹಗಳು ಬಹಳ, ನಿನಗೆ ಪಾಪವನ್ನು ಮಾಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಯೆಹೋವನೇ, ಅದು ನಮ್ಮ ಪಾಪಗಳ ಫಲವೆಂಬುದು ನಮಗೆ ತಿಳಿದಿದೆ. ನಮ್ಮ ಪಾಪಗಳಿಂದಾಗಿ ನಾವು ಈಗ ತೊಂದರೆಗಳನ್ನು ಅನುಭವಿಸುತ್ತಿದ್ದೇವೆ. ಯೆಹೋವನೇ, ನಿನ್ನ ಒಳ್ಳೆಯ ಹೆಸರಿಗಾಗಿ ನಮಗೇನಾದರೂ ಸಹಾಯಮಾಡು. ನಾವು ನಿನ್ನನ್ನು ಅನೇಕ ಸಲ ತ್ಯಜಿಸಿದ್ದೇವೆಂದು ಒಪ್ಪಿಕೊಳ್ಳುತ್ತೇವೆ. ನಾವು ನಿನ್ನ ವಿರುದ್ಧ ಪಾಪಮಾಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರೇ, ನಮ್ಮ ಅಕ್ರಮಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಟ್ಟರೂ, ನೀನೇ ನಿನ್ನ ಹೆಸರಿಗೋಸ್ಕರ ಕಾರ್ಯ ಸಾಧಿಸು. ಏಕೆಂದರೆ, ನಮ್ಮ ಹಿಂಜಾರುವಿಕೆಗಳು ಅನೇಕವಾಗಿವೆ; ನಿಮಗೆ ವಿರೋಧವಾಗಿ ಪಾಪಮಾಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:7
30 ತಿಳಿವುಗಳ ಹೋಲಿಕೆ  

ಇಸ್ರಯೇಲಿನ ಅಹಂಕಾರವೇ ಅದಕ್ಕೆ ವಿರುದ್ಧ ಸಾಕ್ಷಿ ನುಡಿಯುತ್ತದೆ. ಇಸ್ರಯೇಲ್ ಮತ್ತು ಎಫ್ರಯಿಮ್ ತಮ್ಮ ದುರ್ಮಾರ್ಗದಲ್ಲಿ ಮುಗ್ಗರಿಸಿ ಬೀಳುತ್ತವೆ. ಜುದೇಯವೂ ಅದರಂತೆಯೇ ಬೀಳಲಿದೆ.


ನಿನ್ನ ನಾಮದ ನಿಮಿತ್ತ ನನ್ನನು ಈಕ್ಷಿಸು I ಎನ್ನ ಘೋರ ಪಾಪವನು ಪ್ರಭು ಕ್ಷಮಿಸು II


ಆದಕಾರಣ ಅಡವಿಯ ಸಿಂಹ ಅವರನ್ನು ಕೊಲ್ಲುವುದು ಕಾಡಿನ ತೋಳ ಕೊಳ್ಳೆಹೊಡೆಯುವುದು ಚಿರತೆ ಅವರ ಪಟ್ಟಣಗಳಿಗೆ ಹೊಂಚುಹಾಕುವುದು ಅಲ್ಲಿಂದ ಹೊರಬರುವ ಪ್ರತಿಯೊಬ್ಬನನ್ನು ಸೀಳುವುದು. ಅವರ ಅಪರಾಧಗಳೋ ಬಹಳ, ಅವರ ದ್ರೋಹಗಳೋ ಅಪಾರ !


“ಸರ್ವೇಶ್ವರಾ, ನಿಮಗೆ ವಿರುದ್ಧ ನಾವು ಗೈದ ಅಪರಾಧಗಳು ಹಲವು. ನಮ್ಮ ಪಾಪಗಳೇ ನಮಗೆ ವಿರೋಧವಾಗಿ ಸಾಕ್ಷಿಕೊಡುತ್ತವೆ. ನಮ್ಮ ಅಪರಾಧಗಳು ನಮ್ಮೊಡನೆಯೇ ಇವೆ. ನಮ್ಮ ದ್ರೋಹಗಳನ್ನು ನಾವು ಬಲ್ಲೆವು.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವುವು. ನಿನಗೆ ನನ್ನ ಭಯವಿಲ್ಲದೆ ನಿನ್ನ ದೇವರಾದ ಸರ್ವೇಶ್ವರನಾದ ನನ್ನನ್ನು ತೊರೆದುಬಿಟ್ಟದ್ದು ನಿನಗೆ ಕೆಟ್ಟದ್ದಾಗಿಯೂ ಕಹಿಯಾಗಿಯೂ ಪರಿಣಮಿಸುವುದು. ಇದನ್ನು ಚೆನ್ನಾಗಿ ಗ್ರಹಿಸಿಕೊ, ಕಣ್ಣಾರೆ ನೋಡು. ಇದು ಸರ್ವಶಕ್ತನೂ, ಸ್ವಾಮಿ ಸರ್ವೇಶ್ವರನೂ ಆದ ನನ್ನ ನುಡಿ.”


ಆದಕಾರಣ ಯೇಸುಕ್ರಿಸ್ತರಲ್ಲಿ ಮೊತ್ತಮೊದಲು ನಿರೀಕ್ಷೆಯನ್ನಿರಿಸಿದ ನಾವು ದೇವರ ಮಹಿಮೆಯನ್ನು ಸ್ತುತಿಸಿ ಹಾಡಬೇಕು.


ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.


ಇಸ್ರಯೇಲಿನ ಅಹಂಕಾರವೇ ಅದರ ವಿರುದ್ಧ ಸಾಕ್ಷಿ ನುಡಿಯುತ್ತದೆ. ಇಷ್ಟೆಲ್ಲ ಸಂಭವಿಸಿದರೂ ಅದು ತನ್ನ ದೇವರಾದ ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗುವುದಿಲ್ಲ; ಅವರನ್ನು ಆಶ್ರಯಿಸುವುದಿಲ್ಲ.


ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಬಿಡುಗಡೆ ಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು, ಕೈಯನ್ನು ಹಿಂದಕ್ಕೆ ತೆಗೆದುಕೊಂಡೆ.


ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಬರಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.


ಆದರೂ, ‘ನಿಮ್ಮನ್ನು ಈಜಿಪ್ಟಿನಿಂದ ಪಾರುಮಾಡುವೆನು,’ ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಮುತ್ತಲಿನ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.


ಅರಸ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದು ಹೇಳಿದರು - “ಭ್ರಷ್ಟಳಾದ ಇಸ್ರಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ನನ್ನನ್ನು ತೊರೆದುಬಿಟ್ಟು ಎತ್ತರವಾದ ಗುಡ್ಡಗಳನ್ನೆಲ್ಲ ಹತ್ತಿ, ಹುಲುಸಾಗಿ ಬೆಳೆದ ಎಲ್ಲ ಮರಗಳ ಕೆಳಗೆ ಹೋಗಿ ವೇಶ್ಯೆಯಂತೆ ವರ್ತಿಸುತ್ತಿದ್ದಾಳೆ.


ನಮಗಲ್ಲ ಹೇ ಪ್ರಭು, ನಮಗಲ್ಲ ಮಹಿಮೆ I ನಿನ್ನ ನಾಮಕೇ ಸಲ್ಲಲಿ ಆ ಮಹಿಮೆ I ನಿನ್ನ ನೀತಿ ಸತ್ಯತೆಗಳ ನಿಮಿತ್ತವೆ II


ಸರ್ವೇಶ್ವರಾ, ಇಸ್ರಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀವು ಧರ್ಮಸ್ವರೂಪರೆಂದು ಸ್ಪಷ್ಟವಾಯಿತು. ನಾವಾದರೋ ನಿಮ್ಮ ದೃಷ್ಟಿಯಲ್ಲಿ ಅಪರಾಧಿಗಳು, ಈ ನಮ್ಮ ದುಷ್ಕೃತ್ಯದ ಸಲುವಾಗಿ ನಿಮ್ಮೆದುರಿನಲ್ಲಿ ನಿಲ್ಲಲಾರೆವು.”


ಕಾನಾನ್ಯರು ಮತ್ತು ನಾಡಿನ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರೇ ಉಳಿಯದಂತೆ ಮಾಡುವರು. ಆಗ ನಿಮ್ಮ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿರಿ?” ಎಂದನು.


ಆದರೆ ತಪ್ಪು ತಿಳಿಯುತ್ತಿದ್ದರು ಅವರ ವಿರೋಧಿಗಳು; ‘ಇದಾಯಿತು ನಮ್ಮ ಶಕ್ತಿಯಿಂದ, ಸರ್ವೇಶ್ವರನಿಂದಲ್ಲ’ವೆಂದುಕೊಂಡು ಈ ಕಾರಣ ಹಿಂತೆಗೆದುಕೊಂಡೆನು ನನ್ನ ನಿಗದಿನಿರ್ಣಯವನು.


ಜನರು : “ನಾವು ಸುಮ್ಮನೆ ಕುಳಿತಿರುವುದೇಕೆ? ಕೂಡಿಬನ್ನಿ, ಕೋಟೆಕೊತ್ತಲುಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ. ಅಲ್ಲೆ ನಾಶವಾಗೋಣ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಪಾಪಮಾಡಿದ್ದರಿಂದ ಅವರು ನಮ್ಮನ್ನು ನಾಶಕ್ಕೆ ಗುರಿಮಾಡಿದ್ದಾರೆ. ವಿಷಬೆರೆತ ನೀರನ್ನು ಕುಡಿಯಲು ಕೊಟ್ಟಿದ್ದಾರೆ.


