Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:9 - ಕನ್ನಡ ಸತ್ಯವೇದವು C.L. Bible (BSI)

9 ದಿಕ್ಕು ತೋಚದವನಂತೆ ನಿಶ್ಚಲರಾಗಿರುವಿರಿ, ಏಕೆ? ರಕ್ಷಿಸಲಾಗದ ರಣಧೀರನಂತಿರುವಿರಿ, ಏಕೆ? ಆದರೂ ಸರ್ವೇಶ್ವರಾ, ನೀವು ನಮ್ಮ ಮಧ್ಯೆ ಇರುವಿರಿ; ನಾವು ನಿಮ್ಮ ಹೆಸರಿನವರು, ನಮ್ಮನ್ನು ಕೈಬಿಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತಿ. ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಏಕೆ ಸ್ತಬ್ಧನಂತೆಯೂ ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತೀ, ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀನು ಸ್ತಬ್ಧನಾಗಿರುವೆ; ಯಾರನ್ನೂ ರಕ್ಷಿಸಲಾಗದ ಸೈನಿಕನಂತಾಗಿರುವೆ. ಯೆಹೋವನೇ, ನೀನಾದರೋ ನಮ್ಮ ಜೊತೆಯಲ್ಲಿರುವೆ. ನಾವು ನಿನ್ನ ಹೆಸರಿನವರಾಗಿದ್ದೇವೆ. ಆದ್ದರಿಂದ ನಮ್ಮನ್ನು ಕೈಬಿಡಬೇಡ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವ ದೇವರೇ, ನೀವು ನಮ್ಮ ಮಧ್ಯದಲ್ಲಿರುತ್ತೀರಿ, ನಾವು ನಿಮ್ಮ ಹೆಸರನ್ನು ಹೊಂದಿದ್ದೇವೆ, ನಮ್ಮನ್ನು ಕೈಬಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:9
31 ತಿಳಿವುಗಳ ಹೋಲಿಕೆ  

ನಾವಾದರೋ, ನಿಮ್ಮ ದೊರೆತನಕ್ಕೆ ಎಂದಿಗೂ ಒಳಗಾಗದ, ನಿಮ್ಮ ನಾಮವನ್ನು ಧರಿಸದ, ಪರಕೀಯರಂತೆ ಆಗಿದ್ದೇವಲ್ಲಾ !


ನಾನು ಹೇಳುವುದನ್ನು ಕೇಳಿ : ಸರ್ವೇಶ್ವರ ಸ್ವಾಮಿಯ ಕೈ ನಿಮ್ಮನ್ನು ರಕ್ಷಿಸಲಾಗದಂಥ ಮೋಟುಗೈಯಲ್ಲ, ಅವರ ಕಿವಿ ಕಿವುಡಲ್ಲ.


ನಿಮ್ಮ ವಚನಗಳು ನನಗೆ ದೊರೆತವು. ಅವುಗಳನ್ನು ಹಾಗೆಯೆ ನುಂಗಿಬಿಟ್ಟೆನು. ನಿಮ್ಮ ನುಡಿಗಳು ನನಗೆ ಹರ್ಷವನ್ನೂ ಹೃದಯಾನಂದವನ್ನೂ ತಂದವು. ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ನಾನು ನಿಮ್ಮ ನಾಮಧಾರಿಯಲ್ಲವೆ?


ದೇವನಿರುವನಾ ನಗರ ಮಧ್ಯೆ, ಅಳಿವಿಲ್ಲ ಅದಕೆ I ಉದಯಕಾಲದಲೆ ದೇವ ಬರುವನು ಅದರ ಸಹಾಯಕೆ II


ಸರ್ವೇಶ್ವರ ಅವನಿಗೆ, “ಸರ್ವೇಶ್ವರನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನೇ ನೋಡುವೆ” ಎಂದರು.


ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ದೇವರ ಆಲಯಕ್ಕೂ ಕಲ್ಲಿನ ವಿಗ್ರಹಕ್ಕೂ ಎಲ್ಲಿಯ ಸಾಮ್ಯ? ನಾವಾದರೋ ಜೀವಂತ ದೇವರ ಮಂದಿರವಾಗಿದ್ದೇವೆ. ಇದನ್ನು ದೇವರೇ ಹೇಳಿದ್ದಾರೆ: “ನನ್ನ ಜನರಲ್ಲೇ ನಾ ಮನೆಮಾಡುವೆನು ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು ಅವರೆನಗೆ ಪ್ರಜೆಯಾಗಿರುವರು.”


ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.


ನಾನೇ ಅದರ ಸುತ್ತಮುತ್ತಲು ಅಗ್ನಿ ಪ್ರಾಕಾರವಾಗಿ, ಅದರೊಳಗಿನ ವೈಭವವಾಗಿರುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ,’ ಎಂದ.”


ಇದೋ, ದೂರ ನಾಡಿನಿಂದ ಕೇಳಿಬರುತ್ತಿದೆ ನನ್ನ ಪ್ರಜೆಯೆಂಬಾಕೆಯ ಈ ಮೊರೆ : “ಸಿಯೋನಿನಲ್ಲಿ ಇನ್ನು ಸರ್ವೇಶ್ವರನಿಲ್ಲವೊ? ಅದರ ರಾಜನು ಅಲ್ಲಿ ವಾಸವಾಗಿಲ್ಲವೊ?” ಅದಕ್ಕೆ ಸರ್ವೇಶ್ವರ : “ಇವರು ತಮ್ಮ ವಿಗ್ರಹಾರಾಧನೆಯಿಂದ ಅನ್ಯದೇವತೆಗಳ ಶೂನ್ಯರೂಪಗಳಿಂದ ನನ್ನನ್ನು ಕೆಣಕಿದ್ದೇಕೆ?”


ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ವಿಮುಖನಾಗಬೇಡ ಪ್ರಭು, ಕೋಪದಿಂದೆನ್ನ ತಳ್ಳಬೇಡಯ್ಯಾ I ರಕ್ಷಕದೇವಾ, ಎನಗೆ ಸಹಾಯಕಾ, ದಾಸನ ಕೈಬಿಡಬೇಡಯ್ಯಾ II


ಸರ್ವೇಶ್ವರನ ದಯೆ ನಿಮ್ಮನ್ನು ಸ್ವಕೀಯ ಜನರನ್ನಾಗಿ ಆರಿಸಿಕೊಂಡ ಮೇಲೆ, ಅವರು ತಮ್ಮ ಮಹೋನ್ನತ ನಾಮದ ನಿಮಿತ್ತ, ನಿಮ್ಮನ್ನು ಖಂಡಿತವಾಗಿ ಕೈಬಿಡುವುದಿಲ್ಲ.


ನಿಮ್ಮ ದೇವರಾದ ಸರ್ವೇಶ್ವರಾ ನಿಮ್ಮನ್ನು ಕಾಪಾಡಲು, ಶತ್ರುಗಳನ್ನು ನಿಮ್ಮ ಕೈವಶಮಾಡಲು ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾರೆ; ನಿಮ್ಮಲ್ಲಿ ಅಶುಚಿಯೇನಾದರೂ ಕಂಡುಬಂದರೆ ಅವರು ನಿಮ್ಮನ್ನು ಬಿಟ್ಟುಹೋಗದಂತೆ ಪಾಳೆಯವು ನಿರ್ಮಲವಾಗಿರಬೇಕು.


ನನ್ನವರೆಂದು ನಾನು ಕರೆದ ಎಲ್ಲ ಅನ್ಯಧರ್ಮೀಯರು ಉಳಿದೆಲ್ಲ ಮಾನವರು ನನ್ನತ್ತ ಬರಲಿಹರು


ಪಟ್ಟಣದ ಸುತ್ತಳತೆ ಒಂಬತ್ತು ಸಾವಿರ ಮೀಟರ್‍ಗಳು. ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ‘ಸರ್ವೇಶ್ವರನ ನೆಲೆ’ ಎಂದು ಹೆಸರಾಗುವುದು.


ನಾನೆಷ್ಟು ಕಾಲ ಸರ್ವೇಶ್ವರಾ, ಮೊರೆ ಇಡುತ್ತಿರಬೇಕು ನಿನಗೆ? ನೀನೆಷ್ಟು ಕಾಲ ಸುಮ್ಮನಿರುವೆ ಕಿವಿಗೊಡದೆ ನನಗೆ? ಹಿಂಸೆಯಾಗುತ್ತಿದೆಯೆಂದು ನಾ ಕೂಗಿದೆ; ಆದರೂ ನೀ ಸುಮ್ಮನಿರುವೆ, ರಕ್ಷಣೆ ನೀಡದೆ.


ಜಗದ ಜನರೆಲ್ಲರು ನಿಮ್ಮನ್ನು ಸರ್ವೇಶ್ವರನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.


ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನೇ ತಗ್ಗಿಸಿಕೊಂಡು, ನನ್ನ‍ನ್ನು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ನಾಡಿಗೆ ಆರೋಗ್ಯಭಾಗ್ಯವನ್ನು ದಯಪಾಲಿಸುವೆನು.


ನನ್ನಿಂದೇಕೆ ಪ್ರಭು, ಅಷ್ಟು ದೂರವಿರುವೆ? I ಕಷ್ಟಕಾಲದಲೇಕೆ ಕಣ್ಮರೆಯಾಗಿರುವೆ? II


ಕರೆತರುವೆ ಈ ಪರಿ ನನ್ನ ನಾಮಧಾರಿಗಳೆಲ್ಲರನು ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿದವರನು.


ಇಸ್ರಯೇಲರ ಪರಮ ಪಾವನ ಸ್ವಾಮಿಯಾದ ನನಗೆ ನನ್ನ ಜನರು ಮಾಡಿದ ಅಪರಾಧ ತಮ್ಮ ನಾಡಿನಲ್ಲಿ ತುಂಬಿದ್ದರೂ ಸೇನಾಧೀಶ್ವರ ಸರ್ವೇಶ್ವರನೆಂಬ ದೇವರಾದ ನಾನು ಇಸ್ರಯೇಲನ್ನಾಗಲಿ ಜುದೇಯವನ್ನಾಗಲಿ ತ್ಯಜಿಸಿಬಿಡಲಿಲ್ಲ.


ನಮ್ಮನ್ನೇಕೆ ಮರೆತುಬಿಟ್ಟೆ ಇಷ್ಟುಕಾಲ ನಮ್ಮನ್ನೇಕೆ ಕೈಬಿಟ್ಟೆ ಇಲ್ಲಿಯ ತನಕ?


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು