ಯೆರೆಮೀಯ 15:1 - ಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ನನಗೆ ಹೀಗೆ ಹೇಳಿದನು - ಮೋಶೆಯೂ ಸಮುವೇಲನೂ ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗದು; ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿಹೋಗಲಿ! ಅವರು - ನಾವು ಎಲ್ಲಿಗೆ ಹೋಗೋಣ ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಮೋಶೆಯೂ ಸಮುಯೇಲನೂ ನನ್ನ ಮುಂದೆ ನಿಂತರೂ, ನನ್ನ ಮನಸ್ಸು ಈ ಜನರ ಮೇಲೆ ಇರುವುದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿಬಿಡು. ಅವರು ಹೋಗಲಿ. ಅಧ್ಯಾಯವನ್ನು ನೋಡಿ |