ದೇವಾ, ಮುಕ್ತಿದಾತ, ನೆರವಾಗು ನಿನ್ನ ನಾಮಮಹಿಮೆಯ ನಿಮಿತ್ತ I ಪಾಪಗಳನು ಅಳಿಸಿ ನಮ್ಮನುದ್ಧರಿಸು ನಿನ್ನ ನಾಮದ ಪ್ರಯುಕ್ತ II


ಇದನ್ನು ಮಾಡುವೆ ನನಗೋಸ್ಕರವೆ ಇದನ್ನು ಮಾಡುವೆ ಕಳಂಕಬಾರದಂತೆ ನನ್ನ ಹೆಸರಿಗೆ ಸಲ್ಲಗೊಡಿಸೆನು ನನ್ನ ಮಹಿಮೆಯನು ಮತ್ತೊಬ್ಬನಿಗೆ.”


ನಾವೇ ತಂದುಕೊಂಡ ಅವಮಾನವೆಂಬ ಹಾಸಿಗೆಯಲ್ಲಿ ಬಿದ್ದಿರೋಣ. ನಾಚಿಕೆಯೆಂಬ ಹೊದಿಕೆ ನಮ್ಮನ್ನು ಮುಚ್ಚಿಬಿಡಲಿ. ಚಿಕ್ಕತನದಿಂದ ಈವರೆಗು ನಾವೂ ನಮ್ಮ ಪೂರ್ವಜರೂ ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ಇದಿರಾಗಿ ಪಾಪಮಾಡುತ್ತಾ ಬಂದಿರುವುದು ನಿಶ್ಚಯ. ಆ ಸ್ವಾಮಿಯ ಮಾತನ್ನು ಕೇಳದೆಹೋದೆವಲ್ಲಾ!” ಎಂದು ಮೊರೆಯಿಡುತ್ತಿದ್ದಾರೆ.


ಈ ಜೆರುಸಲೇಮಿನವರು ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ. ಹಿಂತಿರುಗಿ ಬರಲೊಲ್ಲರು.


ಮಿಡತೆಗಳು ನಾಡಿನ ಪೈರು ಪಚ್ಚೆಯನ್ನೆಲ್ಲ ತಿಂದುಬಿಟ್ಟವು. ಆಮೇಲೆ ನಾನು ಪ್ರಭುವಿಗೆ ಹೀಗೆಂದು ಮೊರೆಯಿಟ್ಟೆ: “ಒಡೆಯರಾದ ಸರ್ವೇಶ್ವರಾ, ನಮ್ಮನ್ನು ಆಲಿಸಿ, ಕ್ಷಮಿಸಿರಿ; ಅತಿ ಚಿಕ್ಕದಾದ ಯಕೋಬ ಜನಾಂಗ ಈ ಪಿಡುಗಿನಿಂದ ಉಳಿಯುವುದುಂಟೆ?”


ನಿಮ್ಮ ಅಪರಾಧಗಳು ಈ ಪ್ರಯೋಜನಗಳನ್ನು ತಡೆಗಟ್ಟಿವೆ. ನಿಮ್ಮ ಪಾಪಗಳು, ಈ ಒಳಿತು ನಿಮಗೆ ಸಿಗದಂತೆ ತಪ್ಪಿಸಿವೆ.


ಜೆರುಸಲೇಮಿನ ಗೋಳು : “ಅಯ್ಯೋ ನಾನು ಗಾಯಗೊಂಡೆ ನನಗೆ ಬಿದ್ದ ಪೆಟ್ಟು ಗಡಸು. ತಗಲಿದೆ ವ್ಯಾಧಿ, ಸಹಿಸಲೇಬೇಕಾದ ಕಾಯಿಲೆ.


ಆ ಸ್ವಾಮಿಗೆ ವಿರುದ್ಧ ನಾನು ಪಾಪಮಾಡಿದ್ದರಿಂದ ಅವರ ಕೋಪವನ್ನು ನಾನು ಸಹಿಸಿಕೊಳ್ಳಬೇಕಾಗುತ್ತದೆ. ಅವರು ನನ್ನ ಪರವಾಗಿ ವಾದಿಸಿ ನನಗಾದ ಅನ್ಯಾಯವನ್ನು ನೀಗಿಸುವರು; ನನ್ನನ್ನು ಕತ್ತಲೆಯಿಂದ ಬೆಳಕಿಗೆ ತರುವರು. ಅವರಿಂದ ಬರುವ ರಕ್ಷಣಾನೀತಿಯನ್ನು ಆಗ ಸವಿಯುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು